• Home
  • About Us
  • ಕರ್ನಾಟಕ
Wednesday, November 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Santosh Lad: ಧಾರವಾಡ ಜಿಲ್ಲೆಯಲ್ಲಿ ಅತಿವೃಷ್ಟಿ ಹಾನಿ ಕುರಿತು ವಿಡಿಯೋ ಕಾನ್ಫರೆನ್ಸ್ ಸಭೆ

ಪ್ರತಿಧ್ವನಿ by ಪ್ರತಿಧ್ವನಿ
September 8, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ
0
Share on WhatsAppShare on FacebookShare on Telegram

ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್ ಲಾಡ್ ‌ಭಾಗಿ, ಪರಿಹಾರ ಬಿಡುಗಡೆಗೆ ತಕ್ಷಣ ಕ್ರಮವಹಿಸಲು ಸೂಚನೆ

ADVERTISEMENT

ಧಾರವಾಡ ಜಿಲ್ಲೆಯಲ್ಲಿ ಅಗಸ್ಟ್ ತಿಂಗಳಲ್ಲಿ ಸುರಿದ ಭಾರಿ ಮಳೆಯಿಂದಾಗಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ಸೇರಿ ಸುಮಾರು 93,496.98 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಜಂಟಿ ಸಮಿತಿ ಮೂಲಕ ಸಮೀಕ್ಷೆ ಮಾಡಿ, ನಿನ್ನೆಯೇ ಅಂತಿಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ದತ್ತಾಂಶಗಳನ್ನು ದಾಖಲಿಸಲು ವೆಬ್‍ಸೈಟ್ ಓಪನ್ ಮಾಡಿ, ಪರಿಹಾರ ಬಿಡುಗಡೆಗೆ ತಕ್ಷಣ ಕ್ರಮವಹಿಸಬೇಕೆಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಹೇಳಿದರು.

ಮುಖ್ಯಮಂತ್ರಿಗಳ ಜೊತೆಗೆ ಧಾರವಾಡ ಜಿಲ್ಲಾಡಳಿತದೊಂದಿಗೆ ವಿಡಿಯೋ ಸಂವಾದದಲ್ಲಿ ಭಾಗವಹಿಸಿ, 2025 ರ ಮುಂಗಾರು ಅವಧಿಯಲ್ಲಿ ಜಿಲ್ಲೆಯಲ್ಲಿ ಉಂಟಾದ ಅತಿವೃಷ್ಠಿಯಿಂದ ಆದ ಹಾನಿಗಳ ಹಾಗೂ ತೆಗೆದುಕೊಂಡ ಕ್ರಮಗಳ ಕುರಿತು ಜರುಗಿದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಮಾತನಾಡಿದರು.

ರಾಜ್ಯದಲ್ಲಿಯೇ ಮೊದಲನೆಯದಾಗಿ ಧಾರವಾಡ ಜಿಲ್ಲಾಡಳಿತವು ಜಿಲ್ಲೆಯ ಎಲ್ಲ ಗ್ರಾಮಗಳಲ್ಲಿ ಕೃಷಿ ಹಾಗೂ ತೋಟಗಾರಿಕಾ ಬೆಳೆಹಾನಿಯನ್ನು ಕಂದಾಯ, ತೋಟಗಾರಿಕೆ, ಕೃಷಿ ಇಲಾಖೆ ಅಧಿಕಾರಿಗಳ ತಂಡದಿಂದ ಜಂಟಿ ಸಮೀಕ್ಷೆಯನ್ನು ಪೂರೈಸಿದೆ. ಅಲ್ಲದೇ ಸಮೀಕ್ಷೆಯ ಅಂತಿಮ ವರದಿಯನ್ನು ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆಯೊಂದಿಗೆ ಧಾರವಾಡ ಜಿಲ್ಲಾಡಳಿತವು ಸಲ್ಲಿಸಿದೆ. ಮಾನ್ಯ ಮುಖ್ಯಮಂತ್ರಿಗಳು ಈ ಕುರಿತು ಪರಿಶೀಲಿಸಿ, ರೈತರಿಗೆ ಅನುಕೂಲವಾಗುವಂತೆ ತಕ್ಷಣ ಪರಿಹಾರ ಬಿಡುಗಡೆ ಮಾಡಲು ಸೂಕ್ತ ಕ್ರಮ ವಹಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ವಿನಂತಿಸಿದರು.

ಧಾರವಾಡ ಜಿಲ್ಲಾಧಿಕಾರಿಗಳು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಗಳನ್ನು ನಿರಂತರವಾಗಿ ಆಯೋಜಿಸುವ ಮೂಲಕ ಜಿಲ್ಲೆಯಲ್ಲಿ ಆಗಿರುವ ಮೂಲಭೂತ ಸೌಕರ್ಯಗಳ ಹಾನಿ ಬಗ್ಗೆ ಪರಿಶೀಲಿಸಿ, ದುರಸ್ತಿಗೆ ಆದೇಶಿಸಿದ್ದಾರೆ. ಈ ಕುರಿತು ಅನುದಾನ ಬಿಡುಗಡೆ ಮಾಡಲು ಸಚಿವರು ಮುಖ್ಯಮಂತ್ರಿಗಳಲ್ಲಿ ಕೋರಿದರು.

ಪೂರ್ವ ಮುಂಗಾರಿನಲ್ಲಿ ಬಿತ್ತನೆಯಾಗಿದ್ದ ಬೆಳೆಗಳ ಫಸಲು ಕೊಯ್ಲಿಗೆ ಬಂದಾಗ ಮತ್ತು ಮುಂಗಾರಿನಲ್ಲಿ ಬಿತ್ತಿದ್ದ ಬೆಳೆಗಳು ಫಸಲು ಬಿಡುವ ಹಂತದಲ್ಲಿದ್ದಾಗ ಜಿಲ್ಲೆಯಲ್ಲಿ ನಿರಂತರವಾಗಿ ಮತ್ತು ವಾಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಮಳೆ ಆಗಿದ್ದರಿಂದ ಹೆಚ್ಚಿನ ಪ್ರಮಾಣದಲ್ಲಿ ಬೆಳೆ ಹಾನಿಯಾಗಿದೆ. ತಾವು ಸಹ ಬೆಳೆ ಹಾನಿ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ, ಪರಿಶೀಲಿಸಿ ರೈತರೊಂದಿಗೆ ಸಂವಾದ ಮಾಡಿದ್ದು, ರೈತರು ಕಷ್ಟದಲ್ಲಿದ್ದಾರೆ. ಅವರಿಗೆ ನಿಯಮಾನುಸಾರ ಆದಷ್ಟು ಬೇಗ ಪರಿಹಾರ ಬಿಡುಗಡೆ ಮಾಡಲು ಮುಖ್ಯಮಂತ್ರಿಗಳಲ್ಲಿ ಸಚಿವ ಲಾಡ್ ಅವರು ವಿನಂತಿಸಿದರು.

ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಮಾತನಾಡಿ, ಜಿಲ್ಲೆಯಲ್ಲಿ ಅತಿವೃಷ್ಠಿಯಿಂದ ಆಗಿರುವ ಬೆಳೆ ಹಾನಿ ಸಮೀಕ್ಷೆಯನ್ನು ಪೂರ್ಣಗೊಳಿಸಿ, ಅಂತಿಮ ವರದಿಯನ್ನು ಈಗಾಗಲೇ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಬೆಳೆ ಹಾನಿ ಮಾಹಿತಿ ದಾಖಲಿಸಲು ವೆಬ್‍ಸೈಟ್ ಓಪನ್ ಮಾಡಿದರೆ, ದತ್ತಾಂಶ ದಾಖಲಿಸುವದನ್ನು ಆದಷ್ಟು ಬೇಗ ಪೂರ್ಣಗೊಳಿಸಲಾಗುವುದು. ತಕ್ಷಣಕ್ಕೆ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳ ಪಿಡಿ ಖಾತೆ ಹಾಗೂ ಜಿಲ್ಲೆಯ ಎಲ್ಲ ತಾಲೂಕಿನ ತಹಶೀಲ್ದಾರರ ಪಿಡಿ ಖಾತೆಯಲ್ಲಿ 2713.05 ಲಕ್ಷ ರೂ.ಗಳ ಅನುದಾನ ಲಭ್ಯವಿದೆ ಎಂದರು.

ವಿಡಿಯೋ ಸಂವಾದದಲ್ಲಿ ಮಹಾನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತ ಡಾ. ರುದ್ರೇಶ ಘಾಳಿ, ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಜಿಲ್ಲಾ ನಗಾರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಅಜೀಜ್ ದೇಸಾಯಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಮಂಜುನಾಥ ಅಂತರವಳ್ಳಿ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಕಾಶಿನಾಥ ಭದ್ರಣ್ಣನವರ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ವಿಜಯಕುಮಾರ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರ ಜಗದೀಶ ಪಾಟೀಲ ಹಾಗೂ ಎಲ್ಲ ತಾಲೂಕಿನ ತಹಶೀಲ್ದಾರರು, ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಶಾಲಾ ಶಿಕ್ಷಣ, ಪಂಚಾಯತ ರಾಜ್ ಇಂಜನೀಯರಿಂಗ್, ಅಗ್ನಿಶಾಮಕ, ಅಂಕಿ-ಸಂಖ್ಯೆ ಇಲಾಖೆ ಸೇರಿದಂತೆ ಇತರ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

Tags: congress mla santhosh ladlabor minister santhosh ladMinister Santhosh Ladsanthosh ladsanthosh lad about modisanthosh lad about pm modisanthosh lad angry onsanthosh lad latest newssanthosh lad latest statementsanthosh lad newssanthosh lad news todaysanthosh lad on bjpsanthosh lad questioned modisanthosh lad speechsanthosh lad statementsanthosh lad today newssanthosh lad vs narendra modiSantosh Ladsantosh lad agesantosh lad mlasantosh lad news
Previous Post

ಮಸೀದಿ ಮುಂದೆ ಪೂರ್ವ ನಿಯೋಜಿತ ಕೃತ್ಯ ಇದು – ನಿಖಿಲ್‌ ಕುಮಾರಸ್ವಾಮಿ

Next Post

DK Suresh: ಪಕ್ಷದ ಬಲವರ್ದನೆಗೆ ‘ಸಂಘಟನ್ ಶ್ರೀ ಜನ್ ಅಭಿಯಾನ್ʼ..!!

Related Posts

Top Story

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
November 18, 2025
0

"ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಅನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. (Deputy Chief...

Read moreDetails

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

November 18, 2025

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

November 18, 2025

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

November 18, 2025

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

November 18, 2025
Next Post

DK Suresh: ಪಕ್ಷದ ಬಲವರ್ದನೆಗೆ 'ಸಂಘಟನ್ ಶ್ರೀ ಜನ್ ಅಭಿಯಾನ್ʼ..!!

Recent News

Top Story

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
November 18, 2025
Top Story

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
November 18, 2025
Top Story

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

by ಪ್ರತಿಧ್ವನಿ
November 18, 2025
Top Story

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

by ಪ್ರತಿಧ್ವನಿ
November 18, 2025
Top Story

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
November 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

November 18, 2025

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada