• Home
  • About Us
  • ಕರ್ನಾಟಕ
Wednesday, July 23, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Prahlad Joshi: ವ್ಯಾಪಾರಸ್ಥರಿಗೆ ಜಿಎಸ್‌ಟಿ ನೋಟಿಸ್ ಕೇಂದ್ರದ್ದಲ್ಲ: ಪ್ರಹ್ಲಾದ್ ಜೋಶಿ

ಪ್ರತಿಧ್ವನಿ by ಪ್ರತಿಧ್ವನಿ
July 22, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿದೇಶ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Prahlad Joshi: ವ್ಯಾಪಾರಸ್ಥರಿಗೆ ಜಿಎಸ್‌ಟಿ ನೋಟಿಸ್ ಕೇಂದ್ರದ್ದಲ್ಲ: ಪ್ರಹ್ಲಾದ್ ಜೋಶಿ
Share on WhatsAppShare on FacebookShare on Telegram

– ಬೇರೆ ಯಾವ ರಾಜ್ಯದಲ್ಲಿ ಇಲ್ಲದ ನೋಟಿಸ್ ಇಲ್ಲೇಕೆ?; ಜನರ ಕಣ್ಣಿಗೆ ಮಣ್ಣೆರೆಚೋ ಕೆಲಸವೆಂದ ಪ್ರಹ್ಲಾದ್ ಜೋಶಿ. ರಾಜ್ಯದಲ್ಲಿ ಸಣ್ಣಪುಟ್ಟ ವ್ಯಾಪಾರಿಗಳಿಗೆ ತೆರಿಗೆ (GST) ನೋಟಿಸ್ ನೀಡುತ್ತಿರುವುದು ರಾಜ್ಯ ಸರ್ಕಾರವೇ ಹೊರತು ಕೇಂದ್ರ ಸರ್ಕಾರವಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಸ್ಪಷ್ಟಪಡಿಸಿದ್ದಾರೆ.

ADVERTISEMENT

‘ತೆರಿಗೆ ನೋಟಿಸ್ ನೀಡುವಲ್ಲಿ ರಾಜ್ಯ ಸಾರ್ಕಾರದ ಪಾತ್ರವೇನಿಲ್ಲ’ ಎಂದಿರುವ ಡಿಸಿಎಂ ಡಿಕೆ ಶಿವಕುಮಾರ್ (DCM DK SHIVAKUMAR) ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯ ಸರ್ಕಾರ ಮಾಡುವುದೆಲ್ಲ ಮಾಡಿಬಿಟ್ಟು ಈಗ ತನಗೇನೂ ಸಂಬಂಧವಿಲ್ಲ ಎನ್ನುತ್ತಿರುವುದು ನಿಜಕ್ಕೂ ಹಾಸ್ಯಾಸ್ಪದ ಎಂದು ಹೇಳಿದರು. ಕರ್ನಾಟಕದಲ್ಲಿ ಸಣ್ಣಪುಟ್ಟ ವ್ಯಾಪಾರಿಗಳಿಗೆ ತೆರಿಗೆ ಬಾಕಿ ನೋಟಿಸ್ ಕೊಟ್ಟಿರುವುದು ರಾಜ್ಯ ಸರ್ಕಾರದ ತೆರಿಗೆ ಇಲಾಖೆ ಅಧಿಕಾರಿಗಳು. ಹಾಗಿದ್ದರೂ ಇದೀಗ ರಾಜ್ಯ ಸರ್ಕಾರಕ್ಕೂ, ಜಿಎಸ್‌ಟಿ ನೋಟಿಸ್‌ಗೂ ಸಂಬಂಧವಿಲ್ಲ ಎನ್ನುತ್ತ ಜನರ ಕಣ್ಣಿಗೆ ಮಣ್ಣೆರೆಚೋ ಕೆಲಸ ಮಾಡುತ್ತಿದ್ದಾರೆ.

ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದ್ದರೆ ಬಹುತೇಕ ಎಲ್ಲ ರಾಜ್ಯಗಳಿಗೂ ಅನ್ವಯಿಸುತ್ತಿತ್ತು. ಆದರೆ ಬೇರೆ ಯಾವುದೇ ರಾಜ್ಯಗಳಲ್ಲೂ ತೆರಿಗೆ ಇಲಾಖೆ ಅಧಿಕಾರಿಗಳಿಂದ ಸಣ್ಣಪುಟ್ಟ ವ್ಯಾಪಾರಸ್ಥರಿಗೆ ಜಿಎಸ್‌ಟಿ ನೋಟಿಸ್ (GST NOTICE) ನೀಡಲಾಗಿಲ್ಲ.ಕರ್ನಾಟಕದಲ್ಲಿ ಮಾತ್ರ ಇದಾಗಿದೆ ಎಂದರು.

ರಾಜ್ಯ ಕಾಂಗ್ರೆಸ್ ಸರ್ಕಾರ ಬೆಲೆ ಏರಿಕೆ ಮಾಡಿ ಜನಸಾಮಾನ್ಯರ ಗೋಳು ಹೊಯ್ದುಕೊಳ್ಳುವ ಜೊತೆಗೆ ಇದೀಗ ಹಣ್ಣು, ಹಾಲು, ತರಕಾರಿ ಸೇರಿದಂತೆ ದಿನನಿತ್ಯದ ಅಗತ್ಯ ಸರಕು ಸೇವಾ ವ್ಯಾಪಾರಿಗಳಿಗೆ ನೋಟಿಸ್ ನೀಡಿ ಕಿರುಕುಳ ಕೊಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಇದರಲ್ಲಿ ಕೇಂದ್ರದ ಪಾತ್ರವಿಲ್ಲ:ಜಿಎಸ್‌ಟಿಯಲ್ಲಿ ಕೇಂದ್ರ ಸರ್ಕಾರದ ಅಡಿಯಲ್ಲಿ ‘ಸಿಜಿಎಸ್‌ಟಿ’ ಮತ್ತು ರಾಜ್ಯ ಸರ್ಕಾರಗಳ ಅಡಿಯಲ್ಲಿ ‘ಎಸ್‌ಜಿಎಸ್‌ಟಿ’ ಎಂದು ಎರಡು ಭಾಗವಿದೆ. ಆದರಂತೆ ಕರ್ನಾಟಕದಲ್ಲಿ ಸಣ್ಣಪುಟ್ಟ ವ್ಯಾಪಾರಿಗಳಿಗೆ ನೋಟಿಸ್ ನೀಡಿರುವುದು ರಾಜ್ಯ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆ. ಇದರಲ್ಲಿ ಕೇಂದ್ರ ಸರ್ಕಾರದ ಯಾವುದೇ ಪಾತ್ರವಿಲ್ಲ ಎಂದು ಸ್ಪಷ್ಟನೆ ನೀಡಿದರು.

ಜಿಎಸ್‌ಟಿ ಕೌನ್ಸಿಲ್‌ನಲ್ಲಿ ಯಾವುದೇ ತೀರ್ಮಾನ ತಗೆದುಕೊಳ್ಳಲು ಮಹತ್ವದ ಪಾತ್ರ ವಹಿಸಿರುವುದು ರಾಜ್ಯ ಸರ್ಕಾರಗಳು. ಕೇಂದ್ರ ಸರ್ಕಾರಕ್ಕೆ ಕೇವಲ 3ನೇ ಒಂದು ಭಾಗ ಮಾತ್ರ ಅಧಿಕಾರವಿದೆ. ಉಳಿದ ಅಧಿಕಾರ ರಾಜ್ಯ ಸರ್ಕಾರದ ಕೈಯಲ್ಲಿದೆ. 3ನೇ ಎರಡು ಭಾಗದಷ್ಟು ಅಧಿಕಾರ ಹೊಂದಿರುವ ರಾಜ್ಯ ಸರ್ಕಾರಗಳ ನಿರ್ಣಯವೇ ಇದರಲ್ಲಿ ಅಂತಿಮವಾಗಿರಲಿದೆ ಎಂಬ ಮಾಹಿತಿ ಹಂಚಿಕೊಂಡರು.

ರಾಜ್ಯದಲ್ಲಿ ಸಣ್ಣಪುಟ್ಟ ವ್ಯಾಪಾರಸ್ಥರಿಗೆ ಜಿಎಸ್‌ಟಿ ನೋಟಿಸ್ ನೀಡುವ ಮೂಲಕ ಡಿಜಿಟಲ್, ಯುಪಿಐ ವಹಿವಾಟು ಹದಗೆಡಿಸುವ ದುಸ್ಸಾಹಸಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಕೈ ಹಾಕಿದೆ ಎಂದು ಗಂಭೀರ ಆರೋಪ ಮಾಡಿದರುಯುಪಿಐ ವಹಿವಾಟು ವಿಶ್ವಕ್ಕೇ ಮಾದರಿಯಾಗಿದೆ. ಆದರೆ, ರಾಜ್ಯದಲ್ಲಿ ಈ ಪಾರದರ್ಶಕ ವ್ಯವಸ್ಥೆಗೆ ಸಂಚಕಾರ ತರಲೆತ್ನಿಸುತ್ತಿದ್ದು, ರಾಜ್ಯ ಸರ್ಕಾರದ ಈ ಕ್ಷುಲ್ಲಕ ರಾಜಕಾರಣ ನಿಜಕ್ಕೂ ದುರಂತವೇ ಸರಿ ಎಂದು ತೀವ್ರವಾಗಿ ಖಂಡಿಸಿದರು.

Tags: about prahlad joshiangry on prahlad joshiBangaloreDK ShivakumarGST NoticeKarnatakamp prahlad joshion prahlad joshipm modi prahlad joshiPrahlad Joshiprahlad joshi budgetprahlad joshi congressprahlad joshi daughtersprahlad joshi familyprahlad joshi firprahlad joshi latest newsprahlad joshi mpprahlad joshi newsprahlad joshi on congressprahlad joshi on dcprahlad joshi on hdkprahlad joshi speechprahlad joshi tirumalaprahlad joshi today newsprahlad joshi todays newsprahlad joshi votingStreet vendors
Previous Post

ಇ.ಡಿ. ರಾಜಕೀಯ ಅಸ್ತ್ರವಾಗಿ ಬಳಕೆ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಮಹತ್ವದ್ದು: ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್

Next Post

ಚುನಾವಣಾ ಆಯೋಗಕ್ಕೆ ಅನಿರ್ಬಂಧಿತ ಅಧಿಕಾರ ಇರುವುದಿಲ್ಲ

Related Posts

4 ಐಪಿಎಸ್ ಅಧಿಕಾರಿಗಳು..20 ಪೊಲೀಸ್ ಸಿಬ್ಬಂದಿ – ಇಂದಿನಿಂದ ಶುರು ಧರ್ಮಸ್ಥಳ ಕೇಸ್ ತನಿಖೆ !
Top Story

4 ಐಪಿಎಸ್ ಅಧಿಕಾರಿಗಳು..20 ಪೊಲೀಸ್ ಸಿಬ್ಬಂದಿ – ಇಂದಿನಿಂದ ಶುರು ಧರ್ಮಸ್ಥಳ ಕೇಸ್ ತನಿಖೆ !

by Chetan
July 23, 2025
0

ಧರ್ಮಸ್ಥಳದಲ್ಲಿ ರಹಸ್ಯವಾಗಿ ಶವಗಳನ್ನು (Dharmasthala mass burials) ಹೂತಿಟ್ಟ ಆರೋಪ ಸದ್ದು ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ಈಗಾಗಲೇ ಎಸ್‌ಐಟಿ (SIT) ರಚನೆ ಮಾಡಿದ್ದು,ಇಂದಿನಿಂದ (ಜು.23)...

Read moreDetails
ರೆಡ್ಡಿ – ರಾಮುಲು ಒಂದಾದ ಕ್ರೆಡಿಟ್ ಯಾರಿಗೆ..? ವಿ.ಸೋಮಣ್ಣ V/S ಬಿ.ವೈ ವಿಜಯೇಂದ್ರ ..?! 

ರೆಡ್ಡಿ – ರಾಮುಲು ಒಂದಾದ ಕ್ರೆಡಿಟ್ ಯಾರಿಗೆ..? ವಿ.ಸೋಮಣ್ಣ V/S ಬಿ.ವೈ ವಿಜಯೇಂದ್ರ ..?! 

July 23, 2025
ಸಿಎಂ ಚೇಂಜ್ ಕೂಗಿನಿಂದ ತೀವ್ರ ಬೇಸರಗೊಂಡ ಸಿದ್ದು..? ರಾಹುಲ್ ಗಾಂಧಿ ಮುಂದೆ ಬೇಸರ ಹೊರಹಾಕಲಿದ್ಯ ಟಗರು..?! 

ಮತ್ತೆ ದೆಹಲಿಯತ್ತ ಮುಖ ಮಾಡಿದ ಸಿಎಂ ಸಿದ್ದು – ಸಿಎಂ ಆಪ್ತ ಸಚಿವರಿಂದ ಹೊಸ ಗೇಮ್ ಪ್ಲಾನ್..! 

July 23, 2025
ಬಿಕ್ಲು ಶಿವನ ಕೊ*ಲೆ ಕೇಸ್ – A1 ಆರೋಪಿ ಜಗ್ಗ ದುಬೈಗೆ ಎಸ್ಕೇಪ್ ..! 

ಬಿಕ್ಲು ಶಿವನ ಕೊ*ಲೆ ಕೇಸ್ – A1 ಆರೋಪಿ ಜಗ್ಗ ದುಬೈಗೆ ಎಸ್ಕೇಪ್ ..! 

July 23, 2025
ಚುನಾವಣಾ ಆಯೋಗಕ್ಕೆ ಅನಿರ್ಬಂಧಿತ ಅಧಿಕಾರ ಇರುವುದಿಲ್ಲ

ಚುನಾವಣಾ ಆಯೋಗಕ್ಕೆ ಅನಿರ್ಬಂಧಿತ ಅಧಿಕಾರ ಇರುವುದಿಲ್ಲ

July 23, 2025
Next Post
ಚುನಾವಣಾ ಆಯೋಗಕ್ಕೆ ಅನಿರ್ಬಂಧಿತ ಅಧಿಕಾರ ಇರುವುದಿಲ್ಲ

ಚುನಾವಣಾ ಆಯೋಗಕ್ಕೆ ಅನಿರ್ಬಂಧಿತ ಅಧಿಕಾರ ಇರುವುದಿಲ್ಲ

Recent News

4 ಐಪಿಎಸ್ ಅಧಿಕಾರಿಗಳು..20 ಪೊಲೀಸ್ ಸಿಬ್ಬಂದಿ – ಇಂದಿನಿಂದ ಶುರು ಧರ್ಮಸ್ಥಳ ಕೇಸ್ ತನಿಖೆ !
Top Story

4 ಐಪಿಎಸ್ ಅಧಿಕಾರಿಗಳು..20 ಪೊಲೀಸ್ ಸಿಬ್ಬಂದಿ – ಇಂದಿನಿಂದ ಶುರು ಧರ್ಮಸ್ಥಳ ಕೇಸ್ ತನಿಖೆ !

by Chetan
July 23, 2025
ರೆಡ್ಡಿ – ರಾಮುಲು ಒಂದಾದ ಕ್ರೆಡಿಟ್ ಯಾರಿಗೆ..? ವಿ.ಸೋಮಣ್ಣ V/S ಬಿ.ವೈ ವಿಜಯೇಂದ್ರ ..?! 
Top Story

ರೆಡ್ಡಿ – ರಾಮುಲು ಒಂದಾದ ಕ್ರೆಡಿಟ್ ಯಾರಿಗೆ..? ವಿ.ಸೋಮಣ್ಣ V/S ಬಿ.ವೈ ವಿಜಯೇಂದ್ರ ..?! 

by Chetan
July 23, 2025
ಸಿಎಂ ಚೇಂಜ್ ಕೂಗಿನಿಂದ ತೀವ್ರ ಬೇಸರಗೊಂಡ ಸಿದ್ದು..? ರಾಹುಲ್ ಗಾಂಧಿ ಮುಂದೆ ಬೇಸರ ಹೊರಹಾಕಲಿದ್ಯ ಟಗರು..?! 
Top Story

ಮತ್ತೆ ದೆಹಲಿಯತ್ತ ಮುಖ ಮಾಡಿದ ಸಿಎಂ ಸಿದ್ದು – ಸಿಎಂ ಆಪ್ತ ಸಚಿವರಿಂದ ಹೊಸ ಗೇಮ್ ಪ್ಲಾನ್..! 

by Chetan
July 23, 2025
ಬಿಕ್ಲು ಶಿವನ ಕೊ*ಲೆ ಕೇಸ್ – A1 ಆರೋಪಿ ಜಗ್ಗ ದುಬೈಗೆ ಎಸ್ಕೇಪ್ ..! 
Top Story

ಬಿಕ್ಲು ಶಿವನ ಕೊ*ಲೆ ಕೇಸ್ – A1 ಆರೋಪಿ ಜಗ್ಗ ದುಬೈಗೆ ಎಸ್ಕೇಪ್ ..! 

by Chetan
July 23, 2025
ಚುನಾವಣಾ ಆಯೋಗಕ್ಕೆ ಅನಿರ್ಬಂಧಿತ ಅಧಿಕಾರ ಇರುವುದಿಲ್ಲ
Top Story

ಚುನಾವಣಾ ಆಯೋಗಕ್ಕೆ ಅನಿರ್ಬಂಧಿತ ಅಧಿಕಾರ ಇರುವುದಿಲ್ಲ

by ನಾ ದಿವಾಕರ
July 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

4 ಐಪಿಎಸ್ ಅಧಿಕಾರಿಗಳು..20 ಪೊಲೀಸ್ ಸಿಬ್ಬಂದಿ – ಇಂದಿನಿಂದ ಶುರು ಧರ್ಮಸ್ಥಳ ಕೇಸ್ ತನಿಖೆ !

4 ಐಪಿಎಸ್ ಅಧಿಕಾರಿಗಳು..20 ಪೊಲೀಸ್ ಸಿಬ್ಬಂದಿ – ಇಂದಿನಿಂದ ಶುರು ಧರ್ಮಸ್ಥಳ ಕೇಸ್ ತನಿಖೆ !

July 23, 2025
ರೆಡ್ಡಿ – ರಾಮುಲು ಒಂದಾದ ಕ್ರೆಡಿಟ್ ಯಾರಿಗೆ..? ವಿ.ಸೋಮಣ್ಣ V/S ಬಿ.ವೈ ವಿಜಯೇಂದ್ರ ..?! 

ರೆಡ್ಡಿ – ರಾಮುಲು ಒಂದಾದ ಕ್ರೆಡಿಟ್ ಯಾರಿಗೆ..? ವಿ.ಸೋಮಣ್ಣ V/S ಬಿ.ವೈ ವಿಜಯೇಂದ್ರ ..?! 

July 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!