ಗದಗ ಪ್ರವಾಸದಲ್ಲಿರುವ ಸಂಪುಟ ಸಹೋದ್ಯೋಗಿಗಳು ಹಾಗೂ ಮಾನ್ಯ ಇಂಧನ ಸಚಿವರಾದ ಶ್ರೀ ಕೆ.ಜೆ ಜಾರ್ಜ್ ಅವರೊಂದಿಗೆ ಹುಲಕೋಟಿಯ ಕೃಷಿ ವಿಜ್ಞಾನ ಕೇಂದ್ರಕ್ಕೆ ಇಂದು ಭೇಟಿ ನೀಡಲಾಯಿತು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಶ್ರೀ ಡಿ.ಆರ್ ಪಾಟೀಲರು ಸೇರಿದಂತೆ ವಿವಿಧ ಮುಖಂಡರು, ಅಧಿಕಾರಿಗಳು ಉಪಸ್ಥಿತರಿದ್ದರು.

ನಂತರ ಗದಗದ ಹುಬ್ಬಳ್ಳಿ ರಸ್ತೆಯಲ್ಲಿರುವ ಕೆಪಿಟಿಸಿಎಲ್ನಲ್ಲಿ ಇಂದು 470.39 ಲಕ್ಷ ರೂಪಾಯಿ ಮೌಲ್ಯದಲ್ಲಿ ನಿರ್ಮಾಣಗೊಳ್ಳಲಿರುವ ಗದಗ ಜಿಲ್ಲಾ ಕೇಂದ್ರದ ಕಾರ್ಯ ಮತ್ತು ಪಾಲನಾ ವೃತ್ತ ಕಚೇರಿಯ ನೂತನ ಕಟ್ಟಡದ ಅಡಿಗಲ್ಲು ಸಮಾರಂಭದಲ್ಲಿ ಭಾಗವಹಿಸಿದರು.

ಗದಗದ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಮಾನ್ಯ ಇಂಧನ ಸಚಿವರು ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೆ.ಜೆ ಜಾರ್ಜ್ ಅವರ ಅಧ್ಯಕ್ಷತೆಯಲ್ಲಿ ನಡೆದ ಗದಗ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಹಲವು ಮಹತ್ವದ ವಿಚಾರಗಳನ್ನು ಚರ್ಚಿಸಲಾಯಿತು.






