• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Sarangi: ವಿಭಿನ್ನ ಕಥಾಹಂದರ ಹೊಂದಿರುವ “ಸಾರಂಗಿ” ಚಿತ್ರದಲ್ಲಿ ಎರಡೇ ಪಾತ್ರಗಳು .

ಪ್ರತಿಧ್ವನಿ by ಪ್ರತಿಧ್ವನಿ
August 11, 2025
in Top Story, ಅಂಕಣ, ಇದೀಗ, ಕರ್ನಾಟಕ, ವಾಣಿಜ್ಯ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಹೊಸತಂಡದ ಹೊಸಪ್ರಯತ್ನಗಳು ಕನ್ನಡ ಚಿತ್ರರಂಗದಲ್ಲಿ ನಡೆಯುತ್ತಿರುತ್ತದೆ. ಅಂತಹ ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರ “ಸಾರಂಗಿ”. ಈ ಚಿತ್ರದಲ್ಲಿ ಕೇವಲ ಎರಡೇ ಪಾತ್ರಗಳಿರುವುದು ವಿಶೇಷ. ಚಿತ್ರದ ಕುರಿತು ಹೆಚ್ಚಿನ ಮಾಹಿತಿಯನ್ನು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ನೀಡಿದರು.
.
ಮನುಷ್ಯ ದಿನ ಬೆಳಗ್ಗಾದರೆ ಎಲ್ಲರ ಮುಂದೆ ಒಂದೊಂದು ತರಹದ ಮುಖವಾಡ ಧರಿಸಿ ಜೀವನ ನಡೆಸುತ್ತಿರುತ್ತಾನೆ. ಆದರೆ, ಒಂದು ಅನಿರೀಕ್ಷಿತ ಸನ್ನಿವೇಶ ಎದುರಾದಾಗ ನಾವು ನಮ್ಮ ಮೌಲ್ಯಗಳನ್ನು ಉಳಸಿಕೊಳ್ಳುತ್ತೇವಾ? ಅದರಿಂದ ಹೇಗೆ ಪಾರಾಗುತ್ತೇವೆ ಎಂಬುದೆ ಚಿತ್ರದ ಕಥಾಸಾರಾಂಶ.

ADVERTISEMENT

ಜೆ.ಆಚಾರ್ ಈ ಚಿತ್ರದ ನಿರ್ದೇಶಕರು. ಅವರೆ ಚಿತ್ರಕ್ಕೆ ಕಥೆ ಬರೆದಿದ್ದಾರೆ. ಮಿಸ್ಟಿಕ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರವಿದು. ಕೇವಲ ಎರಡೇ ಪಾತ್ರಗಳು ಈ ಚಿತ್ರದಲ್ಲಿದೆ. ನಾನು ಹಾಗೂ ಶ್ವೇತ ಅರಕೆರೆ ಈ ಪಾತ್ರಗಳಲ್ಲಿ ಅಭಿನಯಿಸಿದ್ದೇವೆ‌. ನಾನು ಮೂಲತಃ ರಂಗಭೂಮಿ ಕಲಾವಿದ. ಯು.ಎಸ್ ನಲ್ಲಿ ಥಿಯೇಟರ್ ನಡೆಸುತ್ತಿದ್ದೆ. ಈಗ ಬೆಂಗಳೂರಿನಲ್ಲಿ ವಾಸವಿದ್ದೇನೆ. ಇನ್ನೂ, “ಸಾರಂಗಿ” ಅಂದರೆ ಒಂದು ಬೆಟ್ಟದ ಹೆಸರು. ಬೆಟ್ಟದ ಸುತ್ತ ಏನೆಲ್ಲಾ ನಡೆಯುತ್ತದೆ ಎಂಬುದನ್ನು ನಿರ್ದೇಶಕರು ಇದರಲ್ಲಿ ತೋರಿಸಿದ್ದಾರೆ. ತೇಜೇಶ್ ಅವರು ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಆಗಸ್ಟ್ ನಲ್ಲಿ ಮೊದಲು ಯು.ಎಸ್ ನಲ್ಲಿ, ಅಕ್ಟೋಬರ್ ವೇಳೆಗೆ ಕರ್ನಾಟಕದಲ್ಲಿ ನಮ್ಮ ಚಿತ್ರ ಬಿಡುಗಡೆಯಾಗಲಿದೆ ಎಂದು ನಾಯಕ ಹಾಗೂ ಕಾರ್ಯಕಾರಿ ನಿರ್ಮಾಪಕ ಕಾರ್ತಿಕ್ ಚಂದರ್ ತಿಳಿಸಿದರು.

ನಾನು ಮೂಲತಃ ಮಂಗಳೂರಿನವಳು. ರಂಗಭೂಮಿ ಕಲಾವಿದೆ‌‌. ಜೊತೆಗೆ ಭರತನಾಟ್ಯ ಕಲಾವಿದೆ. ಈ ಚಿತ್ರದ ಕಥೆ ಹಾಗೂ ನನ್ನ ಪಾತ್ರ ಎರಡು ಕೂಡ ಚೆನ್ನಾಗಿದೆ ಎಂದರು ನಾಯಕಿ ಶ್ವೇತ ಅರಕೆರೆ‌.

ನಾನು ಬೆಂಗಳೂರಿನವನು. ಉದ್ಯಮಿ‌. ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು. ಚಿತ್ರ ನಿರ್ಮಾಣಕ್ಕೆ ಮುಂದಾದೆ ಎಂದು ನಿರ್ಮಾಪಕ ತೇಜೇಶ್ ಹೇಳಿದರು.

ಛಾಯಾಗ್ರಾಹಕ ನವಿ ನಂಜಪ್ಪ, ಸೌಂಡ್ ಡಿಸೈನರ್ ಸ್ಯಾಮ್ ಕಪ್ಪರ್, ಸಹ ನಿರ್ದೇಶಕ ದುಶ್ಯಂತ್ ರೈ ಹಾಗೂ ಸಹ ಛಾಯಾಗ್ರಾಹಕ ಪ್ರಶಾಂತ್ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Tags: KannadaKarnatakasandalwoodSarangi Kannada CinemaShwetha Arakere
Previous Post

ಮೆಟ್ರೋ ಯೋಜನೆಗೆ ರಾಜ್ಯ ಸರ್ಕಾರ ಶೇ. 87.37 ರಷ್ಟು ಹಣ ನೀಡುತ್ತಿದೆ: ಸಿ.ಎಂ.ಸಿದ್ದರಾಮಯ್ಯ

Next Post

Bandipura: ಫೋಟೋ ಹುಚ್ಚಿನಿಂದ ಆನೆ ದಾಳಿಗೆ ಒಳಗಾದ ಪ್ರಯಾಣಿಕ – ಸಾವಿನ ದವಡೆಯಿಂದ ಪಾರು

Related Posts

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ
ಸಿನಿಮಾ

ಸರ್ಜಾ–ದರ್ಶನ್ ಕುಟುಂಬಗಳ ನಡುವೆ ಬಿರುಕು? ಧ್ರುವ ಸರ್ಜಾ ಸ್ಪಷ್ಟನೆಗೆ ತೆರೆಬಿದ್ದ ವದಂತಿಗಳು

by ಪ್ರತಿಧ್ವನಿ
April 25, 2026
0

ಕನ್ನಡ ಚಿತ್ರರಂಗದ ಎರಡು ಪ್ರಮುಖ ಕುಟುಂಬಗಳಾದ ದರ್ಶನ್ ತೂಗುದೀಪ ಮತ್ತು ಅರ್ಜುನ್ ಸರ್ಜಾ ಅವರ ಕುಟುಂಬಗಳ ನಡುವೆ ವೈಮನಸ್ಸು ಉಂಟಾಗಿದೆ ಎಂಬ ಸುದ್ದಿ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ...

Read moreDetails
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
ಸಂವಿಧಾನ ಸಮಾನತೆ ಮತ್ತು ಮಹಿಳಾ ಮೀಸಲಾತಿ

ಸಂವಿಧಾನ ಸಮಾನತೆ ಮತ್ತು ಮಹಿಳಾ ಮೀಸಲಾತಿ

April 25, 2026
ಹಣ ಕಡಿತಕ್ಕೂ ಮುನ್ನ ಎಚ್ಚರಿಕೆ ಕಡ್ಡಾಯ: ಆಟೋ-ಡೆಬಿಟ್ ನಿಯಮದಲ್ಲಿ ಆರ್‌ಬಿಐ ದೊಡ್ಡ ಬದಲಾವಣೆ

ಹಣ ಕಡಿತಕ್ಕೂ ಮುನ್ನ ಎಚ್ಚರಿಕೆ ಕಡ್ಡಾಯ: ಆಟೋ-ಡೆಬಿಟ್ ನಿಯಮದಲ್ಲಿ ಆರ್‌ಬಿಐ ದೊಡ್ಡ ಬದಲಾವಣೆ

April 25, 2026
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
Next Post

Bandipura: ಫೋಟೋ ಹುಚ್ಚಿನಿಂದ ಆನೆ ದಾಳಿಗೆ ಒಳಗಾದ ಪ್ರಯಾಣಿಕ - ಸಾವಿನ ದವಡೆಯಿಂದ ಪಾರು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada