ಮದ್ದೂರಿನಲ್ಲಿ (Maddur) ಗಣೇಶ ಮೇರವಣಿಗೆ (Ganesha procession) ವೇಳೆ ಕಲ್ಲು ತೂರಾಟ ಪ್ರಕರಣ ಸಂಬಂಧಪಟ್ಟಂತೆ ಪೊಲೀಸರು ಗುರುತಿಸಿರುವ ದುಷ್ಕರ್ಮಿಗಳ ಸಂಖ್ಯೆ 29ಕ್ಕೇರಿದೆ. ವ್ಯವಸ್ಥಿತವಾಗಿ ಕೃತ್ಯ ನಡೆಸಿದ ಮತ್ತಷ್ಟು ಆರೋಪಿಗಳನ್ನು ಪೊಲೀಸರು ಈಗಾಗಲೇ ಗುರುತಿಸಿದ್ದಾರೆ. ನಿನ್ನೆಯವರೆಗೆ 26 ಮಂದಿಯನ್ನು ಪತ್ತೆ ಹಚ್ಚಲಾಗಿದೆ. ಇದೀಗ ಮತ್ತೆ 3 ಮೂರು ಮಂದಿ ಈ ದುಷ್ಕೃತ್ಯದಲ್ಲಿ ಭಾಗಿರುವುದು ಬೆಳಕಿಗೆ ಬಂದಿದೆ.

ಈಗಾಗಲೇ ಒಟ್ಟು 22 ಮಂದಿಯನ್ನು ಬಂಧಿಸಲಾಗಿದ್ದು, ಇಂದು ಸಂಜೆಯ ಒಳಗೆ 7 ಮಂದಿಯನ್ನು ಬಂಧಿಸುವ ಸಾಧ್ಯತೆಯಿದೆ. ಇನ್ನು ಇಂದು (ಸೆ.10) ಮದ್ದೂರಿನಲ್ಲಿ ಸಾಮೂಹಿಕ ಗಣಪತಿ ವಿಸರ್ಜನೆ ಮೆರವಣಿಗೆ ಹಿನ್ನೆಲೆಯಲ್ಲಿ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು ಭದ್ರತೆಯ ಪರಿಶೀಲನೆ ನಡೆಸಿದ್ದು ಸಿಬ್ಬಂದಿಗೆ ಅಲರ್ಟ್ ಆಗಿರಲು ಸೂಚನೆ ನೀಡಿದ್ದಾರೆ. ಹೀಗಾಗಿ ರಸ್ತೆಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸೇರಿದಂತೆ ಬಿಜೆಪಿ ನಾಯಕರು ಮದ್ದೂರಿಗೆ ಆಗಮಿಸುತ್ತಿದ್ದಾರೆ. ಹೀಗಾಗಿ ಭದ್ರತೆ ಮತ್ತಷ್ಟು ಹೆಚ್ಚಿಸಲಾಗಿದ್ದು,ಕೊಲ್ಲಿ ಸರ್ಕಲ್‌ನಿಂದ ಶಿಂಷಾ ನದಿ ಕಡೆ ಮೆರವಣಿಗೆ ಸಾಗಲಿದೆ.











