• Home
  • About Us
  • ಕರ್ನಾಟಕ
Sunday, October 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಅಕ್ಟೋಬರ್ 23 ರಿಂದ ಐದು ದಿನಗಳ ಕಾಲ ಅದ್ದೂರಿಯಾಗಿ ನಡೆಯಲಿದೆ “ಎಸ್ ವಿ ಆರ್ 50” ಸಮಾರಂಭ

ಪ್ರತಿಧ್ವನಿ by ಪ್ರತಿಧ್ವನಿ
October 7, 2025
in Top Story, ಅಂಕಣ, ಇದೀಗ, ಕರ್ನಾಟಕ, ವಾಣಿಜ್ಯ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಹಿರಿಯ ನಿರ್ದೇಶಕ ಎಸ್ ವಿ ರಾಜೇಂದ್ರಸಿಂಗ್ ಬಾಬು ನಿರ್ದೇಶಕರಾಗಿ 50 ವರ್ಷಗಳು ಪೂರೈಸಿರುವ ಹಿನ್ನೆಲೆಯಲ್ಲಿ ಕನ್ನಡ ಚಿತ್ರರಂಗದಿಂದ ಅದ್ದೂರಿ ಸಮಾರಂಭ.

ADVERTISEMENT

ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕ ಎಸ್ ವಿ ರಾಜೇಂದ್ರಸಿಂಗ್ ಬಾಬು ನಿರ್ದೇಶಕರಾಗಿ ಇದೇ ಅಕ್ಟೋಬರ್ ತಿಂಗಳಿಗೆ 50 ವರ್ಷಗಳಾಗಿದೆ. ಈ ಸಂಭ್ರಮವನ್ನು ಸಂಭಮಿಸಲು ಕನ್ನಡ ಚಿತ್ರರಂಗದಿಂದ “ಎಸ್ ವಿ ಆರ್ 50” ಎಂಬ ಅದ್ದೂರಿ ಸಮಾರಂಭ ಆಯೋಜಿಸಿ ರಾಜೇಂದ್ರಸಿಂಗ್ ಬಾಬು ಅವರನ್ನು ಆತ್ಮೀಯವಾಗಿ ಸನ್ಮಾನಿಸಲಿದೆ. ಐದು ದಿನಗಳ ಕಾಲ ಅದ್ದೂರಿಯಾಗಿ ಈ ಸಮಾರಂಭ ನಡೆಯಲಿದೆ. ಸಮಾರಂಭದ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕರಾದ ಗಿರೀಶ್ ಕಾಸರವಳ್ಳಿ, ನಾಗತಿಹಳ್ಳಿ ಚಂದ್ರಶೇಖರ್, ಪಿ.ಶೇಷಾದ್ರಿ, ನಂಜುಂಡೇಗೌಡ, ವಿಜಯಲಕ್ಷ್ಮಿ ಸಿಂಗ್, ಸಂಗೀತ ನಿರ್ದೇಶಕ ಹಂಸಲೇಖ, ನಿರ್ಮಾಪಕ ರಾಕ್ಲೈನ್ ವೆಂಕಟೇಶ್, ಪತ್ರಕರ್ತ ಗಂಗಾಧರ್ ಮೊದಲಿಯರ್, ಲಿಂಗದೇವರು, ಕನ್ನಡ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷ ಎನ್ನಾರ್ ಕೆ ವಿಶ್ವನಾಥ್, ಸಂಕಲನಕಾರ ಕೆಂಪರಾಜ್ ಹಾಗೂ ಸಮಾರಂಭದ ಆಯೋಜಕರಾದ ಕೃಷ್ಣೇಗೌಡ(ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ) ಉಪಸ್ಥಿತರಿದ್ದರು.

ಕರ್ನಾಟಕ ಮಾತ್ರವಲ್ಲ, ಇಡೀ ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಈವರೆಗೂ 50 ವರ್ಷಗಳ ಸಕ್ರಿಯವಾಗಿ ನಿರ್ದೇಶಕರಾಗಿರುವವರು ಯಾರು ಇಲ್ಲ. ಅದು ರಾಜೇಂದ್ರಸಿಂಗ್ ಬಾಬು ಅವರು ಒಬ್ಬರೆ. ಈಗಲೂ ಅವರ ನಿರ್ದೇಶನದ ಎರಡು ಚಿತ್ರಗಳು ತೆರೆಗೆ ಬರಲು ಸಿದ್ದಾವಾಗಿದೆ. ಈ ಸುವರ್ಣ ಸಂಭ್ರಮವನ್ನು ಸಂಭ್ರಮಿಸಲು ಅಕ್ಟೋಬರ್ 23 ರಿಂದ 5 ದಿನಗಳ ಕಾಲ “ಎಸ್ ವಿ ಆರ್ 50” ಎಂಬ ಅದ್ದೂರಿ ಸಮಾರಂಭ ನಡೆಸಲಾಗುತ್ತಿದೆ. 23 ರಂದು ಚಾಮರಾಜಪೇಟೆಯ ಕಲಾವಿದರ ಸಂಘದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಅಲ್ಲಿಂದ ನಾಲ್ಕು ದಿನಗಳ ಕಾಲ ಕಲಾವಿದರ ಸಂಘದಲ್ಲಿ ರಾಜೇಂದ್ರಸಿಂಗ್ ಬಾಬು ಅವರ ನಿರ್ದೇಶನದ ರಾಷ್ಟ್ರ ಹಾಗೂ ರಾಜ್ಯ ಪ್ರಶಸ್ತಿ ಚಿತ್ರಗಳ ಚಿತ್ರೋತ್ಸವ ನಡೆಯಲಿದೆ. ದಿನಕ್ಕೆ ಎರಡು ಚಿತ್ರಗಳ ಪ್ರದರ್ಶನವಿರುತ್ತದೆ. ಈ ಸಂದರ್ಭದಲ್ಲಿ ಕನ್ನಡ ಹಾಗೂ ಇತರ ಭಾಷೆಗಳ ಗಣ್ಯರು ಪಾಲ್ಗೊಳ್ಳಲಿದ್ದಾರೆ. 27 ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಸಮಾರೋಪ ಸಮಾರಂಭ ನಡೆಯಲಿದ್ದು, ಅಂದು ರಾಜೇಂದ್ರಸಿಂಗ್ ಬಾಬು ಅವರಿಗೆ ಚಿತ್ರರಂಗದ ಪರವಾಗಿ ಆತ್ಮೀಯವಾಗಿ ಸನ್ಮಾನ‌ ಸಮಾರಂಭ ನಡೆಯಲಿದೆ. ಅದಕ್ಕೂ ಮುನ್ನ ಬೆ.11ರಿಂದ ಮಧ್ಯಾಹ್ನ 3 ಗಂಟೆವರಗೂ ರಾಜೇಂದ್ರಸಿಂಗ್ ಬಾಬು ಅವರ ಜನಪ್ರಿಯ ಹಾಡುಗಳ ಥೀಮ್ ಮ್ಯೂಸಿಕ್ ಬಳಸಿಕೊಂಡು ನುರಿತ ಮಾಡಲ್ ಗಳು ಫ್ಯಾಷನ್ ಶೋ ಸಹ ನಡೆಸಲಿದ್ದಾರೆ ಇದೇ ಸಂದರ್ಭದಲ್ಲಿ ಗಂಗಾಧರ್ ಮೊದಲಿಯರ್ ಅವರು ಬರೆದಿರುವ ಪುಸ್ತಕ ಸೇರಿದಂತೆ ಎರಡು ಪುಸ್ತಕಗಳ ಬಿಡುಗಡೆ ಹಾಗೂ ಲಿಂಗದೇವರು ಅವರು ನಿರ್ದೇಶಿಸಿರುವ ಸಾಕ್ಷ್ಯಚಿತ್ರದ ಪ್ರದರ್ಶನವಿರುತ್ತದೆ. ಹಂಸಲೇಖ ಅವರ ನೇತೃತ್ವದಲ್ಲಿ ರಾಜೇಂದ್ರಸಿಂಗ್ ಬಾಬು ಅವರ ನಿರ್ದೇಶನದ ಚಿತ್ರಗಳ ಜನಪ್ರಿಯ ಹಾಡುಗಳನ್ನು ಹಂಸಲೇಖ ಅವರ ತಂಡದವರು ಹಾಡಲಿದ್ದಾರೆ. ಸನ್ಮಾನ್ಯ ಮುಖ್ಯಮಂತ್ರಿಗಳು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಸಮಾರಂಭದ ಆಯೋಜಕ ಕೃಷ್ಣೇಗೌಡ ತಿಳಿಸಿದರು.

ರಾಜೇಂದ್ರಸಿಂಗ್ ಬಾಬು ಅವರು ಸಿನಿಮಾ ನಿರ್ದೇಶನವನ್ನು ಹೊರತುಪಡಿಸಿ, ಚಿತ್ರರಂಗಕ್ಕಾಗಿ ಸಾಕಷ್ಟು ಕೆಲಸಗಳನ್ನು ಮಾಡಿದ್ದಾರೆ. ಕನ್ನಡ ಚಲನಚಿತ್ರ ನಿರ್ದೇಶಕರ ಸಂಘದ ಸ್ಥಾಪನೆ, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿದ್ದಾಗ “ಬೆಳ್ಳಿ ಹೆಜ್ಜೆ” ಅಂತಹ ಕಾರ್ಯಕ್ರಮದ ಮುಂದುವರಿಕೆ ಹಾಗೂ ವಿಧಾನಸೌಧದ ಮುಂದೆ ಚಲನಚಿತ್ರೋತ್ಸವದ ಉದ್ಘಾಟನೆ ಹಾಗೂ ಮೈಸೂರಿನ ಅರಮನೆ ಬಳಿ ಸಮರೋಪ ಸಮಾರಂಭದ ಆಯೋಜನೆ ಹೀಗೆ ಹಲವು ಕಾರ್ಯಕ್ರಮಗಳನ್ನು ಬಾಬು ಅವರು ಮಾಡಿದ್ದಾರೆ. ತಮ್ಮ ಚಿತ್ರಗಳ ಮೂಲಕವೂ ಅವರು ಎಲ್ಲರ ಮನೆ ಮಾತಾಗಿದ್ದಾರೆ. ರಾಜೇಂದ್ರಸಿಂಗ್ ಬಾಬು ಅವರು ನಿರ್ದೇಶಕರಾಗಿ 50 ವರ್ಷಗಳು ಪೂರೈಸಿರುವ ಈ ಸಂದರ್ಭದಲ್ಲಿ ಅವರನ್ನು ಅಭಿನಂದಿಸುತ್ತೇನೆ ಎಂದು ಹಿರಿಯ ನಿರ್ದೇಶಕ ಗಿರೀಶ್ ಕಾಸರವಳ್ಳಿ ತಿಳಿಸಿದರು.

ನಾನು ರಾಜೇಂದ್ರಸಿಂಗ್ ಬಾಬು ಅವರ ಆತ್ಮೀಯ ಸ್ನೇಹಿತ. ಆದರೆ ಈ ಕಾರ್ಯಕ್ರಮಕ್ಕೆ ಅಭಿಮಾನಿ. ಮೂರು ತಲೆಮಾರುಗಳಿಂದ ಅವರ ಕುಟುಂಬ ಚಿತ್ರರಂಗಕ್ಕೆ ನೀಡಿರುವ ಕೊಡುಗೆ ಅಪಾರ. ವಿಶೇಷವೆಂದರೆ ನಮ್ಮಿಬ್ಬರ ಕಾಂಬಿನೇಶನ್ ನಲ್ಲಿ ಬಂದ ‘ಮಹಾಕ್ಷತ್ರಿಯ’ ಚಿತ್ರದ “ಈ ಭೂಮಿ ಬಣ್ಣದ ಬುಗುರಿ” ಹಾಡು ಏಳನೇ ತರಗತಿಯ ಪಠ್ಯವಾಗಿತ್ತು. ಮತ್ತೊಂದು ವಿಷಯ ನಮ್ಮ ಐದನಿ ಸಂಸ್ಥೆಯಿಂದ ಕನ್ನಡ ಚಿತ್ರರಂಗದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಚಿನ್ನದ ಪದಕ ನೀಡಲಾಗುತ್ತಿದೆ. ಮೊದಲ ಪದಕವನ್ನು ಶಿವರಾಜಕುಮಾರ್ ಅವರಿಗೆ ನೀಡಲಾಗಿದೆ‌‌. ಈಗ ಎರಡನೇ ಪದಕವನ್ನು ರಾಜೇಂದ್ರಸಿಂಗ್ ಬಾಬು ಅವರಿಗೆ ನೀಡಲಾಗುವುದು ಹಾಗೂ ಸಮಾರಂಭದ ದಿನ ರಾಜೇಂದ್ರಸಿಂಗ್ ಬಾಬು ನಿರ್ದೇಶನದ ಚಿತ್ರಗಳ ಜನಪ್ರಿಯ ಹಾಡುಗಳನ್ನು ನಮ್ಮ ತಂಡದವರು ಹಾಡಲಿದ್ದಾರೆ ಎಂದು ಸಂಗೀತ ನಿರ್ದೇಶಕ ಹಂಸಲೇಖ ಹೇಳಿದರು.

ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರು ರಾಜೇಂದ್ರಸಿಂಗ್ ಬಾಬು ಅವರು ಕನ್ನಡ ಚಿತ್ರರಂಗಕ್ಕೆ ನೀಡಿರುವ ಕೊಡುಗೆಯ ಕುರಿತು ಮಾತನಾಡಿದರು.

Tags: Girish KasaravalliHamsalekakannada filmNagatihalli ChandrashekarRajendra Baburockline venkateshsandalwood
Previous Post

Priyanka Kharge: ಏಳು ಜಿಲ್ಲೆಗಳಿಗೆ ರಾಷ್ಟ್ರೀಯ ಪ್ರಶಸ್ತಿ-ಪ್ರಿಯಾಂಕ್ ಖರ್ಗೆ ಹರ್ಷ

Next Post

ಸಾಮಾಜಿಕ ವ್ಯಾಧಿಗೆ ಮದ್ದು ಇರುವುದೆಲ್ಲಿ ?

Related Posts

Top Story

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

by ಪ್ರತಿಧ್ವನಿ
October 11, 2025
0

ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳಿಗೆ 78 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಹೇಳಿದರು. ಅವರು...

Read moreDetails

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

October 11, 2025
Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

October 11, 2025

ಅವಹೇಳನಕಾರಿ ಕಾಮೆಂಟ್‌ ಹಾಕಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಬಿತ್ತು ಕೇಸ್..

October 11, 2025

150ಕೋಟಿ ಹಣ ಎಗುರಿಸಿದ ಸೈಬರ್‌ ವಂಚಕರ ಅರೆಸ್ಟ್..!!

October 11, 2025
Next Post
ಸಾಮಾಜಿಕ ವ್ಯಾಧಿಗೆ ಮದ್ದು ಇರುವುದೆಲ್ಲಿ ?

ಸಾಮಾಜಿಕ ವ್ಯಾಧಿಗೆ ಮದ್ದು ಇರುವುದೆಲ್ಲಿ ?

Recent News

Top Story

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

by ಪ್ರತಿಧ್ವನಿ
October 11, 2025
Top Story

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
October 11, 2025
Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!
Top Story

Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

by ಪ್ರತಿಧ್ವನಿ
October 11, 2025
Top Story

ಅವಹೇಳನಕಾರಿ ಕಾಮೆಂಟ್‌ ಹಾಕಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಬಿತ್ತು ಕೇಸ್..

by ಪ್ರತಿಧ್ವನಿ
October 11, 2025
Top Story

150ಕೋಟಿ ಹಣ ಎಗುರಿಸಿದ ಸೈಬರ್‌ ವಂಚಕರ ಅರೆಸ್ಟ್..!!

by ಪ್ರತಿಧ್ವನಿ
October 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

October 11, 2025

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

October 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada