• Home
  • About Us
  • ಕರ್ನಾಟಕ
Wednesday, November 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

DK Shivakumar: ಬಿಜೆಪಿಯವರು ಬಾಳೆಹಣ್ಣು ತಿಂದು ನಮ್ಮ ಮೂತಿಗೆ ಒರೆಸಲು ಪ್ರಯತ್ನಿಸುತ್ತಿದ್ದಾರೆ..!!

ಪ್ರತಿಧ್ವನಿ by ಪ್ರತಿಧ್ವನಿ
July 21, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

“ಸಣ್ಣ ವ್ಯಾಪಾರಿಗಳಿಗೆ ಜಿಎಸ್ ಟಿ ನೋಟೀಸ್ ಜಾರಿ ಮಾಡುವ ಮೂಲಕ ಬಿಜೆಪಿಯವರು ತಾವು ಬಾಳೆಹಣ್ಣು ತಿಂದು ನಮ್ಮ ಮೂತಿಗೆ ಒರೆಸುವ ಪ್ರಯತ್ನ ಮಾಡುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DCM DK Shivakumar) ಅವರು ತಿರುಗೇಟು ನೀಡಿದರು.

ADVERTISEMENT

ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ (Sadashivanagar) ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.

“ಕೇಂದ್ರ ಬಿಜೆಪಿ ಸರ್ಕಾರ 2019ರಲ್ಲೇ ವಾರ್ಷಿಕ 40 ಲಕ್ಷಕ್ಕೂ ವಹಿವಾಟು ಮಿತಿ ನಿಗದಿಗೊಳಿಸಿ ಎಲ್ಲಾ ರಾಜ್ಯ ಸರ್ಕಾರಗಳಿಗೂ ಇದನ್ನು ಪಾಲಿಸುವಂತೆ ಆದೇಶ ನೀಡಿದ್ದಾರೆ. ಬಡವರಿಗೆ ಕಿರುಕುಳ ನೀಡುವುದನ್ನು ಬಿಜೆಪಿ ಸರ್ಕಾರ ಹಿಂಪಡೆಯಬೇಕು. ತರಕಾರಿ, ಹಣ್ಣು, ಎಳನೀರು, ಹೂವಿನ ವ್ಯಾಪಾರಿ ಸೇರಿದಂತೆ ಸಣ್ಣಪುಟ್ಟ ವ್ಯಾಪಾರ ಮಾಡುವ ಲಕ್ಷಾಂತರ ಮಂದಿ ಇದ್ದಾರೆ. ಈಗಾಗಲೇ 14 ಸಾವಿರ ವ್ಯಾಪಾರಿಗಳಿಗೆ ನೋಟೀಸ್ ನೀಡಲಾಗಿದೆ. ಈ ಹಿಂದೆಯೇ ನಮ್ಮ ನಾಯಕರಾದ ರಾಹುಲ್ ಗಾಂಧಿ (Rahul Gandhi) ಅವರು ಜಿಎಸ್ ಟಿ (GST) ವಿಚಾರವಾಗಿ ವಿರೋಧ ವ್ಯಕ್ತಪಡಿಸಿದ್ದರು. ಈ ವಿಚಾರದಲ್ಲಿ ಜನರಿಗೆ ಹೇಗೆ ನೆರವಾಗಬಹುದು ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳ ಜೊತೆ ಚರ್ಚೆ ಮಾಡಿ ಅಗತ್ಯ ಮಾರ್ಗದರ್ಶನ ನೀಡಲಿದ್ದಾರೆ” ಎಂದು ತಿಳಿಸಿದರು.

Gujarat: ಗುಜರಾತ್‌ನಲ್ಲಿಹಾಲು ರಸ್ತೆಗೆ ಸುರಿದು ಅಸಮಧಾನ ವ್ಯಕ್ತಪಡಿಸಿದ ಪ್ರತಿಭಟನೆ..! #milk #road #gujarat

ಈ ವಿಚಾರವಾಗಿ ಕೇಂದ್ರಕ್ಕೆ ಪತ್ರ ಬರೆಯುತ್ತೀರಾ ಎಂದು ಕೇಳಿದಾಗ, “ಖಂಡಿತವಾಗಿ ಬರೆಯುತ್ತೇವೆ. ನಮ್ಮ ಜನರಿಗೆ ನ್ಯಾಯ ಒದಗಿಸಿಕೊಡಬೇಕು. ಅತಿ ಹೆಚ್ಚು ಜಿಎಸ್ ಟಿ ತೆರಿಗೆ ಕಟ್ಟುತ್ತಿರುವ ರಾಜ್ಯ ನಮ್ಮದು. ನಮ್ಮ ಬಡ ಹಾಗೂ ಮಧ್ಯಮ ವ್ಯಾಪಾರಿಗಳಿಗೆ ಇದರಿಂದ ತೊಂದರೆ ಆಗುತ್ತಿದೆ” ಎಂದು ತಿಳಿಸಿದರು.

ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಟಾರ್ಗೆಟ್ ನೀಡಿರುವುದರಿಂದ ಈ ನೋಟೀಸ್ ನೀಡಲಾಗಿದೆ ಎಂದು ಕೇಳಿದಾಗ, “ಕೇಂದ್ರ ಜಿಎಸ್ ಟಿ ಕೌನ್ಸಿಲ್ ಯಾವ ನಿಯಮ ರೂಪಿಸುತ್ತಾರೋ ಅದರಂತೆ ಅಧಿಕಾರಿಗಳು ನೋಟೀಸ್ ನೀಡಿದ್ದಾರೆ. ಕೇಂದ್ರದ ಸಮಿತಿಯ ಒತ್ತಡದ ಮೇರೆಗೆ ಈ ನೋಟೀಸ್ ನೀಡಲಾಗಿದೆ” ಎಂದು ಹೇಳಿದರು.

Jaya Mruthyunjaya Swamiji Hospitalized:  ಸ್ವಾಮೀಜಿ ಕೊ*ಲ್ಲಲು ಊಟದಲ್ಲಿ ವಿಷ ಹಾಕಿದ್ರು..! #pratidhvani

ಜಿಬಿಎ ಅಡಿಯಲ್ಲಿ 5 ಪಾಲಿಕೆ ಮಾಡುವುದನ್ನು ಪ್ರಶ್ನಿಸಿ ಪಿಐಎಲ್ ಅರ್ಜಿ ಹಾಕಿರುವ ಬಗ್ಗೆ ಕೇಳಿದಾಗ, “ಯಾರು ಬೇಕಾದರೂ ಇದರ ಬಗ್ಗೆ ಆಕ್ಷೇಪಣೆ ಸಲ್ಲಿಸಬಹುದು. ಇದರಲ್ಲಿ ತಪ್ಪೇನಿಲ್ಲ ಇದು ಅವರ ಹಕ್ಕು. ಅದನ್ನು ಮೊಟಕುಗೊಳಿಸಲು ಆಗುವುದಿಲ್ಲ. ನಾವು ಏನಾದರೂ ತಪ್ಪು ಮಾಡಿದ್ದಾರೆ ಅದನ್ನು ಸರಿಪಡಿಸಿಕೊಳ್ಳುತ್ತೇವೆ. ಬೆಂಗಳೂರಿನಲ್ಲಿ ಐದು ಪಾಲಿಕೆ ಮಾಡಲು ಸರ್ಕಾರ ಬದ್ಧವಾಗಿದೆ. ನಾನು ಬಿಜೆಪಿ ನಾಯಕರ ಸಭೆ ಕರೆದು ಚರ್ಚಿಸಿ ಸಲಹೆಗಳನ್ನು ಸ್ವೀಕರಿಸಿದ್ದೇನೆ. ಜಂಟಿ ಸದನ ಸಮಿತಿ ರಚಿಸಿ ಚರ್ಚೆ ಮಾಡಲಾಗಿದೆ. ಈಗಲೂ ಅವರು ತಮ್ಮ ಆಕ್ಷೇಪಣೆ ಸಲ್ಲಿಸಬಹುದು. ಅವರು ರಾಜಕೀಯ ಕಾರಣಕ್ಕೆ ಧ್ವನಿ ಎತ್ತುತ್ತಿದ್ದಾರೆ. ಬೆಂಗಳೂರಿನ ಹಿತಕ್ಕಾಗಿ ಐದು ಪಾಲಿಕೆ ಮಾಡಲು ಮುಂದಾಗಿದ್ದೇವೆ. ಮುಂದಿನ ಒಂದೆರಡು ದಿನಗಳಲ್ಲಿ ಮಾಧ್ಯಮಗೋಷ್ಠಿ ಕರೆದು ಎ ಖಾತಾ, ಬಿ ಖಾತಾ ವಿಚಾರ, ಇ-ಖಾತಾ ಅಭಿಯಾನ, ತೆರಿಗೆ ಹಾಗೂ ಪಾಲಿಕೆ ವಿಚಾರವಾಗಿ ಮಾಹಿತಿ ನೀಡುತ್ತೇನೆ” ಎಂದು ತಿಳಿಸಿದರು.

ಸುರ್ಜೆವಾಲ ಅವರು ಮತ್ತೆ ರಾಜ್ಯಕ್ಕೆ ಭೇಟಿ ನೀಡುವ ಬಗ್ಗೆ ಕೇಳಿದಾಗ, “25ಕ್ಕೆ ನಾನು ಹಾಗೂ ಸಿಎಂ ದೆಹಲಿ ಪ್ರವಾಸ ಮಾಡುತ್ತಿದ್ದೇವೆ. ಇನ್ನು ಸಂಸತ್ ಅಧಿವೇಶನ ನಡೆಯುತ್ತಿದೆ. ನನಗೆ ಗೊತ್ತಿರುವ ಮಾಹಿತಿ ಇಷ್ಟೆ” ಎಂದು ತಿಳಿಸಿದರು.

BangladeshAirForce: ಬಾಂಗ್ಲಾದೇಶದ ವಾಯುಪಡೆಯ ತರಬೇತಿ ವಿಮಾನ ಪತನ..! #bangladesh #airforce #pratidhvani

ಎಸ್ ಐಟಿ ರಚನೆ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ಪರ ವಿರೋಧ ಚರ್ಚೆ ಆಗುತ್ತಿದೆ. ಇದನ್ನು ಗೃಹ ಸಚಿವರು ನಿಭಾಯಿಸುತ್ತಿದ್ದು, ಬಹಳ ಹಿರಿಯ ಅಧಿಕಾರಿಗಳನ್ನು ಎಸ್ ಐಟಿ ತಂಡದಲ್ಲಿ ನಿಯೋಜಿಸಿದ್ದಾರೆ. ತನಿಖೆ ನಂತರ ಸತ್ಯಾಸತ್ಯತೆ ತಿಳಿಯುತ್ತದೆ” ಎಂದರು.

ವಿಷಯಾಂತರ ಮಾಡಲು ಎಸ್ ಐಟಿ ರಚಿಸಿದ್ದಾರೆ ಎಂದು ಕೇಳಿದಾಗ, “ನಾವು ಏನು ಮಾಡಿದರೂ ಬಿಜೆಪಿ ವಿರೋಧ ಮಾಡುತ್ತದೆ” ಎಂದರು.

ಸ್ಥಳೀಯ ಪೊಲೀಸ್ ತನಿಖೆ ನಂತರ ಎಸ್ ಐಟಿ ರಚನೆ ಬಗ್ಗೆ ತೀರ್ಮಾನ ಎಂದು ಸಿಎಂ ಹೇಳಿದ ಬೆನ್ನಲ್ಲೇ ದಿಢೀರನೆ ಎಸ್ ಐಟಿ ರಚನೆಯಾಗಿದೆ ಎಂದು ಕೇಳಿದಾಗ, “ಮಾಧ್ಯಮಗಳು ಈ ವಿಚಾರವನ್ನು ದೊಡ್ಡದಾಗಿ ಬಿಂಬಿಸಿದಾಗ ನಾವು ಮಾಧ್ಯಮಗಳಿಗೆ ಗೌರವ ನೀಡಬೇಕಲ್ಲವೇ? ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಮಾಜಕ್ಕೆ ನ್ಯಾಯ ಒದಗಿಸುವಲ್ಲಿ ನಿಮಗೂ ನಮ್ಮಷ್ಟೇ ಜವಾಬ್ದಾರಿ ಇದೆ. ನಿಮ್ಮ ಹಾಗೂ ವಿರೋಧ ಪಕ್ಷಗಳ ಹಿತವಚನ, ನುಡಿಮುತ್ತುಗಳನ್ನು ನಾವು ಕೇಳಬೇಕು” ಎಂದು ತಿಳಿಸಿದರು.

Tags: congress dk shivakumarDCM DK ShivakumarDK Shivakumardk shivakumar 2025dk shivakumar bengalurudk shivakumar cmdk shivakumar congressdk shivakumar dcmdk shivakumar falldk shivakumar interviewdk shivakumar latest newsdk shivakumar livedk shivakumar memesdk shivakumar newsdk shivakumar next cmdk shivakumar rallydk shivakumar sondk shivakumar speechdk shivakumar supportdk shivakumar today newsdk shivakumar updatesdk shivakumar videos
Previous Post

S/o Muttanna: ಸಖತಾಗಿದೆ “s/o ಮುತ್ತಣ್ಣ” ಚಿತ್ರದ “ಮಿಡ್ ನೈಟ್ ರಸ್ತೆಯಲ್ಲಿ” ಸಾಂಗ್.

Next Post

Priyanka Kharge: ಕಿಂಚಿತ್ ನಾಚಿಕೆ ಉಳಿದುಕೊಂಡಿದ್ದರೆ ಅಶೋಕ್ ಹಾಗೂ ವಿಜಯೇಂದ್ರ ರಾಜೀನಾಮೆ ನೀಡಲಿ..!!‌

Related Posts

ದರೋಡೆ ಆರೋಪಿಗಳ‌ ಸುಳಿವು ಸಿಕ್ಕಿದೆ: ಗೃಹ ಸಚಿವ ಪರಮೇಶ್ವರ್
ಕರ್ನಾಟಕ

ದರೋಡೆ ಆರೋಪಿಗಳ‌ ಸುಳಿವು ಸಿಕ್ಕಿದೆ: ಗೃಹ ಸಚಿವ ಪರಮೇಶ್ವರ್

by ಪ್ರತಿಧ್ವನಿ
November 19, 2025
0

ಬೆಂಗಳೂರು: ನಗರದಲ್ಲಿ ಹಾಡಹಗಲೇ ಎಟಿಎಂ ವಾಹನ ದರೋಡೆ ಪ್ರಕರಣ ಸಂಬಂಧ ಆರೋಪಿಗಳ ಸುಳಿವು ಸಿಕ್ಕಿದ್ದು, ಆರೋಪಿಗಳನ್ನು ಹಿಡಿಯುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ಹೇಳಿದ್ದಾರೆ‌ ವಿಧಾನಸೌಧದಲ್ಲಿ...

Read moreDetails
ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

November 19, 2025
ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

November 19, 2025
ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

November 19, 2025
ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

November 19, 2025
Next Post

Priyanka Kharge: ಕಿಂಚಿತ್ ನಾಚಿಕೆ ಉಳಿದುಕೊಂಡಿದ್ದರೆ ಅಶೋಕ್ ಹಾಗೂ ವಿಜಯೇಂದ್ರ ರಾಜೀನಾಮೆ ನೀಡಲಿ..!!‌

Recent News

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR
Top Story

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

by ಪ್ರತಿಧ್ವನಿ
November 19, 2025
ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ
Top Story

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

by ಪ್ರತಿಧ್ವನಿ
November 19, 2025
ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು
Top Story

ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

by ಪ್ರತಿಧ್ವನಿ
November 19, 2025
ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು
Top Story

ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು

by ಪ್ರತಿಧ್ವನಿ
November 19, 2025
ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌
Top Story

ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌

by ಪ್ರತಿಧ್ವನಿ
November 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ದರೋಡೆ ಆರೋಪಿಗಳ‌ ಸುಳಿವು ಸಿಕ್ಕಿದೆ: ಗೃಹ ಸಚಿವ ಪರಮೇಶ್ವರ್

ದರೋಡೆ ಆರೋಪಿಗಳ‌ ಸುಳಿವು ಸಿಕ್ಕಿದೆ: ಗೃಹ ಸಚಿವ ಪರಮೇಶ್ವರ್

November 19, 2025
ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

November 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada