• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

DK Shivakumar: ಕಳಸಾ ಬಂಡೂರಿ ಯೋಜನೆ ಮೂಲಕ ನಮ್ಮ ಪಾಲಿನ ನೀರು ಬಳಸಲು ರಾಜ್ಯಕ್ಕೆ ಸಂಪೂರ್ಣ ಹಕ್ಕಿದೆ..!!

ಪ್ರತಿಧ್ವನಿ by ಪ್ರತಿಧ್ವನಿ
August 19, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ನಾವೆಲ್ಲರೂ ಒಟ್ಟಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕೋಣ, ನಾನು ಅಧಿಕಾರಕ್ಕೆ ಬಂದ ನಂತರ ಯೋಜನೆಗೆ ಟೆಂಡರ್ ಕರೆದಿದ್ದೇನೆ, ಕಾನೂನು ಅಂಶಗಳ ಪರಿಶೀಲನೆ ನಡೆಸುತ್ತಿದ್ದೇವೆ, ಅಗತ್ಯ ಬಿದ್ದರೆ ಸುಪ್ರೀಂ ಕೋರ್ಟ್ ನಲ್ಲಿ ಹಾಕಿರುವ ಅರ್ಜಿ ಹಿಂಪಡೆಯಲು ಸಿದ್ಧ

ADVERTISEMENT

“ಕಳಸಾ ಬಂಡೂರಿ ಯೋಜನೆ ಮೂಲಕ ನಮ್ಮ ಪಾಲಿನ ನೀರನ್ನು ಬಳಸಲು ರಾಜ್ಯಕ್ಕೆ ಸಂಪೂರ್ಣ ಹಕ್ಕಿದೆ. ಈ ವಿಚಾರವಾಗಿ ನಾವೆಲ್ಲರೂ ಒಟ್ಟಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕೋಣ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

SR Vishwanath | Byrathi Suresh : ಬೀಗರುಗಳ ಮುಖಾಮುಖಿ! | ಸಾಮರ್ಥ್ಯದ ಚರ್ಚೆ..! #pratidhvani

ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ಕೋನರೆಡ್ಡಿ ಅವರು ಮಹದಾಯಿ ಯೋಜನೆ ವಿಚಾರವಾಗಿ ಗೋವಾ ಸಿಎಂ ಅಲ್ಲಿನ ವಿಧಾನಸಭೆಯಲ್ಲಿ ನೀಡಿರುವ ಹೇಳಿಕೆ ಬಗ್ಗೆ ಪ್ರಶ್ನಿಸಿದರು, ಇದಕ್ಕೆ ಪ್ರತಿಕ್ರಿಯೆ ನೀಡಿದ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, “ಇಡೀ ರಾಜ್ಯದ ಜನ ಪಕ್ಷಬೇಧ ಮರೆತು ಈ ವಿಚಾರವಾಗಿ ಹೋರಾಟ ಮಾಡಿದ್ದಾರೆ. ನ್ಯಾಯಾಲಯದಲ್ಲಿ ಇದರ ತೀರ್ಪು ಬಂದಿದ್ದು, ನಮ್ಮ ರಾಜ್ಯಕ್ಕೆ ಅಗತ್ಯ ಪಾಲಿನ ನೀರು ಹಂಚಿಕೆ ಮಾಡಲಾಗಿದೆ. 2022ರಲ್ಲಿ ಕೇಂದ್ರ ಜಲ ಆಯೋಗ ಕೂಡ ಈ ನೀರನ್ನು ಬಳಸಿಕೊಳ್ಳಲು ಅನುಮತಿ ನೀಡಿತು. ಹುಬ್ಬಳ್ಳಿ ಧಾರವಾಡದಲ್ಲಿ ಶಾಸಕರುಗಳು ಸೇರಿ ವಿಜಯೋತ್ಸವವನ್ನು ಆಚರಿಸಿದರು” ಎಂದರು.

“ಈ ಮಧ್ಯೆ ಗೋವಾದ ಅಧಿಕಾರಿ ಈ ಯೋಜನೆ ಪ್ರಶ್ನಿಸಿ ನಮ್ಮ ಸರ್ಕಾರಕ್ಕೆ ಶೋಕಾಸ್ ನೋಟೀಸ್ ನೀಡಿದ್ದಾರೆ. ಅವರು ನಮ್ಮ ರಾಜ್ಯಕ್ಕೆ ಹೇಗೆ ನೋಟೀಸ್ ನೀಡಲು ಸಾಧ್ಯ? ಕೆಲವು ವಿಚಾರದಲ್ಲಿ ಕೇಂದ್ರ ಸರ್ಕಾರ ನಮಗೆ ನೋಟೀಸ್ ನೀಡಬಹುದು. ನಮ್ಮ ರಾಜ್ಯದ ಅಧಿಕಾರಿ ಬೇರೆ ರಾಜ್ಯಕ್ಕೆ ನೋಟೀಸ್ ನೀಡಲು ಸಾಧ್ಯವೇ? ನಾವು ಆ ನೋಟೀಸ್ ಗೆ ಹೆಚ್ಚು ಮಾನ್ಯತೆ ನೀಡದೇ ಯೋಜನೆ ಮುಂದುವರಿಸಬೇಕಿತ್ತು. ಆದರೆ ಆಗ ನಮ್ಮ ರಾಜ್ಯದವರು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಅಂದು ನಾನು ಅಧಿಕಾರದಲ್ಲಿ ಇದ್ದಿದ್ದರೆ, ಆ ನೋಟೀಸ್ ಕೊಡಲು ನೀನು ಯಾರು ಎಂದು ಪ್ರಶ್ನೆ ಮಾಡುತ್ತಿದ್ದೆ” ಎಂದರು.

“ನಾನು ನಾಲ್ಕು ಬಾರಿ ಕೇಂದ್ರ ಜಲ ಶಕ್ತಿ ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿದ್ದು, ಈ ವಿಚಾರವಾಗಿ ಚರ್ಚೆ ಮಾಡಿದ್ದೇನೆ. ಅವರಿಗೆ ಯಾವ ರಾಜಕೀಯ ಒತ್ತಡ ಇದೆಯೋ ಗೊತ್ತಿಲ್ಲ. ಇನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರು ಮೂರು ಬಾರಿ ಭೇಟಿ ಮಾಡಿ ಮನವಿ ಮಾಡಿದ್ದಾರೆ. ಈ ತಿಂಗಳು ಮತ್ತೆ ದೆಹಲಿಗೆ ಬಂದು ಭೇಟಿ ಮಾಡುವಂತೆ ದಿನಾಂಕ ನೀಡಿದ್ದಾರೆ. ಕಳಸಾ ಬಂಡೂರಿ ವಿಚಾರದಲ್ಲಿ ಕರ್ನಾಟಕ ರಾಜ್ಯಕ್ಕೆ ಮೀಸಲಾಗಿರುವ ಪ್ರತಿಯೊಂದು ಹನಿ ನೀರನ್ನು ಬಳಸಲು ಎಲ್ಲಾ ಹಕ್ಕು ಇದೆ. ನಾನು ಇಲಾಖೆ ಅಧಿಕಾರ ವಹಿಸಿಕೊಂಡ ಬಳಿಕ ಟೆಂಡರ್ ಕರೆದು ಗುತ್ತಿಗೆಯನ್ನು ಅಂತಿಮಗೊಳಿಸಿದ್ದೇನೆ. ಕಾನೂನು ವಿಚಾರಗಳನ್ನು ಸ್ವಲ್ಪ ಅಧ್ಯಯನ ಮಾಡುತ್ತಿದ್ದು, ಈ ವಿಚಾರದಲ್ಲಿ ಕಾನೂನು ತೊಡಕು ಇದ್ದರೆ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿರುವ ಅರ್ಜಿಯನ್ನು ಹಿಂಪಡೆದು ನಾವು ಯೋಜನೆ ಆರಂಭಿಸಬಹುದು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಈ ವಿಚಾರವಾಗಿ ಅಡ್ವೊಕೇಟ್ ಜನರಲ್ ಜೊತೆ ಚರ್ಚೆ ಮಾಡುತ್ತಿದ್ದೇನೆ” ಎಂದು ವಿವರಿಸಿದರು.

Lawyer jagadish :ಸದನದಲ್ಲಿ ನಿಮ್ಮ ಬಗ್ಗೆ ಶಾಸಕ ಮಾತಾಡಿದ್ದು ಸರಿನಾ..? #pratidhvani #lawyerjagadish #mla

“ಇದು ನಮ್ಮ ರಾಜ್ಯದ ಹಿತದ ವಿಚಾರ. ಇದು ಅನಗತ್ಯವಾಗಿ ವಿಳಂಬವಾದರೆ ನೀರು ಸುಮ್ಮನೆ ಹರಿದು ಹೋಗುತ್ತಿರುತ್ತದೆ. ನಾವೆಲ್ಲರೂ ಈ ವಿಚಾರದಲ್ಲಿ ಒಗ್ಗಟ್ಟಿನ ಹೋರಾಟ ಮಾಡಬೇಕು. ನಾನು ದಿನಾಂಕ ನಿಗದಿ ಮಾಡುತ್ತೇನೆ ಎಲ್ಲರೂ ಹೋಗಿ ಈ ಯೋಜನೆ ಜಾರಿಗೆ ಆಗ್ರಹ ಮಾಡೋಣ. ನಾನು ಈ ವಿಚಾರವಾಗಿ ಪ್ರಧಾನಮಂತ್ರಿಗಳ ಮುಂದೆಯೂ ಪ್ರಸ್ತಾಪ ಮಾಡಿದ್ದೇನೆ. ನಾವು ನಮ್ಮ ಪ್ರಯತ್ನ ಮಾಡುತ್ತಿದ್ದೇವೆ. ನೀವು ಒತ್ತಡ ಹಾಕಿ. ಈ ಯೋಜನೆ ಜಾರಿಯಾದರೆ ಕೇವಲ ಒಂದೇ ವರ್ಷದಲ್ಲಿ ಫಲಿತಾಂಶ ಕಾಣಲಿದೆ” ಎಂದು ತಿಳಿಸಿದರು.

ನ್ಯಾಯಾಲಯದಲ್ಲಿ ಇದು ಬಗೆಹರಿಯುವುದಿಲ್ಲ

ಈ ವೇಳೆ ಬೆಲ್ಲದ್ ಅವರು ಮಾತನಾಡಿ, ನಾವು ಒತ್ತಡ ಹಾಕುವುದಿಲ್ಲ, ನೀವು ಕೋರ್ಟ್ ನಲ್ಲಿ ತೀರ್ಮಾನ ಮಾಡಿಸಿ ಎಂದು ಹೇಳಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, “ನ್ಯಾಯಾಲಯದಲ್ಲಿ ಈ ವಿಚಾರ ಬಗೆಹರಿಯಲು ಸಾಧ್ಯವೇ ಇಲ್ಲ. ನ್ಯಾಯಾಲಯದ ಮೆಟ್ಟಿಲೇರಿದರೆ ಅದು ಎಲ್ಲೆಲ್ಲೋ ಹೋಗುತ್ತದೆ. ಗೋವಾ ಅಧಿಕಾರಿ ನಮ್ಮ ರಾಜ್ಯಕ್ಕೆ ನೋಟೀಸ್ ನೀಡಲು ಹೇಗೆ ಸಾಧ್ಯ? ಬೇರೆ ಪಕ್ಷದಲ್ಲಿರುವ ನಿಮಗೆ ನಾನು ನೋಟೀಸ್ ನೀಡಲು ಸಾಧ್ಯವೇ? ಅಥವಾ ನೀವು ನನಗೆ ನೋಟೀಸ್ ನೀಡಲು ಸಾಧ್ಯವೇ?” ಎಂದು ಪ್ರಶ್ನಿಸಿದರು. ಈ ವೇಳೆ ಬೆಲ್ಲದ್ ಅವರು ಉಪಮುಖ್ಯಮಂತ್ರಿಗಳ ನಿಲುವು ಸರಿಯಾಗಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರದಿಂದ ಯೋಜನೆಗೆ ಆರ್ಥಿಕ ನೆರವು ಕೊಡಿಸಿ

ಶಾಸಕ ಎಂ.ಆರ್ ಪಾಟೀಲ್ ಅವರು ಕುಂದಗೋಳ ತಾಲೂಕಿನ ಬೆಣ್ಣೆಹಳ್ಳದಿಂದ ಆಗುತ್ತಿರುವ ಪ್ರವಾಹ ತಡೆಯಲು ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ಕೇಳಿದಾಗ, “ಈ ಬೆಣ್ಣೆಹಳ್ಳ ಪ್ರದೇಶವನ್ನು ನಾನೇ ಖುದ್ದಾಗಿ ನೋಡಿದ್ದೇನೆ. ನಮ್ಮ ಶಾಸಕರಾದ ಕೋನರೆಡ್ಡಿ ಸೇರಿದಂತೆ ಅನೇಕ ಶಾಸಕರು ನನ್ನ ಹಾಗೂ ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರಿದರು. ನಾವು ಈ ವಿಚಾರ ಗಮನದಲ್ಲಿಟ್ಟುಕೊಂಡು ಈ ವರ್ಷ ರೂ.200 ಕೋಟಿ ಅಂದಾಜು ವೆಚ್ಚದ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಇದಲ್ಲದೇ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದೇನೆ. ನಾವು ರೂ‌.1610 ಕೋಟಿ ಮೊತ್ತದ ಯೋಜನೆ ರೂಪಿಸಿ ಕೇಂದ್ರ ಸರ್ಕಾರಕ್ಕೆ ಎಐಬಿಪಿ ಯೋಜನೆಯಡಿ ಕಳುಹಿಸಿಕೊಟ್ಟಿದ್ದೇವೆ. ಕೇಂದ್ರ ಸಚಿವರು ಕೂಡ ಇದನ್ನು ಕಳುಹಿಸಿಕೊಡಿ ಎಂದಿದ್ದರು. ಹೀಗಾಗಿ ನಾನು ಬಿಜೆಪಿ ಶಾಸಕರಾದ ಸಿ.ಸಿ.ಪಾಟೀಲ್, ಅರವಿಂದ ಬೆಲ್ಲದ್ ಅವರಿಗೆ ಹೇಳುವುದೆಂದರೆ ನೀವೆಲ್ಲರೂ ಸೇರಿ ಒತ್ತಡ ಹಾಕಿ. ನಿಮ್ಮ ಜೊತೆಗೆ ನಾನು ಕೂಡ ಬರುತ್ತೇನೆ. ಈ ಯೋಜನೆಯಾದರೆ ಇದಕ್ಕೆ ಮುಕ್ತಿ ಸಿಗುತ್ತದೆ. ಇದರ ಹೊರತಾಗಿ ಸಣ್ಣ ಪುಟ್ಟ ಯೋಜನೆ ಮಾಡಿದರೆ ಇದರಿಂದ ಪರಿಹಾರ ಸಿಗುವುದಿಲ್ಲ. ಕೇಂದ್ರ ಸರ್ಕಾರದಿಂದ ಆರ್ಥಿಕ ನೆರವು ಸಿಕ್ಕರೆ ಈ ಯೋಜನೆ ಜಾರಿ ಮಾಡಿ ಸಮಸ್ಯೆಗೆ ಸೂಕ್ತ ಪರಿಹಾರ ಕಲ್ಪಿಸಬಹುದು” ಎಂದು ತಿಳಿಸಿದರು.

ಶಾಸಕರಾದ ಎ.ಆರ್ ಕೃಷ್ಣಮೂರ್ತಿ ಅವರು ಕಬಿನಿ ಬಲದಂಡೆ ನಾಲೆಯ ಸರಪಳಿ ಅಭಿವೃದ್ಧಿ ಬಗ್ಗೆ ಕೇಳಿದಾಗ, ಜಲಸಂಪನ್ಮೂಲ ಸಚಿವರಾದ ಡಿ.ಕೆ. ಶಿವಕುಮಾರ್ ಅವರು ಉತ್ತರಿಸಿದರು.

“ಬಹಳ ವರ್ಷಗಳಿಂದ ಈ ಕೆಲಸ ಆಗಬೇಕೆಂಬ ಬೇಡಿಕೆ ಇರುವ ಬಗ್ಗೆ ನನಗೆ ಅರಿವಿದೆ. 180 ಕಿ.ಮೀ ಉದ್ದದ ಈ ನಾಲೆ ಅಭಿವೃದ್ಧಿಗೆ ಈಗಾಗಲೇ ಡಿಪಿಆರ್ ಸಿದ್ಧಪಡಿಸಲು ಸೂಚಿಸಲಾಗಿದೆ. 24-1-2025ರಂದು ಮಂಡಳಿಯಲ್ಲಿ ಈ ವಿಚಾರ ಪ್ರಸ್ತಾಪಿಸಿ ಈ ಯೋಜನೆ ಅಂದಾಜು ವೆಚ್ಚ ತೀರ್ಮಾನಿಸಲು ಸೂಚನೆ ನೀಡಲಾಗಿದೆ. ತಾಂತ್ರಿಕ ವರದಿ ಬಂದ ನಂತರ ನಾವು ಈ ಯೋಜನೆ ಕೈಗೆತ್ತಿಕೊಳ್ಳುತ್ತೇವೆ. ನಾನು ಹಾಗೂ ಮುಖ್ಯಮಂತ್ರಿಗಳು ಈಗಾಗಲೇ ಚರ್ಚೆ ಮಾಡಿ ಕಬಿನಿ ಮೇಲ್ದಂಡೆ ಅಭಿವೃದ್ಧಿಗೆ ಈಗಾಗಲೇ ಎರಡು ಕಾಮಗಾರಿ ಕೈಗೆತ್ತಿಕೊಂಡಿದ್ದು 120 ಕೋಟಿ ಅನುದಾನ ನೀಡಿದ್ದೇವೆ” ಎಂದು ತಿಳಿಸಿದರು.

ಶಾಸಕ ವಿಠಲ್ ದೊಂಡಿಬಾ ಅವರು ಭೀಮಾ ನದಿಯಿಂದ 8 ಕೆರೆಗಳಿಗೆ ನೀರು ಹರಿಸುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿ.ಕೆ. ಶಿವಕುಮಾರ್ ಅವರು, “ಭೀಮಾ ನದಿಯಿಂದ 8 ಕೆರೆಗಳಿಗೆ ನೀರು ಹರಿಸುವ ಬಗ್ಗೆ ಸದಸ್ಯರು ಬೇಡಿಕೆ ಇಟ್ಟಿದ್ದಾರೆ. ಇನ್ನು ಇಂಚಗೆರೆ ಮತ್ತು ತಿಡಗುಂದಿ ಶಾಖಾ ಕಾಲುವೆಯಿಂದ ನೀರು ಹರಿಸಲು ಮನವಿ ಮಾಡಿದ್ದು, 2025-26ನೇ ಸಾಲಿನ ನಿರ್ವಹಣೆಗೆ 2 ಕೋಟಿ ಅನುದಾನಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಇದಕ್ಕಾಗಿ ಟೆಂಡರ್ ಕರೆದು, ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡ ನಂತರ ಈ ಎಂಟು ಕೆರೆಗಳಿಗೆ ನೀರು ಹರಿಸಲು ಕ್ರಮ ಕೈಗೊಳ್ಳಲಾಗುವುದು. ಅವರು ತಮ್ಮ ಕ್ಷೇತ್ರಕ್ಕೆ ಆಹ್ವಾನ ನೀಡಿದ್ದಾರೆ. ನಾನು ಅವರ ಕ್ಷೇತ್ರಕ್ಕೆ ಹೋಗಿ ಅವರ ಕೆಲಸಗಳನ್ನು ನೋಡಿ, ಯಾವ ರೀತಿ ಸಹಾಯ ಮಾಡಬೇಕೋ ಮಾಡೋಣ” ಎಂದರು.

ಶಾಸಕ ಬಸನಗೌಡ ದದ್ದಲ್ ಅವರು ನಾರಾಯಣಪುರ ಬಲದಂಡೆ ಕಾಲುವೆ ಸಂಪರ್ಕ ಹಾಗೂ 800 ಮೀ. ಉದ್ದದ ಅಕ್ವಾಡೆಕ್ ಕಾಮಗಾರಿ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, “ಈಗಾಗಲೇ ನೀರು ಹಂಚಿಕೆಗೂ ಮುನ್ನವೇ ಕೆಲಸ ಪ್ರಾರಂಭಿಸಿದ್ದಾರೆ ಎಂದು ಆಕ್ಷೇಪ ಮಾಡುತ್ತಿದ್ದಾರೆ. ಮೊದಲು ನೀರು ಹಂಚಿಕೆಯಾಗಲಿ ಆನಂತರ ಶಾಸಕರ ಬೇಡಿಕೆ ಪರಿಶೀಲನೆ ಮಾಡಲಾಗುವುದು. ಇನ್ನು ಪರಿಹಾರ ವಿಚಾರ ಹೇಳುವುದಾದರೇ, ಇಲ್ಲಿ ಪರಿಹಾರ ಮೊತ್ತ 1-2 ಲಕ್ಷ ಕೋಟಿ ಬೇಕಾಗುತ್ತದೆ. ಆದರೆ ನನ್ನ ಬಜೆಟ್ ಕೇವಲ 22 ಸಾವಿರ ಕೋಟಿ ಮಾತ್ರ ಇದೆ. ನಾವು ಬೆಳಗಾವಿಯಲ್ಲಿ ಸರ್ವಪಕ್ಷ ಶಾಸಕರ ಜೊತೆ ಚರ್ಚೆ ಮಾಡಿ ದರ ನಿಗದಿ ಮಾಡಲು ತೀರ್ಮಾನಿಸಿದ್ದೇವೆ. ಸಚಿವ ಸಂಪುಟದಲ್ಲೂ ಇದು ಒಂದು ಹಂತಕ್ಕೆ ಬಂದಿದೆ. ಸ್ವಲ್ಪ ತಾಳ್ಮೆಯಿಂದ ಇರಿ” ಎಂದು ತಿಳಿಸಿದರು.

ಶಾಸಕ ಕೆ.ಎಂ. ಉದಯ್ ಅವರು ಬಿಎಂಐಸಿಪಿ ಯೋಜನೆಯಿಂದ ಪುರಸಭೆಗೆ ಯವರಿಗೆ ಆದಾಯ ಬರುತ್ತಿಲ್ಲ, ಸಾರ್ವಜನಿಕರಿಗೆ ಸಾಲ ಸಿಗುತ್ತಿಲ್ಲ ಎಂದು ಕೇಳಿದ ಪ್ರಶ್ನೆಗೆ ಶಿವಕುಮಾರ್ ಅವರು ಉತ್ತರಿಸಿದರು. “ಯೋಜನಾ ಪ್ರಾಧಿಕಾರ ಮಾಡುವಾಗ ಮದ್ದೂರಿನ ಭಾಗ ಬಿಎಂಐಸಿಪಿ ವ್ಯಾಪ್ತಿಗೆ ಸೇರಿದೆ. ಈ ಮಧ್ಯದಲ್ಲಿ ಅವರಿಗೆ ನೆರವಾಗಬೇಕು ಎಂದು ಮದ್ದೂರನ್ನು ಇದರ ವ್ಯಾಪ್ತಿಯಿಂದ ಹೊರತರಲು ಪ್ರಯತ್ನಿಸಿದೆ. ಆದರೆ ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಯೋಜನಾ ಆಯೋಗದ ತೀರ್ಮಾನವನ್ನು ಬದಲಾಯಿಸುವಂತಿಲ್ಲ ಎಂದು ತಿಳಿಸಲಾಗಿದೆ. ಶಾಸಕರು ಆರ್ಥಿಕ ನೆರವು ಕೇಳಿದ್ದು, ಮಂಡ್ಯದಲ್ಲಿ ಇದರ ಕಚೇರಿ ಇದೆ. ಇವರ ಪುರಸಭೆಗೆ ಅಗತ್ಯ ಆದಾಯ ಬರುವಂತೆ ಸಹಕಾರ ನೀಡಲು ಸಿದ್ಧನಿದ್ದೇನೆ. ಸುಪ್ರೀಂ ಕೋರ್ಟಿನ ತ್ರಿಸದಸ್ಯ ಪೀಠದ ತೀರ್ಪಿನಿಂದ ನಾನು ಈ ಯೋಜನೆ ಬದಲಿಸಲು ಸಾಧ್ಯವಾಗುತ್ತಿಲ್ಲ” ಎಂದು ವಿವರಿಸಿದರು.

Tags: DCM DK Shivakumardeputy cm dk shivakumarDK Shivakumardk shivakumar accidentdk shivakumar campdk shivakumar cmdk shivakumar convoydk shivakumar cycledk shivakumar cycle falldk shivakumar cycle ridedk shivakumar cycle slipdk shivakumar cyclingdk shivakumar kodi muttdk shivakumar latestdk shivakumar mandyadk shivakumar newsdk shivakumar next cmdk shivakumar on rcbdk shivakumar sm krishnadk shivakumar speechdk shivakumar today newsdk shivakumar video
Previous Post

DK Shivakumar: ಅಕ್ರಮ ಕಟ್ಟಡಗಳ ನಿರ್ಮಾಣಕ್ಕೆ ನಮ್ಮ ಸರ್ಕಾರ ಅವಕಾಶ ನೀಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

Next Post

2028ಕ್ಕೆ ಗೆದ್ದು ವಿಧಾನಸೌಧದಲ್ಲಿ ವಿಶ್ವನಾಥ್‌ಗೆ ಉತ್ತರ ಕೋಡ್ತೀನಿ ಲಾಯರ್‌..!

Related Posts

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು
ಕರ್ನಾಟಕ

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

by ಪ್ರತಿಧ್ವನಿ
April 28, 2026
0

ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತ ಚರ್ಚೆಗಳು ರಾಜಕೀಯ ವಲಯದಲ್ಲಿ ಗರಿಗೆದರಿರುವ ನಡುವೆಯೇ, ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು,...

Read moreDetails
ಪಕ್ಷ ರಾಜಕಾರಣ ಮತ್ತು ಮಹಿಳಾ ಮೀಸಲಾತಿ

ಪಕ್ಷ ರಾಜಕಾರಣ ಮತ್ತು ಮಹಿಳಾ ಮೀಸಲಾತಿ

April 28, 2026
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

April 28, 2026
ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

April 27, 2026
Next Post

2028ಕ್ಕೆ ಗೆದ್ದು ವಿಧಾನಸೌಧದಲ್ಲಿ ವಿಶ್ವನಾಥ್‌ಗೆ ಉತ್ತರ ಕೋಡ್ತೀನಿ ಲಾಯರ್‌..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada