• Home
  • About Us
  • ಕರ್ನಾಟಕ
Wednesday, November 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Santhosh Lad: ಅಸಂಘಟಿತ ಕಾರ್ಮಿಕರಿಗೆ ಸರ್ಕಾರದಿಂದ ಹಲವು ಯೋಜನೆ: ಸಂತೋಷ್ ಲಾಡ್.

ಪ್ರತಿಧ್ವನಿ by ಪ್ರತಿಧ್ವನಿ
September 18, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ಕೊಡಗು ಜಿಲ್ಲೆಯ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

ADVERTISEMENT

ಕಾರ್ಮಿಕ ಇಲಾಖೆಯಲ್ಲಿ ಅಸಂಘಟಿತ ಕಾರ್ಮಿಕರಿಗೆ ಹಲವು ಯೋಜನೆ ಜಾರಿಗೊಳಿಸಿದ್ದು, ಆ ದಿಸೆಯಲ್ಲಿ ಅಸಂಘಟಿತ ಕಾರ್ಮಿಕರು ಕಾರ್ಮಿಕ ಇಲಾಖೆಯಲ್ಲಿ ಹೆಸರು ನೋಂದಾಯಿಸುವಂತೆ ಕಾರ್ಮಿಕ ಸಚಿವರಾದ ಸಂತೋಷ್.ಎಸ್.ಲಾಡ್ ಅವರು ಕರೆ ನೀಡಿದರು.

ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಕಾರ್ಮಿಕ ಇಲಾಖೆ, ಸಾರಿಗೆ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಇವರ ಸಹಯೋಗದಲ್ಲಿ ನಗರದ ಕ್ರಿಸ್ಟಲ್ ಸಭಾಂಗಣದಲ್ಲಿ ಕೊಡಗು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ಮಂಡಳಿಯ ವಿವಿಧ ಯೋಜನೆಗಳ ಕುರಿತು ಬುಧವಾರ ನಡೆದ ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಸಚಿವರು ಮಾತನಾಡಿದರು.

ಕಾರ್ಮಿಕ ಇಲಾಖೆಯಲ್ಲಿ 26 ರಿಂದ 101 ರೀತಿಯ ಅಸಂಘಟಿತ ಕಾರ್ಮಿಕರಿಗೆ ಸರ್ಕಾರ ಹಲವು ಯೋಜನೆ ಜಾರಿಗೊಳಿಸಿದೆ. ಇವುಗಳನ್ನು ಪಡೆದುಕೊಳ್ಳಲು ಮುಂದಾಗಬೇಕು ಎಂದು ಕೋರಿದರು.

ಸರ್ಕಾರ ಪ್ರಮುಖವಾಗಿ ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆಯನ್ನು ಜಾರಿಗೊಳಿಸಿರುವುದು ಇಡೀ ದೇಶದಲ್ಲಿ ವಿಶೇಷವಾಗಿದೆ. ಸ್ವಿಗ್ಗಿ, ಜೊಮೆಟೋಗಳಂತ ಸಂಸ್ಥೆಯಲ್ಲಿ ಆಹಾರ ಸರಬರಾಜು ಮಾಡುವ ಹಾಗೂ ಇ-ಕಾಮರ್ಸ್ ಸಂಸ್ಥೆಗಳಾದ ಅಮೆಜಾನ್, ಪ್ಲಿಪ್ ಕಾರ್ಡ್, ಪೋರ್ಟಲ್, ಫಾರ್ಮಸಿ, ಬ್ಲಿಂಕಿಟ್, ಬಿಗ್ ಬಾಸ್ಕೆಟ್, ಡೊಮಿನೋಸ್‌ ಮತ್ತಿತರ ಸಂಸ್ಥೆಗಳಲ್ಲಿ ಡೆಲಿವರಿ ವೃತ್ತಿಯಲ್ಲಿ ತೊಡಗಿಸಿಕೊಂಡ ಎಲ್ಲಾ ಅಸಂಘಟಿತರು ಗಿಗ್ ಕಾರ್ಮಿಕರಾಗಿದ್ದಾರೆ ಎಂದು ತಿಳಿಸಿದರು.

ಅಸಂಘಟಿತ ಕಾರ್ಮಿಕರಿಗೆ ಸೂಕ್ತ ಭದ್ರತೆ ಒದಗಿಸುವುದು ಸರ್ಕಾರದ ಉದ್ದೇಶವಾಗಿದೆ. ಜೊತೆಗೆ ನಾಟಕ, ಸಾಂಸ್ಕøತಿಕ ಕಾರ್ಯಕ್ರಮಗಳು, ಜನಪದ ಕಲೆ, ಹೀಗೆ ವಿವಿಧ ರೀತಿಯಲ್ಲಿ ತೊಡಗಿಸಿಕೊಂಡಿರುವ ಅಸಂಘಟಿತ ಕಾರ್ಮಿಕರಿಗೂ ಸೌಲಭ್ಯ ಜಾರಿಗೊಳಿಸಲಾಗಿದೆ ಎಂದು ಸಚಿವರು ವಿವರಿಸಿದರು.

ಹಾಗೆಯೇ ಆಟೋ ರಿಕ್ಷಾ ಚಾಲಕರು ಪೇಯಿಂಟಿಂಗ್ ಮಾಡುವವರು ಸೇರಿದಂತೆ ಹಲವರಿಗೆ ಕಾರ್ಮಿಕ ಕಾಯ್ದೆ ಜಾರಿಗೊಳಿಸಲಾಗಿದ್ದು, ಅಸಂಘಟಿತ ಕಾರ್ಮಿಕರು ಅಪಘಾತದಲ್ಲಿ ಮೃತರಾದಲ್ಲಿ 5 ಲಕ್ಷ ರೂ.ವರೆಗೂ ಪರಿಹಾರ ವಿತರಿಸಲಾಗುತ್ತದೆ ಎಂದು ಕಾರ್ಮಿಕ ಸಚಿವರು ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ 5 ಗ್ಯಾರಂಟಿ ಯೋಜನೆಯನ್ನು ಜಾರಿಗೊಳಿಸಿದ್ದು, ವರ್ಷಕ್ಕೆ 60 ಸಾವಿರ ಕೋಟಿ ರೂ. ಖರ್ಚು ಮಾಡುತ್ತಿದೆ. ಇದರಿಂದ ರಾಜ್ಯದ ಆರ್ಥಿಕ ಬೆಳವಣಿಗೆ ಅಭಿವೃದ್ಧಿಯತ್ತ ಸಾಗುತ್ತಿದೆ. ನಮ್ಮ ಸರ್ಕಾರ ಜನಪರವಾಗಿ ಕೆಲಸ ಮಾಡುತ್ತಿದೆ. ಪ್ರತಿಯೊಬ್ಬ ಬಡವರ ಆರ್ಥಿಕ ಅಭಿವೃದ್ಧಿಗೆ ಹಲವು ಕಾರ್ಯಕ್ರಮ ಜಾರಿಗೊಳಿಸುವ ಮೂಲಕ ಎಲ್ಲರೂ ಉತ್ತಮ ಬದುಕು ನಡೆಸುವತ್ತ ಪ್ರಯತ್ನಿಸಲಾಗುತ್ತಿದೆ. ಯುಪಿಎ ಸರ್ಕಾರ ಇದ್ದ ಅವಧಿಯಲ್ಲಿ ಸಾಲ ಎಷ್ಟು ಇತ್ತು, ಈಗ ಕಳೆದ 11 ವರ್ಷದಲ್ಲಿ ಸಾಲದ ಬಗ್ಗೆ ಅವಲೋಕನ ಮಾಡಬೇಕು ಎಂದರು.

ದೇಶದಲ್ಲಿ ಶೇ.5 ರಷ್ಟು ಮಾತ್ರ ಜಿಡಿಪಿ ಇದೆ ಎಂಬುದನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ರಾಜ್ಯದಲ್ಲಿ 2.2 ಲಕ್ಷ ಆದಾಯವಿದ್ದು, ದೇಶದಲ್ಲಿ 1.5 ಲಕ್ಷ ಕ್ಕಿಂತಲೂ ಕಡಿಮೆ ಆದಾಯ ಇದೆ. ಆದ್ದರಿಂದ ದೇಶದ ಮತ್ತು ರಾಜ್ಯದ ಆರ್ಥಿಕ ಬೆಳವಣಿಗೆ ಬಗ್ಗೆ ವಿಮರ್ಶಿಸಬೇಕು ಎಂದು ಸಲಹೆ ನೀಡಿದರು.

ತೋಟದಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಸೂರು ಕಲ್ಪಿಸುವ ಸಂಬಂಧ ಮುಖ್ಯಮಂತ್ರಿ ಅವರು ಹಾಗೂ ವಸತಿ ಸಚಿವರ ಗಮನಕ್ಕೆ ತರಲಾಗುವುದು ಎಂದು ಸಂತೋಷ್ ಲಾಡ್ ಅವರು ಹೇಳಿದರು.

ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಶಾಸಕರಾದ ಡಾ.ಮಂತರ್ ಗೌಡ. ಗ್ಯಾರಂಟಿ ಯೋಜನಾ ಸಮಿತಿ ರಾಜ್ಯ ಉಪಾಧ್ಯಕ್ಷರಾದ ಮಹರೂಸ್ ಖಾನ್ ಮಾತನಾಡಿದರು.

ಕಾರ್ಮಿಕ ಇಲಾಖೆಯ ಜಂಟಿ ಆಯುಕ್ತರು ಹಾಗೂ ಜಂಟಿ ಕಾರ್ಯದರ್ಶಿಯಾದ ಡಾ.ಎಸ್.ಬಿ.ರವಿಕುಮಾರ್‌, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಪ್ರಮುಖರಾದ ಮುಂಡರಗಿ ನಾಗರಾಜ್, ಶ್ರೀನಿವಾಸ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಜಿಲ್ಲಾ ಕಾರ್ಮಿಕ ಅಧಿಕಾರಿ ಟಿ.ಕಾವೇರಿ, ಹಿರಿಯ ಕಾರ್ಮಿಕ ನಿರೀಕ್ಷಕರಾದ ಎಂ.ಎಂ.ಯತ್ನಟ್ಟಿ, ಎಸ್.ಶಶಿಧರ, ಇತರರು ಇದ್ದರು. ಉತ್ತಪ್ಪ, ಕಾರ್ಮಿಕ ಇಲಾಖೆ ಆಯುಕ್ತರಾದ ಡಾ.ಎನ್.ಗೋಪಾಲಕೃಷ್ಣ ಅವರು ಭಾರತ ಸಂವಿಧಾನ ಪೀಠಿಕೆ ಓದಿದರು.

Tags: labor minister santhosh ladMinister Santhosh Ladsanthosh ladsanthosh lad about modisanthosh lad about pm modisanthosh lad angry onsanthosh lad lashes out at r ashoksanthosh lad latest newssanthosh lad latest statementsanthosh lad newssanthosh lad news todaysanthosh lad on bjpsanthosh lad questioned modisanthosh lad speechsanthosh lad statementsanthosh lad today newssanthosh lad vs narendra modiSantosh Ladsantosh lad agesantosh lad mlasantosh lad news
Previous Post

Narendra Modi: ಪ್ರಧಾನಿ ಮೋದಿ ಜನ್ಮದಿನದಂದು ಯುವ ಕಾಂಗ್ರೆಸ್‌ನಿಂದ ‘ಪಕೋಡಾ’ ಪ್ರತಿಭಟನೆ..

Next Post

ನಿರ್ದೇಶಕ ಶಶಾಂಕ್ ಸಾರಥ್ಯದ”ಬ್ರ್ಯಾಟ್” (BRAT ) ಚಿತ್ರದ ‘ಗಂಗಿ ಗಂಗಿ’… ಹಾಡು ರಿಲೀಸ್.

Related Posts

Top Story

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
November 18, 2025
0

"ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಅನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. (Deputy Chief...

Read moreDetails

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

November 18, 2025

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

November 18, 2025

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

November 18, 2025

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

November 18, 2025
Next Post
ನಿರ್ದೇಶಕ ಶಶಾಂಕ್ ಸಾರಥ್ಯದ”ಬ್ರ್ಯಾಟ್” (BRAT ) ಚಿತ್ರದ ‘ಗಂಗಿ ಗಂಗಿ’… ಹಾಡು ರಿಲೀಸ್.

ನಿರ್ದೇಶಕ ಶಶಾಂಕ್ ಸಾರಥ್ಯದ"ಬ್ರ್ಯಾಟ್" (BRAT ) ಚಿತ್ರದ 'ಗಂಗಿ ಗಂಗಿ'… ಹಾಡು ರಿಲೀಸ್.

Recent News

Top Story

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
November 18, 2025
Top Story

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
November 18, 2025
Top Story

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

by ಪ್ರತಿಧ್ವನಿ
November 18, 2025
Top Story

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

by ಪ್ರತಿಧ್ವನಿ
November 18, 2025
Top Story

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
November 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

November 18, 2025

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada