
ಆಸ್ಟ್ರೇಲಿಯಾದಲ್ಲಿ ಏಕದಿನ ಸರಣಿ ನಡೆಯಲಿದ್ದು, ಬಿಸಿಸಿಐ (BCCI) ಭಾರತ ತಂಡವನ್ನು ಅಂತಿಮಗೊಳಿಸಿದೆ.

ಅಕ್ಟೋಬರ್ 19 ರಿಂದ ಶುರುವಾಗಲಿರುವ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣಾ ಮಂಡಳಿ ತಂಡವನ್ನು ಪ್ರಕಟಿಸಿದೆ. ತಂಡದ ನಾಯಕನಾಗಿ ಬ್ಯಾಟ್ಸ್‌ಮ್ಯಾನ್ ಶುಭಂ ಗಿಲ್ ಅವರನ್ನು ಆಯ್ಕೆ ಮಾಡಿದ್ರೆ, ಉಪ ನಾಯಕನಾಗಿ ಶ್ರೇಯಸ್ ಅಯ್ಯರ್ ಅವರನ್ನು ಉಪನಾಯಕನಾಗಿ ನೇಮಕಗೊಂಡಿದ್ದಾರೆ. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರನ್ನು ತಂಡಕ್ಕೆ ಮರಳಿದ್ದಾರೆ. ಅಹಮದಾಬಾದ್‌ನಲ್ಲಿ ನಡೆದ ಆಯ್ಕೆ ಸಮಿತಿಯ ಸಭಯೆ ನಂತರ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ತಂಡವನ್ನು ಅಂತಿಮಗೊಳಿಸಿದರು.
ತಂಡದಲ್ಲಿ ಯಾರ್ ಯಾರ್ ಇರ‍್ತಾರೆ :

ಇತ್ತ ತಂಡದಲ್ಲಿ ಸ್ಥಾನ ಪಡೆದ ಆಟಗಾರರ ಮಾಹಿತಿ ಇಲ್ಲಿದೆ : ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಅಕ್ಷರ್ ಪಟೇಲ್, ಕೆ.ಎಲ್. ರಾಹುಲ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಮಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಧ್ರುವ ಜುರೆಲ್ (ವಿಕೆಟ್ ಕೀಪರ್) ಯಶಸ್ವಿ ಜೈಸ್ವಾಲ್ ಇವರುಗಳು ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.