ಇಂದು ಕೇಂದ್ರ ರೈಲ್ವೆ ಇಲಾಖೆ ರಾಜ್ಯಖಾತೆ (Railway ministry) ಸಚಿವ ವಿ.ಸೋಮಣ್ಣ (V somanna) ಅವರ ಜನ್ಮದಿನ. ಈ ಹಿನ್ನಲೆಯಲ್ಲಿ ಬಿಜೆಪಿ (Bjp) ವಿರೋಧ ಪಕ್ಷದ ನಾಯಕ ಆರ್.ಅಶೋಕ್ (R ashok) ಸೋಮಣ್ಣ ಅವರಿಗೆ ಶುಭ ಕೋರಿದ್ದಾರೆ. ಸದ್ಯ ರಾಜ್ಯ ಬಿಜೆಪಿ ಪಾಳಯದಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆಯ ಚರ್ಚೆಗಳ ನಡುವೆ ವಿ.ಸೋಮಣ್ಣ ಅವರ ಹೆಸರು ಮುಂಚೂಣಿಯಲ್ಲಿದೆ.

ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಆರ್.ಅಶೋಕ್ ಭಾರತ ಸರ್ಕಾರದ ರೈಲ್ವೆ ಮತ್ತು ಜಲ ಶಕ್ತಿ ಇಲಾಖೆಗಳ ರಾಜ್ಯ ಸಚಿವರಾಗಿ ಅತ್ಯಂತ ಕ್ರಿಯಾಶೀಲತೆಯಿಂದ ಸೇವೆ ಸಲ್ಲಿಸುತ್ತಿರುವ ಶ್ರೀ ವಿ. ಸೋಮಣ್ಣ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು ಎಂದು ಶುಭ ಹಾರೈಸಿದ್ದಾರೆ.

ಇನ್ನೂ ಹೆಚ್ಚಿನ ಜನಸೇವೆ ಮಾಡಲುಭಗವಂತ ಆಯುರಾರೋಗ್ಯ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅಶೋಕ್ ಬರೆದುಕೊಂಡಿದ್ದಾರೆ. ಪ್ರಸ್ತುತ ಬಿ.ವೈ ವಿಜಯೇಂದ್ರ ಅವರೇ ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಮುಂದುವರೆಯುತ್ತಾರ..? ಅಥವಾ ಬದಲಾವಣೆ ಆಗಲಿದ್ಯಾ ಎಂಬ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ. ಈ ಮಧ್ಯೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿ.ಸೋಮಣ್ಣ ಹೆಸರು ಪ್ರಬಲವಾಗಿ ಕೇಳಿಬರುತ್ತಿದೆ.