ನಾಳೆ (ಆ.9) ಬೆಂಗಳೂರಲ್ಲಿ (Bangaluru) ಪ್ರಧಾನಿ ನರೇಂದ್ರ ಮೋದಿ (Pm Modi) ಹಳದಿ ಮಾರ್ಗದ ಮೆಟ್ರೋಗೆ (Yellow line metro) ಚಾಲನೆ ನೀಡಲಿದ್ದಾರೆ. ರಾಷ್ಟ್ರೀಯ ವಿದ್ಯಾಲಯ ರಸ್ತೆಯಿಂದ ಬೊಮ್ಮಸಂದ್ರ ನಡುವೆ ಮೆಟ್ರೋ ಸಂಚರಿಸಲಿದೆ. ಪ್ರಧಾನಿ ಮೋದಿ ಬೆಳಗ್ಗೆ 11.15ಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೇಲ್ವೆ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಹೀಗಾಗಿ ಬಹು ನಿರೀಕ್ಷಿತ ಯೆಲ್ಲೋ ಲೈನ್ ಮೆಟ್ರೋ ಉದ್ಘಾಟನೆಗೆ ಕ್ಷಣಗಣನೆ ಪ್ರಾರಂಭವಾಗಿದೆ.

ಹೊಸದಾಗಿ ಮೂರು ವಂದೇ ಭಾರತ್ ರೈಲುಗಳ ಸಂಚಾರಕ್ಕೆ ಚಾಲನೆ ನೀಡಲಿದ್ದಾರೆ. ಆ ನಂತರ 11.30ಕ್ಕೆ ರೇಲ್ವೆ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ಸಂಚರಿಸಿ ಬೆಳಗ್ಗೆ 11.45ಕ್ಕೆ ಹಳದಿ ಮಾರ್ಗಕ್ಕೆ ಮೋದಿ ಚಾಲನೆ ನೀಡಿ, ಮೆಟ್ರೋ 3ನೇ ಹಂತದ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.ನಾಳೆ ಯೆಲ್ಲೋ ಲೈನ್ ಮೆಟ್ರೋ ಉದ್ಘಾಟನೆಯಾಗಲಿದ್ದು, ಮೆಟ್ರೋ ಸ್ಟೇಷನ್ ಸಿಂಗಾರ ಗೊಂಡಿದೆ. ಮೆಟ್ರೋ ಪಿಲ್ಲರ್‌ಗಳಿಗೆ ಕಲರ್ ಫುಲ್ ಲೈಟಿಂಗ್ ಹಾಕಲಾಗಿದ್ದು, ಮೆಟ್ರೋ ಸ್ವಾಗತಕ್ಕೆ ಕೂಡ್ಲುಗೇಟ್ ಸ್ಟೇಷನ್ ರೆಡಿಯಾಗಿದೆ.

ಇನ್ನು ನಾಳೆ ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮನ ಹಿನ್ನಲೆ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವರಾದ ವಿ.ಸೋಮಣ್ಣ ರೈಲು ನಿಲ್ದಾಣಗಳ ಪರಿಶೀಲನೆ ನಡೆಸಿದ್ರು. ನಾಳೆ ಬೆಂಗಳೂರಿಗೆ ಆಗಮಿಸುವ ಪ್ರಧಾನಿ ಮೋದಿ ಅವರು ಮೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಲಿದ್ದಾರೆ.. ಹೀಗಾಗಿ ಕೇಂದ್ರ ಸಚಿವ ವಿ.ಸೋಮಣ್ಣ ಸ್ಥಳ ಪರಿಶೀಲನೆ ನಡೆಸಿದ್ದಾರೆ.