ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ 156 ನೇ ಜನ್ಮ ಜಯಂತೋತ್ಸವದ ಸಂಭ್ರಮದ ನಡುವೆ ಮಹತ್ಮಾ ಗಾಂಧಿ ಸೇವಾ ಪ್ರಶಸ್ತಿ ಪ್ರಕಟ!

ಗಾಂಧೀಜಿಯವರ ಜೀವನ ಮೌಲ್ಯಗಳನ್ನು ಸಮಾಜದಲ್ಲಿ ಪಸರಿಸಿದ ಮತ್ತು ಮಹತ್ತರ ಕೊಡುಗೆ ನೀಡಿದ ವ್ಯಕ್ತಿಗೆ ಹಾಗೂ ಸಂಸ್ಥೆಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರತಿ ವರ್ಷ ಈ ಪ್ರಶಸ್ತಿ ನೀಡಿ ಗೌರವಿಸುತ್ತದೆ.

ಈ ಪ್ರಶಸ್ತಿಯನ್ನು ಪ್ರಖ್ಯಾತ ಭಾರತೀಯ ಇತಿಹಾಸಕಾರ, ಅಂಕಣಕಾರ ಹಾಗೂ ಚಿಂತಕರಾದ ಡಾ.ರಾಮಚಂದ್ರ ಗುಹಾ ಅವರನ್ನು 2025ನೇ ಸಾಲಿನ ‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ’ಗೆ ರಾಜ್ಯ ಸರ್ಕಾರ ಆಯ್ಕೆ ಮಾಡಿದೆ.

“ರಾಷ್ಟ್ರಪಿತ ಮಹಾತ್ಮಗಾಂಧೀಜಿ ಜಯಂತಿಯನ್ನು ರಾಜ್ಯಾದ್ಯಂತ ಅರ್ಥಪೂರ್ಣವಾಗಿ, ಜನಸಾಮಾನ್ಯರು, ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳು ಭಾಗಿಯಾಗಿ ಆಚರಿಸಲು ರಾಜ್ಯ ಸರ್ಕಾರವು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಇನ್ನೂ ರಾಷ್ರೀಯ ಕಾಂಗ್ರೆಸ್ ಹಾಗೂ ಕರ್ನಾಟಕ ಪ್ರದೇಶಿಕ ಕಾಂಗ್ರೆಸ್ ಜಂಟಿಯಾಗಿ “ಗಾಂಧಿ ಭಾರತ” ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ.

ಇತ್ತ ಕಾಂಗ್ರೆಸ್ ಪಕ್ಷ ಹಾಗೂ ಕಾಂಗ್ರೆಸ್ ನೇತೃತ್ವದ ಸರ್ಕಾರವು ಇಂದು ಗಾಂಧಿ ಜಯಂತಿಯನ್ನು ವಿಧಾನಸೌಧದಲ್ಲಿ ಹಾಗೂ ಕಾಂಗ್ರೆಸ್ ಕಚೇರಿಯಲ್ಲೂ ಬಾಪುರವರ ಜನ್ಮ ಜಯಂತೋತ್ಸವನ್ನು ಆರ್ಥಪೂರ್ಣವಾಗಿ ಆಚರಿಸುವ ಮೂಲಕ ರಾಷ್ಟ್ರಪಿತ ಅವರ ಅಪಾರವಾದ ಕೊಡುಗೆಳನ್ನು ಸ್ಮರಿಸುವ ಮೂಲಕ ಆಚರಿಸಲಾಯಿತು. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ , ಕೆಪಿಸಿಸಿ ಅಧ್ಯಕ್ಷರಾದ ಡಿ .ಕೆ. ಶಿವಕುಮಾರ್ ವಿಧಾನಸೌಧಕ್ಕೆ ಆಗಮಿಸಿ ಗಾಂಧಿ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿದರು. ಇದಾದ ಬಳಿಕ ಕಾಂಗ್ರೆಸ್ ಕಚೇರಿಗೆ ಆಗಮಿಸಿದ ಶಿವಕುಮಾರ್ ಅವರರೊಂದಿಗೆ, ವಿಧಾನ ಪರಿಷತ್ ನ ಸದಸ್ಯರು ಹಾಗೂ ಮಾಜಿ ಎಂಪಿ ಬಿ.ಕೆ. ಹರಿಪ್ರಸಾದ್, ಸಂಸದರಾದ ಜಿ.ಸಿ. ಚಂದ್ರಶೇಖರ್, ಬಿ.ವಿ ಶ್ರೀನಿವಾಸ್ ಹಾಗೂ ರಾಜ್ಯಘಟಕದ ಯುವ ಕಾಂಗ್ರೆಸ್ ಅಧ್ಯಕ್ಷ ಮುಂಜುನಾಥ್ ಇವರುಗಳು ಬಾಪುರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಸೂಚಿಸಿದರು.
ಗಾಂಧೀಜಿಯವರ ತತ್ವ ಮೌಲ್ಯ ಹಾಗೂ ಸಮಾಜಮುಖಿ ಚಿಂತನೆಗಳನ್ನು ಜನಮನಗಳಲ್ಲಿ ಬಿತ್ತುವಲ್ಲಿ ಮಹತ್ವದ ಪಾತ್ರ ನಿರ್ವಹಿಸಿರುವ ಡಾ.ರಾಮಚಂದ್ರ ಗುಹಾ ಅವರನ್ನು ಈ ವರ್ಷದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ತಿಳಿಸಿದೆ.

ಡಾ. ಗುಹಾ ಅವರು ಭಾರತದ ಸಮಕಾಲೀನ ಇತಿಹಾಸ, ರಾಜಕೀಯ ಚಳವಳಿಗಳು, ಪರಿಸರ ಹೋರಾಟಗಳು ಹಾಗೂ ಕ್ರಿಕೆಟ್ ಕುರಿತ ತಮ್ಮ ಅಧ್ಯಯನ ಮತ್ತು ಗ್ರಂಥ ರಚನೆಗಳ ಮೂಲಕ ಅಂತರರಾಷ್ಟ್ರೀಯ ಮಟ್ಟದಲ್ಲಿ ವಿಶಿಷ್ಟ ಸ್ಥಾನ ಪಡೆದಿದ್ದಾರೆ.
ಇದಲ್ಲದೆ ಅವರು ಗಾಂಧಿ ಕುರಿತು ‘ The Years That Changed the World (2018) ಮತ್ತು ‘ Gandhi before India (2013) ಕೃತಿಗಳನ್ನು ರಚಿಸಿದ್ದಾರೆ.


2011-12ನೇ ಸಾಲಿನಲ್ಲಿ, ಅವರು London School of Economics and Political Science ( LSE) ಇತಿಹಾಸ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳಲ್ಲಿ “Philips Roman Chair” ನಲ್ಲಿ ಸಂದರ್ಶಕ ಸ್ಥಾನವನ್ನು ಅಲಂಕರಿಸಿದ್ದರು . ಗುಹಾ ಅವರನ್ನು 20 ನೇ ಶತಮಾನದ ಉತ್ತರಾರ್ಧ ಮತ್ತು 21 ನೇ ಶತಮಾನದ ಆರಂಭದ ಪ್ರಮುಖ ಇತಿಹಾಸಕಾರರಲ್ಲಿ ಒಬ್ಬರೆಂದು ಪರಿಗಣಿಸಲಾಗಿದೆ.
ಅಮೆರಿಕನ್ ಹಿಸ್ಟಾರಿಕಲ್ ಅಸೋಸಿಯೇಷನ್ (ಎಎಚ್ಎ) ತನ್ನ ಗೌರವ ವಿದೇಶಿ ಸದಸ್ಯ ಪ್ರಶಸ್ತಿಯನ್ನು 2019ರಲ್ಲಿ ರಾಮ್ಚಂದ್ರ ಗುಹಾ ಅವರಿಗೆ ನೀಡಿದೆ. ಈ ಮೊದಲು 2009 ಮತ್ತು 1952 ರಲ್ಲಿ ಈ ಗೌರವವನ್ನು ಕ್ರಮವಾಗಿ ರೋಮಿಲಾ ಥಾಪರ್ ಮತ್ತು ಜಡುನಾಥ್ ಸರ್ಕಾರ್ ಪಡೆದಿದ್ದಾರೆ.











