ಬೆಂಗಳೂರಿನಲ್ಲಿ (Bengaluru) ನಿನ್ನೆ ಮತ್ತೆ ಮಚ್ಚು,ಲಾಂಗು ಝಳಪಿಸಿದ್ದು ರಾಜಧಾನಿಯಲ್ಲಿ ರಕ್ತ ಹರಿದಿದೆ. ಹಲಸೂರು ಕೆರೆ ಬಳಿಯ ವಾರ್ ಮೆಮೋರಿಯಲ್ ಸರ್ಕಲ್‌ನಲ್ಲಿ ರೌಡಿಶೀಟರ್ ಶಿವಕುಮಾರ್ (Shivakumar) ಅಲಿಯಾಸ್ ಬಿಕ್ಲು ಶಿವನನ್ನ ಭೀಕರವಾಗಿ ಹತ್ಯೆ ಮಾಡಲಾಗಿದೆ.ಕಾರಿನಲ್ಲಿ ಬಂದ ನಾಲೈದು ಜನ ದುಷ್ಕರ್ಮಿಗಳು ಬಿತ್ತು ಶಿವನನ್ನ ಆತನ ಮನೆಯ ಮುಂದೆಯೇ ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ.

ಈ ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಭಾರತೀನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆಗೆ ಮುಂದಾಗಿದ್ದಾರೆ.ಈ ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಕೇಸಲ್ಲಿ ಶಾಸಕ ಬೈರತಿ ಬಸವರಾಜ್ ವಿರುದ್ಧ FIR ಕೂಡ ಎಫ್.ಐ.ಆರ್ (FIR) ದಾಖಲಾಗಿದೆ. ಈ ಮರ್ಡರ್ ಕೇಸ್ ನಲ್ಲಿ ಶಾಸಕ ಬೈರತಿ ಬಸವರಾಜ್ (Byrathi Basavaraj) ಎ5 ಆರೋಪಿ ಎಂದು ಉಲ್ಲೇಖ ಮಾಡಲಾಗಿದೆ.

ರೌಡಿಶೀಟರ್ ಬಿಕ್ಲು ಶಿವ ಕೊಲೆಗೆ ಬೈರತಿ ಬಸವರಾಜ್ ಕುಮ್ಮಕ್ಕು ನೀಡಿದ್ದಾರೆ ಎಂದು ಮೃತ ಶಿವು ತಾಯಿ ದೂರು ನೀಡಿದ್ದಾರೆ.ರೌಡಿಶೀಟರ್ ಶಿವಕುಮಾರ್ ತಾಯಿ ವಿಜಯಲಕ್ಷ್ಮಿ ನೀಡಿದ ದೂರಿನ ಮೇರೆಗೆ ಪೊಲೀಸರು ಎಫ್ಐಆರ್ ದಾಖಲು ಮಾಡಿದ್ದಾರೆ. ಇನ್ನುಳಿದಂತೆ ಜಗದೀಶ್, ವಿಮಲ್, ಕಿರಣ್, ಅನಿಲ್, ಎಂಬ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದುಭಾರತಿ ನಗರ ಪೊಲೀಸ್ ಠಾಣೆಯಲ್ಲಿ ವಿಚಾರಣೆ ಮುಂದುವರೆದಿದೆ.