• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, September 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

RCB Stamped: ಪೊಲೀಸ್ ಆಯುಕ್ತರ ಮನವಿ ಮೇರೆಗೆ ಚಿನ್ನಸ್ವಾಮಿ ಕ್ರೀಡಾಂಗಣದ ಕಾರ್ಯಕ್ರಮಕ್ಕೆ ಹೋದೆ..!!

ಪ್ರತಿಧ್ವನಿ by ಪ್ರತಿಧ್ವನಿ
August 22, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

“ಪೊಲೀಸ್ ಆಯುಕ್ತರು ನನ್ನ ಬಳಿ ಬಂದು ಆರ್ ಸಿಬಿ ತಂಡದವರಿಗೆ 10 ನಿಮಿಷಗಳಲ್ಲಿ ಕಾರ್ಯಕ್ರಮ ಮುಗಿಸುವಂತೆ ಸೂಚನೆ ನೀಡಿ ಎಂದು ಮನವಿ ಮಾಡಿಕೊಂಡ ಕಾರಣಕ್ಕೆ ನಾನು ಆ ಕಾರ್ಯಕ್ರಮಕ್ಕೆ ಹೋಗಿ 10 ನಿಮಿಷಗಳಲ್ಲಿ ಕಾರ್ಯಕ್ರಮ ಮುಗಿಸುವಂತೆ ಸೂಚನೆ ನೀಡಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ADVERTISEMENT

ವಿಧಾನಸಭೆಯಲ್ಲಿ ಆರ್ ಸಿಬಿ ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಉತ್ತರ ನೀಡುವ ವೇಳೆ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಅವರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾರ್ಯಕ್ರಮಕ್ಕೆ ಸರ್ಕಾರ ಅನುಮತಿ ನೀಡಿಲ್ಲವಾದರೆ ಉಪಮುಖ್ಯಮಂತ್ರಿಗಳು ಹೋಗಿದ್ದು ಯಾಕೆ ಎಂದು ಪ್ರಶ್ನೆ ಮಾಡಿದರು. ಇದಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟನೆ ನೀಡಿದರು.

“ನನ್ನನ್ನು ಪದೇ ಪದೆ ನೆನೆಯದಿದ್ದರೆ ನಿಮಗೆ ಸಮಾಧಾನ ಆಗುವುದಿಲ್ಲ. ನಿಮ್ಮ ಪಕ್ಷದವರಿಗೆ ಖುಷಿ ಪಡಿಸಲೂ ಆಗುವುದಿಲ್ಲ. ನಿಮಗೆ ಖುಷಿ ಆಗುವಂತೆ ಉತ್ತರ ಕೊಡಲೂ ಆಗುವುದಿಲ್ಲ ಎಂದು ಛೇಡಿಸಿದರು.

“ಅಂದು ವಿಧಾನಸೌಧದ ಎದುರು ನಡೆದ ಸರ್ಕಾರಿ ಕಾರ್ಯಕ್ರಮಕ್ಕೆ ಬಂದಿದ್ದ ಕೆಎಸ್ ಸಿಎ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಕ್ರೀಡಾಂಗಣಕ್ಕೆ ಹೋಗಲು ಸಾಧ್ಯವಾಗದೇ ಹತಾಶರಾಗಿದ್ದರು. ಇನ್ನು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಕೇವಲ 10 ನಿಮಿಷಗಳಲ್ಲಿ ಮುಗಿಸುವಂತೆ ನೀವೇ ಬಂದು ವ್ಯವಸ್ಥೆ ಮಾಡಬೇಕು ಎಂದು ಪೊಲೀಸ್ ಆಯುಕ್ತರು ನನ್ನ ಬಳಿ ಮನವಿ ಮಾಡಿದರು. ನಾನು ಕಾರ್ಯಕ್ರಮಕ್ಕೆ ಹೋಗಿದ್ದೂ ನಿಜ, ಅಲ್ಲಿ ಇದ್ದಿದ್ದೂ ನಿಜ, ಆರ್ ಸಿಬಿ ಆಟಗಾರರಿಗೆ ಅಭಿನಂದನೆ ಸಲ್ಲಿಸಿದ್ದು ನಿಜ. 10 ನಿಮಿಷಗಳಲ್ಲಿ ಈ ಕಾರ್ಯಕ್ರಮ ಮುಗಿಸುವಂತೆ ಅವರಿಗೆ ಸೂಚನೆ ಕೊಟ್ಟಿದ್ದೂ ನಿಜ. ಇದೇ ಮಾತನ್ನು ನಾನು ಕುನ್ಹಾ ಅವರ ತನಿಖಾ ತಂಡದ ಮುಂದೆ ಹೇಳಿಕೆ ನೀಡಿದ್ದೂ ನಿಜ. ನಾನು ಅಲ್ಲಿಗೆ ಹೋಗಿಲ್ಲ ಎಂದು ಹೇಳುತ್ತಿಲ್ಲ. ಅಲ್ಲಿಗೆ ಹೋಗಲು ನಿಮ್ಮ ಅನುಮತಿಯ ಅಗತ್ಯವೂ ನನಗಿಲ್ಲ. ಪೊಲೀಸರ ಮನವಿ ಮೇಲೆ ನನ್ನ ಜವಾಬ್ದಾರಿಯಿಂದ ನಾನು ಹೋಗಿ ಅವರಿಗೆ ಸೂಚನೆ ನೀಡಿದ್ದೇನೆ. ಕಪ್ ಗೆ ಮುತ್ತು ನೀಡಿದ್ದೇನೆ, ಆಟಗಾರರಿಗೆ ಅಭಿನಂದಿಸಿದ್ದೇನೆ” ಎಂದರು.

Tags: DCM DK Shivakumardeputy cm dk shivakumarDK Shivakumardk shivakumar accidentdk shivakumar campdk shivakumar cmdk shivakumar convoydk shivakumar cycledk shivakumar cycle falldk shivakumar cycle ridedk shivakumar cyclingdk shivakumar kodi muttdk shivakumar latestdk shivakumar mandyadk shivakumar newsdk shivakumar next cmdk shivakumar on rcbdk shivakumar sm krishnadk shivakumar speechdk shivakumar today newsdk shivakumar video
Previous Post

ಎಸ್.ಐ.ಟಿ ಯನ್ನು ವೀರೇಂದ್ರ ಹೆಗ್ಗಡೆಯವರೇ ಸ್ವಾಗತಿಸಿದ್ದಾರೆ – ಬಿಜೆಪಿ ಕೇವಲ ರಾಜಕೀಯ ಹೋರಾಟ : ಸಿಎಂ ಸಿದ್ದರಾಮಯ್ಯ 

Next Post

ಅರವಿಂದ ಬೆಲ್ಲದ್​ಗೆ ಸಿದ್ದರಾಮಯ್ಯ ಸಖತ್ ಕೌಂಟರ್..!

Related Posts

ಮೈಸೂರು ದಸರಾ ಉದ್ಘಾಟಕರ ಹೆಸರು ಘೋಷಣೆ: ಯಾರಿಂದ ಉದ್ಘಾಟನೆ ?
ಕರ್ನಾಟಕ

ಮೈಸೂರು ದಸರಾ ಉದ್ಘಾಟಕರ ಹೆಸರು ಘೋಷಣೆ: ಯಾರಿಂದ ಉದ್ಘಾಟನೆ ?

by ಪ್ರತಿಧ್ವನಿ
September 24, 2026
0

ಈ ಬಾರಿಯ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಯನ್ನು ಕೊಪ್ಪಳ ಗವಿಮಠದ 18ನೇ ಪೀಠಾಧಿಪತಿ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು ನೆರವೇರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ.ನಾಡಹಬ್ಬ...

Read moreDetails
ಎಸ್‌ಐಆರ್ ರದ್ದುಪಡಿಸಿ ಹೊಸದಾಗಿ ಮತದಾರರ ಪಟ್ಟಿ ಸಿದ್ಧಪಡಿಸಿ: ಸಿಇಸಿ ರಾಜೀನಾಮೆಗೆ ಡಿಕೆಶಿ ಆಗ್ರಹ

ಎಸ್‌ಐಆರ್ ರದ್ದುಪಡಿಸಿ ಹೊಸದಾಗಿ ಮತದಾರರ ಪಟ್ಟಿ ಸಿದ್ಧಪಡಿಸಿ: ಸಿಇಸಿ ರಾಜೀನಾಮೆಗೆ ಡಿಕೆಶಿ ಆಗ್ರಹ

September 24, 2026
ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ: ಸೆನ್ಸೆಕ್ಸ್  ಅಂಕ ಪತನ; ಕಾರಣವೇನು‌?

ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ: ಸೆನ್ಸೆಕ್ಸ್  ಅಂಕ ಪತನ; ಕಾರಣವೇನು‌?

September 24, 2026
‘ಭಾರತದಲ್ಲಿ ಎಲ್ಲಾ ಚುನಾವಣೆಗಳೂ ಅಕ್ರಮದಿಂದ ಕೂಡಿವೆ’: ರಾಹುಲ್ ಗಾಂಧಿ ಗಂಭೀರ ಆರೋಪ

‘ಭಾರತದಲ್ಲಿ ಎಲ್ಲಾ ಚುನಾವಣೆಗಳೂ ಅಕ್ರಮದಿಂದ ಕೂಡಿವೆ’: ರಾಹುಲ್ ಗಾಂಧಿ ಗಂಭೀರ ಆರೋಪ

September 24, 2026
ಅಧಿಕ ಉಪ್ಪು, ಸಕ್ಕರೆ, ಕೊಬ್ಬು ಹೊಂದಿರುವ ಪ್ಯಾಕ್ಡ್ ಆಹಾರಗಳಿಗೆ ಕೆಂಪು ಎಚ್ಚರಿಕೆ ಲೇಬಲ್: FSSAI ಮಹತ್ವದ ಪ್ರಸ್ತಾವನೆ

ಅಧಿಕ ಉಪ್ಪು, ಸಕ್ಕರೆ, ಕೊಬ್ಬು ಹೊಂದಿರುವ ಪ್ಯಾಕ್ಡ್ ಆಹಾರಗಳಿಗೆ ಕೆಂಪು ಎಚ್ಚರಿಕೆ ಲೇಬಲ್: FSSAI ಮಹತ್ವದ ಪ್ರಸ್ತಾವನೆ

September 24, 2026
Next Post

ಅರವಿಂದ ಬೆಲ್ಲದ್​ಗೆ ಸಿದ್ದರಾಮಯ್ಯ ಸಖತ್ ಕೌಂಟರ್..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada