• Home
  • About Us
  • ಕರ್ನಾಟಕ
Thursday, July 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಚುನಾವಣಾ ಆಯೋಗಕ್ಕೆ ಅನಿರ್ಬಂಧಿತ ಅಧಿಕಾರ ಇರುವುದಿಲ್ಲ

ನಾ ದಿವಾಕರ by ನಾ ದಿವಾಕರ
July 23, 2025
in Top Story, ಕರ್ನಾಟಕ, ದೇಶ
0
ಚುನಾವಣಾ ಆಯೋಗಕ್ಕೆ ಅನಿರ್ಬಂಧಿತ ಅಧಿಕಾರ ಇರುವುದಿಲ್ಲ
Share on WhatsAppShare on FacebookShare on Telegram

ADVERTISEMENT

ಬಿಹಾರದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ ಪ್ರಜಾಪ್ರಾತಿನಿಧ್ಯ ಕಾಯ್ದೆಗೆ ಪೂರಕವಾಗಿಲ್ಲ

ಪಿ ಡಿ ಟಿ ಆಚಾರಿ

(ಮೂಲ : The ECI does not have unfettered powers ̲P D T Achary –ದ ಹಿಂದೂ 9 ಜುಲೈ 2025)

ಕನ್ನಡಕ್ಕೆ : ನಾ ದಿವಾಕರ

ಭಾರತದ ಚುನಾವಣಾ ಆಯೋಗವು (ECI), ನವಂಬರ್‌ನಲ್ಲಿ ಚುನಾವಣೆಗಳನ್ನು ಎದುರಿಸಲಿರುವ  ಬಿಹಾರದಲ್ಲಿ ಮತದಾರರ ಪಟ್ಟಿಯನ್ನು ಪರಿಷ್ಕರಿಸುವ ಸಲುವಾಗಿ ಕೈಗೊಂಡಿರುವ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-ಎಸ್‌ಐಅರ್) ಯ ಕಾರ್ಯಕ್ಕೆ ಚಾಲನೆ ನೀಡಿದೆ. ವಿರೋಧ ಪಕ್ಷಗಳು ಈ ಎಸ್‌ಐಆರ್‌ ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಈ ಪ್ರಕ್ರಿಯೆಯು ಭಾರತದ ಪ್ರಜೆಗಳಲ್ಲ ಎಂಬ ಕಾರಣ ಒಡ್ಡಿ  ಬಿಹಾರದ ಸಾವಿರಾರು ಮತದಾರರ ಮತದಾನದ ಹಕ್ಕನ್ನು ಕಸಿದುಕೊಳ್ಳುತ್ತದೆ ಎಂದು ಆರೋಪಿಸುತ್ತಿವೆ. ಚುನಾವಣಾ ಆಯೋಗವು ಈ ಆರೋಪವನ್ನು ನಿರಾಕರಿಸಿದ್ದು ತನ್ನ ಪರಿಷ್ಕರಣೆಯ ನಿರ್ಧಾರವನ್ನು ಸಮರ್ಥಿಸಿಕೊಂಡಿದೆ. ಏತನ್ಮಧ್ಯೆ ಆಯೋಗದ ಈ ಆದೇಶವನ್ನು ವಿರೋಧಿಸಿ ಸುಪ್ರೀಂಕೋರ್ಟ್‌ನಲ್ಲಿ ಅನೇಕ ಅರ್ಜಿಗಳನ್ನು ದಾಖಲಿಸಲಾಗಿದೆ. (ಇದೇ 28ಕ್ಕೆ ಕೋರ್ಟ್‌ ತನ್ನ ಅಂತಿಮ ತೀರ್ಪು ನೀಡುವ ಸಾಧ್ಯತೆಗಳಿವೆ –ಅನು).

 ಚುನಾವಣೆಗಳು ನಡೆಯುವ ಕೆಲವೇ ತಿಂಗಳುಗಳ ಮುನ್ನ ಆಯೋಗವು ಈ ಕ್ರಮವನ್ನು ಜಾರಿಗೊಳಿಸಿರುವುದು ವಿವಾದದ ಕೇಂದ್ರ ಬಿಂದು ಆಗಿದ್ದು, 2024ರಲ್ಲಿ ಈಗಾಗಲೇ ಒಮ್ಮೆ ಮತದಾರರ ಪಟ್ಟಿಯ ಪರಿಷ್ಕರಣೆ ಆಗಿರುವಾಗ ಇದು ಅಗತ್ಯವೇ ಎಂದು ಪ್ರಶ್ನಿಸಲಾಗುತ್ತಿದೆ. ಈ ಲೇಖನದಲ್ಲಿ ಆಯೋಗದ ಕ್ರಮದ ಕಾನೂನುಬದ್ದತೆ ಮತ್ತು ಇದನ್ನು ಕೈಗೊಳ್ಳಲು ಚುನಾವಣಾ ಆಯೋಗಕ್ಕೆ ಇರುವ ಅಧಿಕಾರವನ್ನು ಕುರಿತು ಚರ್ಚಿಸುತ್ತದೆ.

DK Suresh on Siddu : ಸಾಧನಾ ಸಮಾವೇಶದಲ್ಲಿ DK ಹೆಸರು ಮರೆತ ಸಿದ್ದರಾಮಯ್ಯ ಡಿಕೆ ಸುರೇಶ್ ಹಿಂಗ್ಯಾಕಂದ್ರು?

 ಮತದಾರರ ಅನರ್ಹತೆಗೆ

 ಸಂವಿಧಾನದ ಅನುಚ್ಛೇದ 326, ವಯಸ್ಕ ಮತದಾನದ ಆಧಾರದ ಮೇಲೆ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಚುನಾವಣೆಗಳನ್ನು ನಡೆಸಬೇಕು ಎಂದು ಹೇಳುತ್ತದೆ. ಅರ್ಥಾತ್‌, ಪ್ರತಿಯೊಬ್ಬ ವಯಸ್ಕ ಮತದಾರರೂ , ಕೆಲವು ನಿರ್ದಿಷ್ಟ ಕಾರಣಗಳಿಗಾಗಿ ಅನರ್ಹಗೊಳ್ಳದೆ ಇದ್ದಲ್ಲಿ, ಮತದಾರರಾಗುವ ಹಕ್ಕು ಪಡೆದಿರುತ್ತಾರೆ ಎಂದು ಹೇಳುತ್ತದೆ. ಈ ಅನುಚ್ಛೇದದ ಅನುಸಾರ ಮತದಾರರಾಗಲು ಎರಡು ಅವಶ್ಯ ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ. ಮೊದಲನೆಯದು ವ್ಯಕ್ತಿಯು ಭಾರತದ ಪ್ರಜೆ ಆಗಿರಬೇಕು ಮತ್ತು ಎರಡನೆಯದು ಕನಿಷ್ಠ 18 ವರ್ಷದವರಾಗಿರಬೇಕು. 1950ರ ಪ್ರಜಾ ಪ್ರಾತಿನಿಧ್ಯ ಕಾಯ್ದೆ (RPA )ಯಲ್ಲಿ ಮತದಾರರಾಗಿ ನೋಂದಣಿಯಾಗಲು ಅನರ್ಹರಾಗುವ ಕಾರಣಗಳನ್ನು ಸ್ಪಷ್ಟವಾಗಿ ನಮೂದಿಸಲಾಗಿದೆ. ಅವುಗಳೆಂದರೆ, ಸಮರ್ಥ ನ್ಯಾಯಾಲಯವೊಂದರ ಮೂಲಕ ವ್ಯಕ್ತಿಯು ಮಾನಸಿಕ ಅಸ್ವಸ್ಥ ಎಂದು ಘೋಷಿಸಿರಬೇಕು ಹಾಗೂ  1951ರ ಆರ್‌ಪಿಎ ಕಾಯ್ದೆಯ ಸೆಕ್ಷನ್‌ 11ಎ ಅಡಿಯಲ್ಲಿ ಮತದಾನಕ್ಕೆ ಅನರ್ಹ ಎಂದು ಘೋಷಿಸಿರಬೇಕು.

 ಮತದಾರರಾಗಿ ನೋಂದಣಿ ಮಾಡಿಸಲು ನಿಯಮಗಳನ್ನು RPA ಕಾಯ್ದೆಯ ಸೆಕ್ಷನ್‌ 19ರಲ್ಲಿ ಸ್ಪಷ್ಟವಾಗಿ ನೀಡಲಾಗಿದೆ. ಅದೇನೆಂದರೆ, ವ್ಯಕ್ತಿಯು ಕನಿಷ್ಠ 18 ವರ್ಷ ದಾಟಿರಬೇಕು ಮತ್ತು ಆ ಕ್ಷೇತ್ರದ ಸಾಮಾನ್ಯ ನಿವಾಸಿಯಾಗಿರಬೇಕು. ಇಲ್ಲಿ ಸಾಮಾನ್ಯ ನಿವಾಸಿ (Ordinary Resident) ಎಂದರೇನು ಎಂಬುದನ್ನು ಸೆಕ್ಷನ್‌ 20ರಲ್ಲಿ ವಿವರಿಸಲಾಗಿದೆ. ಇದರನ್ವಯ ವ್ಯಕ್ತಿಯು ವಾಸಿಸುವ ಮನೆಯ ಮಾಲಿಕತ್ವ ಅಥವಾ ಮತ್ತಾವುದೇ ರೀತಿಯ ಹಕ್ಕು  ಹೊಂದಿರುವ ಕಾರಣಕ್ಕಾಗಿ ಸಾಮಾನ್ಯ ನಿವಾಸಿ ಎಂದು ಪರಿಭಾವಿಸಲಾಗುವುದಿಲ್ಲ. ಅಥವಾ ವ್ಯಕ್ತಿಯು ತಾನು ವಾಸಿಸುವ ಸ್ಥಳದಲ್ಲಿ,  ತಾತ್ಕಾಲಿಕವಾಗಿ ತಮ್ಮ ನಿವಾಸದಲ್ಲಿ ಇಲ್ಲದೆ ಹೋದ ಮಾತ್ರಕ್ಕೆ ʼಸಾಮಾನ್ಯ ನಿವಾಸಿ ʼಯ ಅರ್ಹತೆಯನ್ನು ಕಳೆದುಕೊಳ್ಳುವುದಿಲ್ಲ.

 ಚುನಾವಣಾ ಆಯೋಗಕ್ಕೆ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವ ಹಾಗೂ ಲೋಕಸಭೆ, ರಾಜ್ಯ ವಿಧಾನಸಭೆ ಚುನಾವಣೆಗಳನ್ನು ನಡೆಸುವ ಮತ್ತು ರಾಷ್ಟ್ರಪತಿ-ಉಪರಾಷ್ಟ್ರಪತಿಗಳ ಚುನಾವಣೆಯನ್ನು   ಪರಮಾಧಿಕಾರ ಇರುತ್ತದೆ. ಸಂವಿಧಾನದ ಅನುಚ್ಛೇದ 324, ಚುನಾವಣಾ ಆಯೋಗಕ್ಕೆ ಈ ಕಾರ್ಯಗಳನ್ನು ನಿರ್ವಹಿಸುವ ಅಧಿಕಾರವನ್ನು ಕಲ್ಪಿಸುತ್ತದೆ.  ಈ ಅಧಿಕಾರವನ್ನು ಸುಪ್ರೀಂಕೋರ್ಟ್‌ Reservoir of Power, ಅಂದರೆ ʼಅಧಿಕಾರದ ಸಂಗ್ರಹಾಗಾರʼ ಎಂದು ವ್ಯಾಖ್ಯಾನಿಸುತ್ತದೆ.  ಮುಕ್ತ ಹಾಗೂ ನ್ಯಾಯಯುತ ಚುನಾವಣೆಗಳನ್ನು ನೆರವೇರಿಸುವುದು ಸಂವಿಧಾನದ ಮೂಲ ಸಂರಚನೆಯ (Basic Structure) ಒಂದು ಪ್ರಧಾನ ಲಕ್ಷಣವಾಗಿರುವುದರಿಂದ, ಭಾರತದ ಚುನಾವಣಾ ಆಯೋಗವು ಈ ಕಾರ್ಯವನ್ನು ಪರಿಪೂರ್ಣತೆಯಿಂದ ನಿರ್ವಹಿಸುವ ಸಲುವಾಗಿ ಎಲ್ಲ ಅವಶ್ಯ ಅಧಿಕಾರಗಳನ್ನೂ ಹೊಂದಿರುವುದು ಅತ್ಯಗತ್ಯ.

 ಏನೇ ಆದರೂ, ಸಂವಿಧಾನವು ಯಾವುದೇ ಅಧಿಕಾರ ಕೇಂದ್ರಕ್ಕೂ ಅನಿರ್ಬಂಧಿತ ಅಧಿಕಾರ ನೀಡುವುದನ್ನು ಊಹಿಸಲೂ ಸಾಧ್ಯವಿಲ್ಲ. ಸುಪ್ರೀಂ ಕೋರ್ಟ್‌ ಸಹ ತನ್ನ ತೀರ್ಪುಗಳ ಮೂಲಕ, ಯಾವುದೇ ಶಾಸನಗಳ ವ್ಯಾಪ್ತಿಗೆ ಒಳಪಡದೆ ಇರುವ ಎಲ್ಲ ಪ್ರದೇಶಗಳಲ್ಲೂ ಚುನಾವಣಾ ಆಯೋಗವು ತನ್ನ ಎಲ್ಲ ಅಧಿಕಾರವನ್ನೂ ಚಲಾಯಿಸಬಹುದಾಗಿದೆ ಆದರೆ ಆಯಾ ಪ್ರದೇಶಗಳಲ್ಲಿ ಜಾರಿಯಲ್ಲಿರುವ ಕಾನೂನುಗಳ ಅನುಸಾರ ನಿರ್ವಹಿಸತಕ್ಕದ್ದು ಎಂದು ಹೇಳಿದೆ. ಮೊಹಿಂದರ್‌ ಸಿಂಗ್ vs ಮುಖ್ಯ ಚುನಾವಣಾ ಆಯುಕ್ತ (1978) ಮೊಕದ್ದಮೆಯಲ್ಲಿ ಸುಪ್ರೀಂ ಕೋರ್ಟ್‌ ಕಾನೂನನ್ನು ಹೀಗೆ ವ್ಯಾಖ್ಯಾನಿಸುತ್ತದೆ : “ಮೊದಲನೆಯದಾಗಿ ಸಂಸತ್ತು ಅಥವಾ ಇತರ ಯಾವುದೇ ರಾಜ್ಯ ವಿಧಾನಸಭೆಯು ಚುನಾವಣೆಗಳಿಗೆ ಸಂಬಂಧಿಸಿದಂತೆ ನ್ಯಾಯಬದ್ದವಾದ ಕಾನೂನುಗಳನ್ನು ಜಾರಿಗೊಳಿಸಿದ್ದರೆ, ಆಯೋಗವು ಆ ನಿಬಂಧನೆಗಳಿಗೆ ಪೂರಕವಾಗಿ ಕಾರ್ಯನಿರ್ವಹಿಸಬೇಕು, ಅವುಗಳಿಗೆ ವ್ಯತಿರಿಕ್ತವಾಗಿ ಅಲ್ಲ. ಆದರೆ ಅಂತಹ ಕಾನೂನು ಏನೂ ಹೇಳದೆ ಇದ್ದಲ್ಲಿ, ಮುಕ್ತ ಹಾಗೂ ನ್ಯಾಯಯುತ ಚುನಾವಣೆಗಳನ್ನು ಕ್ರಮಬದ್ಧವಾಗಿ ನೆರವೇರಿಸುವ ನಿಟ್ಟಿನಲ್ಲಿ  ಅನುಚ್ಛೇದ 324  ಅಧಿಕಾರದ ಸಂಗ್ರಹಾಗಾರವಾಗಿ ಪರಿಣಮಿಸುತ್ತದೆ  ”.

 ಸೂಕ್ತ ದಿನಾಂಕದ ಸೂಚನೆ

 ಈಗ ಮತದಾರರ ಪಟ್ಟಿಯನ್ನು ಪರಿಷ್ಕರಣೆಗೊಳಪಡಿಸುವ ನಿಟ್ಟಿನಲ್ಲಿ ಭಾರತದ ಚುನಾವಣಾ ಆಯೋಗದ ಅಧಿಕಾರ ವ್ಯಾಪ್ತಿಯನ್ನು ನಿರ್ಧರಿಸುವ ಪ್ರಜಾಪ್ರಾತಿನಿಧ್ಯ ಕಾಯ್ದೆಯ (ಆರ್‌ಪಿಎ) ಸಂಬಂಧಪಟ್ಟ ನಿಬಂಧನೆಗಳನ್ನು ಗಮನಿಸೋಣ  1950ರ ಆರ್‌ಪಿಎ ಕಾಯ್ದೆಯ ಸೆಕ್ಷನ್‌ 21 ಮತದಾರರ ಪಟ್ಟಿಯ ಸಿದ್ಧತೆ ಮತ್ತು ಪರಿಷ್ಕರಣೆಯನ್ನು ಕುರಿತು ಹೇಳುತ್ತದೆ. ಈ ನಿಟ್ಟಿನಲ್ಲಿ ಸೆಕ್ಷನ್‌ 21 ನಾಲ್ಕು ಹಂತಗಳನ್ನು ಗುರುತಿಸುತ್ತದೆ. (1) ಲೋಕಸಭೆ ಅಥವಾ ರಾಜ್ಯ ವಿಧಾನಸಭೆ ಚುನಾವಣೆಗಳ ಮುನ್ನ (2) ಪ್ರತಿಯೊಂದು ಉಪಚುನಾವಣೆಗಳಿಗೂ ಮುನ್ನ (3) ಯಾವುದೇ ವರ್ಷದಲ್ಲಿ ಭಾರತದ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಮತ್ತು (4) ಆಯೋಗವು ಸಕಾರಣಗಳೊಂದಿಗೆ, ಯಾವುದೇ ಚುನಾವಣಾ ಕ್ಷೇತ್ರದಲ್ಲಿ ವಿಶೇಷ ಪರಿಷ್ಕರಣೆಯನ್ನು ಆದೇಶಿಸಿದಾಗ. ನಾಲ್ಕನೆಯ ನಿಬಂಧನೆಯನ್ನು ಹೊರತುಪಡಿಸಿ ಎಲ್ಲ ಪರಿಷ್ಕರಣೆಗಳನ್ನೂ  ಒಂದು ನಿರ್ದಿಷ್ಟ, ಸೂಕ್ತ ದಿನದಿಂದ, ಸಾಮಾನ್ಯವಾಗಿ ಜನವರಿ ತಿಂಗಳ ಮೊದಲನೆ ದಿನದಿಂದ, ನಡೆಸಬಹುದು ಎಂದು ಸೆಕ್ಷನ್‌ 14ರಲ್ಲಿ ಹೇಳಲಾಗಿದೆ.  ಇದಕ್ಕೆ ಹೊರತಾದ ಒಂದೇ ನಿಬಂಧನೆ (4) ಆಗಿರುತ್ತದೆ , ಇದರನ್ವಯ ಯಾವುದೇ ಸಮಯದಲ್ಲಿ ಮಾಡಬಹುದಾದ್ದರಿಂದ ಸೂಕ್ತ ದಿನವನ್ನು ನಮೂದಿಸಲಾಗಿಲ್ಲ.

 ಭಾರತದ ಚುನಾವಣಾ ಆಯೋಗವು ಜೂನ್‌ 24ರಂದು ಹೊರಡಿಸಿದ ಆದೇಶವು ಜುಲೈ 1 2025ನ್ನು ಸೂಕ್ತ ದಿನ ಎಂದು ಸೂಚಿಸುತ್ತದೆ. ಇದು ಸೆಕ್ಷನ್‌ 21(2)(ಬಿ) ನಿರ್ದೇಶನದ ಅನ್ವಯ ನೀಡಲಾಗಿದೆ ಎಂದು ಹೇಳುತ್ತದೆ.  ಬಿಹಾರದಲ್ಲಿ ನಡೆಯುತ್ತಿರುವ ಪರಿಷ್ಕರಣೆಗೆ ಇದೇ ಸೆಕ್ಷನ್‌ ಅನ್ವಯಿಸಲಾಗಿದೆ ಎಂದು ಭಾವಿಸಬಹುದು.  ಅದರೆ ಈ ನಿಬಂಧನೆಯಡಿ ಸೂಕ್ತ ದಿನಾಂಕವು 1-1-2025 ಆಗಿರಬೇಕು. ಪರಿಷ್ಕರಣೆಯನ್ನು 2025ರ ಜನವರಿ 1ರಿಂದಲೇ ಆರಂಭಿಸಬೇಕಿತ್ತು. ಹಾಗಾಗಿ ಚುನಾವಣಾ ಆಯೋಗದ ಆದೇಶದಲ್ಲಿ ನೀಡಿರುವ ಸೂಕ್ತ ದಿನಾಂಕಕ್ಕೆ ಕಾನೂನಿನಡಿ  ಸಮ್ಮತಿ ಇರುವುದಿಲ್ಲ.  ಅದೇ ರೀತಿ, “ ವಿಶೇಷ ತೀವ್ರ ಪರಿಷ್ಕರಣೆ ” (SIR)‌ ಎಂಬ ಪದವು ಕಾನೂನಿನಲ್ಲಿ ಕಾಣುವುದಿಲ್ಲ. ಚುನಾವಣಾ ಆಯೋಗವು ವಿಶೇಷ ಪರಿಷ್ಕರಣೆಯನ್ನು  ಆದೇಶಿಸಬಹುದಾದ ಏಕೈಕ ಸನ್ನಿವೇಶ ಎಂದರೆ, ಅದು ಒಂದು ನಿರ್ದಿಷ್ಟ ಚುನಾವಣಾ  ಕ್ಷೇತ್ರಕ್ಕೆ ಅಥವಾ ಅದರ ಒಂದು ಭಾಗಕ್ಕೆ, ಸಂಬಂಧಿಸಿರಬೇಕೇ ಹೊರತು, ಇಡೀ ರಾಜ್ಯಕ್ಕೆ ಸಂಬಂಧಿಸಿರಕೂಡದು.

 ಹಾಗಾಗಿ ಬಿಹಾರದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR)‌ ಪ್ರಜಾಪ್ರಾತಿನಿಧ್ಯ ಕಾಯ್ದೆಯ (RPA) ನಿಬಂಧನೆಗಳ ಅನುಸಾರ ನಡೆಯುತ್ತಿಲ್ಲ ಎಂದು ತೀರ್ಮಾನಿಸುವುದು ಸಮಂಜಸವಾಗಿರುತ್ತದೆ.  ಭಾರತದ ಚುನಾವಣಾ ಆಯೋಗವು ತನ್ನ ಆದೇಶದಲ್ಲಿ, ಈ ಕ್ರಮವನ್ನು ಕೈಗೊಳ್ಳಲು ತನಗೆ ಸೆಕ್ಷನ್‌ 21ರ ಅಡಿ ಅಧಿಕಾರ ಇದೆ ಎಂದು ಹೇಳಿದೆ. ನಿಜ, ಆದರೆ ಈ ಅಧಿಕಾರವು ಒಂದು ಕ್ಷೇತ್ರಕ್ಕೆ ಅಥವಾ ಅದರ ಒಂದು ಭಾಗಕ್ಕೆ ಸೀಮಿತವಾಗಿರುತ್ತದೆ ಎನ್ನುವುದನ್ನು ಸೆಕ್ಷನ್‌ 21(3)ರಲ್ಲಿ ಗುರುತಿಸಬಹುದು.

 ಸಂವಿಧಾನ ಅನುಚ್ಛೇದ 324ರ ಅಡಿಯಲ್ಲಿ ಪರಮಾಧಿಕಾರವನ್ನು ಪಡೆಯುವ ಭಾರತದ ಚುನಾವಣಾ ಆಯೋಗವು ಕಾನೂನು ನಿಯಮಗಳಿಗೆ ಜವಾಬ್ದಾರಿಯುತವೂ ಆಗಿರುತ್ತದೆ. ಹಾಗೆಯೇ ಸುಪ್ರೀಂ ಕೋರ್ಟ್‌ ಆದೇಶಗಳನ್ವಯ ಸ್ವಾಭಾವಿಕ ನ್ಯಾಯದ ನಿಯಮಗಳಿಗೆ ಪೂರಕವಾಗಿ ಇರಬೇಕಾಗುತ್ತದೆ.  ಚುನಾವಣಾ ನೋಂದಣಿ ಅಧಿಕಾರಿಗಳು, ಮತದಾರರು ತಮ್ಮ ಪೌರತ್ವವನ್ನು ನಿರೂಪಿಸುವ ಸಲುವಾಗಿ, ತಪ್ಪಾದ ದಾಖಲೆಗಳನ್ನು ನೀಡಿದ್ದಾರೆ ಎಂಬ ಕಾರಣಕ್ಕಾಗಿ ಅರ್ಜಿಯನ್ನು ತಿರಸ್ಕರಿಸಲಾಗುವುದಿಲ್ಲ. ಮತದಾರರ ನೋಂದಣಿಯ ನಿಯಮ 8ರ ಅನುಸಾರ, ಪ್ರಜೆಗಳು ತಮ್ಮ ಗರಿಷ್ಟ ಸಾಮರ್ಥ್ಯಕ್ಕೆ ಅನುಗುಣವಾಗಿ ಮಾಹಿತಿಯನ್ನು ಒದಗಿಸಬಹುದಾಗಿದೆ. ಈ ಶಾಸನಬದ್ದ ಷರತ್ತನ್ನು ಚುನಾವಣಾ ಆಯೋಗ ನಿರ್ಲಕ್ಷಿಸಲಾಗುವುದಿಲ್ಲ.

-೦-೦-೦-

Tags: asad umer election commissionElection Commissionelection commission actElection Commission of Indiaelection commission of india powerelection commission of india powers and functionselection commission of india upscelection commission of indian constitutionelection commission powerelection commission powersfestival of bharat election commission of indiaindia election commissionsupreme court election commissionupsc election commission
Previous Post

Prahlad Joshi: ವ್ಯಾಪಾರಸ್ಥರಿಗೆ ಜಿಎಸ್‌ಟಿ ನೋಟಿಸ್ ಕೇಂದ್ರದ್ದಲ್ಲ: ಪ್ರಹ್ಲಾದ್ ಜೋಶಿ

Next Post

ಬಿಕ್ಲು ಶಿವನ ಕೊ*ಲೆ ಕೇಸ್ – A1 ಆರೋಪಿ ಜಗ್ಗ ದುಬೈಗೆ ಎಸ್ಕೇಪ್ ..! 

Related Posts

Top Story

Lakshmi Hebbalkar: ಎಲ್ಲರಿಗೂ ಒಳಿತು ಬಯಸುವ ವೀರಶೈವ ಲಿಂಗಾಯತ ಸಮಾಜ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 23, 2025
0

ಸಮಾಜದ ವಿದ್ಯಾರ್ಥಿಗಳು ಹೆಚ್ಚು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ತೇರ್ಗಡೆಯಾಗಬೇಕುಪ್ರತಿಭಾ ಪುರಸ್ಕಾರ, ಸಮಾಜದ ಹಿರಿಯರಿಗೆ ಗೌರವ ಹಾಗೂ ಜನ ಪ್ರತಿನಿಧಿಗಳಿಗೆ ಸನ್ಮಾನ ಸಮಾರಂಭದಲ್ಲಿ ಸಚಿವರ ಹೇಳಿಕೆ ನಮ್ಮ ವೀರಶೈವ ಲಿಂಗಾಯತ...

Read moreDetails

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿರುವ ಪ್ಯಾರಾ ನಾರ್ಮಲ್ ಹಾಗೂ ಹಾರಾರ್ ಜಾನಾರ್ ನ ಚಿತ್ರ “ಕಮರೊ2” ಆಗಸ್ಟ್ 1 ರಂದು ತೆರೆಗೆ .

July 23, 2025

ಜುಲೈ 25ರಂದು ‘ಮಹಾವತಾರ ನರಸಿಂಹ’ ಆನಿಮೇಷನ್‌ ಚಿತ್ರ ಬಿಡುಗಡೆ

July 23, 2025

CM Siddaramaiah: KPCL ಅಧ್ಯಕ್ಷನಾಗಿ ನಾನೂ ಕೂಡ KPCL ನೌಕರರಲ್ಲಿ ಒಬ್ಬನಾಗಿದ್ದೀನಿ: ಸಿ.ಎಂ

July 23, 2025
CM Siddaramaiah: ಯಾವ ಕಾಲಕ್ಕೂ ವಿದ್ಯುತ್ ಕೊರತೆಯಾಗದಂತೆ ಕ್ರಮ: ಸಿಎಂ ಸಿದ್ದರಾಮಯ್ಯ

CM Siddaramaiah: ಯಾವ ಕಾಲಕ್ಕೂ ವಿದ್ಯುತ್ ಕೊರತೆಯಾಗದಂತೆ ಕ್ರಮ: ಸಿಎಂ ಸಿದ್ದರಾಮಯ್ಯ

July 24, 2025
Next Post
ಬಿಕ್ಲು ಶಿವನ ಕೊ*ಲೆ ಕೇಸ್ – A1 ಆರೋಪಿ ಜಗ್ಗ ದುಬೈಗೆ ಎಸ್ಕೇಪ್ ..! 

ಬಿಕ್ಲು ಶಿವನ ಕೊ*ಲೆ ಕೇಸ್ - A1 ಆರೋಪಿ ಜಗ್ಗ ದುಬೈಗೆ ಎಸ್ಕೇಪ್ ..! 

Recent News

Top Story

Lakshmi Hebbalkar: ಎಲ್ಲರಿಗೂ ಒಳಿತು ಬಯಸುವ ವೀರಶೈವ ಲಿಂಗಾಯತ ಸಮಾಜ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 23, 2025
Top Story

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿರುವ ಪ್ಯಾರಾ ನಾರ್ಮಲ್ ಹಾಗೂ ಹಾರಾರ್ ಜಾನಾರ್ ನ ಚಿತ್ರ “ಕಮರೊ2” ಆಗಸ್ಟ್ 1 ರಂದು ತೆರೆಗೆ .

by ಪ್ರತಿಧ್ವನಿ
July 23, 2025
Top Story

ಜುಲೈ 25ರಂದು ‘ಮಹಾವತಾರ ನರಸಿಂಹ’ ಆನಿಮೇಷನ್‌ ಚಿತ್ರ ಬಿಡುಗಡೆ

by ಪ್ರತಿಧ್ವನಿ
July 23, 2025
Top Story

CM Siddaramaiah: KPCL ಅಧ್ಯಕ್ಷನಾಗಿ ನಾನೂ ಕೂಡ KPCL ನೌಕರರಲ್ಲಿ ಒಬ್ಬನಾಗಿದ್ದೀನಿ: ಸಿ.ಎಂ

by ಪ್ರತಿಧ್ವನಿ
July 23, 2025
CM Siddaramaiah: ಯಾವ ಕಾಲಕ್ಕೂ ವಿದ್ಯುತ್ ಕೊರತೆಯಾಗದಂತೆ ಕ್ರಮ: ಸಿಎಂ ಸಿದ್ದರಾಮಯ್ಯ
Top Story

CM Siddaramaiah: ಯಾವ ಕಾಲಕ್ಕೂ ವಿದ್ಯುತ್ ಕೊರತೆಯಾಗದಂತೆ ಕ್ರಮ: ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
July 24, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ಎಲ್ಲರಿಗೂ ಒಳಿತು ಬಯಸುವ ವೀರಶೈವ ಲಿಂಗಾಯತ ಸಮಾಜ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 23, 2025

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿರುವ ಪ್ಯಾರಾ ನಾರ್ಮಲ್ ಹಾಗೂ ಹಾರಾರ್ ಜಾನಾರ್ ನ ಚಿತ್ರ “ಕಮರೊ2” ಆಗಸ್ಟ್ 1 ರಂದು ತೆರೆಗೆ .

July 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada