ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಎಸ್ ಲಾಡ್ (Santhosh S Lad) ಅವರು, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಶಿವಮೊಗ್ಗ ತಾಲೂಕಿನ ಸಿದ್ಲೀಪುರದಲ್ಲಿ ನಿರ್ಮಿಸಲಾದ ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಚಯಗಳನ್ನು ಇಂದು ಲೋಕಾರ್ಪಣೆಗೊಳಿಸಿ ಕಾರ್ಮಿಕರ ಬಳಕೆಗೆ ಅನುಕೂಲ ಮಾಡಿಕೊಟ್ಟರು.

ಜಿಲ್ಲೆಯ ದೇವಕಾತಿಕೊಪ್ಪ ಕೈಗಾರಿಕಾ ಪ್ರದೇಶದಲ್ಲಿ ವಲಸೆ ಕಾರ್ಮಿಕರು ಹಾಗೂ ಅವರ ಕುಟುಂಬದ ಅವಲಂಬಿತರು ಉಳಿದುಕೊಳ್ಳಲು ಈ ವಸತಿ ಸಮುಚ್ಚಯಗಳನ್ನು ನಿರ್ಮಿಸಲಾಗಿದೆ.

ಈ ವೇಳೆ ಶಾಸಕರಾದ ಚನ್ನಬಸಪ್ಪ(Channabasappa), ಶಾರದಾ ಪೂರ್ಯನಾಯಕ್(Sharada Pooryanayak), ವಿಧಾನ ಪರಿಷತ್ ಸದಸ್ಯರಾದ ಡಿ ಎಸ್ ಅರುಣ್(DS Arun), ಡಾ.ಧನಂಜಯ ಸರ್ಜಿ(Dr.Dhananjay Sarji), ಕಾರ್ಮಿಕ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.









