• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬೆಂಗಳೂರಿನ ಕೇಂದ್ರೀಯ ಉತ್ಪಾದನಾ ತಂತ್ರಜ್ಞಾನ ಸಂಸ್ಥೆಗೆ (CMTI) ಹೆಚ್.ಡಿ. ಕುಮಾರಸ್ವಾಮಿ ಭೇಟಿ

ಪ್ರತಿಧ್ವನಿ by ಪ್ರತಿಧ್ವನಿ
June 29, 2025
in Top Story, ಕರ್ನಾಟಕ, ರಾಜಕೀಯ, ವಾಣಿಜ್ಯ
0
ಬೆಂಗಳೂರಿನ ಕೇಂದ್ರೀಯ ಉತ್ಪಾದನಾ ತಂತ್ರಜ್ಞಾನ ಸಂಸ್ಥೆಗೆ (CMTI) ಹೆಚ್.ಡಿ. ಕುಮಾರಸ್ವಾಮಿ ಭೇಟಿ
Share on WhatsAppShare on FacebookShare on Telegram

ಸಂಸ್ಥೆಯ 64ನೇ ಸಂಸ್ಥಾಪನಾ ದಿನಾಚರಣೆ

ADVERTISEMENT

ವಿಜ್ಞಾನಿಗಳ ಕೊಡುಗೆ ಸ್ಮರಿಸಿದ ಕೇಂದ್ರ ಸಚಿವರು

ಆಪರೇಶನ್ ಸಿಂಧೂರ; ಭಾರತದ ರಕ್ಷಣಾ ಶಕ್ತಿ ಏನೆಂದು ಜಗತ್ತಿಗೆ ಗೊತ್ತಾಗಿದೆ

ಬೆಂಗಳೂರು: ದೇಶೀಯ ವಿಜ್ಞಾನಿಗಳು, ತಂತ್ರಜ್ಞರ ಸಾಧನೆ, ಹೆಗ್ಗಳಿಕೆ ಏನು ಎಂಬುದು ಆಪರೇಶನ್ ಸಿಂಧೂರದ ಮೂಲಕ ಜಗತ್ತಿಗೆ ಗೊತ್ತಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು.

Mahadevappa: ಕಾಂಗ್ರೆಸ್ ಶಾಸಕ ಇಕ್ಬಾಲ್ ಹನ್ಸಾರಿ ಹೇಳಿಕೆಗೆ ಸಚಿವ ಮಹದೇವಪ್ಪ ಏನಂದ್ರು?  #pratidhvani

ಬೆಂಗಳೂರಿನ ತುಮಕೂರು ರಸ್ತೆಯಲ್ಲಿ ಕೇಂದ್ರೀಯ ಉತ್ಪಾದನಾ ತಂತ್ರಜ್ಞಾನ ಸಂಸ್ಥೆಯ 64ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬರುವ ಮೊದಲು ಅನೇಕ ವಿಷಯಗಳಲ್ಲಿ ನಾವು ವಿದೇಶಗಳನ್ನು ಅವಲಂಬಿಸಬೇಕಾಗಿತ್ತು. ಆ ನಂತರ ಅಂತಹ ಪರಿಸ್ಥಿತಿ ಬದಲಾಗಿದ್ದು, ಪ್ರತಿಯೊಂದು ಸ್ವದೇಶಿಯವಾಗಿಯೇ ಉತ್ಪಾದನೆ ಮಾಡಲಾಗುತ್ತಿದೆ ಎಂದರು.

ರಕ್ಷಣಾ ಪಡೆಗಳಿಗೆ ಅಗತ್ಯವಾದ ಅನೇಕ ಶಸ್ತ್ರಾಸ್ತ್ರಗಳನ್ನು ಮೇಕ್ ಇನ್ ಇಂಡಿಯಾ, ಆತ್ಮನಿರ್ಭರ್ ಭಾರತ ಕಾರ್ಯಕ್ರಮಗಳ ಮೂಲಕ ತಯಾರು ಮಾಡಲಾಗುತ್ತಿದೆ. ಭಾರತ ಇಂದು ರಕ್ಷಣಾ ವಲಯದಲ್ಲಿ ಸಶಕ್ತ, ಬಲಿಷ್ಠ ದೇಶವಾಗಿ ಹೊರಹೊಮ್ಮಿದೆ. ಅದಕ್ಕೆ ಮೋದಿ ಅವರ ದೂರದೃಷ್ಟಿ ಹಾಗೂ ನಮ್ಮ ವಿಜ್ಞಾನಿಗಳು, ತಂತ್ರಜ್ಞರು ಕಾರಣ ಎಂದು ಸಚಿವರು ಹೇಳಿದರು.

ಪ್ರತಿಭಾವಂತ ಯುವಕರು, ಯುವತಿಯರ ದುಡಿಮೆಯ ಫಲದಿಂದ ನಮ್ಮ ದೇಶದಲ್ಲಿ ತಯಾರು ಮಾಡಿರುವ ಯುದ್ಧದ ಉಪಕರಣಗಳು ಜಗತ್ತಿನ ಬೇರೆ ಯಾವ ದೇಶಕ್ಕೂ ಕಡಿಮೆ ಇಲ್ಲ. ಎಲ್ಲರಿಗೂ ಸರಿಸಾಟಿ ಆಗುವಂತಹ ಅಸ್ತ್ರಗಳು ನಮ್ಮ ಬತ್ತಳಿಕೆಯಲ್ಲಿ ಇವೆ ಎಂದರೆ ಅದಕ್ಕೆ ನಿಮ್ಮೆಲ್ಲರ ಶ್ರಮವೇ ಕಾರಣ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

ನಮ್ಮ ಶಸ್ತ್ರಾಸ್ತ್ರಗಳ ಶಕ್ತಿ ಏನು ಎಂಬುದು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ಅಪಪರೇಶನ್ ಸಿಂಧೂರ ಜಗತ್ತಿಗೆ ತೋರಿಸಿಕೊಟ್ಟಿದೆ ಎಂದು ಸಚಿವರು ಹೇಳಿದರು.

ಸೆಮಿಕಂಡಕ್ಟರ್ ಕ್ಷೇತ್ರಕ್ಕೆ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ದೊಡ್ಡ ಮಟ್ಟದಲ್ಲಿ ಸಂಶೋಧನೆ ನಡೆಸುತ್ತಿದೆ. ಸೆಮಿಕಂಡಕ್ಟರ್ ಹಾಗೂ ಕೃತಕ ಬುದ್ಧಿಮತ್ತೆ ಕ್ಷೇತ್ರಗಳಿಗೆ ಬೆಂಗಳೂರು ನೆಚ್ಚಿನ ತಾಣವಾಗಿದೆ. ಸಮರ್ಪಕ ಮಾನವ ಸಂಪನ್ಮೂಲ ಹಾಗೂ ಅದಕ್ಕೆ ಬೇಕಾದ ಪೂರಕ ವ್ಯವಸ್ಥೆ ಇರುವುದರಿಂದ ಈ ಕ್ಷೇತ್ರಗಳಿಗೆ ಬೆಂಗಳೂರಿನಲ್ಲಿ ಭಾರೀ ಅವಕಾಶಗಳು ಇವೆ ಎಂದು ಇದೇ ಸಂದರ್ಭದಲ್ಲಿ ಸಚಿವರು ಹೇಳಿದರು.

Siddaramaih : ಏಯ್...! ನೀನು ಸುಮ್ನೆ ದಸರಾ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಬೇಡ #pratidhvani #dkshivakumar

ಕೇಂದ್ರೀಯ ಉತ್ಪಾದನಾ ತಂತ್ರಜ್ಞಾನ ಸಂಸ್ಥೆ ಕೇಂದ್ರದ ಸರ್ಕಾರದ ಬೃಹತ್ ಕೈಗಾರಿಕೆ ಸಚಿವಾಲಯದ ಅಧೀನದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಸಂಸ್ಥೆ ಆಗಿದೆ. ರಕ್ಷಣೆ, ಬಾಹ್ಯಾಕಾಶ ಸೇರಿದಂತೆ ವಿವಿಧ ಕೈಗಾರಿಕೆ ಅಗತ್ಯಗಳಿಗೆ ತಕ್ಕಂತೆ ಇಲ್ಲಿ ಉತ್ಪಾದನೆ ನಡೆಯುತ್ತಿದೆ. ಅನೇಕ ಯುವ ವಿಜ್ಞಾನಿಗಳು, ತಂತ್ರಜ್ಞರು ಇಲ್ಲಿ ರಾಷ್ಟ್ರ ನಿರ್ಮಾಣಕ್ಕಾಗಿ ಕೆಲಸ ಮಾಡುತ್ತಿರುವುದು ನನಗೆ ಸಂತೋಷ ಉಂಟು ಮಾಡಿದೆ ಎಂದು ಸಚಿವರು ಹೇಳಿದರು.

ಸಿಎಂಟಿಐ ಆಡಳಿತ ಮಂಡಳಿ ಅಧ್ಯಕ್ಷ ಕ್ರಿಸ್ ಗೋಪಾಲಕೃಷ್ಣನ್, ನಿರ್ದೇಶಕ ಡಾ. ನಾಗಹನುಮಯ್ಯ ಮುಂತಾದವರು ವೇದಿಕೆಯಲ್ಲಿದ್ದರು.

ಸಮಾರಂಭದ ನಂತರ ಕೇಂದ್ರ ಸಚಿವರು ‘ ಪ್ರಮಾಣೀಕೃತ ಉಲ್ಲೇಖ ಧಾತು ಸೌಲಭ್ಯ’ ಕೇಂದ್ರವನ್ನು ಉದ್ಘಾಟಿಸಿದರು. ಇದಾದ ಮೇಲೆ ಏರೋಸ್ಪೇಸ್ ಪ್ರಯೋಗಾಲಯ, ಸಂವೇದಕ ತಂತ್ರಜ್ಞಾನ ಅಭಿವೃದ್ಧಿ ಕೇಂದ್ರ ಸೇರಿ ವಿವಿಧ ವಿಭಾಗಗಳಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.

Previous Post

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾ

Next Post

ನಮ್ಮ ನಗರ ; ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌

Related Posts

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
0

ಸಾಮಾಜಿಕ ಸಂತ ಎಂದು ಗುರುತ್ತಿಸುತ್ತಿವೆ. ವಿವೇಕಾನಂದರು ಸನ್ಯಾಸತ್ವಕ್ಕೆ ಹೊಸ ಅರ್ಥ ಮತ್ತು ಮೆರಗನ್ನು ತಂದರು .ಇವರು ಪರಿವ್ರಾಜಕ ವೃತದಲ್ಲಿ ಭಾರತ ಪರ್ಯಟನೆ ಕೈಗೊಂಡಾಗ ದೇಶದಲ್ಲಿನ ಬಡತನ, ಅಂಧಶ್ರದ್ದೆ,ಅನಕ್ಷರತೆ,...

Read moreDetails

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025
Next Post
ನಮ್ಮ ನಗರ ; ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌

ನಮ್ಮ ನಗರ ; ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!