• Home
  • About Us
  • ಕರ್ನಾಟಕ
Wednesday, January 14, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

DCM DK Shivakumar: ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ.!!

ಪ್ರತಿಧ್ವನಿ by ಪ್ರತಿಧ್ವನಿ
July 30, 2025
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ಶೋಧ
0
Share on WhatsAppShare on FacebookShare on Telegram

ನಮ್ಮ ಮತ, ನಮ್ಮ ಹಕ್ಕು ರಕ್ಷಣೆ ಮಾಡಿಕೊಳ್ಳಲು ಸಿದ್ಧರಾಗಬೇಕು, ಪಕ್ಷದ ಕಾರ್ಯಕರ್ತರು, ಮುಖಂಡರಿಗೆ ಕರೆ

ADVERTISEMENT

“ನಮ್ಮ ರಾಜ್ಯದ ಚುನಾವಣೆಯಲ್ಲಿ ಆಗಿರುವ ಅಕ್ರಮ, ಚುನಾವಣಾ ಆಯೋಗದಿಂದ ಆಗಿರುವ ಅನ್ಯಾಯವನ್ನು ಜನರಿಗೆ ಮನದಟ್ಟು ಮಾಡಬೇಕು. ನಮ್ಮ ಮತ, ನಮ್ಮ ಹಕ್ಕು ರಕ್ಷಣೆ ಮಾಡಿಕೊಳ್ಳಲು ಸಿದ್ಧರಾಗಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ ನೀಡಿದರು.

ಆಗಸ್ಟ್ 5ರಂದು ಬೆಂಗಳೂರಿನಲ್ಲಿ ನಡೆಯಲಿರುವ ಕಾರ್ಯಕ್ರಮದ ಕುರಿತು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ. ಶಿವಕುಮಾರ್ ಅವರು ಭಾರತ್ ಜೋಡೋ ಭವನದಲ್ಲಿ ಬೆಂಗಳೂರು ವಲಯದ ನಾಯಕರು ಹಾಗೂ ಮುಖಂಡರ ಜೊತೆ ಬುಧವಾರ ಪೂರ್ವಭಾವಿ ಸಭೆ ನಡೆಸಿದರು.

ಈ ವೇಳೆ ಮಾತನಾಡಿದ ಅವರು “ಸಧ್ಯ ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ನಡೆಸುವಾಗ ಮತದಾನ, ಮತಗಟ್ಟೆ, ಮತದಾರರ ಪಟ್ಟಿ ಎಲ್ಲವೂ ಚರ್ಚೆಯಾಗುತ್ತಿದೆ. ನಮ್ಮ ರಾಜ್ಯದಲ್ಲೂ ವಿಧಾನಸಭೆ ಚುನಾವಣೆ ವೇಳೆ ಮತದಾನದ ಅಕ್ರಮದ ಬಗ್ಗೆ ಸಂಶೋಧನೆ ಮಾಡಿದ್ದೆವು. ಬಿಜೆಪಿಯವರು ಚಿಲುಮೆ ಹಾಗೂ ಇತರೆ ಸಂಸ್ಥೆಗಳ ದುರ್ಬಳಕೆ ಮೂಲಕ ಅಕ್ರಮ ಮಾಡಲು ಮುಂದಾಗಿದ್ದರು. ಅದನ್ನು ನಾವು ಸಂಪೂರ್ಣವಾಗಿ ತಡೆಯಲು ಆಗಲಿಲ್ಲ. ಬಿಜೆಪಿಯವರು ತಮ್ಮ ಕಾರ್ಯಕರ್ತರಿಗೆ ಚುನಾವಣಾ ಆಯೋಗದ ಗುರುತಿನ ಚೀಟಿ ನೀಡಿ ಬೆಂಗಳೂರಿನಲ್ಲಿ ಮತದಾರರ ಪಟ್ಟಿ ಅಕ್ರಮ ಎಸಗಿದ್ದರು. ಇದರಿಂದ ಬೆಂಗಳೂರಿನಲ್ಲಿ ಹೆಚ್ಚುಕಮ್ಮಿ ಆಗಿತ್ತು” ಎಂದರು.

“ವಿಧಾನಸಭೆ ಚುನಾವಣೆ ನಂತರ ಮಹದೇವಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನಾಗೇಶ್ ಅವರ ಪುತ್ರ ನನ್ನನ್ನು ಭೇಟಿ ಮಾಡಿ ನನಗೆ ದೊಡ್ಡ ಮಾಹಿತಿ ನೀಡಿದರು. ಅದನ್ನು ನಾವು ಅದನ್ನು ಪರಿಶೀಲನೆ ಮಾಡಿದೆವು. ಅಷ್ಟು ಹೊತ್ತಿಗೆ ತಡವಾದ ಪರಿಣಾಮ ಅವರಿಗೆ ನ್ಯಾಯ ಒದಗಿಸಲು ಆಗಲಿಲ್ಲ. ನಂತರ ಲೋಕಸಭೆ ಚುನಾವಣೆಯಲ್ಲಿ ಇದೇ ರೀತಿ ನಡೆದಿದ್ದು, ನಮ್ಮ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಅವರು ಪರಿಶೀಲನೆ ಮುಂದುವರಿಸಿದ್ದಾರೆ. ಪಕ್ಷದ ವತಿಯಿಂದ ಇದನ್ನು ಅಧ್ಯಯನ ಮಾಡಿ ದೆಹಲಿಗೆ ತಲುಪಿಸಿದ್ದೇವೆ. ಇಲ್ಲಿ ಆಗಿರುವ ಅಕ್ರಮದ ಬಗ್ಗೆ ನಾನು ಬಿಡಿಸಿ ಹೇಳುವುದಿಲ್ಲ. ಈ ವಿಚಾರ ಯಾರ ಬಾಯಿಂದ ಬರಬೇಕೋ ಅವರಿಂದಲೇ ಬರಬೇಕು” ಎಂದು ತಿಳಿಸಿದರು.

“ಇಡೀ ದೇಶದಲ್ಲಿ ಚುನಾವಣಾ ಅಕ್ರಮದ ಬಗ್ಗೆ ಚರ್ಚೆ ನಡೆಯುತ್ತಿದ್ದು, ಮಹಾರಾಷ್ಟ್ರ, ಮಧ್ಯಪ್ರದೇಶ, ಕರ್ನಾಟಕ ರಾಜ್ಯಗಳಲ್ಲಿ ಏನಾಗಿದೆ ಎಂದು ದೊಡ್ಡ ಮಟ್ಟದ ಚರ್ಚೆಯಾಗುತ್ತಿದೆ. ಈ ವಿಚಾರವಾಗಿ ಜನರಲ್ಲಿ ಜಾಗೃತಿ ಮೂಡಿಸಬೇಕು. ನಾನು ಈ ವಿಚಾರವಾಗಿ ಬಿಎಲ್ಎಗಳನ್ನು ಮಾಡಲು ಕೆಲವು ಎಂಎಲ್ ಸಿಗಳಿಗೆ ಜವಾಬ್ದಾರಿ ವಹಿಸಿದೆ. ಎಂಎಲ್ ಸಿ ಆಗುವಾಗ ಇರುವ ಆಸಕ್ತಿ ನಂತರ ಇರುವುದಿಲ್ಲ. ಕೆಲವು ಎಂಎಲ್ಎ ಅಭ್ಯರ್ಥಿಗಳಿಗೆ ಇದರ ಜವಾಬ್ದಾರಿ ವಹಿಸಿದೆ. ಕೆಲವರಿಗೆ ಚುನಾವಣೆ ನಂತರ ಆಸಕ್ತಿ ತೋರಲಿಲ್ಲ. ಕೆಲವರು ಮಾತ್ರ ಇದನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಹೀಗಾಗಿ ನಮ್ಮ ನಾಯಕರು ಖುದ್ದಾಗಿ ಬರುತ್ತಿದ್ದಾರೆ. ನಾಳೆ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಬರುತ್ತಿದ್ದಾರೆ. ಆಗಸ್ಟ್ 5ರಂದು ರಾಹುಲ್ ಗಾಂಧಿ ಅವರು ರಾಜ್ಯಕ್ಕೆ ಆಗಮಿಸಿ ಮಾಡಲಿರುವ ರ್ಯಾಲಿಗಳ ಬಗ್ಗೆ ಚರ್ಚೆ ಮಾಡಲಿದ್ದಾರೆ. ಈ ವಿಚಾರವಾಗಿ ನಾನು ಒಂದಷ್ಟು ಸಲಹೆ ಕಳುಹಿಸಿಕೊಟ್ಟಿದ್ದೇನೆ” ಎಂದರು.

“ನಮ್ಮ ರಾಷ್ಟ್ರೀಯ ನಾಯಕರು ಬಂದಾಗ ಬೆಂಗಳೂರು ನಗರ ವಿಭಾಗ ಬೆಂಗಳೂರು ದಕ್ಷಿಣ ಹಾಗೂ ಗ್ರಾಮಾಂತರ ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ಮಂಡ್ಯ ಜಿಲ್ಲೆಯ ನಾಯಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರಬೇಕು. ಹಣ ಕೊಟ್ಟು ಯಾರನ್ನೂ ಕರೆದುಕೊಂಡು ಬರಬೇಡಿ. ಕಾರ್ಯಕರ್ತರು, ಮುಖಂಡರು, ಸಾರ್ವಜನನಿಕರು ಬಂದರೆ ಸಾಕು” ಎಂದರು.

ಮೂರ್ನಾಲ್ಕು ದಿನಗಳಲ್ಲಿ ನಿಗಮ ಮಂಡಳಿ ಪಟ್ಟಿ

“ಸರ್ಕಾರ ಬಂದ ನಂತರ ನಾವು ಕಾರ್ಯಕರ್ತರಿಗೆ ಅನೇಕ ಜವಾಬ್ದಾರಿ ನೀಡಿದ್ದೇವೆ. ಗ್ಯಾರಂಟಿ ಸಮಿತಿ, ನಾಮನಿರ್ದೇಶನ ಮಾಡಿದ್ದೇವೆ. ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಮತ್ತಷ್ಟು ಜನರಿಗೆ ಜವಾಬ್ದಾರಿ ನೀಡಿ ಪಟ್ಟಿ ಹೊರಬರಲಿದೆ. ಈಗಾಗಲೇ ಅದು ಸಿದ್ಧವಾಗುತ್ತಿದೆ. ಪ್ರತಿ ವಿಧಾನಸಭೆ ಕ್ಷೇತ್ರಕ್ಕೆ ಇಬ್ಬರಂತೆ ಸುಮಾರು 700 ಜನರಿಗೆ ಸ್ಥಾನಮಾನ ನೀಡಲು ಮುಂದಾಗಿದ್ದೇವೆ. ಉಳಿದ 30 ಜನರಿಗೆ ಕೆಲವು ನಿಗಮ ಮಂಡಳಿ, ಮತ್ತೆ ಕೆಲವರಿಗೆ ಉಪಾಧ್ಯಕ್ಷ ಹುದ್ದೆ ನೀಡಲಾಗುತ್ತಿದೆ. ಪಟ್ಟಿ ಹೈಕಮಾಂಡ್ ಬಳಿಗೆ ಹೋಗಿದ್ದು, ಅವರು ಅಂತಿಮ ತೀರ್ಮಾನ ಮಾಡಲಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಯಾರೆಲ್ಲಾ ಕಾರ್ಯಪ್ರವೃತ್ತರಾಗಿದ್ದಾರೆ ಎಂದು ಪರಿಶೀಲಿಸಿದ್ದಾರೆ. ನಮ್ಮ ಪಕ್ಷದಲ್ಲಿ ಸುಮಾರು 4-5 ಸಾವಿರ ಜನ ಈ ಸ್ಥಾನಮಾನಕ್ಕೆ ಅರ್ಹತೆ ಹೊಂದಿರುವವರು ಇದ್ದಾರೆ” ಎಂದು ತಿಳಿಸಿದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಪರಾಜಿತ ಅಭ್ಯರ್ಥಿ ಹಾಗೂ ಶಾಸಕರ ಜತೆ ನೇರವಾಗಿ ಮಾತನಾಡಿ ಹೆಸರು ಪಡೆದಿದ್ದಾರೆ. ನಾವು ನಮ್ಮ ಸಲಹೆ ನೀಡಿದ್ದೇವೆ. ಈಗ ಕೆಲವರಿಗೆ ಸಿಗದೇ ಇರಬಹುದು. ಮುಂದೆ ನಾವು ಎರಡನೇ ಬಾರಿಗೆ ಮಾಡಿದಾಗ ಅವಕಾಶ ನೀಡುತ್ತೇವೆ. ಎಲ್ಲಾ ಸಮುದಾಯದವರಿಗೆ ಸಮಾನ ಅವಕಾಶ ನೀಡಲು ಚರ್ಚೆ ನಡೆಯುತ್ತಿದೆ. ಹೀಗಾಗಿ ಯಾರೂ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ.

ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಿಂದ ಸಭೆ:

“ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಗುರುವಾರ ಮಧ್ಯಾಹ್ನ 1 ಗಂಟೆಗೆ ಪಕ್ಷದ ಕಚೇರಿಯಲ್ಲಿ ಜಿಲ್ಲಾಧ್ಯಕ್ಷರು, ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಎಂಎಲ್ಎ ಹಾಗೂ ಎಂಪಿ ಅಭ್ಯರ್ಥಿಗಳು, ಎಂಎಲ್ ಸಿಗಳು, ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರ ಜೊತೆ ಸಭೆ ಮಾಡಲಿದ್ದಾರೆ. ಪ್ರತಿಯೊಬ್ಬರಿಗೂ ಜವಾಬ್ದಾರಿ ನೀಡಲಿದ್ದಾರೆ. ನಮ್ಮ ಈ ಹೋರಾಟ ಬಿಹಾರದ ಚುನಾವಣೆಗಾಗಿ ಎಂದು ಕೆಲವು ಮಾಧ್ಯಮಗಳು ಹೇಳುತ್ತಿವೆ. ಆದರೆ ನಾವು ಬಿಹಾರ ಚುನಾವಣೆಗೆ ಮಾಡುತ್ತಿಲ್ಲ. ನಮ್ಮ ರಾಜ್ಯದಲ್ಲಿ ನಡೆದ ಚುನಾವಣೆಯಲ್ಲಿ ಹೇಗೆ ಅಕ್ರಮವಾಗಿದೆ, ಚುನಾವಣಾ ಆಯೋಗದಿಂದ ಆಗಿರುವ ಅನ್ಯಾಯದ ಬಗ್ಗೆ ಜನರಿಗೆ ತಿಳಿಸಬೇಕು. ನಮ್ಮ ನಾಯಕರು ಬಂದಾಗ ದೊಡ್ಡ ಸಂಖ್ಯೆಯಲ್ಲಿ ಸಂಘಟನೆ ಮಾಡಬೇಕು. ನಾನು ಈ ವಿಚಾರವಾಗಿ ಸಿಎಂ ಹಾಗೂ ಗೃಹ ಸಚಿವರ ಜೊತೆ ಚರ್ಚೆ ಮಾಡಿದ್ದೇನೆ” ಎಂದು ತಿಳಿಸಿದರು.

Tags: DK ShivakumarMallikarjun KhargePriyanka GandhiRahul Gandhisiddaramaiah
Previous Post

N Chaluvarayaswamy: ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ಸಮಸ್ಯೆ..!!

Next Post

ನನ್ನನ್ನು ಜೈಲಿಗೆ ಕಳಿಸಿದ್ದೆ ಆರ್.ಅಶೋಕ್‌

Related Posts

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ
Top Story

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

by ಪ್ರತಿಧ್ವನಿ
January 14, 2026
0

ಬೆಂಗಳೂರು: ಕನ್ನಡದ ವಿಚಾರದಲ್ಲಿ ಸದಾ ಧ್ವನಿ ಎತ್ತುತ್ತಾ ಬಂದಿರುವ ಬಿಗ್‌ಬಾಸ್ ಕನ್ನಡ ಸ್ಪರ್ಧಿ ಅಶ್ವಿನಿ ಗೌಡ ಇದೀಗ ಫಿನಾಲೆ ವೀಕ್ ಟಾಸ್ಕ್‌ನಲ್ಲಿ ಮಾಡಿದ ತಪ್ಪಿನಿಂದ ಭಾರೀ ಟ್ರೋಲ್‌ಗೆ...

Read moreDetails
ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

January 14, 2026
Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

January 14, 2026
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

January 14, 2026

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026
Next Post

ನನ್ನನ್ನು ಜೈಲಿಗೆ ಕಳಿಸಿದ್ದೆ ಆರ್.ಅಶೋಕ್‌

Recent News

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ
Top Story

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

by ಪ್ರತಿಧ್ವನಿ
January 14, 2026
Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!
Top Story

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

by ನಾ ದಿವಾಕರ
January 14, 2026
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!
Top Story

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

by ಪ್ರತಿಧ್ವನಿ
January 14, 2026
Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

January 14, 2026
ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

January 14, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada