• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಿಜಯಪುರ ಭಾಗಕ್ಕೆ 3200 ಕೋಟಿ ರೂ. ಮೊತ್ತದ ನೀರಾವರಿ ಯೋಜನೆಗಳು: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
July 15, 2025
in Top Story, ಕರ್ನಾಟಕ, ರಾಜಕೀಯ
0
ವಿಜಯಪುರ ಭಾಗಕ್ಕೆ 3200 ಕೋಟಿ ರೂ. ಮೊತ್ತದ ನೀರಾವರಿ ಯೋಜನೆಗಳು: ಡಿಸಿಎಂ ಡಿ.ಕೆ. ಶಿವಕುಮಾರ್
Share on WhatsAppShare on FacebookShare on Telegram

ವಿವಿಧ ಇಲಾಖೆಗಳ 4 ಸಾವಿರ ಕೋಟಿ ಮೊತ್ತದ ಕಾಮಗಾರಿಗಳಿಗೆ ಶಂಕುಸ್ಥಾಪನೆ

ADVERTISEMENT

ವಿಜಯಪುರ, ಜು.14

“ವಿಜಯಪುರ ಹಾಗೂ ಈ ಭಾಗದ 93 ಸಾವಿರ ಹೆಕ್ಟೇರ್ ಕೃಷಿ ಭೂಮಿಗೆ ನೀರಾವರಿ ಒದಗಿಸಲು ರೂ.3200 ಕೋಟಿ ಮೊತ್ತದ ಯೋಜನೆಗಳನ್ನು ರೂಪಿಸಲಾಗಿದೆ” ಎಂದು ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಇಂಡಿ ತಾಲೂಕಿನಲ್ಲಿ ಸೋಮವಾರ ನಡೆದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು.

“ನಿಮ್ಮ ಶಾಸಕರು ನನಗೆ ಏನೂ ಬೇಡ, ನಮ್ಮ ಭಾಗದ ರೈತರಿಗೆ ನೆರವಾಗಬೇಕು ಎಂದು ಮನವಿ ಮಾಡಿದ್ದಾರೆ. ಹೀಗಾಗಿ ಹೊರ್ತಿ- ರೇವಣ್ಣ ಸಿದ್ದೇಶ್ವರ ಏತ ನೀರಾವರಿ, ತಿಡಗುಂದಿ ಶಾಖಾ ಕಾಲುವೆ ಹಾಗೂ ಇಂಡಿ ತಾಲೂಕಿನ 90 ಕೆರೆಗಳನ್ನು ಭರ್ತಿಗೊಳಿಸುವ ಯೋಜನೆಗಳಿಗೆ ಇಂದು ಶಂಕುಸ್ಥಾಪನೆ ಮಾಡಲಾಗಿದೆ. ವಿವಿಧ ಇಲಾಖೆಗಳಿಂದ ಒಟ್ಟಾರೆ 4,555 ಕೋಟಿ ಮೊತ್ತದ ಕಾಮಗಾರಿಗಳಿಗೆ ಇಂದು ಭೂಮಿ ಪೂಜೆ ಹಮ್ಮಿಕೊಂಡಿದ್ದೇವೆ” ಎಂದರು.

KS Puttannaiah : ಸಿದ್ದರಾಮಯ್ಯ ಬಗ್ಗೆ ಅಂದು ರೈತ ಹೋರಾಗಾರರು ಹೇಳಿದ್ದೇನು..! #pratidhvani

“ಸರ್ಕಾರದಲ್ಲಿ ಹಣವಿಲ್ಲ, ಎಲ್ಲಾ ಹಣ ಗ್ಯಾರಂಟಿ ಯೋಜನೆಗಳಿಗೆ ಹೋಗಿವೆ ಎಂದು ವಿರೋಧ ಪಕ್ಷಗಳು ಟೀಕೆ ಮಾಡುತ್ತಿವೆ. ಇಂದು ಸಾರಿಗೆ ಇಲಾಖೆ ಮೂಲಕ ಜಾರಿಗೆ ತಂದ ಶಕ್ತಿ ಯೋಜನೆಯಲ್ಲಿ ಇಂದಿನವರೆಗೆ ಒಟ್ಟು 500 ಕೋಟಿ ಟ್ರಿಪ್ ಗಳನ್ನು ಪೂರೈಸಿದೆ. ಇಂದು ಮುಖ್ಯಮಂತ್ರಿಗಳು ಪ್ರಯಾಣಿಕರಿಗೆ 500ನೇ ಟಿಕೆಟ್ ನೀಡಿ ಈ ಕ್ಷಣವನ್ನು ಸಂಭ್ರಮಿಸಲಾಗಿದೆ. ಈ ಯೋಜನೆಗೆ ಇದುವರೆಗೂ 12,669 ಕೋಟಿ ವೆಚ್ಚ ಮಾಡಲಾಗಿದೆ. ಇದು ನಮ್ಮ ಗ್ಯಾರಂಟಿ ಯೋಜನೆ. ಆದರೆ ಕ್ಷೇತ್ರದಲ್ಲಿ ಇಂದು 4,555 ಕೋಟಿ ಮೊತ್ತದ ಯೋಜನೆಗೆ ಶಂಕುಸ್ಥಾಪನೆ ಮಾಡಿರುವುದು ಅಭಿವೃದ್ಧಿಯ ಯೋಜನೆ” ಎಂದು ತಿಳಿಸಿದರು.

“ಬಿಜೆಪಿ ಟೀಕೆಗಳು ಸಾಯುತ್ತವೆ, ನಮ್ಮ ಯೋಜನೆಗಳು ಶಾಶ್ವತವಾಗಿ ಉಳಿಯುತ್ತವೆ. ನಿಮ್ಮೆಲ್ಲರ ಪ್ರೀತಿ, ವಿಶ್ವಾಸ, ನಂಬಿಕೆ ಬಹಳ ಮುಖ್ಯವಾದುದು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸಾರಿಗೆ ಇಲಾಖೆಯಲ್ಲಿ 5,700 ಹುದ್ದೆ, ಪರಿಶಿಷ್ಟರಿಗೆ ವಿಶೇಷ ಯೋಜನೆ ನೀಡಿ 2 ಕೋಟಿ ಮೊತ್ತದವರೆಗೂ ಗುತ್ತಿಗೆಯಲ್ಲಿ ಮೀಸಲಾತಿ ನೀಡಲಾಗಿದೆ. ನಮ್ಮ ಸರ್ಕಾರ ಕಲ್ಯಾಣ ಕರ್ನಾಟಕ ಭಾಗಕ್ಕೆ ಪ್ರತಿ ವರ್ಷ 5 ಸಾವಿರ ಕೋಟಿ ನೀಡುವುದಾಗಿ ಮಾತು ಕೊಟ್ಟಿತ್ತು. ಅದರಂತೆ ನಾವು ನೀಡುತ್ತಿದ್ದೇವೆ. ಆಮೂಲಕ ಈ ಭಾಗದ ಸುಮಾರು 42 ಕ್ಷೇತ್ರಗಳಿಗೆ ಸರಾಸರಿಯಲ್ಲಿ 100 ಕೋಟಿ ಅನುದಾನ ಸಿಗಲಿದೆ. ಈ ಭಾಗದಲ್ಲಿ ಅನೇಕ ಯೋಜನೆ ಜಾರಿಗೆ ತಂದಿದ್ದೇವೆ” ಎಂದು ತಿಳಿಸಿದರು.

ಸರ್ಕಾರದ ಅಭಿವೃದ್ಧಿ ಕಾರ್ಯಗಳು ವಿರೋಧ ಪಕ್ಷಗಳ ಕಣ್ಣಿಗೆ ಕಾಣುತ್ತಿಲ್ಲವೇ:

“ಬೀದರ್ ಜಿಲ್ಲೆಯಲ್ಲಿ 2025 ಕೋಟಿ ವೆಚ್ಚದ ಯೋಜನೆಗೆ ಶಂಕುಸ್ಥಾಪನೆ, ಪಿರಿಯಾಪಟ್ಟಣದಲ್ಲಿ 500 ಕೋಟಿ ಯೋಜನೆ ಆರಂಭಿಸಲಾಗಿದೆ. ಮಹದೇವಪ್ಪ ಅವರು ಇದೇ ತಿಂಗಳು 20-21ರಂದು 3,647 ಕೋಟಿ ಮೊತ್ತದ ಕಾಮಗಾರಿ ಆರಂಭಿಸಲಿದ್ದಾರೆ. ದಿನೇಶ್ ಗುಂಡೂರಾವ್ ಅವರು ಆರೋಗ್ಯ ಇಲಾಖೆಯಲ್ಲಿ ಕ್ರಾಂತಿಕಾರಕ ಯೋಜನೆ ತರುತ್ತಿದ್ದಾರೆ. ಹೆಚ್.ಕೆ. ಪಾಟೀಲ್ ಅವರ ಪ್ರವಾಸೋದ್ಯಮ ಸಚಿವರಾಗಿ ಸವದತ್ತಿ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿ ಸೇರಿದಂತೆ ಅನೇಕ ಪ್ರವಾಸಿ ತಾಣ ಅಭಿವೃದ್ಧಿಗೆ ಮುಂದಾಗಿದ್ದಾರೆ. ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಮುಂದಿನ ಐದು ವರ್ಷಗಳಲ್ಲಿ 1 ಲಕ್ಷ ಕೋಟಿ ಮೊತ್ತದ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಇದೆಲ್ಲವು ಅಭಿವೃದ್ಧಿಯಲ್ಲವೇ ಎಂದು ಬಿಜೆಪಿ ಹಾಗೂ ಜೆಡಿಎಸ್ ನಾಯಕರನ್ನು ಕೇಳಲು ಬಯಸುತ್ತೇನೆ” ಎಂದರು.

“ನಮ್ಮ ರಾಜ್ಯದ ಗ್ಯಾರಂಟಿ ಯೋಜನೆಗಳು ದೇಶಕ್ಕೆ ದೊಡ್ಡ ಮಾದರಿಯಾಗಿವೆ. ಬಿಜೆಪಿ ಆಡಳಿತ ರಾಜ್ಯಗಳಲ್ಲಿ ನಮ್ಮ ರಾಜ್ಯದ ಮಾದರಿ ಅನುಸರಿಸಲಾಗುತ್ತಿದೆ. ಜನರ ಆದಾಯ ಪಾತಾಳಕ್ಕೆ ಕುಸಿದು, ಬೆಲೆ ಏರಿಕೆಯಾಗುತ್ತಿರುವ ಸಂದರ್ಭದಲ್ಲಿ ಬಡವರನ್ನು ರಕ್ಷಿಸಲು ನಿಮ್ಮ ಬದುಕಿನಲ್ಲಿ ಬದಲಾವಣೆ ತರಬೇಕು ಎಂದು ನಾವು ಈ ಗ್ಯಾರಂಟಿ ಯೋಜನೆ ಜಾರಿಗೆ ತಂದಿದ್ದೇವೆ. ನಮ್ಮ ಯೋಜನೆಗಳಿಂದ ಪ್ರತಿ ಕುಟುಂಬಕ್ಕೆ ತಿಂಗಳಿಗೆ ಸರಾಸರಿ 5 ಸಾವಿರ ರೂಪಾಯಿ ಉಳಿತಾಯವಾಗಲಿದೆ. ಇಂತಹ ಜನಪರ ಕಾರ್ಯಕ್ರಮಗಳನ್ನು ಕಾಂಗ್ರೆಸ್ ಸರ್ಕಾರ ಹೊರತಾಗಿ ಬೇರೆ ಯಾರೂ ನೀಡಲು ಸಾಧ್ಯವಿಲ್ಲ” ಎಂದರು.

“ಅನೇಕರು ನಮ್ಮ ಸರ್ಕಾರವನ್ನು ಟೀಕೆ ಮಾಡುತ್ತಿರುತ್ತಾರೆ, ಮಾಡಲಿ. ಮರದಲ್ಲಿ ಹಣ್ಣು ಕಂಡರೆ ಕಲ್ಲು ಹೊಡೆಯಲು ಅನೇಕರು ಪ್ರಯತ್ನಿಸುತ್ತಾರೆ. ನಮ್ಮ ಪಕ್ಷ 70 ವರ್ಷ ಈ ದೇಶವನ್ನು ಆಳಿದೆ. ನಮ್ಮ ಪಕ್ಷ ನೀಡಿರುವ ಯೋಜನೆಗಳನ್ನು ಯಾರೂ ಬದಲಿಸಲು ಸಾಧ್ಯವಾಗಿಲ್ಲ. ಉಳುವವನಿಗೆ ಭೂಮಿ, ಪಂಚವಾರ್ಷಿಕ ಯೋಜನೆ, ಬಡವರಿಗೆ ನಿವೇಶನ, ಮನೆ, ಪಿಂಚಣಿ ಸೌಲಭ್ಯ, ಉದ್ಯೋಗ ಖಾತರಿ ಸೇರಿದಂತೆ ನಮ್ಮ ಯೋಜನೆಯನ್ನು ಯಾರಿಂದಲೂ ನಿಲ್ಲಿಸಲು ಆಗಲಿಲ್ಲ. ಅದೇ ರೀತಿ ನಮ್ಮ ಪಂಚ ಗ್ಯಾರಂಟಿ ಯೋಜನೆಗಳನ್ನು ಬದಲಿಸಲು ಯಾರಿಂದಲೂ ಸಾಧ್ಯವಿಲ್ಲ. ನಮ್ಮ ಸರ್ಕಾರ ಉತ್ತಮ ಆಡಳಿತ ನೀಡುತ್ತಿದ್ದು, ನಿಮ್ಮ ಆಶೀರ್ವಾದ ನಮ್ಮ ಮೇಲೆ ಇರಬೇಕು” ಎಂದು ತಿಳಿಸಿದರು.

“ಬಳ್ಳಾರಿ, ವಿಜಯನಗರದಲ್ಲಿ ತಾಂಡಾ ಪ್ರದೇಶದ ಜನರಿಗೆ ಅವರ ಆಸ್ತಿ ಮತ್ತು ಭೂಮಿ ದಾಖಲೆಗಳನ್ನು ನಮ್ಮ ಸರ್ಕಾರ ನೀಡುವ ಮೂಲಕ 1,11,111 ಜನರಿಗೆ ಭೂ ಗ್ಯಾರಂಟಿ ನೀಡಿದೆ. ಇಂತಹ ಕೆಲಸ ಬೇರೆ ಯಾರೂ ಮಾಡಲು ಸಾಧ್ಯವಾಗಿರಲಿಲ್ಲ. ಇನ್ನು ನಮ್ಮ ಸರ್ಕಾರ ರಾಜ್ಯದ ವಿವಿಧ ಪ್ರದೇಶಗಳಲ್ಲಿ ಸಚಿವ ಸಂಪುಟ ಸಭೆ ಮಾಡಿ, ಆ ಭಾಗದ ಅಭಿವೃದ್ಧಿಗಳಿಗೆ ಅನುಮೋದನೆ ನೀಡುತ್ತಿದ್ದೇವೆ. ಕಲಬುರ್ಗಿ, ಚಾಮರಾಜನಗರ, ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ಮಾಡಲಾಗಿದೆ. ಈ ಜಿಲ್ಲೆಯ ಶಾಸಕರು ನಮ್ಮ ಜಿಲ್ಲೆಯಲ್ಲೂ ಸಚಿವ ಸಂಪುಟ ಸಭೆ ಮಾಡಬೇಕು ಎಂದು ಮುಖ್ಯಮಂತ್ರಿಗಳ ಬಳಿ ಮನವಿ ಮಾಡಿದ್ದಾರೆ” ಎಂದು ತಿಳಿಸಿದರು.

ನಿಮ್ಮ ನಂಬಿಕೆ ಉಳಿಸಿಕೊಳ್ಳಲು ಇಲ್ಲಿಗೆ ಬಂದಿದ್ದೇವೆ:

“ನಿಂಬೆಗಿಂತ ಶ್ರೇಷ್ಠ ಹುಳಿ ಮತ್ತೊಂದಿಲ್ಲ, ದುಂಬಿಗಿಂತ ಶ್ರೇಷ್ಠವಾದ ಕಪ್ಪು ಮತ್ತೊಂದಿಲ್ಲ, ಶಂಭುಗಿಂತ ದೊಡ್ಡ ದೇವರಿಲ್ಲ, ನಂಬಿಕೆಗಿಂತ ದೊಡ್ಡ ಗುಣ ಬೇರೋಂದಿಲ್ಲ ಎಂದು ಸರ್ವಜ್ಞನ ವಚನ ಹೇಳುತ್ತದೆ. ಅದೇ ರೀತಿ ಇಂದು ಇಂಡಿ ತಾಲೂಕಿನ ಮಹಾಜನತೆ ನಮ್ಮ ಮೇಲೆ ನಂಬಿಕೆ ಇಟ್ಟು ಮೂರು ಬಾರಿ ಯಶವಂತ ಪಾಟೀಲ್ ಅವರನ್ನು ಶಾಸಕರನ್ನಾಗಿ ಆಯ್ಕೆ ಮಾಡಿದ್ದೀರಿ. ಹೀಗಾಗಿ ನಿಮ್ಮ ನಂಬಿಕೆಗೆ ಪ್ರತಿಯಾಗಿ ನಮ್ಮ ಇಡೀ ಸರ್ಕಾರ ನಿಮ್ಮ ಮುಂದೆ ಬಂದು ಸಾವಿರಾರು ಕೋಟಿ ಮೊತ್ತದ ಯೋಜನೆಗಳ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸುತ್ತಿದ್ದೇವೆ. ಇದೇ ನಮ್ಮ ಭಾಗ್ಯ” ಎಂದು ತಿಳಿಸಿದರು.

“ಈ ಜಿಲ್ಲೆಯಲ್ಲಿ ಒಂದು ಕ್ಷೇತ್ರ ಹೊರತಾಗಿ ಉಳಿದ ಎಲ್ಲಾ ಕಡೆ ಕಾಂಗ್ರೆಸ್ ಶಾಸಕರನ್ನು ಆಯ್ಕೆ ಮಾಡಿ, ಈ ಸರ್ಕಾರ ಅಧಿಕಾರಕ್ಕೆ ಬರಲು ಕಾರಣರಾಗಿದ್ದೀರಿ. ಇಲ್ಲಿ ಬೆಳೆಯುವ ನಿಂಬೆಹಣ್ಣುನ್ನು ನಾವು ಪೂಜೆ, ದೃಷ್ಟಿ ತೆಗೆಯಲು, ಊಟಕ್ಕೆ ಬಳಸುತ್ತೇವೆ. ಈ ನಿಂಬೆಹಣ್ಣಿನ ನಾಡು ಈ ಇಂಡಿ ತಾಲೂಕು. ನಾನು ಎರಡನೇ ಬಾರಿಗೆ ನೀರಾವರಿ ಯೋಜನೆಯಾದ ಬಳಿಕ ಇಂಡಿ ತಾಲೂಕಿಗೆ ಹೊರತಾಗಿ ಬೇರೆ ಯಾವುದೇ ಕ್ಷೇತ್ರಕ್ಕೆ ಇಷ್ಟು ದೊಡ್ಡ ಮಟ್ಟದಲ್ಲಿ ನೀರಾವರಿ ಯೋಜನೆಗೆ ಅನುದಾನ ನೀಡಿಲ್ಲ” ಎಂದರು.

“ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಬಿ ಪಾಟೀಲ್ ಅವರು ಈ ಭಾಗದಲ್ಲಿ ಹೆಚ್ಚು ಕೈಗಾರಿಕೆ ತರಬೇಕು ಎಂದು ಅವಿರತ ಪ್ರಯತ್ನ ಮಾಡುತ್ತಿದ್ದಾರೆ. ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಈ ಜಿಲ್ಲೆಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಇದು ನಿಮ್ಮ ಸರ್ಕಾರ. 2028ರಲ್ಲಿ ನೀವು ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರನ್ನು ಆಯ್ಕೆ ಮಾಡಿ ಈ ಸರ್ಕಾರ ಮತ್ತೆ ಅಧಿಕಾರಕ್ಕೆ ತರಬೇಕು, ನಿಮ್ಮ ಸೇವೆಗೆ ಅವಕಾಶ ಮಾಡಿಕೊಡಬೇಕು” ಎಂದು ತಿಳಿಸಿದರು.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬೆಂಗಳೂರು ಕಮಿಷನರ್‌ ಸೀಮಂತ್ ಕುಮಾರ್ ಮಹತ್ವದ ಸುದ್ದಿಗೋಷ್ಠಿ..!

Next Post

BREAKING NEWS : ರೈತರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ – ಭೂಸ್ವಾಧೀನ ಅಧಿಸೂಚನೆ ರದ್ದುಗೊಳಿಸಲು ಸಿಎಂ ಒಪ್ಪಿಗೆ 

Related Posts

ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ
Top Story

ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

by ಪ್ರತಿಧ್ವನಿ
April 30, 2026
0

ದಶಕದ ಹಿಂದೆ ರಾಜ್ಯವನ್ನೇ ಕಂಗೊಳಿಸಿದ್ದ ಧರ್ಮಸ್ಥಳದ 17 ವರ್ಷದ ಬಾಲಕಿ ಸೌಜನ್ಯ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ ನೀಡಿದೆ. ಪ್ರಕರಣದ...

Read moreDetails
ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ ₹180 ಕೋಟಿ

ಮಳೆ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ ಡಿಕೆಶಿ: “ಆರೋಪದ ಸಮಯವಲ್ಲ, ಪರಿಹಾರವೇ ಮುಖ್ಯ”

April 30, 2026
ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

April 30, 2026
ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

April 29, 2026
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
Next Post
BREAKING NEWS : ರೈತರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ – ಭೂಸ್ವಾಧೀನ ಅಧಿಸೂಚನೆ ರದ್ದುಗೊಳಿಸಲು ಸಿಎಂ ಒಪ್ಪಿಗೆ 

BREAKING NEWS : ರೈತರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ - ಭೂಸ್ವಾಧೀನ ಅಧಿಸೂಚನೆ ರದ್ದುಗೊಳಿಸಲು ಸಿಎಂ ಒಪ್ಪಿಗೆ 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada