ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಪತ್ರಿಕಾಗೋಷ್ಠಿಯ ನಡೆಸಿದ್ದು, ಮಧುಸೂದನ್ ಅವರ ಸಮಿತಿ ಮತ್ತು ಹಿಂದುಳಿದ ವರ್ಗಗಳ ಆಯೋಗ (Backward Classes Commission) ವೈಜ್ಞಾನಿಕ ಮಾನದಂಡದಲ್ಲಿ ಸಮೀಕ್ಷೆ ನಡೆಸಿ ಡಿಸೆಂಬರ್ ಒಳಗೆ ವರದಿ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ. ಎಲ್ಲಾ ಜಾತಿ-ಧರ್ಮದವರ ದತ್ತಾಂಶ ಅಂಗೈಯಲ್ಲಿದ್ದರೆ ಮಾತ್ರ ಸಾಮಾಜಿಕ ನ್ಯಾಯದ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಲು ಸಾಧ್ಯ ಎಂದು ಸಿಎಂ ಹೇಳಿದ್ದಾರೆ.

ಅಮೆರಿಕದಲ್ಲೂ ಕರಿಯರಿಗೆ affirmative action ಅಂತ ಇದೆ, ನಮ್ಮಲ್ಲಿ ಮೀಸಲಾತಿ ಇದೆನಾವು ಬಡತನ, ನಿರುದ್ಯೋಗ, ಅನಕ್ಷರತೆ ಹೋಗಲಾಡಿದಲು ಸಂವಿಧಾನದ ಕಲಂ 15(), 16(5) ಅಡಿಯಲ್ಲಿ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಬೇಕಿದೆ.ಹೊಸದಾಗಿ 7 ಕೋಟಿ ಜನರ ಸಾಮಾಜಿಕ, ಶೈಕ್ಷಣಿಕ ಸ್ಥಿತಿ ಗತಿ ಅರಿಯಲು ಈ ಸಮೀಕ್ಷೆ ನಡೆಸುತ್ತಿದ್ದೇವೆ. ಹೀಗಾಗಿ 22 ಸೆಪ್ಟೆಂಬರ್ 2025 ಅಕ್ಟೋಬರ್ 7 ರವರೊಳಗೆ ಸಮೀಕ್ಷೆ ಮುಗಿಸಲು ತೀರ್ಮಾನಿಸಿದ್ದಾರೆ. 175000 ಸರ್ಕಾರಿ ಶಾಲಾ ಶಿಕ್ಷಕರುಗಳನ್ನು ವಿಶೇಷ ಭತ್ಯೆ ನೀಡಿ ಸಮೀಕ್ಷೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದೇವೆ. 325 ಕೋಟಿ ವಿಶೇಷ ಭತ್ಯೆ ಆಗಲಿದೆ. ಸದ್ಯ 425 ಕೋಟಿ ಹಣ ಕೊಡುವುದಾಗಿ ಹೇಳಿದ್ದೇವೆ. ಹೆಚ್ಚಿನ ಹಣದ ಅಗತ್ಯಬಿದ್ದರೆ ಕೊಡ್ತೀವಿ ಎಂದಿದ್ದಾರೆ.

ಇನ್ನು ಮತಾಂತರಗೊಂಡವರು ಅಥವಾ ಜಾತಿ ಗೊಂದಲ ಇದ್ದದ್ದನ್ನು ಆಯೋಗದ ತಜ್ಞರ ತಂಡ ವಿಶ್ಲೇಷಣೆ ಮಾಡಿ ತೀರ್ಮಾನಿಸುತ್ತಾರೆ. ರಾಜ್ಯದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯ ಸೆಪ್ಟಂಬರ್ 22ರಿಂದ ಅಕ್ಟೋಬರ್ 7ರವರೆಗೆ ನಡೆಯಲಿದೆ ಎಂದಿದ್ದಾರೆ.












