• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಲೋಕಾಯುಕ್ತರು ಹಾಗೂ ಅಬಕಾರಿ ಸಚಿವ ಆರ್. ಬಿ. ತಿಮ್ಮಾಪುರ ಅವರನ್ನು ವಜಾಗೊಳಿಸಿ: ರವಿಕೃಷ್ಣಾ ರೆಡ್ಡಿ.

ಪ್ರತಿಧ್ವನಿ by ಪ್ರತಿಧ್ವನಿ
June 30, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ನ್ಯಾಯಾಂಗದ ಉಸ್ತುವಾರಿಯಲ್ಲಿ ಸಿಬಿಐ ತನಿಖೆಗೆ ವಹಿಸಿ ಎಂದು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷರಾದ ರವಿ ಕೃಷ್ಣಾರೆಡ್ಡಿ ಅವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಾಗೂ ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿತ್ತು.

ADVERTISEMENT

ನಗರದ ಫ್ರೀಡಂ ಪಾರ್ಕ್ ನಲ್ಲಿ ಆಡಳಿತದಲ್ಲಿನ ಅಕ್ರಮ, ಅವ್ಯವಹಾರ, ಕರ್ತವ್ಯಲೋಪ ಮತ್ತು ಭ್ರಷ್ಟಾಚಾರವನ್ನು ನಿಯಂತ್ರಿಸಬೇಕಾದ ಲೋಕಾಯುಕ್ತ ಸಂಸ್ಥೆಯೆ ನಿರಂತರವಾಗಿ ಅಕ್ರಮಗಳಲ್ಲಿ ಮತ್ತು ಅವ್ಯವಹಾರಗಳಲ್ಲಿ ಸಿಲುಕುತ್ತಿರುವುದು ದುರದೃಷ್ಟಕರ. ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗುವ ಬಹುತೇಕ ಪ್ರಕರಣಗಳು ತಾರ್ಕಿಕ ಅಂತ್ಯ ಕಾಣದೆ ಮುಕ್ತಾಯವಾಗುತ್ತಿವೆ ಮತ್ತು ಸ್ಪಷ್ಟವಾಗಿ ಭ್ರಷ್ಟಾಚಾರವೆಸಗಿರುವ ಪ್ರಕರಣಗಳು ಕೂಡ ವಿಲೇವಾರಿಯಾಗದೆ ದೂಳು ಹಿಡಿಯುತ್ತಿವೆ. ಇದು ಲೋಕಾಯುಕ್ತ ಸಂಸ್ಥೆಯೆ ಹಳ್ಳ ಹಿಡಿದಿರುವುದನ್ನು ತೋರಿಸುತ್ತದೆ. ಲೋಕಾಯುಕ್ತ ಸಂಸ್ಥೆಯ ಘನತೆಯನ್ನು ಮತ್ತು ವಿಶ್ವಾಸವನ್ನು ಎತ್ತಿ ಹಿಡಿಯಬೇಕಾದ ಹೊಣೆಗಾರಿಕೆ ಹಾಲಿ ಲೋಕಾಯುಕ್ತ ನ್ಯಾ. ಬಿ. ಎಸ್. ಪಾಟೀಲ್ ಅವರ ಮೇಲಿರುತ್ತದೆ, ಆದರೆ ಪ್ರಸ್ತುತ ಲೋಕಾಯುಕ್ತರು ಈ ಕಾರ್ಯದಲ್ಲಿ ಸಂಪೂರ್ಣವಾಗಿ ವಿಫಲರಾಗಿರುವುದು ಸ್ಪಷ್ಟವಾಗಿದೆ. ಲೋಕಾಯುಕ್ತ ಸಂಸ್ಥೆಯಲ್ಲಿ ವ್ಯಾಪಕವಾಗಿ ಅಕ್ರಮಗಳು ನಡೆಯುತ್ತಿದ್ದರೂ ಕೂಡ ಅದನ್ನು ನಿಯಂತ್ರಿಸುವಲ್ಲಿ ಅವರು ವಿಫಲರಾಗಿದ್ದಾರೆ. ಹಾಗೆಯೆ, ಅವರ ಕುಟುಂಬದವರು ಅವರ ಸ್ಥಾನವನ್ನು ದುರ್ಬಳಕೆ ಮಾಡಿರುವ ಬಗ್ಗೆ ಗಂಭೀರ ಆರೋಪವಿದ್ದು, ಆ ಬಗೆಗಿನ ಪ್ರಕರಣವು ನ್ಯಾಯಾಲಯದಲ್ಲಿದೆ. ಇಂತಹವರು ಲೋಕಾಯುಕ್ತರ ಸ್ಥಾನದಲ್ಲಿ ಮುಂದುವರೆಯುವುದು ಉಚಿತವಲ್ಲ. ಈ ಬಗ್ಗೆ ನೈತಿಕ ಹೊಣೆಗಾರಿಕೆ ಹೊತ್ತು ಲೋಕಾಯುಕ್ತರು ರಾಜಿನಾಮೆ ನೀಡಬೇಕು ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷರಾದ ರವಿ ಕೃಷ್ಣಾರೆಡ್ಡಿ ಆಗ್ರಹಿಸಿದರು.

ಕರ್ನಾಟಕ ಲೋಕಾಯುಕ್ತವು ದೇಶಕ್ಕೆ ಮಾದರಿಯಾದಂತಹ ಸಂಸ್ಥೆಯಾಗಿತ್ತು, ಆದರೆ ಕಳೆದ ಹಲವು ವರ್ಷಗಳಿಂದ ನಿರಂತರವಾಗಿ ಅದಕ್ಷತೆ, ಅಕ್ರಮಗಳಿಗೆ ಕುಖ್ಯಾತಿ ಪಡೆದು ಜನರ ವಿಶ್ವಾಸವನ್ನು ಕಳೆದುಕೊಂಡಿದೆ. ಲೋಕಾಯುಕ್ತ ಸಂಸ್ಥೆಯ ಅಕ್ರಮಗಳ ವಿರುದ್ದ ಮತ್ತು ಅದರ ಬಲವರ್ಧನೆಗಾಗಿ ಕೆ.ಆರ್.ಎಸ್. ಪಕ್ಷವು ನಿರಂತರವಾಗಿ ಹೋರಾಟ ಮಾಡುತ್ತಾ ಬಂದಿದೆ. ಈ ವಿಚಾರಗಳ ಬಗ್ಗೆ ಧ್ವನಿ ಎತ್ತಬೇಕಾದ ವಿರೋಧ ಪಕ್ಷಗಳು ಗಾಢ ಮೌನವಹಿಸಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಡುತ್ತಿದೆ ಮತ್ತು ಬಲಿಷ್ಠ ಲೋಕಾಯುಕ್ತವು ಅವರಿಗೂ ಕೂಡ ಬೇಕಾಗಿದಿಲ್ಲ ಎನ್ನುವುದು ಸ್ಪಷ್ಟವಾಗಿದೆ ಎಂದು ರಾಜ್ಯ ಉಪಾಧ್ಯಕ್ಷರಾದ ಜ್ಞಾನ ಸಿಂಧು ಸ್ವಾಮಿ ತಿಳಿಸಿದರು.

ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿದ್ದು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಸಾಲು ಸಾಲು ಹಗರಣಗಳು ನಡೆಯುತ್ತಿದ್ದು, ನಿಯಂತ್ರಿಸಲು ಸರ್ಕಾರದ ವತಿಯಿಂದ ಯಾವುದೇ ಕ್ರಮವಾಗುತ್ತಿಲ್ಲ. ಸಿದ್ದರಾಮಯ್ಯನವರ ಸರ್ಕಾರವು ಕೇವಲ
ಗ್ಯಾರೆಂಟಿಗಳ ಸುತ್ತ ಗಿರಕಿ ಹೊಡೆಯುತ್ತಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಸಂಪನ್ಮೂಲದ ಕೊರತೆ ಕಾಡಲಿದ್ದು, ದಕ್ಷ ಆಡಳಿತ ಮತ್ತು ಭ್ರಷ್ಟಾಚಾರ ನಿಯಂತ್ರಣದ ಮೂಲಕ ಕಲ್ಯಾಣ ಯೋಜನೆಗಳಿಗೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಂಪನ್ಮೂಲ ಕ್ರೋಢೀಕರಿಸಬಹುದು ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ನಿರಂತರವಾಗಿ ಹೇಳುತ್ತಾ ಬಂದಿದೆ. ಈ ಬಗ್ಗೆ ಗಮನ ನೀಡದೆ, ಈಗ ಸ್ವಪಕ್ಷೀಯರಿಂದಲೆ ಭ್ರಷ್ಟಾಚಾರದ ಬಗ್ಗೆ ಹೇಳಿಕೆಗಳು ಬರುತ್ತವೆ. ಸರ್ಕಾರದ ಬಹುತೇಕ ಮಂತ್ರಿಗಳೇ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ ಎನ್ನುವುದಕ್ಕೆ ಕಾಂಗ್ರೆಸ್ ಪಕ್ಷದ ಶಾಸಕರುಗಳು ವಸತಿ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ಗಂಭೀರ ಆರೋಪ ಮಾಡಿರುವುದೆ ಸಾಕ್ಷಿಯಾಗಿದೆ. ಇನ್ನು ಲೋಕಾಯುಕ್ತ ಪೊಲೀಸರ ವಸೂಲಿಬಾಜಿಗೆ ಪ್ರಮುಖವಾಗಿ ಅಬಕಾರಿ ಇಲಾಖೆಯ ಬಹುತೇಕ ಅಧಿಕಾರಿಗಳು ಗುರಿಯಾಗಿದ್ದಾರೆ. ಇಂದು ಅಬಕಾರಿ ಇಲಾಖೆಯಲ್ಲಿ ಅಸಹ್ಯಕರ ಅವ್ಯವಹಾರ, ಭ್ರಷ್ಟಾಚಾರ ಮತ್ತು ಅಕ್ರಮಗಳು ನಡೆಯುತ್ತಿರುವುದು ಸ್ಪಷ್ಟವಾಗಿದೆ. ಇವನ್ನೆಲ್ಲ ನಿಯಂತ್ರಿಸಬೇಕಾದ ಅಬಕಾರಿ ಸಚಿವರಾದ ಆರ್. ಬಿ. ತಿಮ್ಮಾಪುರ ಅವರು ಆರೋಪಿಯೊಂದಿಗೆ ಸಂಪರ್ಕದಲ್ಲಿದ್ದರು ಎನ್ನುವುದು ಗಂಭೀರ ವಿಷಯವಾಗಿದೆ. ಆದ್ದರಿಂದ ಈ ಕೂಡಲೆ ಆರ್. ಬಿ. ತಿಮ್ಮಾಪುರ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು, ಇಲ್ಲದಿದ್ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅವರನ್ನು ತಮ್ಮ ಸಚಿವ ಸಂಪುಟದಿಂದ ವಜಾ ಮಾಡಬೇಕು. ಹಾಗೆಯೆ ಈ ಪ್ರಕರಣದ ತನಿಖೆಯಲ್ಲಿ ಹಲವು ಸಚಿವರು ಮತ್ತು ಅವರ ಆಪ್ತರು ಆರೋಪಿಗಳೊಂದಿಗೆ ನಂಟು ಹೊಂದಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ಪಡೆದು, ಆ ಸಚಿವರುಗಳನ್ನು ಕೂಡ ತಮ್ಮ ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ರಾಜ್ಯ ಉಪಾಧ್ಯಕ್ಷರಾದ ರಘು ಜಾಣಗೆರೆ ಆಗ್ರಹಿಸಿದರು.

ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿರುವ ಅಕ್ರಮಗಳನ್ನು ಲೋಕಾಯುಕ್ತ ಪೊಲೀಸರೇ ತನಿಖೆ ಮಾಡುತ್ತಿದ್ದಾರೆ, ಆದರೆ ರಾಜ್ಯ ಪೊಲೀಸ್ ಇಲಾಖೆ ಹಾಗು ಲೋಕಾಯುಕ್ತ ಪೊಲೀಸ್ ಸಿಬ್ಬಂದಿ ಒಂದೇ ಮೂಲದವರಾಗಿದ್ದು, ಇವೆರಡೂ ಸಂಸ್ಥೆಗಳಿಂದ ತನಿಖೆ ಮಾಡುವುದು ಸ್ವಹಿತಾಸಕ್ತಿಯ ಸಂಘರ್ಷವಾಗುತ್ತದೆ ಮತ್ತು ತನಿಖೆ ಪಾರದರ್ಶಕವಾಗಿ ನಡೆಯುವ ಸಂಭವ ಬಹಳ ಕಡಿಮೆ ಇರುತ್ತದೆ. ಆದ್ದರಿಂದ ಸರ್ಕಾರವು ಈ ಕೂಡಲೇ, ಈ ಪ್ರಕರಣವನ್ನು ನ್ಯಾಯಾಂಗದ ಉಸ್ತುವಾರಿಯಲ್ಲಿ ಸಿಬಿಐಗೆ ವಹಿಸಬೇಕೆಂದು ರಾಜ್ಯ ಸಂಘಟನಾ ಕಾರ್ಯದರ್ಶಿ ಎಲ್. ಜೀವನ್ ಆಗ್ರಹಿಸಿದರು.

ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಹೊರಟ ಕೆಆರ್‌ಎಸ್ ಪಕ್ಷದ ಪದಾಧಿಕಾರಿಗಳನ್ನು ಪೊಲೀಸರು ತಡೆದರು ಆಗ ಪ್ರತಿಭಟನಾಕಾರರು ಪೊಲೀಸರ ಕಾಲಿಗೆ ಬಿದ್ದು ವಿಧಾನಸೌಧ ನಮ್ಮದು ನಾವು ವಿಧಾನಸೌಧದಲ್ಲಿ ದಾಂದಲೆ ಮಾಡಲು ಹೊರಟಿಲ್ಲ ನಮ್ಮ ಆಗ್ರಹವನ್ನು ರಾಜ್ಯ ಸರ್ಕಾರದ ಗಮನಕ್ಕೆ ತರಬೇಕು ಬಿಡಿ ಎಂದು ಪೊಲೀಸರ ಬಳಿ ಕೇಳಿಕೊಂಡರು

ನಂತರ ಕೆಆರ್‌ಎಸ್ ಪಕ್ಷದ ಒಂದು ನಿಯೋಗವನ್ನು ಮುಖ್ಯ ಕಾರ್ಯದರ್ಶಿಗಳ ಆಪ್ತ ಕಾರ್ಯದರ್ಶಿಯನ್ನು ಭೇಟಿ ಮಾಡಿಸಿ ಪಕ್ಷದ ಆಗ್ರಹ ಪತ್ರವನ್ನು ಸರ್ಕಾರಕ್ಕೆ ನೀಡಲಾಯಿತು

ಪ್ರತಿಭಟನೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ದೀಪಕ್ ಸಿ. ಎನ್. ರಾಜ್ಯ ಉಪಾಧ್ಯಕ್ಷರುಗಳಾದ ಮಂಜುನಾಥ ಎಸ್, ಸೋಮಸುಂದರ್ ರಾಜ್ಯ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನಯ್ಯ ಬಿ ಎಸ್, ವಿಜಯ್ ಕುಮಾರ್ ಯು ಬಿ, ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ರಘು ನಂದನ, ಕೃಷ್ಣ ವಿ ಬಿ, ಮಹಿಳಾ ಘಟಕದ ಅಧ್ಯಕ್ಷೆ ಆಶಾ ವೀರೇಶ್, ಯುವ ಘಟಕದ ಅಧ್ಯಕ್ಷೆ ಜನನಿ ವತ್ಸಲ, ರೈತ ಘಟಕದ ಅಧ್ಯಕ್ಷರಾದ ಜೋಗ್ನಳ್ಳಿ ಗುರುಮೂರ್ತಿ, ಎಸ್ಸಿ ಎಸ್ಟಿ ಘಟಕದ ಅಧ್ಯಕ್ಷರಾದ ಪ ಯ ಗಣೇಶ್ ಹಾಗು ಸಾವಿರಾರು ಪಕ್ಷದ ಸೈನಿಕರು ಭಾಗವಹಿಸಿದ್ದರು.

Tags: Asha VeereshDeepak CExcise MinisterFreedom parkganeshJanani VatsalaJognalli GurumurthyKarnataka LokayuktaKrishna V Bkrs partylokayuktaManjunath SRaghu NandanRavi krishna reddyThimmapura
Previous Post

DK Shivakumar: ಕಾವೇರಿ ಜಲಾನಯನ ಪ್ರದೇಶಕ್ಕೆ 2 ಸಾವಿರ ಕೊಟಿ ಅನುದಾನ: ಡಿಸಿಎಂ ಡಿ.ಕೆ.ಶಿವಕುಮಾರ್

Next Post

ಬಿಗ್ ಬಾಸ್ 12. ಏನೆಲ್ಲಾ ನೆಡೆಯುತ್ತೆ ಯಾರೆಲ್ಲಾ ಬರ್ತಾರೆ..!

Related Posts

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು
ಕರ್ನಾಟಕ

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

by ಪ್ರತಿಧ್ವನಿ
July 2, 2025
0

ಕೇಂದ್ರ ಸರ್ಕಾರದ ಬೆಲೆಯೇರಿಕೆಗೆ ರಾಜ್ಯದ ಬಿಜೆಪಿ ನಾಯಕರ ಮೌನ ಖಂಡನೀಯ ರೈತರಿಗೆ ನೆರವಾಗಲು ನಾವು ಹಾಲಿನ ದರ ಹೆಚ್ಚಳ ಮಾಡಿದಾಗ ಜನವಿರೋಧಿ ಎಂದು ಬೊಬ್ಬಿಟ್ಟಿದ್ದ ಬಿಜೆಪಿಯವರು ಈಗ...

Read moreDetails
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

July 1, 2025
Next Post

ಬಿಗ್ ಬಾಸ್ 12. ಏನೆಲ್ಲಾ ನೆಡೆಯುತ್ತೆ ಯಾರೆಲ್ಲಾ ಬರ್ತಾರೆ..!

Recent News

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

July 2, 2025
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada