• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಾಲ್ಯವಿವಾಹ ತಡೆಗಟ್ಟಲು ಸರ್ಕಾರಿದಂದ ಕಠಿಣ ಕ್ರಮ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಪ್ರತಿಧ್ವನಿ by ಪ್ರತಿಧ್ವನಿ
August 13, 2025
in Top Story, ಕರ್ನಾಟಕ, ರಾಜಕೀಯ, ಶೋಧ
0
ಬಾಲ್ಯವಿವಾಹ ತಡೆಗಟ್ಟಲು ಸರ್ಕಾರಿದಂದ ಕಠಿಣ ಕ್ರಮ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Share on WhatsAppShare on FacebookShare on Telegram

ಮಹಿಳೆಯರ ರಕ್ಷಣೆಗೆ ಬರಲಿದೆ ಅಕ್ಕಾ ಪಡೆ

ADVERTISEMENT
  • ಚಿಕ್ಕನಾಯಕನಹಳ್ಳಿ ಶಾಸಕ ಸುರೇಶ್ ಬಾಬು ಪ್ರಶ್ನೆಗೆ ಸಚಿವರ ಉತ್ತರ

ವಿಧಾನಸೌಧ (ವಿಧಾನಸಭೆ): ಬಾಲ್ಯವಿವಾಹ ಸಾಮಾಜಿಕ ಪೀಡುಗಾಗಿದ್ದು, ಇದನ್ನು ಬೇರುಮಟ್ಟದಿಂದ ಕಿತ್ತೊಗೆಯಬೇಕು. ಬಾಲ್ಯವಿವಾಹ ತಡೆಗಟ್ಟಲು ಸರ್ಕಾರ ಸರ್ವಸನ್ನದ್ಧವಾಗಿದ್ದು, ಇದಕ್ಕೆ ಎಲ್ಲರ ಸಹಕಾರವೂ ಅಗತ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಮಳೆಗಾಲದ ಅಧಿವೇಶನದ ಮೂರನೇ ದಿನವಾದ ಬುಧವಾರ ಚಿಕ್ಕನಾಯಕನಹಳ್ಳಿ ಕ್ಷೇತ್ರದ ಶಾಸಕ ಸುರೇಶ್ ಬಾಬು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೆಲವು ಸಮುದಾಯ ಮತ್ತು ಪಂಗಡಗಳಲ್ಲಿ ಆಚರಣೆಯಲ್ಲಿರುವ ಸಾಮಾಜಿಕ ಪದ್ಧತಿಗಳಿಂದಾಗಿ ಬಾಲ್ಯವಿವಾಹಗಳು ನಡೆಯುತ್ತಿದ್ದು, ಇದರಿಂದಾಗಿ ಬಾಲಗರ್ಭಿಣಿಯರ ಸಂಖ್ಯೆ ಹೆಬ್ಬಾಗುತ್ತಿದೆ, ಬಾಲ್ಯ ವಿವಾಹಗಳ ಸಂಖ್ಯೆ ಹೆಬ್ಬಾಗುತ್ತಿರುವುದರಿಂದ ಬಾಲಗರ್ಭಿಣಿಯರ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಸಚಿವರು ಉತ್ತರಿಸಿದರು.

ಬಾಲ್ಯವಿವಾಹಗಳನ್ನು ತಡೆಗಟ್ಟಲು ಸರ್ಕಾರ ಈಗಾಗಲೇ ಕಾಯ್ದೆಯನ್ನು ಜಾರಿಗೆ ತಂದಿದೆ. ನಮ್ಮ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವ್ಯಾಪ್ತಿಯಲ್ಲಿ ಮಕ್ಕಳ ರಕ್ಷಣಾ ಸಮಿತಿ (ಸಿಡಬ್ಲ್ಯುಸಿ) ಕಾರ್ಯನಿರ್ವಹಿಸುತ್ತಿದ್ದು, ಬೆಂಗಳೂರಿನಲ್ಲಿ 4 ಕೇಂದ್ರಗಳು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ತಲಾ ಒಂದು ಸಿಡಬ್ಲ್ಯುಸಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದರು.

ಬಾಲ್ಯ ವಿವಾಹ ತಡೆಗಟ್ಟುವ ಸಲುವಾಗಿ ಸೋಷಿಯಲ್ ಮೀಡಿಯಾಗಳಿಗೆ ಕಡಿವಾಣ ಹಾಕಬೇಕು, ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಗೃಹ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಕಂದಾಯ ಇಲಾಖೆ, ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡ ಇಲಾಖೆಗಳು ಜಂಟಿಯಾಗಿ ಕಾರ್ಯನಿರ್ವಹಿಸಲಿವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

KN Rajanna Resignation : ರಾಹುಲ್‌ ಗಾಂಧಿ ಕೆಣಕಿ ಕೈ ಸುಟ್ಟುಕೊಂಡ ರಾಜಣ್ಣ… #pratidhvani

ಮಕ್ಕಳ ಸುರಕ್ಷತೆಗಾಗಿ ಮಕ್ಕಳ ಸಹಾಯವಾಣಿ 1098 ಸಂಖ್ಯೆಯೂ ದಿನ 24 ಗಂಟೆಯೂ ಕಾರ್ಯನಿರ್ವಹಿಸುತ್ತಿದೆ. ಸಂಕಷ್ಟದಲ್ಲಿರುವ ಮಗುವಿನ ಬಗ್ಗೆ ಯಾವುದೇ ಸಮಯದಲ್ಲಿ ಕರೆ ಬಂದರೂ ತಕ್ಷಣ ಮಗುವನ್ನು ರಕ್ಷಿಸಲು ಸಂಬಂಧಿಸಿದ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗುತ್ತಾರೆ ಎಂದು ಸಚಿವರು ಮಾಹಿತಿ ನೀಡಿದರು.

ಗ್ರಾಮ ಪಂಚಾಯಿತಿ ಮಟ್ಟದಿಂದ ಜಿಲ್ಲಾ ಮಟ್ಟದವರೆಗೂ ಮಹಿಳೆಯರು ಹಾಗೂ ಮಕ್ಕಳ ಸುರಕ್ಷತೆಗಾಗಿ ಮಹಿಳೆಯರ ಮತ್ತು ಮಕ್ಕಳ ಹಕ್ಕುಗಳ ಕಾವಲು ಸಮಿತಿಯನ್ನು ರಚಿಸಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಮಹಿಳೆಯರ ರಕ್ಷಣೆಗೆ ಬರಲಿದೆ ಅಕ್ಕಾ ಪಡೆ

ಶಾಲಾ ಕಾಲೇಜು ವಿದ್ಯಾರ್ಥಿನಿಯರು ಹಾಗೂ ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ಮಹಿಳಾ ಪೊಲೀಸ್ ಒಳಗೊಂಡ ಅಕ್ಕಾ ಪಡೆ ಶೀಘ್ರವೇ ಜಾರಿಗೆ ಬರಲಿದೆ ಎಂದು ಸಚಿವರು ಉತ್ತರಿಸಿದರು.

ಈಗಾಗಲೇ ಬೀದರ್ ಜಿಲ್ಲೆಯಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಅಗಸ್ಟ್ 15 ರಿಂದ ಬೆಳಗಾವಿ, ಮೈಸೂರು ಹಾಗೂ ಮಂಗಳೂರಿನಲ್ಲಿ ಪ್ರಾಯೋಗಿಕವಾಗಿ ಅಕ್ಕಾ ಪಡೆ ಆರಂಭಿಸಲಾಗುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

Tags: BJPchaild marregeChild Development SchemeCongress Partyಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ವಿಧಾನಸೌಧದಲ್ಲಿ ಪ್ರತಿಧ್ವನಿಸಿದ ಧರ್ಮಸ್ಥಳ ಪ್ರಕರಣ – ಸರ್ಕಾರಕ್ಕೆ ಜೆ.ಡಿ.ಎಸ್ ಶಾಸಕ ಎ.ಮಂಜು ಎಚ್ಚರಿಕೆ

Next Post

ರಾಜ್ಯಾದ್ಯಂತ ಸಿಡಿದೆದ್ದ ಧರ್ಮಸ್ಥಳ ಭಕ್ತರು – ಅಪಪ್ರಚಾರದ ವಿರುದ್ಧ ಶುರುವಾಯ್ತು ಉಗ್ರ ಹೋರಾಟ ! 

Related Posts

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು
Top Story

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

by ಪ್ರತಿಧ್ವನಿ
April 30, 2026
0

ಬೆಂಗಳೂರು : ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ...

Read moreDetails
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
Next Post
ರಾಜ್ಯಾದ್ಯಂತ ಸಿಡಿದೆದ್ದ ಧರ್ಮಸ್ಥಳ ಭಕ್ತರು – ಅಪಪ್ರಚಾರದ ವಿರುದ್ಧ ಶುರುವಾಯ್ತು ಉಗ್ರ ಹೋರಾಟ ! 

ರಾಜ್ಯಾದ್ಯಂತ ಸಿಡಿದೆದ್ದ ಧರ್ಮಸ್ಥಳ ಭಕ್ತರು - ಅಪಪ್ರಚಾರದ ವಿರುದ್ಧ ಶುರುವಾಯ್ತು ಉಗ್ರ ಹೋರಾಟ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada