ಸಿಎಂ ಸಿದ್ದರಾಮಯ್ಯ (Siddaramaiah) ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ (Dk Shivakumar) ಒಟ್ಟಿಗೆ ದೆಹಲಿಯತ್ತ ಪ್ರಯಾಣ ಬೆಳಸಿದ್ದಾರೆ.ಹೀಗೆ ದೆಹಲಿಗೆ (Delhi) ತೆರಳುತ್ತಿದ್ದಂತೆ ನೇರವಾಗಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಹೈಕಮಾಂಡ್ ನಾಯಕರನ್ನ ಭೇಟಿ ಮಾಡಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾರನ್ನ (Randeep Singh surjewala) ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದ್ದಾರೆ.

ಈ ವೇಳೆ ನಿಗಮ ಮಂಡಳಿ ಅಧ್ಯಕ್ಷರ ಆಯ್ಕೆ ಪಟ್ಟಿಯನ್ನ ಅಂತಿಮಗೊಳಿಸಿದ್ದಾರೆ ಎನ್ನಲಾಗಿದೆ. ಒಟ್ಟು 22 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಮಾಡಿದ್ದಾರೆ.ಇಂದು ಮತ್ತೊಂದು ಸುತ್ತಿನ ಹೈಕಮಾಂಡ್ ನಾಯಕರ ಸಭೆಯಲ್ಲಿ ಈ ಪಟ್ಟಿ ಅಂತಿಮಗೊಳ್ಳುವ ಸಾಧ್ಯತೆ ಇದೆ.ಹೀಗೆ ಅಂತಿಮಗೊಂಡ ಪಟ್ಟಿಯನ್ನು ಸಿಎಂ ಸಿದ್ದರಾಮಯ್ಯ ದೆಹಲಿಯಿಂದ ಬೆಂಗಳೂರಿಗೆ ಬಂದ ನಂತರ ಬಿಡುಗಡೆ ಮಾಡಲಿದ್ದಾರೆ.ಈ ಮಧ್ಯೆ ಇಂದು ನಡೆಯಲಿರುವ ಎಐಸಿಸಿ ಒಬಿಸಿ ಸಮ್ಮೇಳನದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ.

ಸಿಎಂ ಹಾಗೂ ಡಿಸಿಎಂ ದೆಹಲಿ ಭೇಟಿ ಇಷ್ಟಕ್ಕೆ ಮಾತ್ರ ಸೀಮಿತವಾಗಿದೆಯೋ ಅಥವಾ ನಾಕಾಯತ್ವ ಬದಲಾವಣೆ, ಸಿಎಂ ಬದಲಾವಣೆಯ ಕುರಿತು ಗೊಂದಲ ನಿವಾರಣೆಯಾಗದ ಹಿನ್ನಲೆ ಮತ್ತೊಮ್ಮೆ ಉಭಯ ನಾಯಕರು ಹೈಕಮಾಂಡ್ ಕದ ತಟ್ಟಿದ್ದಾರೋ ಎಂಬ ಕುತೂಹಲವೂ ಮೂಡಿದೆ.