• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

DCM DK Shivakumar : ಸಂವಿಧಾನ, ಮತದಾನದ ಹಕ್ಕು ರಕ್ಷಣೆಗೆ ರಾಹುಲ್ ಗಾಂಧಿ ಅವರ ದಿಟ್ಟ ಹೋರಾಟಕ್ಕೆ ಸಂಪೂರ್ಣ ಬೆಂಬಲ: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
August 8, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ದೇಶಾದ್ಯಂತ ಮತದಾನ ಅಕ್ರಮ ಬಹಿರಂಗಕ್ಕೆ ಕರ್ನಾಟಕ ನೆಲದಲ್ಲಿ ಮುನ್ನುಡಿ

ADVERTISEMENT

“ಸಂವಿಧಾನ, ಮತದಾನದ ಹಕ್ಕು ರಕ್ಷಣೆಗೆ ರಾಹುಲ್ ಗಾಂಧಿ ಅವರು ದಿಟ್ಟ ಹೋರಾಟ ಆರಂಭಿಸಿದ್ದಾರೆ. ಅದಕ್ಕೆ ನಮ್ಮೆಲ್ಲರ ಒಕ್ಕೊರಲ ಬೆಂಬಲವಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಕೇಂದ್ರ ಚುನಾವಣೆ ಆಯೋಗ ಪ್ರಾಯೋಜಿತ ಮತ ಅಕ್ರಮದ ವಿರುದ್ಧ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಶುಕ್ರವಾರ ನಡೆದ ‘ನಮ್ಮ ಮತ, ನಮ್ಮ ಹಕ್ಕು, ನಮ್ಮ ಹೋರಾಟ’ ಪ್ರತಿಭಟನಾ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು.

“ಇದೊಂದು ಐತಿಹಾಸಿಕ ಹೋರಾಟ. ಮಲ್ಲಿಕಾರ್ಜುನ ಖರ್ಗೆ ಅವರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಈಗ ಎಐಸಿಸಿ ಅಧ್ಯಕ್ಷ ಸ್ಥಾನವನ್ನು ಅಲಂಕರಿಸುವ ಎತ್ತರಕ್ಕೆ ಬೆಳೆದಿದ್ದಾರೆ. ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದಾರೆ. ರಾಹುಲ್ ಗಾಂಧಿ ಅವರು ದೇಶದ ಸಂವಿಧಾನ ರಕ್ಷಣೆಗೆ ನಮ್ಮ ಮತ, ನಮ್ಮ ಹಕ್ಕು, ರಕ್ಷಣೆಗೆ ದೊಡ್ಡ ಸಂದೇಶ ರವಾನಿಸಿದ್ದಾರೆ. ರಾಹುಲ್ ಗಾಂಧಿ ಅವರು ದೇಶದ ಪರವಾಗಿ ದಿಟ್ಟ ಹೋರಾಟ ಆರಂಭಿಸಿದ್ದಾರೆ. ದೇಶಾದ್ಯಂತ ಮತ ಅಕ್ರಮ ಬಯಲಿಗೆಳೆಯಲು ಕರ್ನಾಟಕದಲ್ಲಿ ಮುನ್ನುಡಿ ಬರೆಯುತ್ತಿದ್ದಾರೆ” ಎಂದು ತಿಳಿಸಿದರು.

“ಇತ್ತೀಚೆಗೆ ದೆಹಲಿಯಲ್ಲಿ ನಡೆದ ಎಐಸಿಸಿ ಮಾನವ ಹಕ್ಕು ವಿಭಾಗದ ಸಭೆಯಲ್ಲಿ ರಾಹುಲ್ ಗಾಂಧಿ ಅವರು, ಸಂವಿಧಾನ ಉಳಿಸಿ ಪ್ರಜಾಪ್ರಭುತ್ವ ರಕ್ಷಣೆ ಮಾಡಲು, ಆಸ್ಪತ್ರೆಗಳಲ್ಲಿ ಬ್ಲಡ್ ಬ್ಯಾಂಕ್ ಇರುವಂತೆ ಪ್ರತಿ ಕ್ಷೇತ್ರದಲ್ಲಿ ಲೀಗಲ್ ಬ್ಯಾಂಕ್ ಸ್ಥಾಪನೆ ಮಾಡಬೇಕು ಎಂದು ಸೂಚನೆ ನೀಡಿದ್ದಾರೆ. ಅವರ ಸೂಚನೆಗೆ ನಾವೆಲ್ಲರೂ ಬದ್ಧರಾಗಿದ್ದೇವೆ” ಎಂದು ಹೇಳಿದರು.

ಕಾರ್ಯಕ್ರಮಕ್ಕೂ ಮುನ್ನ ಖಾಸಗಿ ಹೊಟೇಲ್ ನಲ್ಲಿ ಸುದ್ದಿ ಸಂಸ್ಧೆಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, “ರಾಹುಲ್ ಗಾಂಧಿ ಅವರು ಲೋಕಸಭೆ ವಿರೋಧ ಪಕ್ಷದ ನಾಯಕರು. ದೇಶ, ಪ್ರಜಾಪ್ರಭುತ್ವ ವ್ಯವಸ್ಥೆ, ಚುನಾವಣಾ ವ್ಯವಸ್ಥೆ, ಮತದಾರರ ರಕ್ಷಣೆಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಅಧ್ಯಯನ ಮಾಡಿಸಿದ್ದಾರೆ. ಕಾಂಗ್ರೆಸ್ ಪಕ್ಷ ಆಂತರಿಕ ಸಂಶೋಧನಾ ತಂಡವನ್ನು ಹೊಂದಿದೆ. ಅದು https://www.youtube.com/watch?v=ZWiUgOeKy8Y

ಚುನಾವಣೆ ಅಕ್ರಮಗಳ ಬಗ್ಗೆ ಸಂಶೋಧನೆ ಮುಂದುವರೆಸಿದೆ ಎಂದರು

“ಬಿಜೆಪಿಯವರು ಚಿಲುಮೆ ಸಂಸ್ಥೆ ಮೂಲಕ ತಮ್ಮ 8 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಿಎಲ್ಓ ಗಳಾಗಿ ನೇಮಿಸಿತ್ತು. ಇದರ ವಿರುದ್ಧ ಹೋರಾಟ ಮಾಡಿ ನಾವು ನಿಯಂತ್ರಣ ಮಾಡಿದೆವು. ಚುನಾವಣೆ ಫಲಿತಾಂಶದ ಸಂದರ್ಭದಲ್ಲೇ ದೂರು ನೀಡಬೇಕಿತ್ತು. ಆದರೆ ದೇಶದಲ್ಲಿ ಇದುವರೆಗೂ ಚುನಾವಣಾ ದೂರುಗಳು ಇತ್ಯರ್ಥವಾಗಿಲ್ಲ. ಹೀಗಾಗಿ ನಾವು ಅದನ್ನು ಬಿಟ್ಟಿದ್ದೆವು. ಈಗ ಜನರ ಮುಂದೆ ಈ ಅಕ್ರಮಗಳನ್ನು ಬಹಿರಂಗಪಡಿಸಲು ತೀರ್ಮಾನಿಸಿದ್ದೇವೆ.

ಜವಾಬ್ದಾರಿಯುತ ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ಅವರು ಈ ಅಕ್ರಮಗಳಿಗೆ ಯಾರು ಹೊಣೆ? ಎಂದು ಪ್ರಶ್ನಿಸುತ್ತಿದ್ದಾರೆ. ಈ ದೇಶಕ್ಕೆ ಪ್ರಜಾಪ್ರಭುತ್ವ ವ್ಯವಸ್ಥೆ ತಂದುಕೊಟ್ಟ ಪಕ್ಷದ ಮುಖಂಡರಾಗಿ ಅವರು ಧ್ವನಿ ಎತ್ತುತ್ತಿದ್ದಾರೆ. ನಮ್ಮ ಹಕ್ಕು, ನಮ್ಮ ಪ್ರಜಾಪ್ರಭುತ್ವವನ್ನು ನಾವು ಕಾಪಾಡಬೇಕು” ಎಂದು ತಿಳಿಸಿದರು

Tags: Rahul Gandhirahul gandhi bhashanrahul gandhi debaterahul gandhi ecirahul gandhi electionrahul gandhi full pcrahul gandhi leaderrahul gandhi liverahul gandhi newsrahul gandhi on biharrahul gandhi on bjprahul gandhi on ecrahul gandhi on ec liverahul gandhi on ecirahul gandhi on pm modirahul gandhi on sirrahul gandhi pcrahul gandhi pc liverahul gandhi pm modirahul gandhi pressrahul gandhi press meetrahul gandhi speechrahul gandhi statement
Previous Post

ಪಾರ್ಟಿ ಮಾಡೋಕೆ ಬಂದವ್ರೋ..? ಬಿರಿಯಾನಿ ತಿನ್ನೋಕೆ ಬಂದವ್ರೋ..?  – ರಾಹುಲ್ ಗಾಂಧಿ ಪ್ರೊಟೆಸ್ಟ್ ಟೀಕಿಸಿದ ಆರ್. ಅಶೋಕ್ 

Next Post

ರಾಹುಲ್ ಗಾಂಧಿಯಿಂದ ಪ್ರಜಾಪ್ರಭುತ್ವ ಮತ್ತು ಸಂವಿಧಾನ ರಕ್ಷಣೆಗೆ ಚಳವಳಿ ಆರಂಭವಾಗಿದೆ: ಸಿ.ಎಂ

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
Next Post

ರಾಹುಲ್ ಗಾಂಧಿಯಿಂದ ಪ್ರಜಾಪ್ರಭುತ್ವ ಮತ್ತು ಸಂವಿಧಾನ ರಕ್ಷಣೆಗೆ ಚಳವಳಿ ಆರಂಭವಾಗಿದೆ: ಸಿ.ಎಂ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada