
ಉಡುಪಿ ಜಿಲ್ಲಾ ಪ್ರವಾಸ ಕೈಗೊಂಡಿರುವ ಮಾನ್ಯ ಕಾರ್ಮಿಕ ಸಚಿವರಾದ ಶ್ರೀ ಸಂತೋಷ್ ಲಾಡ್ ರವರು ಇಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು.
ಈ ಸಂಧರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಮಂಜುನಾಥ ಭಂಡಾರಿ, ಮಾಜಿ ಸಚಿವರಾದ ಶ್ರೀ ವಿನಯ ಕುಮಾರ್ ಸೊರಕೆ, ಮುಖಂಡರಾದ ಶ್ರೀ ಎಂ.ಎ. ಗಫೂರ್ ಸೇರಿದಂತೆ ಕಾರ್ಯಕರ್ತರು, ಮುಂಚೂಣಿ ಘಟಕಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
ಮಂಗಳೂರು ನಗರದ ಆಡ್ಯಾರ್ ಗಾರ್ಡನ್ ನಲ್ಲಿರುವ ವಿ.ಕೆ.ಶೆಟ್ಟಿ ಆಡಿಟೋರಿಯಮ್ಮಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ವಿವಿಧ ಯೋಜನೆಗಳ ಕಾರ್ಯಕ್ರಮವನ್ನು ಮಾನ್ಯ ಕಾರ್ಮಿಕ ಸಚಿವರಾದ ಶ್ರೀ ಸಂತೋಷ್ ಲಾಡ್ ರವರುದೀಪ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್, ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಭರತ್ ಶೆಟ್ಟಿ, ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ, ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಿ. ವೇದವ್ಯಾಸ ಕಾಮತ್, ಮಾಜಿ ಸಚಿವರಾದ ಶ್ರೀ ನಾಗರಾಜ ಶೆಟ್ಟಿ, ಲಿಡ್ಕರ್ ನಿಗಮದ ಅಧ್ಯಕ್ಷರಾದ ಶ್ರೀ ಮುಂಡರಗಿ ನಾಗರಾಜ್, ಮಾಜಿ ಸಚಿವರಾದ ಶ್ರೀ ಅಭಯ ಚಂದ್ರ ಜೈನ್, ವಿಧಾನ ಪರಿಷತ್ ಸದಸ್ಯರಾದ ಶ್ರೀ ಐವಾನ್ ಡಿಸೋಜಾ, ಶ್ರೀ ಮಂಜುನಾಥ ಭಂಡಾರಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಶ್ರೀ ತಾರಾನಾಥ ಗಟ್ಟಿ ,

ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಮತಾ ಡಿಎಸ್ ಗಟ್ಟಿ, ಮೆಸ್ಕಾಂ ಅಧ್ಯಕ್ಷರಾದ ಶ್ರೀ ಹರೀಶ್ ಕುಮಾರ್, ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ನಿಗಮದ ಅಧ್ಯಕ್ಷರಾದ ಶ್ರೀಮತಿ ಲಾವಣ್ಯ ಬಲ್ಲಾಳ್ , ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ದಕ್ಷಿಣ ಕನ್ನಡ ಜಿಲ್ಲೆಯ ಅಧ್ಯಕ್ಷರಾದ ಶ್ರೀ ಭರತ್ ಮುಂಡೋಡಿ, ಕರ್ನಾಟಕ ರಾಜ್ಯ ಕನಿಷ್ಠ ವೇತನ ಮಂಡಳಿ ಅಧ್ಯಕ್ಷರಾದ ಪಿ.ಎಂ. ಶಾಹಿದ್ ತೆಕ್ಕಲ್, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಶ್ರೀ ಉಮರ್, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಸದಾಶಿವ ಉಳ್ಳಾಲ,ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು, ಶ್ರೀ ಎಂ.ಎ.ಗಫೂರ್, ಕಾರ್ಮಿಕ ಆಯುಕ್ತರಾದ ಡಾ. ಹೆಚ್ ಎನ್ ಗೋಪಾಲಕೃಷ್ಣ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಾದ ಶ್ರೀ ದರ್ಶನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಶ್ರೀ ನಾರ್ವಡೆ ವಿನಾಯಕ್ ಕಾರ್ಬಾರಿ, ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಅಧೀಕ್ಷಕರಾದ ಡಾ. ಅರುಣ್ ಕುಮಾರ್, ಜಂಟಿ ಕಾರ್ಮಿಕ ಆಯುಕ್ತರು ಹಾಗೂ ಜಂಟಿ ಕಾರ್ಯದರ್ಶಿಗಳು ಕರ್ನಾಟಕ ರಾಜ್ಯ ಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಡಾ ಎಸ್ ಬಿ ರವಿಕುಮಾರ್, ಉಪ ಕಾರ್ಮಿಕ ಆಯುಕ್ತರಾದ ಶ್ರೀ ಗುರುಪ್ರಸಾದ್, ಸಹಾಯಕ ಕಾರ್ಮಿಕ ಆಯುಕ್ತರಾದ ಕುಮಾರಿ ನಾಜಿಯಾ ಸುಲ್ತಾನ, ಕಾರ್ಮಿಕ ಅಧಿಕಾರಿ ಶ್ರೀ ಕುಮಾರ್.ಬಿ.ಆರ್. ಉಪ ವಿಭಾಗ -1, ವಿಲ್ಮಾ , ಕಾರ್ಮಿಕ ಅಧಿಕಾರಿ ಉಪ ವಿಭಾಗ -2, ಕಾರ್ಮಿಕ ನಿರೀಕ್ಷಕ ಶ್ರೀ ಪ್ರಸನ್ನಕುಮಾರ್, ಜೀವನ್ ಕುಮಾರ್, ರಾಜಶೇಖರ್ ಮುಂತಾದ ಗಣ್ಯರು ಪಾಲ್ಗೊಂಡಿದ್ದರು.
