• Home
  • About Us
  • ಕರ್ನಾಟಕ
Sunday, October 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

Prajwal Revanna: ರೇಪಿಸ್ಟ್‌ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್; ಪ್ರಜ್ವಲ್ ಗೆ ಜೀವನ ಪರ್ಯಾಂತ ಜೀವಾವಧಿ ಶಿಕ್ಷೆ..!!

ಪ್ರತಿಧ್ವನಿ by ಪ್ರತಿಧ್ವನಿ
August 2, 2025
in Uncategorized
0
Prajwal Revanna: ರೇಪಿಸ್ಟ್‌ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್; ಪ್ರಜ್ವಲ್ ಗೆ ಜೀವನ ಪರ್ಯಾಂತ ಜೀವಾವಧಿ ಶಿಕ್ಷೆ..!!
Share on WhatsAppShare on FacebookShare on Telegram

ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಆ ನಂತರ ಆಕೆಯನ್ನು ಅಪಹರಿಸಿದ್ದ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ದೋಷಿ ಎಂಬುದು ಸಾಬೀತಾಗಿದ್ದು, ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶಿಕ್ಷೆಯ ಪ್ರಮಾಣ ಪ್ರಕಟಿಸಿದೆ. ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಾಂತ ಜೀವಾವಧಿ ಜೈಲು ಶಿಕ್ಷೆ ಹಾಗೂ 10 ಲಕ್ಷ ರೂಪಾಯಿಗೂ ಹೆಚ್ಚು ಮೊತ್ತದ ದಂಡ ವಿಧಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್ ತೀರ್ಪು ನೀಡಿದ್ದಾರೆ.

ADVERTISEMENT

ಕೆಆರ್ ನಗರ ಮೂಲದ ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಅಪಹರಣ ಮಾಡಿದ ಆರೋಪದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಶುಕ್ರವಾರ ತೀರ್ಪು ನೀಡಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇದೀಗ ಶಿಕ್ಷೆಯ ಪ್ರಮಾಣ ಪ್ರಕಟಿಸಿದೆ. ಪ್ರಜ್ವಲ್​​​ಗೆ ಏನೇನು ಶಿಕ್ಷೆಯಾಯಿತು ಎಂಬ ವಿವರ ಇಲ್ಲಿದೆ.

ಐಪಿಸಿ ಸೆಕ್ಷನ್ 376 (2)(k)ರಡಿ ಜೀವಾವಧಿ ಶಿಕ್ಷೆ ಹಾಗೂ 5 ಲಕ್ಷ ರೂ. ದಂಡ
376(2)(n) ಅಡಿ ಪದೇಪದೆ ಅತ್ಯಾಚಾರಕ್ಕೆ ಜೀವನಪರ್ಯಂತ ಜೈಲು, 5 ಲಕ್ಷ ರೂ. ದಂಡ
ಐಪಿಸಿ ಸೆಕ್ಷನ್‌ 354(A) ಅಡಿ 3 ವರ್ಷ ಸೆರೆವಾಸ, 25,000 ರೂಪಾಯಿ ದಂಡ
ಐಪಿಸಿ ಸೆಕ್ಷನ್‌ 354 (B) ಅಡಿ 7 ವರ್ಷ ಸೆರೆವಾಸ, 50,000 ರೂಪಾಯಿ ದಂಡ
ಐಪಿಸಿ ಸೆಕ್ಷನ್‌ 354 (c) ಅಡಿ 3 ವರ್ಷ ಸೆರೆವಾಸ, 25,000 ರೂಪಾಯಿ ದಂಡ
ಸೆಕ್ಷನ್ 506 ಅಡಿ 2 ವರ್ಷ ಸೆರೆವಾಸ 10,000 ರೂ. ದಂಡ
ಸೆಕ್ಷನ್ 201 ಅಡಿ 3 ವರ್ಷ ಸೆರೆವಾಸ 25,000 ರೂ. ದಂಡ
ಐಟಿ ಕಾಯ್ದೆ ಸೆ.66(E) ಅಡಿ 3 ವರ್ಷ 25,000 ರೂ. ದಂಡ.
ಪ್ರಜ್ವಲ್ ರೇವಣ್ಣಗೆ ಇಂದಿನಿಂದಲೇ ಶಿಕ್ಷೆ ಆರಂಭ, ಇಲ್ಲಿಯವರೆಗಿನ ಜೈಲುವಾಸ ಮೈನಸ್ ಆಗುವುದಿಲ್ಲ.
ಏಕೆಂದರೆ ಈ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಬಂಧನವಾಗಿರಲಿಲ್ಲ, ಕೇವಲ ಬಾಡಿ ವಾರಂಟ್‌ ಮೇಲೆ ಪ್ರಜ್ವಲ್‌ನನ್ನು ವಶಕ್ಕೆ ಪಡೆಯಲಾಗಿತ್ತು.

ಕೇವಲ 4 ತಿಂಗಳ ದಾಖಲೆ ಸಮಯದಲ್ಲೇ ಜಡ್ಜ್ ಸಂತೋಷ್ ಗಜಾನನ ಭಟ್ ತೀರ್ಪು ಪ್ರಕಟಿಸಿದ್ದಾರೆ. ಇದರೊಂದಿಗೆ, ಮೂರು ಅತ್ಯಾಚಾರ ಪ್ರಕರಣ, 1 ಲೈಂಗಿಕ ದೌರ್ಜನ್ಯ ಹೀಗೆ ಒಟ್ಟು 4 ಪ್ರಕರಣಗಳ ಪೈಕಿ ಒಂದರಲ್ಲಿ ತೀರ್ಪು ಹೊರಬಿದ್ದಂತಾಗಿದೆ. ಪ್ರಜ್ವಲ್ ರೇವಣ್ಣ ತಪ್ಪಿತಸ್ಥ ಎಂಬುದು ಸಾಬೀತಾಗಿದೆ. ಪ್ರಜ್ವಲ್ ದೋಷಿ ಎಂದು ಶುಕ್ರವಾರ ತೀರ್ಪು ನೀಡಿದ್ದ ಕೋರ್ಟ್, ಶಿಕ್ಷೆ ಪ್ರಮಾಣದ ವಿಚಾರಣೆಯನ್ನು ಶನಿವಾರಕ್ಕೆ ಮುಂದೂಡಿತ್ತು. ಇಂದು ಬೆಳಗ್ಗೆ ನಡೆದ ವಾದ-ಪ್ರತಿವಾದ ಆಲಿಸಿದ ಜಡ್ಜ್ ಸಂತೋಷ್ ಗಜಾನನ ಭಟ್ ಅಂತಿಮವಾಗಿ ಶಿಕ್ಷೆಯ ಪ್ರಮಾಣ ಪ್ರಕಟಿಸಿದ್ದಾರೆ.

ಇದಕ್ಕೂ ಮುನ್ನ ಪ್ರಾಸಿಕ್ಯೂಷನ್ ಪರ ವಕೀಲರಾದ ಬಿಎನ್‌ ಜಗದೀಶ್‌, ಎಸ್​​ಪಿಪಿ ಅಶೋಕ್ ನಾಯಕ್ ವಾದ ಮಂಡಿಸಿ ಪ್ರಜ್ವಲ್​​ಗೆ ಗರಿಷ್ಠ ಶಿಕ್ಷೆ ನೀಡಬೇಕೆಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಅದಾದ ನಂತರ ವಾದ ಮಂಡನೆ ಮಾಡಿದ್ದ ಪ್ರಜ್ವಲ್ ಪರ ವಕೀಲೆ ನಳಿನಿ ಮಾಯೇಗೌಡ, ಶಿಕ್ಷೆ ನೀಡುವ ವೇಳೆ ಅಪರಾಧಿಯ ರಾಜಕೀಯ ಭವಿಷ್ಯ, ವಯಸ್ಸು ಇತ್ಯಾದಿಗಳನ್ನೆಲ್ಲ ಪರಿಗಣಿಸಬೇಕು ಎಂದು ಮನವಿ ಮಾಡಿದ್ದರು. ನಂತರ ಪ್ರಜ್ವಲ್ ಅಭಿಪ್ರಾಯವನ್ನು ನ್ಯಾಯಾಲಯ ಕೋರಿತ್ತು. ಅದಕ್ಕೆ ಪ್ರತಿಕ್ರಿಯಿಸಿದ್ದ ಪ್ರಜ್ವಲ್, ಸಂಸದನಾಗಿದ್ದಾಗ ಯಾರೂ ಆರೋಪ ಮಾಡಿರಲಿಲ್ಲ. ಆಗ ಏಕೆ ಆರೋಪಿಸಿರಲಿಲ್ಲ? ಚುನಾವಣೆ ಸಮಯದಲ್ಲಿಯೇ ಯಾಕೆ ಹಾಗೆ ಮಾಡಿದ್ದಾರೆ ಎಂದು ಪ್ರಶ್ನಿಸಿದ್ದರಲ್ಲದೆ, ನ್ಯಾಯಾಲಯ ಏನೇ ತೀರ್ಮಾನ ಕೈಗೊಂಡರೂ ಅದನ್ನು ಒಪ್ಪಿಕೊಳ್ಳುತ್ತೇನೆ ಎಂದಿದ್ದರು.

ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ 2024ರ ಲೋಕಸಭೆ ಚುನಾವಣೆ ಸಂದರ್ಭ ಸರಣಿ ಅತ್ಯಾಚಾರ ಆರೋಪ ಕೇಳಿಬಂದಿತ್ತು. ಅವರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನಲಾದ ಅಶ್ಲೀಲ ವಿಡಿಯೋಗಳು ವೈರಲ್ ಆಗಿದ್ದವು. ಇದರಲ್ಲಿ ಮೈಸೂರಿನ ಕೆಆರ್ ನಗರದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪವೂ ಒಂದಾಗಿದೆ. ಅತ್ಯಾಚಾರ ಪ್ರಕರಣ ಬೆಳಕಿಗೆ ಬರಬಾರದು ಎಂದು ಮಹಿಳೆಯನ್ನು ಅಪಹರಿಸಿ ಹುಣಸೂರು ಬಳಿಯ ತೋಟದ ಮನೆಯಲ್ಲಿ ಕೂಡಿಹಾಕಲಾಗಿತ್ತು ಎಂಬ ಆರೋಪದ ಅಡಿ ದೂರು ದಾಖಲಾಗಿತ್ತು. ಈ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್​ಡಿ ರೇವಣ್ಣ ಮತ್ತು ಭವಾನಿ ರೇವಣ್ಣ ಸೇರಿದಂತೆ ಒಟ್ಟು 9 ಆರೋಪಿಗಳಿದ್ದಾರೆ. ಹೆಚ್​ಡಿ ರೇವಣ್ಣ ಹಾಗೂ ಭವಾನಿ ರೇವಣ್ಣ ಜಾಮೀನಿನ ಮೇಲೆ ಹೊರಗಿದ್ದಾರೆ. ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣ ಒಂದು ವರ್ಷದಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಪ್ರಕರಣ ಸಂಬಂಧ 2024ರ ಮೇ 31ರಂದು ಪ್ರಜ್ವಲ್ ರೇವಣ್ಣರನ್ನು ಪೊಲೀಸರು ಬಂಧಿಸಿದ್ದರು. ಇದೀಗ ಅವರು ದೋಷಿ ಎಂದು ಸಾಬೀತಾಗಿದ್ದು, ಶಿಕ್ಷೆಯಾಗಿದೆ.

Tags: court on prajwal revannahassan mp prajwal revannaHassan prajwal Revannajds prajwal revannaPrajwal Revannaprajwal revanna bailprajwal revanna caseprajwal revanna hassanprajwal revanna houseprajwal revanna in jailprajwal revanna issueprajwal revanna jailprajwal revanna lookprajwal revanna newsprajwal revanna rape caseprajwal revanna scandalprajwal revanna sexprajwal revanna sex caseprajwal revanna sex newsprajwal revanna videoprajwal revanna video cdprajwal revanna videos
Previous Post

BK Hariprasad: ರಾಷ್ಟ್ರದಲ್ಲಿ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ..!!

Next Post

ಪ್ರಜ್ವಲ” ಪಾಳೆಗಾರಿಕೆಯ ಬೇರುಗಳು ಮತ್ತು ಉದಾರವಾದಿ ಕುರುಡುಗಳು

Related Posts

Uncategorized

DK Shivakumar: ಜನ ಸಾಮಾನ್ಯರೊಂದಿಗೆ ಡಿಸಿಎಂ ಹೆಜ್ಜೆ, ನಾಗರಿಕರಿಂದ ಸಲಹೆ, ಅಹವಾಲು ಸ್ವೀಕಾರ

by ಪ್ರತಿಧ್ವನಿ
October 11, 2025
0

ಲಾಲ್ ಬಾಗ್ ಗೆ ತೊಂದರೆಯಾಗಬಾರದು, ಜನರಲ್ಲಿ ನಾಗರಿಕ ಪ್ರಜ್ಞೆ ಮೂಡಿಸಿ, ಶಾಲಾ ಮುಂಭಾಗದ ರಸ್ತೆಗಳಲ್ಲಿ ಸಂಚಾರ ದಟ್ಟಣೆ, ಓಸಿ ಸಿಸಿ ಸಮಸ್ಯೆ ನಿವಾರಣೆ, ಕಸ ನಿರ್ವಹಣೆ ಬಗ್ಗೆ...

Read moreDetails
ಕರ್ನಾಟಕ ಎಐಸಿಸಿ ಉಸ್ತುವಾರಿ ಸುರ್ಜೆವಾಲರಿಂದ ಕಾಂಗ್ರೆಸ್‌ ಶಾಸಕರಿಗೆ ಕ್ಲಾಸ್‌ !

ಕರ್ನಾಟಕ ಎಐಸಿಸಿ ಉಸ್ತುವಾರಿ ಸುರ್ಜೆವಾಲರಿಂದ ಕಾಂಗ್ರೆಸ್‌ ಶಾಸಕರಿಗೆ ಕ್ಲಾಸ್‌ !

October 3, 2025
X v/s ಯೂನಿಯನ್ ಆಫ್ ಇಂಡಿಯಾ ಪ್ರಕರಣ – ಇಂದು ಹೈಕೋರ್ಟ್ ನಿಂದ ಹೊರಬೀಳಲಿದೆ ಮಹತ್ವದ ತೀರ್ಪು  

X v/s ಯೂನಿಯನ್ ಆಫ್ ಇಂಡಿಯಾ ಪ್ರಕರಣ – ಇಂದು ಹೈಕೋರ್ಟ್ ನಿಂದ ಹೊರಬೀಳಲಿದೆ ಮಹತ್ವದ ತೀರ್ಪು  

September 24, 2025

ಕಾಂಗ್ರೆಸ್ ಶಾಸಕ ನಂಜೇಗೌಡ ಕ್ರೇಜ್‌ ನೋಡಿ..!

September 23, 2025
ಕನ್ನಡ ನಟ ನಟಿಯರಿಗೆ ಅವಮಾನ ಆಗಿದ್ದು ಒಳ್ಳೆಯದೇ: ಭರತನಾಡು

ಕನ್ನಡ ನಟ ನಟಿಯರಿಗೆ ಅವಮಾನ ಆಗಿದ್ದು ಒಳ್ಳೆಯದೇ: ಭರತನಾಡು

September 7, 2025
Next Post
ಪ್ರಜ್ವಲ” ಪಾಳೆಗಾರಿಕೆಯ ಬೇರುಗಳು ಮತ್ತು ಉದಾರವಾದಿ ಕುರುಡುಗಳು

ಪ್ರಜ್ವಲ” ಪಾಳೆಗಾರಿಕೆಯ ಬೇರುಗಳು ಮತ್ತು ಉದಾರವಾದಿ ಕುರುಡುಗಳು

Recent News

Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
Top Story

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

by ಪ್ರತಿಧ್ವನಿ
October 12, 2025
Top Story

ಸೆಟ್ಟೇರಿತು ವಿಜಯ್ ದೇವರಕೊಂಡ ಹೊಸ ಸಿನಿಮಾ…ರೌಡಿಬಾಯ್ ಗೆ ಕೀರ್ತಿ ಸುರೇಶ್ ನಾಯಕಿ

by ಪ್ರತಿಧ್ವನಿ
October 12, 2025
DK Shivakumar: ಜೆ.ಪಿ. ಪಾರ್ಕ್ ನಲ್ಲಿ ಜಯಪ್ರಕಾಶ್ ನಾರಾಯಣ್ ಅವರ ಪುತ್ಥಳಿ ‌ಮರುಸ್ಥಾಪನೆ ಭರವಸೆ..!!
Top Story

DK Shivakumar: ಜೆ.ಪಿ. ಪಾರ್ಕ್ ನಲ್ಲಿ ಜಯಪ್ರಕಾಶ್ ನಾರಾಯಣ್ ಅವರ ಪುತ್ಥಳಿ ‌ಮರುಸ್ಥಾಪನೆ ಭರವಸೆ..!!

by ಪ್ರತಿಧ್ವನಿ
October 12, 2025
Top Story

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

by ಪ್ರತಿಧ್ವನಿ
October 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

October 12, 2025

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

October 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada