ರಾಹುಲ್ ಗಾಂಧಿ (Rahul gandhi) ಮತಗಳುವು (Vote rigging) ಆರೋಪಕ್ಕೆ ಸಂಬಂಧಪಟ್ಟಂತೆ ವ್ಯತಿರಿಕ್ತ ಹೇಳಿಕೆ ನೀಡಿದ ಕಾರಣ ಹೈಕಮಾಂಡ್ ಕೆಂಗಣ್ಣಿಗೆ ರಾಜಣ್ಣ (KN Rajanna) ಗುರಿಯಾಗಿದ್ದಾರೆ. ರಾಜ್ಯ ಸಚಿವ ಸಂಪುಟದಿಂದ ಕಾಂಗ್ರೆಸ್ ಹಿರಿಯ ನಾಯಕ ಕೆ.ಎನ್ ರಾಜಣ್ಣ ಅವರನ್ನು ವಜಾ ಮಾಡಿದ ವಿಚಾರಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ನಲ್ಲಿ ಸಂಚಲನ ಸೃಷ್ಟಿ ಮಾಡಿದೆ.

ಇನ್ನು ಹೀಗೆ ರಾಜಣ್ಣರನ್ನು ವಜಾ ಮಾಡಿದ್ದಕ್ಕೆ ಅವರ ಬೆಂಬಲಿಗರು ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಸಿಡಿದೆದ್ದಿದ್ದಾರೆ. ಇಂದೂ ಕೂಡ ತುಮಕೂರಿನಲ್ಲಿ ಕೆ.ಎನ್ ರಾಜಣ್ಣ ಪರ ಬೆಂಬಲಿಗರು ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದಾರೆ. ತುಮಕೂರಿನಲ್ಲಿ ರಸ್ತೆಯಲ್ಲಿ ಅರೆಬೆತ್ತಲೆ ಮಲಗಿ ರಾಜಣ್ಣ ಬೆಂಬಲಿಗರು ತೀವ್ರ ಆಕ್ರೋಷ ವ್ಯಕ್ತಪಡಿಸಿದ್ದಾರೆ.ರಾಜಣ್ಣ ವಿರುದ್ಧದ ಕ್ರಮವನ್ನು ಖಂಡಿಸಿ ವಾಲ್ಮೀಕಿ ಸಮುದಾಯದ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ಈ ಕೂಡಲೇ ರಾಜಣ್ಣ ಅವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಬೇಕು, ಅವರನ್ನು ವಜಾಗೊಳಿಸಿರುವ ಆದೇಶವನ್ನು ಹಿಂಪಡೆಯಬೇಕು. ಇಲ್ಲವಾದಲ್ಲಿ ಪ್ರತಿಭಟನೆ ಇನ್ನಷ್ಟು ತೀವ್ರಗೊಳಿಸುವ ಎಚ್ಚರಿಕೆ ನೀಡಿದ್ದು, ಇಡೀ ವಾಲ್ಮೀಕಿ ಸಮುದಾಯ ಸಿಡಿದೇಳಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.










