• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

CM Siddaramaiah: ಗೋಡಾ ಹೈ-ಮೈದಾನ್ ಹೈ: ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ: ಸಿ.ಎಂ.ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
September 22, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ
0
Share on WhatsAppShare on FacebookShare on Telegram

ನಮ್ಮ ಸಂವಿಧಾನ ಜಾತ್ಯತೀತ, ಧರ್ಮಾತೀತ: ಇದನ್ನೇ ಹೈಕೋರ್ಟ್- ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ: ಸಿ.ಎಂ, ನಾಡ ಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ: ಸಿ.ಎಂ.ಸಿದ್ದರಾಮಯ್ಯ ಸವಾಲು. ಯಾರಿಗೆ ಭಾರತೀಯರು ಎನ್ನುವ ಹೆಮ್ಮೆ ಇರುತ್ತದೋ ಅವರಿಗೆ ಮಾತ್ರ ಸಂವಿಧಾನದ ಬಗ್ಗೆ ಹೆಮ್ಮೆ ಇರುತ್ತದೆ: ಸಿ.ಎಂ

ADVERTISEMENT

ಸಂವಿಧಾನದ ಮೌಲ್ಯಗಳಾದ ಸಹಿಷ್ಣತೆ-ಸಹಬಾಳ್ವೆ ಪಾಲಿಸುವವರು ಮಾತ್ರ ಅಪ್ಪಟ ಭಾರತೀಯರು, ಗುಡಿ-ಚರ್ಚು-ಮಸೀದಿಗಳ ಬಿಟ್ಟು ಹೊರ ಬನ್ನಿ: ನಮ್ಮದು ಸರ್ವ ಜನಾಂಗದ ಶಾಂತಿಯ ತೋಟ: ಕುವೆಂಪು ಮಾತನ್ನು ಉಲ್ಲೇಖಿಸಿ ಚಾಟಿ ಬೀಸಿದ ಸಿಎಂ

ಗೋಡಾ ಹೈ-ಮೈದಾನ್ ಹೈ: ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು ಎಸೆದರು. ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಬಳಿಕ ನಾಡಹಬ್ಬ ಐತಿಹಾಸಿಕ ದಸರಾ ಉದ್ಘಾಟನೆ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ದಸರಾ ಮತ್ತು ನಮ್ಮ ಸಾಂಸ್ಕೃತಿಕ ಹಿರಿಮೆಯ ಪರಿಚಯ ಇಲ್ಲದವರು ಬಾನು ಮುಷ್ತಾಕ್ ಅವರಿಗೆ ವಿರೋಧಿಸಿದ್ದರು. ಇತಿಹಾಸ ತಿರುಚಿ, ಸ್ವಾರ್ಥ ರಾಜಕೀಯ ಮಾಡುವುದು ಅಕ್ಷಮ್ಯ ಅಪರಾಧ. ರಾಜಕಾರಣ ಮಾಡುವುದಿದ್ದರೆ ಚುನಾವಣೆಯಲ್ಲಿ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ ಕೆಳ ಮಟ್ಟದ ರಾಜಕಾರಣ ಮಾಡುವುದು ಕ್ಷುಲ್ಲಕ ಎಂದರು.

ನಾಡಿನ ಬಹುಸಂಖ್ಯಾತ ಸಮುದಾಯ ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟಿಸಿರುವುದನ್ನು ಸ್ವಾಗತಿಸಿದೆ. ಇದು ಹೆಮ್ಮೆಯ ಸಂಗತಿ. ಅಂತಾರಾಷ್ಡ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತರಾದ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟಿಸಿರುವುದು ಸೂಕ್ತವಾಗಿದೆ. ಬಾನು ಮುಷ್ತಾಕ್ ಮುಸ್ಲಿಂ ಮಹಿಳೆ ಎನ್ನುವುದಕ್ಕಿಂತ ಮಾನವೀಯ ಮೌಲ್ಯ ಪಾಲಿಸುವ ಮನುಷ್ಯರು. ನಾವು ಮನುಷ್ಯರು ಪರಸ್ಪರ ಪ್ರೀತಿಯಿಂದ ಬಾಳಬೇಕು. ದ್ವೇಷ ಮನುಷ್ಯತ್ವದ ವಿರೋಧಿ. ಆದ್ದರಿಂದ ದ್ವೇಷವನ್ನು ಆಚರಿಸುವವರು ಮನುಷ್ಯತ್ವದ ವಿರೋಧಿಗಳು ಎಂದರು.

ಸಂವಿಧಾನದ ಮೌಲ್ಯಗಳಾದ ಸಹಿಷ್ಣತೆ-ಸಹಬಾಳ್ವೆ ಪಾಲಿಸುವವರು ಮಾತ್ರ ಅಪ್ಪಟ ಭಾರತೀಯರು. ನಮ್ಮ ಸಂವಿಧಾನ ಜಾತ್ಯತೀತ ಮತ್ತು ಧರ್ಮಾತೀತ. ಇದನ್ನೇ ಹೈಕೋರ್ಟ್- ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಯಾರಿಗೆ ಭಾರತೀಯರು ಎನ್ನುವ ಹೆಮ್ಮೆ ಇರುತ್ತದೋ ಅವರಿಗೆ ಮಾತ್ರ ಸಂವಿಧಾನದ ಬಗ್ಗೆ ಹೆಮ್ಮೆ ಇರುತ್ತದೆ. ನಮಗೆ ನಮ್ಮ ಹಕ್ಕು ಮತ್ತು ಜವಾಬ್ದಾರಿಗಳು ಗೊತ್ತಾಗಬೇಕಾದರೆಸಂವಿಧಾನ ಗೊತ್ತಿರಬೇಕು ಎಂದರು.

ಗುಡಿ-ಚರ್ಚು-ಮಸೀದಿಗಳ ಬಿಟ್ಟು ಹೊರ ಬನ್ನಿ: ನಮ್ಮದು ಸರ್ವ ಜನಾಂಗದ ಶಾಂತಿಯ ತೋಟ: ಕುವೆಂಪು ಮಾತನ್ನು ಉಲ್ಲೇಖಿಸಿ ಚಾಟಿ ಬೀಸಿದ ಸಿಎಂ. ರಾಷ್ಟ್ರಕವಿ ಕುವೆಂಪು ಅವರ ಮಾತನ್ನು ನಾವು ಮರೆಯಬಾರದು. ಗುಡಿ-ಚರ್ಚು-ಮಸೀದಿಗಳ ಬಿಟ್ಟು ಹೊರ ಬನ್ನಿ ಎಂದು ಕರೆ ನೀಡಿದ ಸಿಎಂ, ಕುವೆಂಪು ಅವರ ಆಶಯದ ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿ ರಾಜ್ಯವನ್ನು ಗಟ್ಟಿಗೊಳಿಸಬೇಕು ಎಂದು ಕುವೆಂಪು ಅವರ ಮಾತನ್ನು ಉಲ್ಲೇಖಿಸಿದ ಮುಖ್ಯಮಂತ್ರಿಗಳುಜಾತ್ಯತೀತತೆಯ ವಿರೋಧಿಗಳಿಗೆ ಚಾಟಿ ಬೀಸಿದರು.

ಬಿಜೆಪಿ ಯವರು ಗ್ಯಾರಂಟಿ ಫಲಾನುಭವಿಗಳ್ವಾ: ಸಿ.ಎಂ ಪ್ರಶ್ನೆ

ಸಂವಿಧಾನದ ಆಶಯದಂತೆ ಎಲ್ಲಾ ಜಾತಿ, ಎಲ್ಲಾ ಧರ್ಮದ ಮತ್ತು ಎಲ್ಲಾ ಪಕ್ಷದ ಬಡವರಿಗೆ ನಾವು ಗ್ಯಾರಂಟಿ ಗಳನ್ನು ಜಾರಿ ಮಾಡಿದ್ದೇವೆ. ಬಿಜೆಪಿಯವರು ಗ್ಯಾರಂಟಿಗಳ ಫಲಾನುಭವಿಗಳಲ್ಲವೇ ಎಂದು ಸಿಎಂ ಪ್ರಶ್ನಿಸಿದರು.

ಈ ಗ್ಯಾರಂಟಿಗಳು ನಿಲ್ಲುವುದಿಲ್ಲ. ನಮ್ಮ ಗ್ಯಾರಂಟಿಗಳಿಂದಾಗಿ ನಮ್ಮ ರಾಜ್ಯದ ನಮ್ಮ ಜನಗಳ ತಲಾ ಆದಾಯ ದೇಶದಲ್ಲೇ ನಂಬರ್ ಒನ್ ಆಗಿದೆ. ಈಗ GDP ಯಲ್ಲಿ ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಒಂದು ಕಡೆ ನಮ್ಮ ಗ್ಯಾರಂಟಿಗಳನ್ನು ವಿರೋಧಿಸುವ ಬಿಜೆಪಿಯವರೇ ಮತ್ತೊಂದು ಕಡೆ ನಮ್ಮ ಗ್ಯಾರಂಟಿಗಳನ್ನು ಕದ್ದಿದ್ದಾರೆ ಎಂದರು.

Tags: CM Siddaramaiahcm siddaramaiah celebratation newscm siddaramaiah dasara meetingcm siddaramaiah speech in dasara inaugurationkarnataka cm siddaramaiahkarnataka cm siddaramaiah banu mushtaqkarnataka cm siddaramaiah newssiddaramaiahsiddaramaiah | dasara one india kannadasiddaramaiah angrySiddaramaiah CMsiddaramaiah meetingsiddaramaiah mysuru dasara livesiddaramaiah newssiddaramaiah slams criticssiddaramaiah speechsiddaramaiah today news
Previous Post

ಕಾಂಗ್ರೆಸ್ ಸರಕಾರದ ಬೂಟಾಟಿಕೆ ಮತ್ತು ಪುಂಡಾಟಿಕೆಯ ಸಮೀಕ್ಷೆ: ಛಲವಾದಿ ನಾರಾಯಣಸ್ವಾಮಿ.

Next Post

Tumkur: ತುಮಕೂರಿನ ತಹಶೀಲ್ದಾರ್‌, ಎಸಿ ವಿರುದ್ದ ಸ್ವಯಂ ದೂರು ದಾಖಲಿಸಿಕೊಂಡ ಲೋಕಾಯುಕ್ತ..!!

Related Posts

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?
Top Story

ಮಿತವ್ಯಯಕ್ಕೆ ಮೋದಿ ಹೊಸ ಹೆಜ್ಜೆ; ಪ್ರಧಾನಿ ಬೆಂಗಾವಲು ವಾಹನಗಳ ಸಂಖ್ಯೆ ಇಳಿಕೆ

by ಪ್ರತಿಧ್ವನಿ
May 13, 2026
0

ನವದೆಹಲಿ: ಇಂಧನ ಉಳಿತಾಯ ಮತ್ತು ಮಿತವ್ಯಯ ಕ್ರಮಗಳ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಅಧಿಕೃತ ಬೆಂಗಾವಲು ವಾಹನಗಳ ಸಂಖ್ಯೆಯನ್ನು ಗಣನೀಯವಾಗಿ ಕಡಿತಗೊಳಿಸಿರುವುದು ಇದೀಗ ದೇಶಾದ್ಯಂತ ಚರ್ಚೆಗೆ...

Read moreDetails
ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

May 13, 2026
BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

May 13, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
Next Post

Tumkur: ತುಮಕೂರಿನ ತಹಶೀಲ್ದಾರ್‌, ಎಸಿ ವಿರುದ್ದ ಸ್ವಯಂ ದೂರು ದಾಖಲಿಸಿಕೊಂಡ ಲೋಕಾಯುಕ್ತ..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada