• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿ ಎಲ್ ಡಿ ಇ ಸಂಸ್ಥೆಯಿಂದ 65 ಸಂಪುಟಗಳಲ್ಲಿ ದಾಸಸಾಹಿತ್ಯ ಪ್ರಕಟ: ಎಂ ಬಿ ಪಾಟೀಲ

ಪ್ರತಿಧ್ವನಿ by ಪ್ರತಿಧ್ವನಿ
August 31, 2025
in Top Story, ಕರ್ನಾಟಕ, ರಾಜಕೀಯ
0
ಬಿ ಎಲ್ ಡಿ ಇ ಸಂಸ್ಥೆಯಿಂದ 65 ಸಂಪುಟಗಳಲ್ಲಿ ದಾಸಸಾಹಿತ್ಯ ಪ್ರಕಟ: ಎಂ ಬಿ ಪಾಟೀಲ
Share on WhatsAppShare on FacebookShare on Telegram

ಬೆಂಗಳೂರು: ಶ್ರೀಸಾಮಾನ್ಯನ ನುಡಿಗಟ್ಟಿನಲ್ಲಿ ಭಕ್ತಿ ಮತ್ತು ಭಗವಂತ‌ನ ಪಾರಮ್ಯವನ್ನು ಗೇಯತೆಯ ಧ್ವನಿಯಲ್ಲಿ ಸಾರಿದ್ದು ದಾಸಸಾಹಿತ್ಯದ ಹಿರಿಮೆಯಾಗಿದೆ. ಇಂತಹ ದಾಸಸಾಹಿತ್ಯದ 65 ಸಂಪುಟಗಳನ್ನು ತಮ್ಮ‌ ನೇತೃತ್ವದ ಬಿ.ಎಲ್.ಡಿ.ಇ. ಶಿಕ್ಷಣ ಸಂಸ್ಥೆಯ ಫ.ಗು.ಹಳಕಟ್ಟಿ ಸಂಶೋಧನಾ ಕೇಂದ್ರದ ಮೂಲಕ ಪ್ರಕಟಿಸಲಾಗುತ್ತಿದೆ. ಇವುಗಳ ಪೈಕಿ ಈಗಾಗಲೇ ಅರವತ್ತಕ್ಕೂ ಹೆಚ್ಚು ಸಂಪುಟಗಳು ಬಿಡುಗಡೆಗೆ ಸಿದ್ಧವಾಗಿವೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಹೇಳಿದ್ದಾರೆ.

ADVERTISEMENT

ಕಾಗಿನೆಲೆ ಮಹಾಸಂಸ್ಥಾನ ಪೀಠವು ಶನಿವಾರ ಇಲ್ಲಿನ ಕೇತೋಹಳ್ಳಿಯಲ್ಲಿ ಏರ್ಪಡಿಸಿದ್ದ, ಕನಕದಾಸ ಸಾಹಿತ್ಯದ ವೈಚಾರಿಕ ಅನುಸಂಧಾನದ ‘ತಲ್ಲಣಿಸದಿರು ಮನವೇ’ ವಿಚಾರ ಸಂಕಿರಣಕ್ಕೆ ಅವರು ಚಾಲನೆ ನೀಡಿದರು.

H vishwanath : ಬಾನು ಮುಷ್ತಾಕ್ ಬಹಳ ಸಾಧನೆ ಮಾಡಿದ್ದಾರೆ. #pratidhvani #hvishwanath #dasara #prathapsimha

ಕನಕಸಾಸರು ವೈಚಾರಿಕವಾಗಿ ರಾಮಾನುಜಾಚಾರ್ಯರ ಪ್ರಭಾವಕ್ಕೆ ಒಳಗಾಗಿ, ವ್ಯಾಸರಾಯರ ಶಿಷ್ಯರಾಗಿ ಸಾಧನೆ ಮಾಡಿದವ ರಾಗಿದ್ದಾರೆ. ಭಾಷೆಯ ಬಳಕೆಯಲ್ಲಿ ದಾಸಸಾಹಿತ್ಯವು ಹನ್ನೆರಡನೇ ಶತಮಾನದ ವಚನ ಸಾಹಿತ್ಯವನ್ನು ಮೇಲ್ಪಂಕ್ತಿಯಾಗಿ ಇಟ್ಟುಕೊಂಡಿದೆ. ಇದರಿಂದಾಗಿ ಸಾಮಾಜಿಕ ಪರಿವರ್ತನೆ ಸಾಧ್ಯವಾಯಿತು ಎಂದು ಅವರು ಬಣ್ಣಿಸಿದ್ದಾರೆ.

ಕನಕದಾಸರ ಸಾಹಿತ್ಯ ಕುರಿತು ತಾಲ್ಲೂಕು ಮತ್ತು ಜಿಲ್ಲಾ ಮಟ್ಟಗಳಲ್ಲೂ ಕಾರ್ಯಕ್ರಮಗಳು ನಡೆಯಬೇಕು. ಸಾಮಾಜಿಕ ತಾರತಮ್ಯವನ್ನು ಪ್ರಶ್ನಿಸಿದ ಇಂತಹ ಸಾಹಿತ್ಯವನ್ನು ಯುವಜನರು ಗಂಭೀರವಾಗಿ ಅಧ್ಯಯನ ಮಾಡುವಂತಹ ಬೌದ್ಧಿಕ ವಾತಾವರಣ ಸೃಷ್ಟಿಯಾಗಬೇಕು. ಸೇನಾಧಿಕಾರಿಯಾಗಿದ್ದ ಕನಕದಾಸರು ದಾಸಕೂಟಕ್ಕೆ ಬಂದು, ಶ್ರೀಕೃಷ್ಣ ಮತ್ತು ಆದಿಕೇಶವನ ಕಿಂಕರರಾಗಿದ್ದು ಒಂದು ದೊಡ್ಡ ಚಾರಿತ್ರಿಕ ಪಲ್ಲಟವಾಗಿದೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಉತ್ತರ ಕರ್ನಾಟಕವು ಮೂಲತಃ ಭಕ್ತಿಕವಿಗಳ, ಸಂತರ, ಯೋಗಿಗಳ ಮತ್ತು ಅವಧೂತರ ನೆಲವಾಗಿದೆ. ಪಂಪ, ರನ್ನ, ಬಸವಣ್ಣ, ಶಿಶುನಾಳ ಷರೀಫ, ಸಿದ್ಧೇಶ್ವರ ಸ್ವಾಮಿಗಳು, ಬೇಂದ್ರೆ, ಕಲಬುರ್ಗಿ, ಪುರಂದರದಾಸರು ಮತ್ತು ಕನಕದಾಸರು ಹೀಗೆ ಎಲ್ಲರೂ ಉತ್ತರ ಕರ್ನಾಟಕ ಪ್ರದೇಶದವರೇ ಆಗಿದ್ದಾರೆ ಎಂದು ಅವರು ನುಡಿದಿದ್ದಾರೆ.

ಕಾರ್ಯಕ್ರಮದಲ್ಲಿ ಕೊಪ್ಪಳದ ಶ್ರೀ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ, ಕಾಗಿನೆಲೆ ಪೀಠದ ಶ್ರೀ ನಿರಂಜನಾಪುರಿ ಸ್ವಾಮೀಜಿ, ಕೇತೋಹಳ್ಳಿ ಶಾಖಾ ಮಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ, ಕವಿ ಚಂದ್ರಶೇಖರ ಪಾಟೀಲ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್ ಎಂ ರೇವಣ್ಣ, ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಉಪಸ್ಥಿತರಿದ್ದರು.

Tags: BJPCongress Partymbpatilಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕೃಷಿ, ಕೃಷಿಕರ ಸಮಸ್ಯೆಗಳಿಗೆ ಪರಿಹಾರ ನೀಡುವಲ್ಲಿ ಕೃಷಿಮೇಳ ಯಶಸ್ವಿಯಾಗಲಿ

Next Post

ಚಾಮುಂಡಿ ಬೆಟ್ಟ ಹಿಂದೂಗಳ ಸ್ವತ್ತು – ಇದರಲ್ಲಿ ಯಾವುದೇ ಅನುಮಾನವಿಲ್ಲ : ಆರ್.ಅಶೋಕ್ 

Related Posts

ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?
ರಾಜಕೀಯ

ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?

by ಪ್ರತಿಧ್ವನಿ
April 15, 2026
0

ಧಾರವಾಡ ಜಿಲ್ಲೆಯ ರಾಜಕೀಯ ವಲಯವನ್ನು ಕದಡಿದ್ದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಕೊನೆಗೂ ತೀರ್ಪು ಹೊರಬಿದ್ದಿದೆ. ದೀರ್ಘಕಾಲದ ಕಾನೂನು ಹೋರಾಟದ ಬಳಿಕ...

Read moreDetails
ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

April 14, 2026
ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
Next Post
ಚಾಮುಂಡಿ ಬೆಟ್ಟ ಹಿಂದೂಗಳ ಸ್ವತ್ತು – ಇದರಲ್ಲಿ ಯಾವುದೇ ಅನುಮಾನವಿಲ್ಲ : ಆರ್.ಅಶೋಕ್ 

ಚಾಮುಂಡಿ ಬೆಟ್ಟ ಹಿಂದೂಗಳ ಸ್ವತ್ತು - ಇದರಲ್ಲಿ ಯಾವುದೇ ಅನುಮಾನವಿಲ್ಲ : ಆರ್.ಅಶೋಕ್ 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada