• Home
  • About Us
  • ಕರ್ನಾಟಕ
Wednesday, November 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

S L Bhairappa: ಹಿರಿಯ ಸಾಹಿತಿ ಎಸ್‌ ಎಲ್‌ ಭೈರಪ್ಪ ನಿಧನ! ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟ..!!

ಪ್ರತಿಧ್ವನಿ by ಪ್ರತಿಧ್ವನಿ
September 24, 2025
in Top Story, ಅಂಕಣ, ಇದೀಗ, ಕರ್ನಾಟಕ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

94 ವರ್ಷದ ಹಿರಿಯ ಸಾಹಿತಿ, ಕಾದಂಬರಿಕಾರ ಎಸ್.ಎಲ್. ಭೈರಪ್ಪನವರು ನಿಧನರಾಗಿದ್ದಾರೆ. ಅವರು ವಯೋಸಹಜ ಕಾಯಿಲೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ವಂಶವೃಕ್ಷ, ದಾಟು, ತಂತು ಮುಂತಾದ ಪ್ರಮುಖ ಕಾದಂಬರಿಗಳ ಮೂಲಕ ಕನ್ನಡ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಅಲ್ಲದೆ, ಅವರು 1999 ರಲ್ಲಿ ಕನಕಪುರದಲ್ಲಿ ನಡೆದ 67ನೇ ಅಖಿಲ ಕರ್ನಾಟಕ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

ADVERTISEMENT

ಹಿರಿಯ ಸಾಹಿತಿ, ಕಾದಂಬರಿಕಾರ ಎಸ್‌ಎಲ್‌ ಭೈರಪ್ಪ ಅವರು ನಿಧನರಾಗಿದ್ದಾರೆ. 94 ವರ್ಷದ ಭೈರಪ್ಪ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಬೆಂಗಳೂರಿನ ರಾಜಾಜಿನಗರದ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ನಿಧನದಿಂದ ನಾಡಿನ ಸಾಹಿತ್ಯ ಪ್ರೇಮಿಗಳಿಗೆ ದೊಡ್ಡ ನಷ್ಟವಾಗಿದೆ.

ತಮ್ಮ ಸಾಹಿತ್ಯ ಸೇವೆಗಾಗಿ ಅನೇಕ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಅವರ ಪ್ರಮುಖ ಕಾದಂಬರಿಗಳಾದ ವಂಶವೃಕ್ಷ, ದಾಟು, ತಂತು ಮುಂತಾದವು ಕನ್ನಡ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿವೆ. ಭೈರಪ್ಪನವರು ಕಾದಂಬರಿಗಳ ಜೊತೆಗೆ ಸೌಂದರ್ಯ ಮೀಮಾಂಸೆಯ ಕುರಿತು ಹಲವು ಗ್ರಂಥಗಳನ್ನು ರಚಿಸಿದ್ದಾರೆ. ಅವರು 1999 ರಲ್ಲಿ ಕನಕಪುರದಲ್ಲಿ ನಡೆದ 67ನೇ ಅಖಿಲ ಕರ್ನಾಟಕ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಪ್ರತಿಷ್ಠಿತ ಪದ್ಮಶ್ರೀ, ಪದ್ಮಭೂಷಣ, ಸರಸ್ವತಿ ಸಮ್ಮಾನ್‌ ಪ್ರಶಸ್ತಿಗಳು ಇವರಿಗೆ ಸಂದಿವೆ.

ಭೈರಪ್ಪ ಅವರು ಅವರು 1931 ಆಗಸ್ಟ್ 20 ರಂದು ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣದ ಸಂತೇಶಿವರ ಗ್ರಾಮದಲ್ಲಿ ಜನಿಸಿದ್ದರು. ಎಸ್.ಎಲ್. ಭೈರಪ್ಪನವರು ಲಿಂಗಣ್ಣಯ್ಯ ಮತ್ತು ಗೌರಮ್ಮ ದಂಪತಿಗಳ ಪುತ್ರ. ಅವರು ತಮ್ಮ ಪ್ರಾಥಮಿಕ ವಿದ್ಯಾಭ್ಯಾಸವನ್ನು ಹುಟ್ಟೂರಿನ ಸುತ್ತಮುತ್ತಲಿನ ಶಾಲೆಗಳಲ್ಲಿ ಮುಗಿಸಿದರು. ನಂತರ ಮೈಸೂರಿಗೆ ಬಂದು ಶಾರದಾವಿಲಾಸ ಪ್ರೌಢಶಾಲೆಯಲ್ಲಿ ಓದಿದರು. ಮಹಾರಾಜ ಕಾಲೇಜಿನಲ್ಲಿ ಬಿ.ಎ. ಪದವಿ ಪಡೆದರು. ಮೈಸೂರು ವಿಶ್ವವಿದ್ಯಾನಿಲಯದಿಂದ ಎಂ.ಎ. ಪದವಿಯನ್ನು ಸಹ ಪಡೆದರು.

ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದ ಸಾಹಿತಿ

  • ಭೈರಪ್ಪನವರು ವೃತ್ತಿ ಜೀವನದಲ್ಲಿಯೂ ಹಲವು ಹುದ್ದೆಗಳನ್ನು ನಿರ್ವಹಿಸಿದ್ದಾರೆ.
  • ಹುಬ್ಬಳ್ಳಿಯ ಕಾಡುಸಿದ್ಧೇಶ್ವರ ಕಾಲೇಜಿನಲ್ಲಿ ಅಧ್ಯಾಪಕರು (1958-60)
  • ಗುಜರಾತಿನ ಸರ್ದಾರ್ ಪಟೇಲ್ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕರು (1960-66)
  • ದೆಹಲಿಯ ರಾಷ್ಟ್ರೀಯ ಶಿಕ್ಷಣ ಮತ್ತು ತರಬೇತಿ ಶಿಕ್ಷಣ ಸಂಸ್ಥೆಯಲ್ಲಿ ಉಪಪ್ರಾಧ್ಯಾಪಕರು (1967-1971).
  • ಮೈಸೂರಿನ ಪ್ರಾದೇಶಿಕ ಶಿಕ್ಷಣ ಕಾಲೇಜಿನ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿ 1991ರಲ್ಲಿ ನಿವೃತ್ತಿ

ಭೈರಪ್ಪ ಅವರ ಕಾದಂಬರಿಗಳಿಗೆ ಸಂದ ಪ್ರಮುಖ ಪ್ರಶಸ್ತಿಗಳು

  • “ತಂತು” ಕಾದಂಬರಿಗೆ ಭಾರತೀಯ ಭಾಷಾ ಪರಿಷತ್ತಿನ ಪ್ರಶಸ್ತಿ ಲಭಿಸಿದೆ.
  • “ದಾಟು” ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆತಿದೆ.
  • “ವಂಶವೃಕ್ಷ”, “ಸಾಕ್ಷಿ”, “ದಾಟು” ಕಾದಂಬರಿಗಳಿಗೆ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳು ಲಭಿಸಿವೆ.
  • 1994 ರಲ್ಲಿ ಮಾಸ್ತಿ ಪ್ರಶಸ್ತಿ ಹಾಗೂ 1985 ರಲ್ಲಿ ರಾಜ್ಯ ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ ಸಂದಿದೆ.

ಸರಸ್ವತೀ ಸಮ್ಮಾನ್ ಪ್ರಶಸ್ತಿ ಪಡೆದ ಮೊದಲಿಗರು

1999 ರಲ್ಲಿ ಕನಕಪುರದಲ್ಲಿ ನಡೆದ 67ನೇ ಅಖಿಲ ಕರ್ನಾಟಕ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಸ್ಥಾನದ ಗೌರವ ಅವರಿಗೆ ಸಿಕ್ಕಿತು. ಸರಸ್ವತೀ ಸಮ್ಮಾನ್ ಪ್ರಶಸ್ತಿಯನ್ನು ಕನ್ನಡದಲ್ಲಿ ಪಡೆದವರಲ್ಲಿ ಇವರು ಮೊದಲಿಗರು.

ಕಾದಂಬರಿಗಳು ಚಲನಚಿತ್ರವಾಗಿವೆ

ಭೈರಪ್ಪನವರ ಕಾದಂಬರಿಗಳು ಜನಪ್ರಿಯವಾಗಿವೆ. ಅವು ಹಲವು ಬಾರಿ ಮರುಮುದ್ರಣಗೊಂಡಿವೆ. ಅವರ ಕೃತಿಗಳು ಮರಾಠಿ, ಇಂಗ್ಲಿಷ್, ಹಿಂದಿ ಮೊದಲಾದ ಭಾಷೆಗಳಿಗೆ ಅನುವಾದವಾಗಿವೆ. “ವಂಶವೃಕ್ಷ”, “ತಬ್ಬಲಿಯು ನೀನಾದೆ ಮಗನೆ” ಕಾದಂಬರಿಗಳು ಚಲನಚಿತ್ರಗಳಾಗಿವೆ.

ಭೈರಪ್ಪನವರು ಕಾದಂಬರಿಗಳ ಜೊತೆಗೆ ಸೌಂದರ್ಯ ಮೀಮಾಂಸೆಯ ಹಲವಾರು ಗ್ರಂಥಗಳನ್ನು ರಚಿಸಿದ್ದಾರೆ. “ಸತ್ಯ ಮತ್ತು ಸೌಂದರ್ಯ” ಇವರು ರಚಿಸಿದ ಪಿ ಎಚ್ ಡಿ ಗ್ರಂಥವಾಗಿದೆ. “ಸಾಹಿತ್ಯ ಮತ್ತು ಪ್ರತೀಕ”, “ಕಥೆ ಮತ್ತು ಕಥಾವಸ್ತು” ಗ್ರಂಥಗಳು ಸಾಹಿತ್ಯ ಮೀಮಾಂಸೆಗೆ ಸಂಬಂಧಿಸಿವೆ. “ನಾನೇಕೆ ಬರೆಯುತ್ತೇನೆ”, “ಭಿತ್ತಿ” ಆತ್ಮವೃತ್ತಾ ಗ್ರಂಥಗಳಾಗಿವೆ. “ಆವರಣ”, “ಕವಲು” ಅವರ ಇತ್ತೀಚಿನ ಕಾದಂಬರಿಗಳು. ಅವರ ಪ್ರಮುಖ ಕಾದಂಬರಿಗಳೆಂದರೆ: “ವಂಶವೃಕ್ಷ”, “ದಾಟು”, “ತಂತು”, “ಅಂಚು”, “ಪರ್ವ”, “ಗೃಹಭಂಗ”, “ಅನ್ವೇಷಣ”, “ಮಂದ್ರ”, “ಸಾರ್ಥ”, “ನಾಯಿನೆರಳು”, “ಧರ್ಮಶ್ರೀ”, “ದೂರಸರಿದರು”, “ಮತದಾನ” ಮುಂತಾದವು.

Tags: s l bhyrappas l bhyrappa autobiographys l bhyrappa best bookss l bhyrappa bookss l bhyrappa books in kannadas l bhyrappa documentarys l bhyrappa in kannadas l bhyrappa interviews l bhyrappa kadambaris l bhyrappa kannada novels lists l bhyrappa kavi parichaya in kannadas l bhyrappa novels l bhyrappa novelss l bhyrappa parvas l bhyrappa passed aways l bhyrappa passes aways l bhyrappa recent novels l bhyrappa serials l bhyrappa songss l bhyrappa speechs l bhyrappa uttarakhand
Previous Post

Prajwal Revanna: ಅತ್ಯಾಚಾರಿಯಿಂದ ಪ್ರಕರಣ ವರ್ಗಾವಣೆ ಕೋರಿ ಅರ್ಜಿ ..! ಅರ್ಜಿ ವಜಾ ಮಾಡಿದ ಹೈಕೋರ್ಟ್..!

Next Post

ಗೃಹ ಲಕ್ಷ್ಮಿ ಹಣ ಬಾಕಿ ಇರೋದು ಆಗಸ್ಟ್ ತಿಂಗಳು ಮಾತ್ರ

Related Posts

Top Story

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
November 18, 2025
0

"ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಅನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. (Deputy Chief...

Read moreDetails

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

November 18, 2025

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

November 18, 2025

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

November 18, 2025

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

November 18, 2025
Next Post

ಗೃಹ ಲಕ್ಷ್ಮಿ ಹಣ ಬಾಕಿ ಇರೋದು ಆಗಸ್ಟ್ ತಿಂಗಳು ಮಾತ್ರ

Recent News

Top Story

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
November 18, 2025
Top Story

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
November 18, 2025
Top Story

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

by ಪ್ರತಿಧ್ವನಿ
November 18, 2025
Top Story

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

by ಪ್ರತಿಧ್ವನಿ
November 18, 2025
Top Story

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
November 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

November 18, 2025

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada