• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗೋಲ್ಡನ್ ಸ್ಟಾರ್ ಗಣೇಶ್ ಅವರಿಂದ ಅನಾವರಣವಾಯಿತು “ನಿದ್ರಾದೇವಿ Next Door” ಚಿತ್ರದ “ನೀ ನನ್ನ” ಎಂಬ ರೊಮ್ಯಾಂಟಿಕ್ ಸಾಂಗ್.

ಪ್ರತಿಧ್ವನಿ by ಪ್ರತಿಧ್ವನಿ
July 8, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ವಾಣಿಜ್ಯ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಸುರಮ್ ಮೂವೀಸ್ ಲಾಂಛನದಲ್ಲಿ ಜಯರಾಮ ದೇವಸಮುದ್ರ ನಿರ್ಮಿಸಿರುವ ಹಾಗೂ ಸುರಾಗ್ ನಿರ್ದೇಶನದ ಹಾಗೂ ಪ್ರವೀರ್ & ರಿಷಿಕಾ ನಾಯಕ – ನಾಯಕಿಯಾಗಿ ನಟಿಸಿರುವ “ನಿದ್ರಾದೇವಿ next door” ಚಿತ್ರ ಶೀರ್ಷಿಕೆಯಿಂದಲೇ ಕುತೂಹಲ ಮೂಡಿಸಿರುವ ಚಿತ್ರ. ಇತ್ತೀಚೆಗೆ ಬಿಡುಗಡೆಯಾಗಿದ್ದ ಈ ಚಿತ್ರದ “ಸ್ಲೀಪ್ ಲೆಸ್ ಆಂಥೆಮ್” ಹಾಡು ಒಂದು ಮಿಲಿಯನ್ ಗೂ ಅಧಿಕ ವೀಕ್ಷಣೆಯಾಗಿದ್ದು, ಮೆಚ್ಚುಗೆ ಪಡೆದುಕೊಂಡಿದೆ. ಈ ಹಾಡನ್ನು ದುನಿಯಾ ವಿಜಯ್ ಕುಮಾರ್ ಬಿಡುಗಡೆ ಮಾಡಿದ್ದರು.

ADVERTISEMENT

ಪ್ರಸ್ತುತ ಚಿತ್ರದ ಎರಡನೇ ಹಾಡು “ನೀ ನನ್ನ” ಎಂಬ ರೊಮ್ಯಾಂಟಿಕ್ ಸಾಂಗ್ ಇತ್ತೀಚೆಗೆ ಸರೆಗಮ ಮ್ಯೂಸಿಕ್ ಚಾನಲ್ ನಲ್ಲಿ ಬಿಡುಗಡೆಯಾಗಿದೆ. ಗೋಲ್ಡನ್ ಸ್ಟಾರ್ ಗಣೇಶ್ ಅವರು ಈ ಹಾಡನ್ನು ಅನಾವರಣ ಮಾಡಿದರು. ಪತ್ರಕರ್ತ ರಂಗನಾಥ್ ಭಾರದ್ವಾಜ್ ಸಹ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಹಾಗೂ ಗಣ್ಯರು ಮಾತಾನಾಡಿದರು.

ನಾನು ಮೂಲತಃ ಆಡಿಟರ್. ಇದು ನನ್ನ ನಿರ್ಮಾಣದ ಮೂರನೇ ಸಿನಿಮಾ.‌ ನಿರ್ದೇಶಕರು ಬಂದು ಕಥೆ ಹೇಳಿದಾಗ ಇಷ್ಟವಾಯಿತು. ನಿರ್ಮಾಣಕ್ಕೆ ಮುಂದಾದೆ. ಚಿತ್ರಕ್ಕೆ ಹಾಡುಗಳು ಇನ್ವಿಟೇಶನ್ ಇದ್ದ ಹಾಗೆ. ಹಾಡುಗಳಿಗೆ ಪ್ರೇಕ್ಷಕರನ್ನು ಚಿತ್ರಮಂದಿರಗಳಿಗೆ ತರುವ ಶಕ್ತಿಯಿದೆ. ಹಾಗಾಗಿ ನಾನು ನಿರ್ದೇಶಕರಿಗೆ ನಮ್ಮ ಚಿತ್ರದಲ್ಲಿ ಸುಮಧುರ ಗೀತೆಗಳಿರಲಿ ಎಂದು ಹೇಳಿದ್ದೆ. ದುನಿಯಾ ವಿಜಯ್ ಅವರಿಂದ ಬಿಡುಗಡೆಯಾದ ನಮ್ಮ ಚಿತ್ರದ ಮೊದಲ ಹಾಡು ಈಗಾಗಲೇ ಜನಮನಸೂರೆಗೊಂಡಿದೆ. ಗೋಲ್ಡನ್ ಸ್ಟಾರ್ ಗಣೇಶ್ ಅವರು ಎರಡನೇ ಹಾಡನ್ನು ಬಿಡುಗಡೆ ಮಾಡಿರುವುದು ಬಹಳ ಖುಷಿಯಾಗಿದೆ. ಹೊಸತಂಡದ ಹೊಸಪ್ರಯತ್ನಕ್ಕೆ ಪ್ರೋತ್ಸಾಹ ನೀಡಲು ಬಂದಿರುವ ಗಣೇಶ್ ಅವರಿಗೆ ಧನ್ಯವಾದ. ನಕುಲ್ ಅಭಯಂಕರ್ ಅವರ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ “ನೀ ನನ್ನ” ಹಾಡನ್ನು ರಾಘವೇಂದ್ರ ಕಾಮತ್ ಅವರು ಬರೆದಿದ್ದಾರೆ. ಸೋನು ನಿಗಂ ಅವರು ಹಾಡಿದ್ದಾರೆ. ಆರು ತಿಂಗಳ ಹಿಂದೆಯೇ ಈ ಹಾಡು ಸಿದ್ದವಾಗಿತ್ತು. ಆನಂತರ ಸೋನು ನಿಗಂ ಅವರ ವಿವಾದ ನಡೆದಿದ್ದು. ಹಾಗಾಗಿ ನಮಗೂ ಕೂಡ ಎಲ್ಲದಕ್ಕಿಂತ ಭಾಷೆ ಮುಖ್ಯ. ಆ ನಿಟ್ಟಿನಲ್ಲಿ ಸೋನು ನಿಗಂ ಅವರ ಧ್ವನಿಯಲ್ಲಿ ಬಂದಿರುವ ಈ ಹಾಡನ್ನು ಚಿತ್ರದಲ್ಲಿ ಬಳಸಿಕೊಳ್ಳುವುದಿಲ್ಲ. ಬೇರೆ ಗಾಯಕರಿಂದ ಈ ಹಾಡನ್ನು ಹಾಡಿಸುತ್ತೇವೆ ಎಂದು ನಿರ್ಮಾಪಕ ಜಯರಾಮ ದೇವಸಮುದ್ರ ತಿಳಿಸಿದರು.

ಪ್ರತಿಷ್ಠಿತ ಅಕಾಡೆಮಿಯಲ್ಲಿ ಸಿನಿಮಾ ಬಗ್ಗೆ ಅಧ್ಯಯನ ಮಾಡಿದ ನನಗೆ ನನ್ನ ಮಾತೃಭಾಷೆಯಲ್ಲೇ ಮೊದಲ ಸಿನಿಮಾ ನಿರ್ದೇಶಿಸಬೇಕೆಂಬ ಆಸೆಯಿತ್ತು. ನಿರ್ಮಾಪಕ ಜಯರಾಮ್ ಅವರು ನನ್ನ ಆಸೆಗೆ ಆಸರೆಯಾದರು. ಯಾವುದೇ ಕೊರತೆ ಬಾರದ ಹಾಗೆ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಇನ್ನೂ ಇಂದು ಬಿಡುಗಡೆಯಾಗಿರುವ ರೊಮ್ಯಾಂಟಿಕ್ ಹಾಡು ರೊಮ್ಯಾಂಟಿಕ್ ಹೀರೊ ಗಣೇಶ್ ಅವರಿಂದ ಬಿಡುಗಡೆಯಾಗಿದ್ದು ಬಹಳ ಖುಷಿಯಾಗಿದೆ. ನಮ್ಮ ಚಿತ್ರಕ್ಕೆ ಪ್ರವೀರ್ ಹಾಗೂ ರಿಷಿಕಾ ಅವರನ್ನು ನಾಯಕ – ನಾಯಕಿ ಎಂದು ಆಯ್ಕೆ ಮಾಡಿದಾಗ ಸಾಕಷ್ಟು ಜನ ನನಗೆ ಈ ಜೋಡಿ ತುಂಬಾ ಚೆನ್ನಾಗಿದೆ ಎಂದರು. ನಕುಲ್ ಅಭಯಂಕರ್ ಸಂಗೀತ ಸಂಯೋಜನೆ ಹಾಗೂ ಅಜಯ್ ಕುಲಕರ್ಣಿ ಅವರ ಛಾಯಾಗ್ರಹಣ ನಮ್ಮ ಚಿತ್ರದ ಹೈಲೆಟ್ ಎನ್ನಬಹುದು ಎಂದರು ನಿರ್ದೇಶಕ ಸುರಾಗ್.

ನಮ್ಮ ಚಿತ್ರದ ಹಾಡು ಬಿಡುಗಡೆ ಮಾಡಿಕೊಟ್ಟ ಗಣೇಶ್ ಅವರಿಗೆ ಧನ್ಯವಾದ ಎಂದು ಮಾತನಾಡಿದ ನಾಯಕ ಪ್ರವೀರ್ ಶೆಟ್ಟಿ, ನಕುಲ್ ಅಭಯಂಕರ್ ಅವರು ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ ಚಿತ್ರದ ಹಾಡುಗಳು ಚೆನ್ನಾಗಿದೆ. ಮೊದಲ ಹಾಡಂತೂ ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದೆ. “ನೀ ನನ್ನ” ಹಾಡು ಕೂಡ ಜನಪ್ರಿಯವಾಗುವ ಭರವಸೆ ಇದೆ ಎಂದರು.

ಗಣೇಶ್ ಅವರಿಂದ ತಮ್ಮ ಅಭಿನಯದ ಚಿತ್ರದ ಹಾಡು‌ ಬಿಡುಗಡೆಯಾಗಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ನಾಯಕಿ ರಿಷಿಕಾ, ಗಣ್ಯರಿಗೆ ಹಾಗೂ ಚಿತ್ರತಂಡಕ್ಕೆ ಧನ್ಯವಾದ ಹೇಳಿದರು.

ಇಂದು ಬಿಡುಗಡೆಯಾಗಿರುವ “ನೀ‌ ನನ್ನ” ಹಾಡು ಬಹಳ‌ ಮಧುರವಾಗಿದೆ. ಹಾಡಿನಲ್ಲಿ ನಾಯಕ – ನಾಯಕಿ‌ ಮುದ್ದಾಗಿ ಕಾಣುತ್ತಾರೆ. ಇನ್ನೂ ಹಾಡಿನಷ್ಟೇ ಚಿತ್ರ ಕೂಡ ಚೆನ್ನಾಗಿದಾಗ ಮಾತ್ರ ಜನರು ಚಿತ್ರಮಂದಿರಗಳಿಗೆ ಬರುತ್ತಾರೆ. ಇನ್ನೂ ಭಾಷೆಯಿಂದ ನಾವೇ ಹೊರತು.‌ ನಮ್ಮಿಂದ
ಭಾಷೆ ಅಲ್ಲ. ಹಾಗಾಗಿ, ಬಹಳ‌ ಸೊಗಸಾಗಿ ಮೂಡಿ ಬಂದಿರುವ ಈ ಹಾಡನ್ನು ನಿರ್ಮಾಪಕರು ಕನ್ನಡ ಗಾಯಕರಿಂದಲೇ ಪುನಃ ಹಾಡಿಸುತ್ತಾರೆ ಎಂಬ ಭರವಸೆ ನನಗಿದೆ ಎಂದು ಹಾಡು ಬಿಡುಗಡೆ ಸಮಾರಂಭದಲ್ಲಿ ನಾಯಕ ಗಣೇಶ್ ಮಾತನಾಡಿದರು. ‌ಛಾಯಾಗ್ರಾಹಕ ಅಜಯ್ ಕುಲಕರ್ಣಿ ಸಹ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

“ನಿದ್ರಾದೇವಿ next door” ಸಿನಿಮಾದಲ್ಲಿ ಪ್ರವೀರ್ ಗೆ ಜೋಡಿಯಾಗಿ ರಿಷಿಕಾ ನಟಿಸಿದ್ದಾರೆ. ಬಿಗ್ ಬಾಸ್ ಖ್ಯಾತಿಯ ಶೈನ್ ಶೆಟ್ಟಿ ಹಾಗೂ ಶ್ರುತಿ ಹರಿಹರನ್, ಹಿರಿಯ ನಟ ಕೆ.ಎಸ್.ಶ್ರೀಧರ್, ಸುಧಾರಾಣಿ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಶ್ರೀವತ್ಸ, ಅನೂಪ್, ಐಶ್ವರ್ಯಾ ಗೌಡ, ಮಾಸ್ಟರ್ ಸುಜಯ್ ರಾಮ್, ಕಾರ್ತಿಕ್ ಪತ್ತಾರ್ ಮತ್ತು ಅನುರಾಗ್ ಪಾಟೀಲ್ ಸೇರಿದಂತೆ ಇತರರು ತಾರಾಬಳಗದಲ್ಲಿದ್ದಾರೆ.

ಬಹು ನಿರೀಕ್ಷಿತ ಈ ಚಿತ್ರಕ್ಕೆ ಉಲ್ಲಾಸ್ ಹೈದೂರ್ ಅವರ ಪ್ರೊಡಕ್ಷನ್ ಡಿಸೈನ್, ಅರ್ಜುನ್ ರಾಜ್ ಸಾಹಸ ನಿರ್ದೇಶನ ಮತ್ತು ಹೇಮಂತ್ ಕುಮಾರ್ ಡಿ ಅವರ ಸಂಕಲನವಿದೆ. ಮನೋಜ್ ಅವರು ಈ ಚಿತ್ರವನ್ನು ವಿಶಾಲ ಕರ್ನಾಟಕಕ್ಕೆ ವಿತರಣೆ ಮಾಡುತ್ತಿದ್ದಾರೆ‌.

Tags: 'NishikaAIshwarya GowdaAnupgolden star ganeshK S ShridharKarthik PattarMaster Sujay RamNidradevi Next DoorPraveersandalwoodshruti hariharanShyne Shettysonu nigamSrivastasudharani
Previous Post

Narendra Modi: ಭಾರತದಲ್ಲಿ ಪ್ರೆಸ್‌ ಸೆನ್ಸಾರ್‌ಶಿಪ್‌ ಖಾತೆಗಳನ್ನು ನಿಷೇಧಿಸಲು ಆದೇಶ ಹೊರಡಿಸಿಲ್ಲ: ಸ್ಪಷ್ಟನೆ ನೀಡಿದ ಕೇಂದ್ರ ಸರ್ಕಾರ.

Next Post

ಅಸ್ತಿತ್ವವಾದಿ ಚಳುವಳಿಗಳೂ ಕಾಲದ ಅಗತ್ಯತೆಯೂ

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
Next Post
ಅಸ್ತಿತ್ವವಾದಿ ಚಳುವಳಿಗಳೂ ಕಾಲದ ಅಗತ್ಯತೆಯೂ

ಅಸ್ತಿತ್ವವಾದಿ ಚಳುವಳಿಗಳೂ ಕಾಲದ ಅಗತ್ಯತೆಯೂ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada