• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇದು ಜಾತಿಗಣತಿಯಲ್ಲ, ಸಾಮಾಜಿಕ ನ್ಯಾಯ ಒದಗಿಸುವ ಸಮೀಕ್ಷೆ: ಡಿಸಿಎಂ ಡಿ.ಕೆ.ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
September 21, 2025
in Top Story, ಕರ್ನಾಟಕ, ರಾಜಕೀಯ
0
ಇದು ಜಾತಿಗಣತಿಯಲ್ಲ, ಸಾಮಾಜಿಕ ನ್ಯಾಯ ಒದಗಿಸುವ ಸಮೀಕ್ಷೆ: ಡಿಸಿಎಂ ಡಿ.ಕೆ.ಶಿವಕುಮಾರ್
Share on WhatsAppShare on FacebookShare on Telegram

ರಂಭಾಪುರಿ ಶ್ರೀಗಳು ಆತಂಕಪಡುವ ಅಗತ್ಯವಿಲ್ಲ; ಸಮುದಾಯದ ಜನರಲ್ಲಿ ಜಾಗೃತಿ ಮೂಡಿಸಿ

ADVERTISEMENT

ಆನ್ ಲೈನ್ ಮೂಲಕವೂ ಜನರು ಸಮೀಕ್ಷೆಯಲ್ಲಿ ಭಾಗವಹಿಸಬಹುದು

ಮೇಕೆದಾಟು ವಿಚಾರವಾಗಿ ದೆಹಲಿ ಭೇಟಿ

ದೆಹಲಿ, ಸೆ. 21:

“ರಾಜ್ಯ ಸರಕಾರದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮೇಲೆ ಯಾರಿಗೂ ಸಂಶಯ ಬೇಡ. ಇದು ಕೇವಲ ಜಾತಿಗಳ ಗಣತಿಯಲ್ಲ, ಸಾಮಾಜಿಕ ನ್ಯಾಯ ಒದಗಿಸುವ ಸಮೀಕ್ಷೆ. ಜನರಿಗೆ ನೆರವಾಗುವ ಸಮೀಕ್ಷೆ. ಇದರ ಬಗ್ಗೆ ಎಲ್ಲಾ ಸಮುದಾಯದವರು ಎಚ್ಚೆತ್ತುಕೊಂಡು, ಇದರ ಉಪಯೋಗ ಪಡೆಯಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ದೆಹಲಿಯ ಕರ್ನಾಟಕ ಭವನದಲ್ಲಿ ಭಾನುವಾರ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದರು.

Nisha Podcast: : ತಾಯಿ ಬಗ್ಗೆ ಅಚ್ಚರಿ ಹೇಳಿಕೆ ಕೊಟ್ಟ ನಿಶಾ..! #nisha #mother #love #marriage #pratidhvani

“ಜಾತಿಗಣತಿ ವಿಚಾರವಾಗಿ ಕ್ರೈಸ್ತ ಜಾತಿಗಳನ್ನು ಹಿಂದುಳಿದ ವರ್ಗಗಳ ಆಯೋಗ ಕೈಬಿಡಲು ನಿರ್ಧರಿಸಿದೆ. ಈ ಮಧ್ಯೆ ವೀರಶೈವ ಲಿಂಗಾಯತರ ಸಂಖ್ಯೆ ಕಡಿಮೆ ತೋರಿಸುವ ಸಾಧ್ಯತೆ ಇದೆ” ಎಂಬ ರಂಭಾಪುರಿ ಸ್ವಾಮೀಜಿಯವರ ಹೇಳಿಕೆ ಬಗ್ಗೆ ಕೇಳಿದಾಗ, “ಕಳೆದ ಸಮೀಕ್ಷೆ ನಡೆಸಿ 10 ವರ್ಷ ಕಳೆದಿರುವ ಕಾರಣ, ಮರುಸಮೀಕ್ಷೆ ಮಾಡಲಾಗುತ್ತಿದೆ. ಈ ಬಾರಿ ಮಾಹಿತಿ ನೀಡಲು ಎಲ್ಲಾ ಸಮಾಜದವರಿಗೂ ಸಂಪೂರ್ಣ ಅವಕಾಶ ನೀಡಿದ್ದೇವೆ. ಎಲ್ಲಾ ಸಮಾಜದವರು ಈ ಸಮೀಕ್ಷೆ ವಿಚಾರದಲ್ಲಿ ಜಾಗೃತರಾಗಿ, ತಪ್ಪದೇ ಭಾಗವಹಿಸಬೇಕು” ಎಂದರು.

“ಕರ್ನಾಟಕದ 7 ಕೋಟಿ ಕನ್ನಡಿಗರು, ಪ್ರಪಂಚದ ಯಾವುದೇ ದೇಶದಲ್ಲಿರುವ ಕನ್ನಡಿಗರು ಆನ್ಲೈನ್ ಮೂಲಕ ತಮ್ಮ ಮಾಹಿತಿ ಸಲ್ಲಿಸಬಹುದು. ಜೊತೆಗೆ ನೀವು ಆಕ್ಷೇಪ ಸಲ್ಲಿಸಲು ಅವಕಾಶ ಕಲ್ಪಿಸಿದ್ದೇವೆ. ನಿಮ್ಮ ಮಾಹಿತಿಯನ್ನು ನಿಮ್ಮ ಮೊಬೈಲ್ ನಲ್ಲೇ ಪಡೆಯುವ ಅವಕಾಶವಿದೆ. ನೀವು ನಿಮ್ಮ ಕುಟುಂಬದವರ ವಿವರ ಬರೆಸಿ ಎಂದು ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಪಕ್ಷದ ಅಧ್ಯಕ್ಷನಾಗಿ ನಾನು ಎಲ್ಲಾ ಸಮಾಜದವರ ಬಳಿ ಮನವಿ ಮಾಡಿಕೊಳ್ಳುತ್ತೇನೆ” ಎಂದು ಹೇಳಿದರು.

“ಎಲ್ಲರಿಗೂ ನ್ಯಾಯ ಒದಗಿಸಿ ಕೊಡಬೇಕು ಎಂದು ನಮ್ಮ ಸರ್ಕಾರ ಈ ತೀರ್ಮಾನ ಮಾಡಿದೆ. ವೀರಶೈವ ಸಮಾಜಕ್ಕೆ ತೊಂದರೆಯಾಗಲಿದೆ ಎಂದು ರಂಭಾಪುರಿ ಶ್ರೀಗಳು ಆತಂಕಪಡುವ ಅಗತ್ಯವಿಲ್ಲ. ನೀವು ನಿಮ್ಮ ಸಮುದಾಯದ ಜನರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಿ. ಅದೇ ರೀತಿ ಎಲ್ಲರೂ ತಮ್ಮ ತಮ್ಮ ಸಮುದಾಯಗಳಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಬೇಕು” ಎಂದು ಕರೆ ನೀಡಿದರು.

ಹಿಂದೂ ಜಾತಿಗಳ ಜತೆ ಕ್ರೈಸ್ತ ಸಮುದಾಯದ ಹೆಸರು ಸೇರ್ಪಡೆ ಹಿಂಪಡೆದಿರುವ ಬಗ್ಗೆ ಕೇಳಿದಾಗ, “ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಮುಖ್ಯಮಂತ್ರಿಗಳೇ ಸಭೆಯಲ್ಲಿ ಈ ವಿಚಾರ ಪ್ರಸ್ತಾವನೆ ಮಾಡಿದರು. ಈ ಬಗ್ಗೆ ಹಿಂದುಳಿದ ವರ್ಗಗಳ ಆಯೋಗದ ಜೊತೆ ಚರ್ಚೆ ಮಾಡಿ ಗೊಂದಲ ಸರಿಪಡಿಸುವುದಾಗಿ ಅವರು ತಿಳಿಸಿದ್ದಾರೆ. ಈ ಜಾತಿಗಳನ್ನು ಸೇರಿಸಿರುವ ಬಗ್ಗೆ ನೋಡಿದಾಗ ನನಗೂ ಸ್ವಲ್ಪ ಗಾಬರಿಯಾಗಿತ್ತು. ನಾವು ಆಯೋಗದವರನ್ನು ಕರೆಸಿ ಇರುವ ಗೊಂದಲಗಳ ಬಗ್ಗೆ ಗಮನಕ್ಕೆ ತಂದಿದ್ದೇವೆ” ಎಂದು ತಿಳಿಸಿದರು.

ಜಾತಿ ಸಮೀಕ್ಷೆ ಹೆಸರಿನಲ್ಲಿ ಹಿಂದೂ ಸಮಾಜ ಒಡೆಯುವ ಪ್ರಯತ್ನ ಮಾಡಲಾಗುತ್ತಿದೆ ಎಂಬ ಶಾಸಕ ಅಶ್ವಥ್ ನಾರಾಯಣ ಅವರ ಆರೋಪದ ಬಗ್ಗೆ ಕೇಳಿದಾಗ, “ಅಶ್ವಥ್ ನಾರಾಯಣ ಅವರಿಗೆ ಕೇವಲ ರಾಜಕಾರಣ ಬೇಕು. ನಮಗೆ ರಾಜಕಾರಣ ಬೇಡ. ನಮಗೆ ಜನರ ಬದುಕು ಮುಖ್ಯ. ಅದಕ್ಕಾಗಿ ನಾವು ಕಾರ್ಯನಿರ್ವಹಿಸುತ್ತೇವೆ. ಅಶ್ವತ್ ನಾರಾಯಣ ಅವರಿಗೂ ನಾವು ಅವಕಾಶ ಕೊಟ್ಟಿದ್ದೇವೆ. ಅವರು ಈ ಬಗ್ಗೆ ಚೆನ್ನಾಗಿ ಪ್ರಚಾರ ಮಾಡಲಿ, ಜನರಲ್ಲಿ ಜಾಗೃತಿ ಮೂಡಿಸಲಿ” ಎಂದರು.

“ಈ ಸಮೀಕ್ಷೆ ಮಾಡುವವರು ಶಿಕ್ಷಕರು. ಯಾವುದೇ ಶಿಕ್ಷಕರು ಮೋಸ ಮಾಡುವುದಿಲ್ಲ. ಸರ್ಕಾರ ದಾಖಲು ಮಾಡಿಕೊಂಡ ಮಾಹಿತಿ ಎಲ್ಲರ ಮೊಬೈಲ್ ಗೆ ರವಾನೆಯಾಗಲಿದೆ. ಮಾಹಿತಿ ಹೆಚ್ಚುಕಮ್ಮಿಯಾಗಿದ್ದಾರೆ, ಸರಿಪಡಿಸಿಕೊಳ್ಳಬಹುದು. ಬೇಕಾದರೆ ಜಯಪ್ರಕಾಶ್ ಹೆಗಡೆ, ಕಾಂತರಾಜ ಆಯೋಗದ ದಾಖಲೆಗಳ ಮಾಹಿತಿಯನ್ನು ನೀಡುತ್ತೇವೆ. ಅದನ್ನೂ ಪರಿಶೀಲಿಸಬಹುದು” ಎಂದು ತಿರುಗೇಟು ನೀಡಿದರು.

ಸೋನಿಯಾ ಗಾಂಧಿ ಅವರನ್ನು ಖುಷಿ ಪಡಿಸಲು ಹಿಂದೂ ಜಾತಿಗಳ ಜತೆ ಕ್ರೈಸ್ತ ಧರ್ಮ ಸೃಷ್ಟಿಸಲಾಗಿತ್ತು ಎಂಬ ಆರೋಪದ ಬಗ್ಗೆ ಕೇಳಿದಾಗ, “ಆರ್. ಅಶೋಕ್ ಅವರು ತಮ್ಮ ನಾಯಕರnnu ಮೆಚ್ಚಿಸಲು ಈ ರೀತಿ ಮಾತನಾಡುತ್ತಿದ್ದಾರೆ. ಎಂದರು.

ಒಕ್ಕಲಿಗ ಸ್ವಾಮೀಜಿಗಳ ಹಾಗೂ ಮುಖಂಡರ ಸಭೆಯಲ್ಲಿ ನಿಮ್ಮ ಅಭಿಪ್ರಾಯ ಭಿನ್ನವಾಗಿದೆ ಎಂದು ಕುಮಾರಸ್ವಾಮಿ ಅವರೂ ಹೇಳಿದ್ದಾರೆ ಎಂದು ಕೇಳಿದಾಗ, “ಯಾರು ಎಲ್ಲಿ ಏನು ಮಾತನಾಡಿದರೋ ಗೊತ್ತಿಲ್ಲ. ಯಾರೂ ಸಹ ನನ್ನ ಬಳಿ ಮಾತನಾಡಿಲ್ಲ. ಕೇವಲ ಒಕ್ಕಲಿಗ ಸಮುದಾಯದ ಬಗ್ಗೆ ಮಾತ್ರ ಆಲೋಚನೆ ಮಾಡಬೇಡಿ. ಎಲ್ಲಾ ಸಮುದಾಯಗಳನ್ನು ಒಟ್ಟಿಗೆ ತೆಗೆದುಕೊಂಡು ಹೋಗಿ. ಹಿಂದುಳಿದ ವರ್ಗಗಳ ರಕ್ಷಣೆಗೆ ನಾವುಗಳು ನಿಲ್ಲಬೇಕು ಎಂದು ನಮ್ಮ ಸಮುದಾಯದ ಸಭೆಯಲ್ಲಿ ಹೇಳಿದ್ದೇನೆ” ಎಂದರು.

ಕೇವಲ 15 ದಿನಗಳಲ್ಲಿ ಸಮೀಕ್ಷೆ ಮುಗಿಸಲು ಸಾಧ್ಯವೇ? ಸಮೀಕ್ಷೆಯ ದಿನಾಂಕಗಳಿಗೆ ಶಿಕ್ಷಕರ ವಿರೋಧದ ಬಗ್ಗೆ ಕೇಳಿದಾಗ, “ಶಾಲೆಗಳಿಗೆ‌ ದಸರಾ ರಜೆಯಿದೆ. ಇದರ ಬಗ್ಗೆ ಆಯೋಗ ತೀರ್ಮಾನ ಮಾಡುತ್ತದೆ. ಶಿಕ್ಷಕರು ನಿಮ್ಮ (ಮಾಧ್ಯಮ) ಬಳಿ ಬಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆಯೇ? ಇದುವರೆಗೂ ನಮ್ಮ ಮುಂದೆ ಯಾರೂ ಬಂದಿಲ್ಲ. ಯಾರಾದರೂ ಬರೆದು ಕೊಟ್ಟಿದ್ದಾರೆಯೇ? ಇದು ನಿಮ್ಮ ಅಭಿಪ್ರಾಯ” ಎಂದರು.

DK Shivakumar : ಇದು ಜಾತಿ ಗಣತಿ ವಿಚಾರ ಅಲ್ಲಾ ಸಾಮಾಜಿಕ   ಯಾವ ಸಮಾಜನು ಸಂಶಯ ಬೇಡ.! #pratidhvani

ರಾಜ್ಯದ ಹಿತಕ್ಕಾಗಿ ದೆಹಲಿ ಭೇಟಿ

ದೆಹಲಿ ಭೇಟಿಯ ವಿಚಾರ ಕೇಳಿದಾಗ, “ನ್ಯಾಯಾಲಯದಲ್ಲಿ ಮೇಕೆದಾಟು ಯೋಜನೆ ವಿಚಾರಣೆಗೆ ದಿನಾಂಕ ನಿಗದಿಯಾಗಿದ್ದು, ಅಡ್ವೋಕೇಟ್ ಜನರಲ್ ಹಾಗೂ ವಕೀಲರ ಜೊತೆ ಚರ್ಚೆ ಮಾಡಲು ದೆಹಲಿಗೆ ಆಗಮಿಸಿದ್ದೇವೆ. ಸೆ. 23 ಕ್ಕೂ ವಿಚಾರಣೆ ಮುಂದಕ್ಕೆ ಹೋಗಬಹುದು ಎನ್ನುವ ಮಾಹಿತಿ ನನಗಿದೆ. ಆದರೆ ಈ ಸಂದರ್ಭದಲ್ಲಿ ರಾಜ್ಯದ ಪ್ರಾತಿನಿಧ್ಯ ಮುಖ್ಯ ” ಎಂದರು.

ದಸರಾ ಉದ್ಘಾಟನೆಯಲ್ಲಿ ಭಾಗವಹಿಸುವ ಬಗ್ಗೆ ಕೇಳಿದಾಗ, “ಹೌದು ಆದರೆ ಇದು ರಾಜ್ಯದ ವಿಚಾರ ಆಗಿರುವ ಕಾರಣ ಆದ್ಯತೆ ಮೇರೆಗೆ ನಾನು ದೆಹಲಿಗೆ ಬಂದಿರುವೆ” ಎಂದು ತಿಳಿಸಿದರು.

ರಾಜ್ಯಕ್ಕೆ ಉಂಟಾಗುವ ನಷ್ಟ ನೀಡಲಿ

ನೂತನ ಜಿಎಸ್ ಟಿ ಜಾರಿಯ ಬಗ್ಗೆ ಕೇಳಿದಾಗ, “ನಮ್ಮ ರಾಜ್ಯಕ್ಕೆ ಆಗುವ ನಷ್ಟವನ್ನು ಕೇಂದ್ರ ಸರ್ಕಾರ ತುಂಬಿಕೊಡಬೇಕು. ರಾಜ್ಯಕ್ಕೆ ಸೂಕ್ತ ಅನುದಾನ ಬರುತ್ತದೆ ಎಂದು ಸುಮಾರು 1.5 ಲಕ್ಷ‌ ಕೋಟಿ ಮೊತ್ತದ ಕಾಮಾಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಯಾವುದಕ್ಕೂ ಅನ್ಯಾಯವಾಗದಂತೆ ಕೇಂದ್ರ ಸರ್ಕಾರ ನಿಲ್ಲಬೇಕು” ಎಂದು ಹೇಳಿದರು.

DK Shivakumar : ಬೆಂಗಳೂರು ಗುಂಡಿ  ಮುಚ್ಚೋಕೆ  ನಮ್ ಸಿಎಂ ಹೇಳಿದ್ದಾರೆ #pratidhvani #bbmp #siddaramaiah

ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ಕೇಳಿದಾಗ, “ಕಳೆದ 25 ವರ್ಷಗಳಿಂದ ಈ ಸಮಸ್ಯೆ ಇದ್ದೇ ಇದೆ. ಈಗ ನಾವು ಇದರ ಬಗ್ಗೆ ವಿಶೇಷ ಕಾಳಜಿ ವಹಿಸಿದ್ದೇವೆ. ಮುಖ್ಯಮಂತ್ರಿಯವರು 750 ಕೋಟಿ ರೂ. ವಿಶೇಷ ಅನುದಾನ ನೀಡಿದ್ದೇವೆ ಎಂದಿದ್ದಾರೆ. ಅಂತಿಮ ಗಡುವು ನೀಡಿ ಸಮರೋಪಾದಿಯಲ್ಲಿ ಕೆಲಸ ಮಾಡಲಾಗುತ್ತಿದೆ. ದೆಹಲಿಯಲ್ಲಿ ಕೇವಲ 100 ಮೀ. ಐವತ್ತು ಗುಂಡಿಗಳಿವೆ.‌ ದೆಹಲಿ ಸೇರಿದಂತೆ ಎಲ್ಲಾ ಕಡೆಯೂ ರಸ್ತೆಗುಂಡಿಗಳಿವೆ. ಆದರೆ ಬೆಂಗಳೂರಿನ ಬಗ್ಗೆ ಮಾತ್ರ ಸುದ್ದಿ ಮಾಡಲಾಗುತ್ತಿದೆ” ಎಂದರು.

ಆಳಂದ ಕ್ಷೇತ್ರದಲ್ಲಿನ ಮತಗಳ್ಳತನದ ಬಗ್ಗೆ ರಾಹುಲ್ ‌ಗಾಂಧಿಯವರ ಉಲ್ಲೇಖದ ಬಗ್ಗೆ ಕೇಳಿದಾಗ, “ಮತಗಳ್ಳತನ ನಡೆದಿರುವುದು ನಿಜ.‌ ಇದರ ಬಗ್ಗೆ ಇನ್ನಷ್ಟು ವಿಚಾರಗಳನ್ನು ಮುಂದಿನ ದಿನಗಳಲ್ಲಿ ಹಂಚಿಕೊಳ್ಳಲಾಗುವುದು” ಎಂದರು.

Tags: 1931 caste censusbihar caste censusBJPbjp on caste censusCast Censuscaste based censusCaste Censuscaste census 2011caste census 2024caste census biharcaste census congresscaste census debatecaste census in biharcaste census in indiacaste census indiacaste census meaningcaste census newscaste census reportcaste census surveycaste census updatecaste data censusCongress Partyindia caste censusmodi on caste censussc st caste censusupsc caste censuswhat is caste censusಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ತಾಯಿ ಬಗ್ಗೆ ಅಚ್ಚರಿ ಹೇಳಿಕೆ ಕೊಟ್ಟ ನಿಶಾ..!

Next Post

ಸುಂಕದ ಕದನವೂ ಶ್ರಮಜೀವಿಗಳ ಬವಣೆಯೂ

Related Posts

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ
Top Story

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

by ಪ್ರತಿಧ್ವನಿ
April 29, 2026
0

ಕೊಲ್ಕತ್ತಾ ಸೇರಿ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ನಡೆದ ಮತದಾನದಲ್ಲಿ ಭರ್ಜರಿ ಸ್ಪಂದನೆ ಕಂಡುಬಂದಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಅರ್ಗವಾಲ್ ಮಾಹಿತಿ ನೀಡಿದಂತೆ, ಒಟ್ಟು ಮತದಾನದ...

Read moreDetails
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
Next Post
ಸುಂಕದ ಕದನವೂ ಶ್ರಮಜೀವಿಗಳ ಬವಣೆಯೂ

ಸುಂಕದ ಕದನವೂ ಶ್ರಮಜೀವಿಗಳ ಬವಣೆಯೂ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada