
ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆಯಿಂದ ಉಂಟಾದ ನಷ್ಟವನ್ನು ವಸೂಲಿ ಮಾಡಲು ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದೆ. ಅಕ್ರಮ ಗಣಿಗಾರಿಕೆ ಮತ್ತು ಅಪರಾಧದಿಂದ ಉತ್ಪತ್ತಿಯಾದ ಆಸ್ತಿಯನ್ನು ವಶಪಡಿಸಿಕೊಳ್ಳಲು ಹಾಗೂ ಜಪ್ತಿ ಮಾಡಲು ಸರ್ಕಾರ ಕೈ ನಾಯಕರು ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು.

ಕರ್ನಾಟಕ ರಾಜ್ಯದ ಬಳ್ಳಾರಿ. ತುಮಕೂರು, ಚಿತ್ರದುರ್ಗ ಮತ್ತು ಇನ್ನಿತರ ಭಾಗಗಳಲ್ಲಿ ಅತ್ಯಂತ ಉತ್ಕೃಷ್ಟವಾದ ಕಬ್ಬಿಣದ ಅದಿರು ಲಭ್ಯವಾಗುತ್ತಿರುವುದನ್ನು ಗಮನಿಸಿದ ಕೆಲವು ಗಣಿ ಮಾಲೀಕರು 2000 ಇಸವಿಯಿಂದ ಅಕ್ರಮವಾಗಿ ಗಣಿಗಾರಿಕೆ ಮಾಡಿ ಲೂಟಿ ಮಾಡುತ್ತಿದ್ದರು. ಇದನ್ನು ಗಮನಿಸಿದ ಕಾಂಗ್ರೆಸ್ ಪಕ್ಷದ ನಾಯಕತ್ವವು ವಿಧಾನ ಪರಿಷತ್ತಿನಲ್ಲಿ ಹೋರಾಟ ಮಾಡಿ ಹಗರಣವನ್ನು ನ್ಯಾಯಮೂರ್ತಿ ಶ್ರೀ ಯು.ಎಲ್. ಭಟ್ ಆಯೋಗಕ್ಕೆ ತನಿಖೆ ಮಾಡಲು ಒಪ್ಪಿಸಲಾಗಿತ್ತು. ನ್ಯಾಯಮೂರ್ತಿ ಶ್ರೀ ಯು.ಎಲ್. ಭಟ್‌ರವರ ಆಯೋಗವು ಇದೊಂದು ಅಂತರರಾಜ್ಯ ಮತ್ತು ಅಂತರರಾಷ್ಟ್ರೀಯ ಹಗರಣವಾಗಿರುವುದರಿಂದ ಸಿಬಿಐ ತನಿಖೆಗೆ ವಹಿಸುವುದು ಸೂಕ್ತವೆಂದು ಆದೇಶ ಮಾಡಿತ್ತು. ಆದರೆ ಅದನ್ನು ಅಂದಿನ ರಾಜ್ಯ ಸರ್ಕಾರ ಒಪ್ಪಲಿಲ್ಲ. ಅದನ್ನು ವಿರೋಧಿಸಿ ವಿಧಾನ ಪರಿಷತ್ತಿನಲ್ಲಿ ಮತ್ತೆ ಕಾಂಗ್ರೆಸ್ ಪಕ್ಷದ ನಾಯಕತ್ವ ಮಾಡಿದ ಹೋರಾಟದಿಂದ ಅಂದಿನ ಸರ್ಕಾರ ಸದರಿ ಹಗರಣವನ್ನು ಲೋಕಾಯುಕ್ತ ತನಿಖೆಗೆ ವಹಿಸಲಾಗಿತ್ತು.

ಆ ಮಧ್ಯೆ ಕಾಂಗ್ರೆಸ್ ಪಕ್ಷದಿಂದ ‘ಸತ್ಯ ಶೋಧನಾ ಸಮಿತಿ’ಯನ್ನು ಶ್ರೀ ವಿ.ಎಸ್. ಉಗ್ರಪ್ಪನವರ ನೇತೃತ್ವದಲ್ಲಿ ಶ್ರೀ ಬಸವರಾಜ ರಾಯರೆಡ್ಡಿ, ಶ್ರೀ ಅಮರೇಗೌಡ ಬಯ್ಯಾಮರ, ಶ್ರೀ ವಿ.ಮುನಿಯಪ್ಪ, ಶ್ರೀ ಕೆ. ಶಿವಮೂರ್ತಿ ನಾಯಕ್‌ರವರನ್ನು ಒಳಗೊಂಡ ಸಮಿತಿಯನ್ನು ರಚಿಸಲಾಯಿತು. ಆ ಸಮಿತಿಯು ಅಕ್ರಮ ಗಣಿಗಾರಿಕೆಯ ಪೂರ್ಣ ಮಾಹಿತಿಯನ್ನು ಸಂಗ್ರಹಿಸಿ. ದಿನಾಂಕ: 16-11-2008 ರಂದು ವರದಿ ನೀಡಿ. “ಹತ್ತಾರು ಸಾವಿರ ಕೋಟಿ ಮೌಲ್ಯದ ಕಬ್ಬಿಣದ ಅದಿರನ್ನು ಕೆಲವರು ಲೂಟಿ ಮಾಡಿ ರಾಜ್ಯದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿರುತ್ತಾರೆ. ಆದ್ದರಿಂದ ಅಕ್ರಮ ಗಣಿಗಾರಿಕೆ ವಿಷಯವನ್ನು ಸಿಬಿಐ ತನಿಖೆ ಅಥವಾ ನ್ಯಾಯಾಂಗ ತನಿಖೆಗೆ ಒಳಪಡಿಸಿ ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸಿ ರಾಜ್ಯದ ಸಂಪತ್ತನ್ನು ಉಳಿಸಬೇಕು” ಎಂದು ಸಮಿತಿಯು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಯಿತು.


ವ್ಯಕ್ತಿಗಳು/ಸಂಘ-ಸಂಸ್ಥೆಗಳು, ರಾಜಕಾರಣಿಗಳ ಮತ್ತು ಅಧಿಕಾರಿಗಳ ಸಹಕಾರದಿಂದ ಅಕ್ರಮವಾಗಿ 1.0 ಲಕ್ಷ ಕೋಟಿಗೂ ಅಧಿಕ ಬೆಲೆ ಬಾಳುವ ಕಬ್ಬಿಣದ ಅದಿರನ್ನು ಲೂಟಿ ಮಾಡಿ ರಾಜ್ಯದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿರುತ್ತಾರೆ. ಇದನ್ನು ಭಾರತ ರಾಷ್ಟ್ರೀಯ ಕಾಂಗ್ರೆಸ್ ಸಹಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷ ಎಂದಿಗೂ ಸಹ ಭ್ರಷ್ಟಾಚಾರವನ್ನು ಉತ್ತೇಜಿಸಿಲ್ಲ ಹಾಗೂ ಸಹಕಾರವನ್ನೂ ನೀಡಿರುವುದಿಲ್ಲ. ಭ್ರಷ್ಟಾಚಾರದ ವಿರುದ್ಧ ಹೋರಾಡುವುದೇ ಕಾಂಗ್ರೆಸ್ ಪಕ್ಷದ ಧೈಯವೆಂದು ಪಕ್ಷವು ಭಾವಿಸಿಕೊಂಡು ಬಂದಿರುತ್ತದೆ. ಆ ಕಾರಣದಿಂದ ಶ್ರೀ ರಾಹುಲ್ ಗಾಂಧಿ. ಶ್ರೀ ಮಲ್ಲಿಕಾರ್ಜುನ ಖರ್ಗೆ ಮತ್ತು ಇತರ ಹಿರಿಯ ನಾಯಕರು ಭ್ರಷ್ಟಾಚಾರದ ವಿರುದ್ಧ ರಾಷ್ಟ್ರ ಮಟ್ಟದಲ್ಲಿ ಹೋರಾಟ ಮಾಡುತ್ತಿದ್ದಾರೆ.

ಆದ್ದರಿಂದ ರಾಜ್ಯ ಸರ್ಕಾರ ಶ್ರೀ ಹೆಚ್.ಕೆ. ಪಾಟೀಲ್ ರವರ ನೇತೃತ್ವದ ಉಪ ಸಮಿತಿ ನೀಡಿರುವ ವರದಿ ಆಧಾರದ ಮೇಲೆ ತಪ್ಪಿತಸ್ಥರು ಯಾವುದೇ ಪಕ್ಷದವರಾಗಿರಲಿ, ಯಾವುದೇ ಅಧಿಕಾರಿಗಳಾಗಿರಲಿ ಅವರ ವಿರುದ್ಧ ಕ್ರಮ ಜರಗಿಸುವಂತೆ ಹೇಳಿದರು.

ಕರ್ನಾಟಕ ರಾಜ್ಯದಲ್ಲಿ ಲೆಕ್ಕವಿಲ್ಲದಷ್ಟು ಸಂಖ್ಯೆಯ ಗುತ್ತಿಗೆದಾರರು, ಸಾಗಾಣಿಕೆದಾರರು, ರಫ್ತುದಾರರು, ದಾಸ್ತಾನುದಾರರು, ಖರೀದಿದಾರರು ಮತ್ತು ಇತರ ಮಧ್ಯವರ್ತಿಗಳು ಸೇರಿದಂತೆ ಬಹು ವಹಿವಾಟುಗಳನ್ನು ಒಳಗೊಂಡ ಅಕ್ರಮ ಗಣಿಗಾರಿಕೆ ಚಟುವಟಿಕೆಗಳಿಂದ ಸಂಘಟಿತ ಅಪರಾಧ, ವ್ಯವಸ್ಥಿತ ಒಳಸಂಚು ಮತ್ತು ಅಪರಾಧ ಉತ್ಪತ್ತಿಗಳಿಂದಾದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲು, ಜಪ್ತಿ ಮಾಡಲು, ಮುಟ್ಟುಗೋಲು ಹಾಕಿಕೊಳ್ಳುವುದಕ್ಕೆ ವಸೂಲಿ ಆಯುಕ್ತರೊಬ್ಬರ ನೇಮಕಾತಿಯ ಅವಶ್ಯಕತೆಯನ್ನು ಸರ್ಕಾರ ಮನಗಂಡಿದೆ. ಈ ಅಧಿನಿಯಮವನ್ನು ವಿಧಾನ ಮಂಡಲದ ಉಭಯ ಸದನಗಳಲ್ಲಿ ಮಂಡಿಸಲಾಗಿತ್ತು.
ಆ ಮಧ್ಯೆ ಕಾಂಗ್ರೆಸ್ ಪಕ್ಷದಿಂದ ‘ಸತ್ಯ ಶೋಧನಾ ಸಮಿತಿ’ಯನ್ನು ಶ್ರೀ ವಿ.ಎಸ್. ಉಗ್ರಪ್ಪನವರ ನೇತೃತ್ವದಲ್ಲಿ ಶ್ರೀ ಬಸವರಾಜ ರಾಯರೆಡ್ಡಿ, ಶ್ರೀ ಅಮರೇಗೌಡ ಬಯ್ಯಾಮರ, ಶ್ರೀ ವಿ.ಮುನಿಯಪ್ಪ, ಶ್ರೀ ಕೆ. ಶಿವಮೂರ್ತಿ ನಾಯಕ್‌ರವರನ್ನು ಒಳಗೊಂಡ ಸಮಿತಿಯನ್ನು ರಚಿಸಲಾಯಿತು.








