• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Gujarath: ಗುಜರಾತ್‌ನಲ್ಲಿ ಮತ್ತೊಮ್ಮೆ ನದಿಗೆ ಬಿದ್ದ ವಾಹನಗಳು..

ಪ್ರತಿಧ್ವನಿ by ಪ್ರತಿಧ್ವನಿ
July 9, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಮಹಿಸಾಗರ ನದಿಗೆ ನಾಲ್ಕು ದಶಕಗಳ ಹಿಂದೆ ನಿರ್ಮಿಸಿದ್ದ ಸೇತುವೆ ಕುಸಿದ ಪರಿಣಾಮ ಒಂಬತ್ತು ಜನರು ಮೃತಪಟ್ಟು, ಹಲವರು ಗಾಯಗೊಂಡಿರುವ ಪ್ರಕರಣ ಗುಜರಾತ್‌ ನ ವಡೋದರಾದಲ್ಲಿ ಬುಧವಾರ ನಡೆದಿದೆ.

ADVERTISEMENT

ವಾಹನಗಳು ಸಂಚರಿಸುತ್ತಿದ್ದ ಸಂದರ್ಭದಲ್ಲಿ ‘ಗಂಭೀರ ಸೇತುವೆ’ ಮಧ್ಯದ ಭಾಗ ಕುಸಿದಿದೆ. ಇದರ ಪರಿಣಾಮ ವಾಹನಗಳು ನೀರಿಗೆ ಬಿದ್ದು ಹಲವರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವ ಋಷಿಕೇಶ ಪಟೇಲ್‌ ತಿಳಿಸಿದ್ದಾರೆ. ‘ಈ ಸೇತುವೆಯು 1985ರಲ್ಲಿ ನಿರ್ಮಾಣಗೊಂಡಿತ್ತು. ಇದರ ನಿರ್ವಹಣೆಯೂ ಆಯಾ ಕಾಲಕ್ಕೆ ನಡೆದಿದೆ. ದುರಂತಕ್ಕೆ ಕಾರಣವೇನು ಎಂಬುದನ್ನು ಪತ್ತೆ ಮಾಡಲು ತನಿಖೆ ನಡೆಸಲಾಗುವುದು’ ಎಂದು ಅವರು ಹೇಳಿದ್ದಾರೆ.

ತಾಂತ್ರಿಕ ಪರಿಣಿತ ತಂಡವನ್ನು ಘಟನಾ ಸ್ಥಳಕ್ಕೆ ಕಳುಹಿಸಿ ತನಿಖೆ ನಡೆಸಲು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಆದೇಶಿಸಿದ್ದಾರೆ. ಈ ಘಟನೆಯು ಬುಧವಾರ ಬೆಳಿಗ್ಗೆ 7.30ಕ್ಕೆ ಸಂಭವಿಸಿದೆ. ಎರಡು ಪಿಲ್ಲರ್ ನಡುವಿನ ಸ್ಲಾಬ್ ಕುಸಿದಿರುವುದು ವಿಡಿಯೊದಲ್ಲಿ ಕಾಣಿಸುತ್ತದೆ. ಎರಡು ಟ್ರಕ್ ಮತ್ತು ಒಂದು ವ್ಯಾನ್ ನದಿಗೆ ಬಿದ್ದಿವೆ ಎಂದು ಪೊಲೀಸ್ ಇನ್‌ಸ್ಪೆಕ್ಟರ್ ವಿಜಯ್ ಚರಣ್ ತಿಳಿಸಿದ್ದಾರೆ.


ಅಗ್ನಿಶಾಮಕದಳ ಮತ್ತು ಸ್ಥಳೀಯರು ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ. ಈಗಲೂ ಶೋಧ ಕಾರ್ಯ ಮುಂದುವರಿದಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡವು ಸ್ಥಳಕ್ಕೆ ಧಾವಿಸಿದೆ. 900 ಮೀ. ಉದ್ದ ‘ಗಂಭೀರ ಸೇತುವೆ’ಗೆ 23 ಪಿಲ್ಲರ್‌ಗಳಿವೆ. ಇದು ವಡೋದರಾ ಮತ್ತು ಆನಂದ್ ಜಿಲ್ಲೆಗಳನ್ನು ಸಂಪರ್ಕಿಸುತ್ತದೆ. ಗುಜರಾತಿನ ಮೊರ್ಬಿ ಪ್ರದೇಶದ ಮಚ್ಚು ನದಿಯ ದಡದಲ್ಲಿ ನಿರ್ಮಿಸಲಾಗಿದ್ದ ತೂಗು ಸೇತುವೆ ಕುಸಿದು ಹಲವರು ನೀರುಪಾಲಾಗಿದ್ದರು. 2022ರ ಅಕ್ಟೋಬರ್ 30ರಂದು ನಡೆದ ಈ ಘಟನೆಯಲ್ಲಿ 135 ಜನ ಮೃತಪಟ್ಟಿದ್ದರು. 2024ರ ಜ. 18ರಂದು ವಡೋದರಾದ ಹರ್ನಿ ಸರೋವರದಲ್ಲಿ ದೋಣಿ ದುರಂತ ಸಂಭವಿಸಿ 12 ಮಕ್ಕಳು ಹಾಗೂ ಇಬ್ಬರು ಶಿಕ್ಷಕಿಯರು ಮೃತಪಟ್ಟಿದ್ದರು.

Tags: Bhupendra PatelBJPGujarath GovernmentMacchu riverMorbiRishikesh PatelVadodaraVijay Charanನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಮಾಧ್ಯಮಗೋಷ್ಠಿ

Next Post

CM, DCM: ಸಿಎಂ, ಡಿಸಿಎಂ ಹೆಸರಲ್ಲಿ ಕೋಟಿ ಕೋಟಿ ಹಣ ವಂಚನೆ: ಜನರಿಗೆ ಯಾಮಾರಿಸಿದ್ದ ಮಹಿಳೆ ಅರೆಸ್ಟ್‌

Related Posts

ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ
Top Story

ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

by ಪ್ರತಿಧ್ವನಿ
April 30, 2026
0

ದಶಕದ ಹಿಂದೆ ರಾಜ್ಯವನ್ನೇ ಕಂಗೊಳಿಸಿದ್ದ ಧರ್ಮಸ್ಥಳದ 17 ವರ್ಷದ ಬಾಲಕಿ ಸೌಜನ್ಯ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ ನೀಡಿದೆ. ಪ್ರಕರಣದ...

Read moreDetails
ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ ₹180 ಕೋಟಿ

ಮಳೆ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ ಡಿಕೆಶಿ: “ಆರೋಪದ ಸಮಯವಲ್ಲ, ಪರಿಹಾರವೇ ಮುಖ್ಯ”

April 30, 2026
ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

April 30, 2026
ದುಡಿಯುವ ವರ್ಗಗಳ ಅನಿಶ್ಚಿತ ಬದುಕು ಮತ್ತು ಮಾರುಕಟ್ಟೆ

ದುಡಿಯುವ ವರ್ಗಗಳ ಅನಿಶ್ಚಿತ ಬದುಕು ಮತ್ತು ಮಾರುಕಟ್ಟೆ

April 30, 2026
ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

April 29, 2026
Next Post

CM, DCM: ಸಿಎಂ, ಡಿಸಿಎಂ ಹೆಸರಲ್ಲಿ ಕೋಟಿ ಕೋಟಿ ಹಣ ವಂಚನೆ: ಜನರಿಗೆ ಯಾಮಾರಿಸಿದ್ದ ಮಹಿಳೆ ಅರೆಸ್ಟ್‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada