• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

CM Siddaramaiah: ವಿಕ್ಟೋರಿಯಾ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ..

ಪ್ರತಿಧ್ವನಿ by ಪ್ರತಿಧ್ವನಿ
August 6, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ವೈದ್ಯರು ರೋಗಿಗಳನ್ನು ಸಹಾನುಭೂತಿಯಿಂದ ಕಾಣಬೇಕು, ವೈದ್ಯರು ಸಹನೆಯಿಂದ ಕೆಲಸ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

ADVERTISEMENT


ವೈದ್ಯರು ರೋಗಿಗಳನ್ನು ಸಹಾನುಭೂತಿಯಿಂದ ಕಾಣಬೇಕು. ಉಚಿತ ಚಿಕಿತ್ಸೆ ಇರುವುದರಿಂದ ಒತ್ತಡವೂ ಹೆಚ್ಚಿರುತ್ತದೆ. ವೈದ್ಯರು ಸಹನೆಯಿಂದ ಕೆಲಸ ಮಾಡಬೇಕು. ಯಾರ ಬಳಿಯೂ ಹಣ ಪಡೆಯಬಾರದು ಎಂದು ವೈದ್ಯರಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಕೊಪ್ಪಳ ಕಾರ್ಯಕ್ರಮ ಇಂದು ಮಳೆ ಕಾರಣದಿಂದ ತೆರಳಲಿಲ್ಲ. ಆದ್ದರಿಂದ ವಿಕ್ಟೋರಿಯಾ ಆಸ್ಪತ್ರೆಗೆ ಇಂದು ಅನಿರೀಕ್ಷಿತ ಭೇಟಿ ನೀಡಲಾಗಿದೆ ಎಂದರು.

ಪರಿಶೀಲನೆ
ಆಸ್ಪತ್ರೆಯಲ್ಲಿ ವಾಹನ ನಿಲುಗಡೆಗೆ ಹಣ ಪಡೆಯುತ್ತಿರುವ ಬಗ್ಗೆ ಪರಿಶೀಲಿಸಲಾಗುವುದು ಎಂದರು.

ಸರ್ಕಾರದ 108 ಆಂಬ್ಯುಲೆನ್ಸ್ ಲಭ್ಯ

ಖಾಸಗಿ ಆಂಬ್ಯುಲೆನ್ಸ್ ಅವರ ದಂಧೆ ನಡೆಯುತ್ತಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಸರ್ಕಾರದ 108 ಆಂಬ್ಯುಲೆನ್ಸ್ ದೊರೆಯುತ್ತದೆ ಎಂದರು.

ದಿನಕ್ಕೆ 40 ಕ್ಕೂ ಹೆಚ್ಚು ಹೆರಿಗೆಗಳು
ವಾಣಿ ವಿಲಾಸ ಆಸ್ಪತ್ರೆ ಹಾಗೂ ಟ್ರಾಮಾ ಸೆಂಟರ್ ಗೆ ಸಹ ಭೇಟಿ ನೀಡಿದ್ದು, ವಾಣಿ ವಿಳಾಸದಲ್ಲಿ ಒಂದು ದಿನಕ್ಕೆ 40 ಕ್ಕೂ ಹೆಚ್ಚು ಹೆರಿಗೆಗಳಾಗುತ್ತವೆ. ಬೇರೆ ಬೇರೆ ರಾಜ್ಯದ ಜನರು ಇಲ್ಲಿ ಚಿಕಿತ್ಸೆಗಾಗಿ ಬರುತ್ತಾರೆ. ಜನ ದಟ್ಟಣೆ ಹೆಚ್ಚಿರುವುದರಿಂದ ಆಸ್ಪತ್ರೆಯ ಹಾಸಿಗೆಗಳನ್ನು ಹೆಚ್ಚು ಮಾಡಬೇಕಿದೆ. ವೈದ್ಯರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಹಲವಾರು ರೋಗಿಗಳನ್ನು ಭೇಟಿ ಮಾಡಿ ಮಾತನಾಡಿಸಿದೆ. ಡಾಕ್ಟರ್ ಗಳು ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ, ಊಟ ಚೆನ್ನಾಗಿದೆ ಎಂದು ಹೇಳಿದರು. ಗ್ಯಾಸ್ಟ್ರೋ ಎಂಟ್ರಾಲಜಿ ವಿಭಾಗಕ್ಕೆ ಭೇಟಿ ನೀಡಿದ್ದೇನೆಂ ಅಂಗಾಂಗ ದಾನಕ್ಕೆ ಹೊರಗೆ 30 ರಿಂದ 40 ಲಕ್ಷ ವೆಚ್ಚವಾಗುತ್ತದೆ. ಇಲ್ಲಿ ಉಚಿತವಾಗಿ ಮಾಡಲಾಗುತ್ತದೆ ಎಂದರು.

300 ಹಾಸಿಗೆಗಳ ಆಸ್ಪತ್ರೆ: ಪ್ರಸ್ತಾವನೆಯನ್ನು ಪರಿಗಣಿಸಲಾಗುವುದು
120 ಹಾಸಿಗೆಗಳ ಆಸ್ಪತ್ರೆಯನ್ನು 300 ಹಾಸಿಗೆಗಳಿಗೆ ಹೆಚ್ಚಿಸುವ ಬಗ್ಗೆ ಬೇಡಿಕೆಯಿದೆ. ಈ ಕುರಿತ ಪ್ರಸ್ತಾವನೆ ಸರ್ಕಾರದ ಮುಂದಿದ್ದು ಇದನ್ನು ಪರಿಗಣಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಆಸ್ಪತ್ರೆಯಲ್ಲಿ ಸಮಸ್ಯೆಗಳು ಕಂಡುಬರಲಿಲ್ಲವೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಜನರು ಸಮಸ್ಯೆಗಳನ್ನು ಹೇಳಲಿಲ್ಲ. ಕೆಲವರು ಆಸ್ಪತ್ರೆಗೆ ದಾಖಲಾಗಬೇಕೆಂದು ತಿಳಿಸಿದರು ಎಂದರು.

Tags: 5 years cm siddaramaiahCM Siddaramaiahcm siddaramaiah newscm siddaramaiah press meetcm siddaramaiah speechcm siddaramaiah today newscm siddaramaiah'skarnataka cm siddaramaiahNew CM Siddaramaiahsiddaramaiahsiddaramaiah aboutsiddaramaiah castSiddaramaiah CMsiddaramaiah cm statementsiddaramaiah congresssiddaramaiah interviewsiddaramaiah karnataka cmsiddaramaiah newssiddaramaiah on cm chairsiddaramaiah press meetsiddaramaiah slap rowYathindra Siddaramaiah
Previous Post

ಸರ್ಕಾರದ ಆದೇಶವೇ ಇಲ್ಲದೆ ಬಿಡಿಎಯ PRO ಕಾರ್ಯನಿರ್ವಹಣೆ

Next Post

ಲೋಕಾಯುಕ್ತ ಪ್ರಕರಣಗಳ ವಿಲೇವಾರಿ ಪರಿಶೀಲನೆ ಮಾಡಿದ ನ್ಯಾಯಮೂರ್ತಿ ಬಿ.ಎಸ್.ಪಾಟೀಲ

Related Posts

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!
ಕರ್ನಾಟಕ

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

by ಪ್ರತಿಧ್ವನಿ
May 25, 2026
0

ಪ್ರಧಾನಿ ನರೇಂದ್ರ ಮೋದಿ ಅವರು ಮೇ 10ರಂದು ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ಭೇಟಿ ನೀಡಿದ್ದ ವೇಳೆ, ಅವರ ಸಂಚಾರ ಮಾರ್ಗದ ಸಮೀಪ ಸ್ಫೋಟಕ ಪತ್ತೆಯಾಗಿದ್ದ...

Read moreDetails
 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

May 25, 2026
ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

May 24, 2026
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
Next Post

ಲೋಕಾಯುಕ್ತ ಪ್ರಕರಣಗಳ ವಿಲೇವಾರಿ ಪರಿಶೀಲನೆ ಮಾಡಿದ ನ್ಯಾಯಮೂರ್ತಿ ಬಿ.ಎಸ್.ಪಾಟೀಲ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada