• Home
  • About Us
  • ಕರ್ನಾಟಕ
Wednesday, January 14, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮಹದಾಯಿ, ಮೇಕೆದಾಟು, ಸಂಸದರು ಹಾಗೂ ಕೇಂದ್ರ ಸಚಿವರು ಯೋಜನೆಗಳಿಗೆ ಅನುಮತಿ ಕೊಡಿಸಬೇಕು : ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್

ಪ್ರತಿಧ್ವನಿ by ಪ್ರತಿಧ್ವನಿ
July 26, 2025
in Top Story, ಕರ್ನಾಟಕ, ರಾಜಕೀಯ
0
ಮಹದಾಯಿ, ಮೇಕೆದಾಟು, ಸಂಸದರು ಹಾಗೂ ಕೇಂದ್ರ ಸಚಿವರು ಯೋಜನೆಗಳಿಗೆ ಅನುಮತಿ ಕೊಡಿಸಬೇಕು : ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್
Share on WhatsAppShare on FacebookShare on Telegram

ಮಹದಾಯಿ, ಮೇಕೆದಾಟು, ಯೋಜನೆಗಳಿಗೆ ಅನುಮತಿ ಕೊಡಿಸಬೇಕು

ADVERTISEMENT

ತಮ್ಮ ಕ್ಷೇತ್ರದ ಜನರ ಕುಡಿಯುವ ನೀರಿನ ಯೋಜನೆ ಜಾರಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಮನಸ್ಸು ಮಾಡಬೇಕು

Siddaramaiah : ಫಲಾನುಭವಿಗಳ ಸಮಾವೇಶದಲ್ಲಿ ಸಿದ್ದು-ಡಿಕೆ -ಜಮೀರ್-ರಾಜಣ್ಣಗೆ ಅದ್ಧೂರಿ ಸನ್ಮಾನ| #pratidhvani

ಕೇಂದ್ರದಲ್ಲಿ ಬಿಜೆಪಿ ಮೂರು ಬಾರಿ ಅಧಿಕಾರಕ್ಕೆ ಬರುವಲ್ಲಿ ಕರ್ನಾಟಕದ ಪಾತ್ರ ಮಹತ್ತರವಾಗಿದೆ. ಹೀಗಾಗಿ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಸಂಸದರು ಹಾಗೂ ಕೇಂದ್ರ ಸಚಿವರು ಹೋರಾಟ ಮಾಡಬೇಕು” ಎಂದು ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್ ಆಗ್ರಹಿಸಿದರು.

ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಶನಿವಾರ ಪ್ರತಿಕ್ರಿಯಿಸಿದರು.

ಮಹದಾಯಿ ಯೋಜನೆಗೆ ಗೋವಾ ತಗಾದೆ ಕುರಿತಾಗಿ ಕೇಳಿದಾಗ, “ಗೋವಾ ಹಾಗೂ ಕರ್ನಾಟಕ ಬಹಳ ಅನ್ಯೋನ್ಯವಾಗಿದ್ದ ರಾಜ್ಯಗಳು. ಮಹದಾಯಿ ಕುಡಿಯುವ ನೀರಿನ ಯೋಜನೆ. ಆದರೆ ಬಹಳ ವರ್ಷಗಳಿಂದ ಇಲ್ಲಸಲ್ಲದ ಕ್ಯಾತೆ ತೆಗೆದುಕೊಂಡು ಉತ್ತರ ಕರ್ನಾಟಕ ಭಾಗದ ಕುಡಿಯುವ ನೀರಿನ ಯೋಜನೆಗೆ ತೊಂದರೆ ನೀಡಲಾಗುತ್ತಿದೆ. ಸುಪ್ರೀಂ ಕೋರ್ಟ್ ತೀರ್ಪಿನ ಹೊರತಾಗಿಯೂ ಗೋವಾ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರವನ್ನು ಬಳಸಿಕೊಂಡು ಕರ್ನಾಟಕಕ್ಕೆಅನ್ಯಾಯ ಮಾಡುತ್ತಿರುವುದು ಎದ್ದು ಕಾಣುತ್ತಿದೆ. ಹೀಗಾಗಿ ಕೇಂದ್ರ ಸರ್ಕಾರ ಹಾಗೂ ಕೇಂದ್ರ ಜಲಶಕ್ತಿ ಸಚಿವರು ಆದಷ್ಟು ಬೇಗ ಈ ಕುಡಿಯುವ ನೀರಿನ ವಿಚಾರವಾಗಿ ರಾಜ್ಯದಲ್ಲಿ ಆಗುತ್ತಿರುವ ಅನ್ಯಾಯ ಸರಿಪಡಿಸಲು ಮಹದಾಯಿ, ಮೇಕೆದಾಟು ಹಾಗೂ ಕೃಷ್ಣಾ ಮೇಲ್ದಂಡೆ ಯೋಜನೆಗಳಿಗೆ ಅನುಮೋದನೆ ನೀಡಬೇಕು” ಎಂದು ತಿಳಿಸಿದರು.

“ರಾಜ್ಯದ ಜನ ಬಿಜೆಪಿಗೆ ಸುಮಾರು 20ಕ್ಕೂ ಹೆಚ್ಚು ಸ್ಥಾನಗಳನ್ನು ನೀಡಿದ್ದಾರೆ. ಆದರೂ ಕೂಡ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಮೂರು ಬಾರಿ ಅಧಿಕಾರಕ್ಕೆ ಬರಲು ಕರ್ನಾಟಕ ಜನರ ಕೊಡುಗೆ ಮಹತ್ತರವಾದದ್ದು, ಆದರೂ ನಮ್ಮ ಸಂಸದರು, ಸಚಿವರು ಈ ವಿಚಾರವಾಗಿ ಚಕಾರ ಎತ್ತುತ್ತಿಲ್ಲ. ಈ ವಿಚಾರದಲ್ಲಿ ಕನ್ನಡಿಗರಿಗೆ ನ್ಯಾಯ ಕೊಡಿಸಲು ಹೋರಾಟ ಮಾಡುತ್ತಿಲ್ಲ. ಈ ಯೋಜನೆಗಳಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದರೆ, ರಾಜ್ಯದ ರೈತರು ಹಾಗೂ ರಾಜ್ಯಕ್ಕೆ ಅನುಕೂಲವಾಗುತ್ತದೆ. ಹೀಗಾಗಿ ಈ ವಿಚಾರಗಳನ್ನು ಬಗೆಹರಿಸುವ ಕೆಲಸವನ್ನು ಮಾಡಬೇಕು ಎಂದು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಬೇಕು ಎಂದು ಮನವಿ ಮಾಡುತ್ತೇನೆ” ಎಂದು ತಿಳಿಸಿದರು.

ತಮ್ಮದೇ ಜನರ ಕುಡಿಯುವ ನೀರಿನ ಯೋಜನೆಗೆ ಕೇಂದ್ರ ಸಚಿವ ಪ್ರಲ್ಹಾದ ಜೋಷಿ ಮನಸ್ಸು ಮಾಡಬೇಕು

ಮಹದಾಯಿ ವಿಚಾರವಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಪ್ರಹ್ಲಾದ ಜೋಷಿ ಅವರು ಕಳೆದ 10 ವರ್ಷಗಳಿಂದ ಕೇಂದ್ರದ ಮಂತ್ರಿಯಾಗಿದ್ದಾರೆ. ಈ ಯೋಜನೆಯಿಂದ ಅವರ ಕ್ಷೇತ್ರದ ಜನರಿಗೆ ಕುಡಿಯುವ ನೀರನ್ನು ಪೂರೈಸಬೇಕಾಗಿದೆ. ಅವರೇ ತಮ್ಮ ಕ್ಷೇತ್ರದ ಜನರಿಗೆ ಏನು ಮಾಡಲಿಲ್ಲವಾದರೆ, ಅವರ ಮಾತನ್ನು ಏನೆಂದು ಕೇಳುತ್ತೀರಿ. ಹುಬ್ಬಳ್ಳಿ- ಧಾರವಾಡ ಹಾಗೂ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಕುಡಿಯುವ ನೀರು ದೊರಕಿಸುವುದು, ಕನ್ನಡಿಗರಿಗೆ ನ್ಯಾಯ ದೊರಕಿಸಬೇಕು ಎಂದು ಇಚ್ಛಾಶಕ್ತಿ ಅವರಿಗೆ ಇದ್ದರೆ ಪ್ರಧಾನಮಂತ್ರಿಗಳಿಗೆ ಬಹಳ ಹತ್ತಿರವಿರುವ ಅವರು ಜಲಶಕ್ತಿ ಹಾಗೂ ಅರಣ್ಯ ಸಚಿವರಿಗೆ ಹೇಳಿ ಅನುಮತಿ ಕೊಡಿಸಬಹುದು. ನಾನು ಪ್ರಹ್ಲಾದ ಜೋಷಿ ಅವರನ್ನು ಬಹಳ ಹತ್ತಿರದಿಂದ ನೋಡಿದ್ದೇನೆ. ಅವರು ಮನಸ್ಸು ಮಾಡಿದರೆ ಈ ವಿಚಾರ ದೊಡ್ಡದಲ್ಲ. ಅವರಿಗೆ ಕರ್ನಾಟಕದ ಹಿತ ಬೇಕಿಲ್ಲ. ಆದರೂ ಕರ್ನಾಟಕದ ಜನ ಅವರನ್ನೇ ಬಯಸಿದ್ದಾರೆ, ಏನು ಮಾಡಲು ಆಗುವುದಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮತಗಳ್ಳತನದ ಬಗ್ಗೆ ನಮ್ಮ ನಾಯಕರ ಹೇಳಿಕೆಗೆ ನನ್ನ ಸಹಮತವಿದೆ:

ಕರ್ನಾಟಕದ ಲೋಕಸಭಾ ಕ್ಷೇತ್ರವೊಂದರಲ್ಲಿ ಮತಗಳ್ಳತನ ಅಕ್ರಮ ನಡೆದಿದೆ ಎಂದು ರಾಹುಲ್ ಗಾಂಧಿ ಅವರು ಹೇಳಿದ್ದು, ನಿಮ್ಮ ಕ್ಷೇತ್ರದಲ್ಲೂ ಈ ರೀತಿ ಅಕ್ರಮ ನಡೆದಿತ್ತೆ ಎಂದು ಕೇಳಿದಾಗ, “ಚುನಾವಣಾ ಮತಪಟ್ಟಿಗೆ ಸಂಬಂಧಿಸಿದಂತೆ ಅನೇಕ ಗೊಂದಲಗಳಿರುವುದನ್ನು ನಾವು ನೋಡಿದ್ದೇವೆ. ನಗರ ಪ್ರದೇಶಗಳಲ್ಲಿ ಅನೇಕ ವ್ಯತ್ಯಾಸಗಳು, ಗೊಂದಲಗಳನ್ನು ಗಮನಿಸಿದ್ದೇವೆ. ಈಗಾಗಲೇ ಈ ವಿಚಾರವಾಗಿ ರಾಹುಲ್ ಗಾಂಧಿ, ಸಿಎಂ ಹಾಗೂ ಡಿಸಿಎಂ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅವರ ಅಭಿಪ್ರಾಯಕ್ಕೆ ನಾನು ಸಮ್ಮತಿಸುತ್ತೇನೆ. ಅವರು ಈಗಾಗಲೇ ಈ ವಿಚಾರವಾಗಿ ಹೇಳಿಕೆ ನೀಡಿರುವುದರಿಂದ ನಾನು ಹೆಚ್ಚಾಗಿ ಹೇಳುವುದೇನು ಇಲ್ಲ” ಎಂದು ತಿಳಿಸಿದರು.

Tags: congress dk sureshCongress PartyD K Sureshdk sureshdk suresh angrydk suresh arrestdk suresh bjpdk suresh congresdk suresh congressdk suresh dksdk suresh ed inquirydk suresh fightdk suresh indiadk suresh latest newsdk suresh livedk suresh newsdk suresh news todaydk suresh on mahadayidk suresh reactsdk suresh reacts dksdk suresh shivakumardk suresh speaksdk suresh speechdk suresh tennisdk suresh today newsdk suresh videosdk suresh vs modimp dk sureshಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ನಾಲ್ವಡಿ ಕೃಷ್ಣರಾಜ ಒಡೆಯರ್ ಎಲ್ಲಿ..ಸಿದ್ದರಾಮಯ್ಯ ಎಲ್ಲಿ..?! – ಇಬ್ಬರಿಗೂ ಹೋಲಿಕೆ ಮಾಡೋದು ದೊಡ್ಡ ಅಪಹಾಸ್ಯ : ಆರ್.ಅಶೋಕ್

Next Post

ಮೈಸೂರಿನ ಅಭಿವೃದ್ಧಿಗೆ ಬಿಜೆಪಿಗಿಂತ ಹೆಚ್ಚು ಕೆಲಸ ಮಾಡಿದ್ದೇವೆ:ಮುಖ್ಯಮಂತ್ರಿ ಸಿದ್ದರಾಮಯ್ಯ

Related Posts

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
0

ಬೆಂಗಳೂರು: ನಾನು ಎಂಎಲ್ಎ ಆದ ಮೇಲೆ ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ಯಾವ ಜಾತಿ ಗಲಭೆ, ಜಾತಿ ರಾಜಕಾರಣ, ಪೊಲೀಸರ ಮೇಲೆ ಒತ್ತಡ, ಒತ್ತಾಯ ಮಾಡಿಲ್ಲ.ಕುವೆಂಪುರವರು ಹೇಳಿದಂತೆ ನಮ್ಮ...

Read moreDetails

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

January 13, 2026
ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

January 13, 2026
Next Post
ಮೈಸೂರಿನ ಅಭಿವೃದ್ಧಿಗೆ ಬಿಜೆಪಿಗಿಂತ ಹೆಚ್ಚು ಕೆಲಸ ಮಾಡಿದ್ದೇವೆ:ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರಿನ ಅಭಿವೃದ್ಧಿಗೆ ಬಿಜೆಪಿಗಿಂತ ಹೆಚ್ಚು ಕೆಲಸ ಮಾಡಿದ್ದೇವೆ:ಮುಖ್ಯಮಂತ್ರಿ ಸಿದ್ದರಾಮಯ್ಯ

Recent News

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ
Top Story

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Top Story

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada