• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕನ್ನಡ ಸೇರಿದಂತೆ ಆರು ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಸಿನಿಮಾವಾಗಿ ತೆರೆಗೆ ಬರಲಿದೆ ಬಹು ನಿರೀಕ್ಷಿತ ಚಿತ್ರ “ಕೊರಗಜ್ಜ” .

ಪ್ರತಿಧ್ವನಿ by ಪ್ರತಿಧ್ವನಿ
October 14, 2025
in Top Story, ಅಂಕಣ, ಇದೀಗ, ಕರ್ನಾಟಕ, ವಾಣಿಜ್ಯ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಸುಧೀರ್ ಅತ್ತಾವರ್ ನಿರ್ದೇಶನದ ಹಾಗೂ ತ್ರಿವಿಕ್ರಮ ಸಪಲ್ಯ ನಿರ್ಮಾಣದ ಬಹು ನಿರೀಕ್ಷಿತ, ಸಕ್ಸಸ್ ಫಿಲಂಸ್ ಮತ್ತು ತ್ರಿವಿಕ್ರಮ ಸಿನಿಮಾಸ್ ಬ್ಯಾನರ್ ಅಡಿಯ “ಕೊರಗಜ್ಜ” ಚಿತ್ರದ ಫಸ್ಟ್ ಲುಕ್ ಟೀಸರ್ ಹಾಗೂ ತ್ರಿಡಿ ಮೋಷನ್ ಪೋಸ್ಟರ್ ಇತ್ತೀಚೆಗೆ ಅದ್ದೂರಿಯಾಗಿ ಬಿಡುಗಡೆಯಾಯಿತು.

ADVERTISEMENT

ದಕ್ಷಿಣ ಕನ್ನಡದ ವಾದ್ಯ ಹಿಮ್ಮೇಳ ಹಾಗೂ ಉಡುಪಿಯ ಮಹಿಳಾ ತಂಡದವರ ಹುಲಿ ನೃತ್ಯದ ಮೆರವಣಿಗೆಯಲ್ಲಿ ಸಾಗಿಬಂದ “ಕೊರಗಜ್ಜ” ನ ಎರಡು ಕಟೌಟ್ ಗಳು ಡೊಳ್ಳು,ಕೊಂಬು-ಕಹಳೆ, ಕೊಳಲು, ತಾಸೆ,ತಾಳಗಳ ವಾದ್ಯಮೇಳದ ಹಿನ್ನೆಯಲ್ಲಿ ಹುಲಿವೇಶದ ಅಬ್ಬರದ ನ್ರತ್ಯದ ನಡುವೆ ಫಸ್ಟ್ ಲುಕ್ ಅನಾವರಣ ಗೊಂಡಿರುವುದು ಅತ್ಯಂತ ವಿಶೇಷವಾಗಿತ್ತು.
ಸಮಾರಂಭದಲ್ಲಿ ಉಪಸ್ಥಿತರಿದ್ದ ಮಾಜಿ ಸಚಿವೆ ಮೋಟಮ್ಮ, ನಿರ್ಮಾಪಕಿ – ನಿರ್ದೇಶಕಿ ವಿಜಯಲಕ್ಷ್ಮಿ ಸಿಂಗ್, ನಿರ್ದೇಶಕ, ನಿರ್ಮಾಪಕ, ಸಿನಿಮಾದ ನಟ ನಟಿಯರೆಲ್ಲ ಕಟೌಟ್ ಗೆ ಪುಷ್ಪಾರ್ಚನೆ ಗೊಳಿಸಿರುವುದು ಕಾರ್ಯಕ್ರಮಕ್ಕೆ ವಿಶೇಷವಾದ ಮೆರುಗನ್ನು ನೀಡಿತು.

ಮೂರು ವರ್ಷಗಳ ಹಿಂದೆ ಆರಂಭವಾದ ಸಿನಿಮಾ ಈಗ ಅನೇಕ ಅಡೆತಡೆಗಳನ್ನು ದಾಟಿ ಬಿಡುಗಡೆಯ ಹಂತ ತಲುಪಿದೆ. ಇದರ ಪೂರ್ವಭಾವಿಯಾಗಿ ಇಂದು ಫಸ್ಟ್ ಲುಕ್ ಟೀಸರ್ ಹಾಗೂ ತ್ರಿಡಿ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದ್ದೇವೆ. ನನಗೆ ತಿಳಿದ ಹಾಗೆ ದಕ್ಷಿಣ ಭಾರತದಲ್ಲೇ ಇದೇ ಮೊದಲ ಬಾರಿಗೆ ಈ ರೀತಿಯ ತ್ರಿಡಿ ಪೋಸ್ಟರ್ ಮಾಡಿರುವುದು. ಕೊರಗಜ್ಜನ ಆಶೀರ್ವಾದದಿಂದ ಸಿನಿಮಾ ಅಂದುಕೊಂಡ ಹಾಗೆ ಬಂದಿದೆ. ಚಿತ್ರವನ್ನು ಯಾವುದೇ ಕೊರತೆ ಬಾರದ ಹಾಗೆ ನಿರ್ಮಾಪಕ ತ್ರಿವಿಕ್ರಮ ಸಪಲ್ಯ ಮತ್ತು ಕಾರ್ಯಕಾರಿ ನಿರ್ಮಾಪಕ ವಿದ್ಯಾಧರ್ ಶೆಟ್ಟಿ ತಮ್ಮ ಕಾರ್ಯ ನಿರ್ವಹಿಸಿರುತ್ತಾರೆ. ಚಿತ್ರತಂಡದ ಸಹಕಾರ ಅಪಾರ. ಒಟ್ಟು ಆರು ಭಾಷೆಗಳಲ್ಲಿ ಮೂಡಿಬಂದಿರುವ ನಮ್ಮ ಚಿತ್ರದಲ್ಲಿ ಒಟ್ಟು 31 ಹಾಡುಗಳಿದೆ(ಆರು ಭಾಷೆಗಳಿಂದ). ಗೋಪಿ ಸುಂದರ್ ಅವರ ಸಂಗೀತ ಸಂಯೋಜನೆಯಲ್ಲಿ ಭಾರತದ ಪ್ರಸಿದ್ದ ಗಾಯಕ – ಗಾಯಕಿಯರು ಈ ಹಾಡನ್ನು ಹಾಡಿದ್ದಾರೆ. ಸುಮಾರು ಇಪ್ಪತ್ತನಾಲ್ಕು ವರ್ಷದ ತನಿಯ ದೈವತ್ವಕ್ಕೇರಿ ಕೊರಗಜ್ಜನಾದ ಕಥೆಯನ್ನು ಈ ಚಿತ್ರದಲ್ಲಿ ತೋರಿಸಲಾಗುತ್ತಿದೆ ಎಂದು ನಿರ್ದೇಶಕ ಸುಧೀರ್ ಅತ್ತಾವರ್ ತಿಳಿಸಿದರು.

ಇದು ನಾನು ಜೈ ಜಗದೀಶ್ ಆರಂಭಿಸಿದ ಸಿನಿಮಾ.ಸುಮಾರು 25 ಸಿನಿಮಾ ನಿರ್ಮಾಣ ಮಾಡಿರುವ ನಮಗೆ ಈ ಸಿನಿಮಾ ನಿರ್ಮಾಣ ಮಾಡಲು ಸಾಧ್ಯವಾಗದೆ,ಈ ಪ್ರೋಜೆಕ್ಟ್ ನಿಂದ ಹಿಂದೆ ಸರಿದೆವು. ಆದರೆ ಈಗ ಅದು ಸುಧೀರ್ ಅತ್ತಾವರ್ ಗೆ ಇದು ಒಲಿದಿದೆ. ವಿಭಿನ್ನವಾಗಿ- ಅದ್ದೂರಿ ಫಸ್ಟ್ ಲುಕ್ ರಿಲೀಸ್ ನೋಡಿ ಈ ಸಿನಿಮಾ ಯಾವ ಮಟ್ಟದಲ್ಲಿ ಮೂಡಿಬಂದಿರಬಹುದೆನ್ಬುವುದನ್ನು ಊಹಿಸಬಹುದು ಎಂದು ವಿಜಯಲಕ್ಷ್ಮಿ‌ ತಿಳಿಸಿದರು.

ನಿರ್ದೇಶಕರು ನನಗೆ ಬಹಳ ವರ್ಷಗಳ ಸ್ನೇಹಿತರು. ಅವರು ಹೇಳಿದ ಕಥೆ ಕೇಳಿದ ತಕ್ಷಣ ನಿರ್ಮಾಣಕ್ಕೆ ಮುಂದಾದೆ. ನಾವು ಸಹ ಕೊರಗಜ್ಜನನ್ನು ಆರಾಧಿಸುವ ಕುಟುಂಬದವರು. ಅನುಭವಿ ಕಲಾವಿದರು ಹಾಗೂ ನುರಿತ ತಂತ್ರಜ್ಞರು ನಮ್ಮ ಚಿತ್ರದಲ್ಲಿ ಕಾರ್ಯ ನಿರ್ವಹಿಸಿದ್ದಾರೆ‌. ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ನವೆಂಬರ್ ಕೊನೆಗೆ ಚಿತ್ರವನ್ನು ತೆರೆಗೆ ತರುವ ಪ್ರಯತ್ನದಲ್ಲಿದ್ದೇವೆ ಎಂದರು ನಿರ್ಮಾಪಕ ತ್ರಿವಿಕ್ರಮ ಸಪಲ್ಯ.

ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ಮಾಪಕ ವಿದ್ಯಾಧರ್ ಶೆಟ್ಟಿ ಈ ಸಿನಿಮಾದ ಕಾರ್ಯಕಾರಿ ನಿರ್ಮಾಪಕರಾಗಿದ್ದು, ಸತತ 3 ವರ್ಷಗಳಿಂದ ಸಿನಿಮಾದ ಚಿತ್ರೀಕರಣ ಮತ್ತು ಪೋಸ್ಟ್ ಪ್ರೊಡಕ್ಷನ್ ಕೆಲಸದ ಬಗೆಗಿನ ಸಾವಿಸ್ತಾರ ವಿಚಾರ ಹಂಚಿಕೊಂಡರು.

ನಿರ್ದೇಶಕರ ಹಾಗೂ ಸಹ ಕಲಾವಿದರ ಕಾರ್ಯವೈಖರಿಯನ್ನು ಶ್ಲಾಘಿಸುತ್ತಾ, ಚಿತ್ರೀಕರಣದ ಅನುಭವಗಳನ್ನು ಹಂಚಿಕೊಂಡ ಹಿರಿಯ ನಟಿ ಭವ್ಯ ಅವರು, ರಾಣಿ “ಪಂಜಂದಾಯಿ” ಪಾತ್ರದಲ್ಲಿ ಖ್ಯಾತ ನಟ ಕಬೀರ್ ಬೇಡಿಯೊಂದಿಗೆ ನಟಿಸಿಸ ಅನುಭವ ಹೇಳಿದರು. ಹಾಡಿನ ಬಿ ಟಿ ಎಸ್ ಮತ್ತು ಮೇಕಿಂಗ್ ವೀಡಿಯೋ ನೆರೆದವರನ್ನು ಮಂತ್ರಮುಗ್ಧ ಗೊಳಿಸಿತು.

ನನ್ನ ವೃತ್ತಿಜೀವನದಲ್ಲೇ ಇದು ವಿಭಿನ್ನವಾದ ಸಿನಿಮಾ ಎಂದು ಮಾತನಾಡಿದ ನಟಿ ಶೃತಿ, ನಾನು ಈ ಚಿತ್ರದಲ್ಲಿ ಕೊರಗಜ್ಜನ ಸಾಕು ತಾಯಿಯ ಪಾತ್ರ ನಿರ್ವಹಿಸಿದ್ದೇನೆ. ಈ ಚಿತ್ರಕ್ಕಾಗಿ ಸತತ ಇಪ್ಪತ್ತೆಂಟು ಗಂಟೆಗಳ ಚಿತ್ರೀಕರಣ ಮಾಡಿದ್ದೇನೆ. ಇದು ಮರೆಯಲಾರದ ಅನುಭವ. ಅಷ್ಟು ಹೊತ್ತು ಕೆಲಸ ಮಾಡಿದರೂ ನಿರ್ದೇಶಕರಲ್ಲಿದ್ದ ಉತ್ಸಾಹ ಒಂದು ಚೂರು ಕಡಿಮೆ ಆಗಿರಲಿಲ್ಲ. ಕೊರಗಜ್ಜನ ಆಶೀರ್ವಾದದಿಂದ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು.

Tags: ajja koragajjakoragajjakoragajja devrukoragajja kaapulekoragajja kaarnikakoragajja kokkadakoragajja kolaKoragajja Kshetrakoragajja miraclekoragajja moviekoragajja mysorekoragajja nemakoragajja pavadakoragajja shortskoragajja songkoragajja songskoragajja statuskoragajja storyKoragajja templekoragajja videokuttaru koragajjalegacy of koragajjamaayoda koragajjanew koragajja songspowerful koragajjastory of koragajjaswami koragajjaswamy koragajja
Previous Post

CN Ashwath Narayan: ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಆತ್ಮಹತ್ಯೆ ಗ್ಯಾರೆಂಟಿ..!!

Next Post

Santhosh S Lad: ಅಸಂಘಟಿತ ವಲಯದ ಕಾರ್ಮಿಕರು ಈ ರಾಜ್ಯದ ಬಹು ದೊಡ್ಡ ಆಸ್ತಿ

Related Posts

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
0

ಬೆಂಗಳೂರು: ಇತ್ತೀಚೆಗೆ ಹೊರಬಂದ ಡಾ.ಕೃತಿಕಾ ರೆಡ್ಡಿ ಕೊಲೆ ಪ್ರಕರಣದ ಮತ್ತಷ್ಟು ರೋಚಕ ವಿಚಾರಗಳು ಬಯಲಾಗ್ತಿದೆ. ವಿಚಾರಣೆ ವೇಳೆ ತಾನೇ ಕೊಲೆ‌ ಮಾಡಿದ್ದು ಎಂದು ಒಪ್ಪಿಕೊಂಡಿರುವ ಪತಿ ಡಾ.ಮಹೇಂದ್ರ ರೆಡ್ಡಿ...

Read moreDetails
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

October 24, 2025
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

October 24, 2025
ಸಿದ್ದರಾಮಯ್ಯಗೆ ಕೇಳಿದ ಪ್ರಶ್ನೆನ..ನಿಮ್ಮ ಮೋದಿಗೆ ಕೇಳಿ Mr.ತೇಜಸ್ವಿ ಸೂರ್ಯ ಅವರೇ..

ಸಿದ್ದರಾಮಯ್ಯಗೆ ಕೇಳಿದ ಪ್ರಶ್ನೆನ..ನಿಮ್ಮ ಮೋದಿಗೆ ಕೇಳಿ Mr.ತೇಜಸ್ವಿ ಸೂರ್ಯ ಅವರೇ..

October 24, 2025
ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

October 24, 2025
Next Post

Santhosh S Lad: ಅಸಂಘಟಿತ ವಲಯದ ಕಾರ್ಮಿಕರು ಈ ರಾಜ್ಯದ ಬಹು ದೊಡ್ಡ ಆಸ್ತಿ

Recent News

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು
Top Story

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

by ಪ್ರತಿಧ್ವನಿ
October 24, 2025
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ
Top Story

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

by ಪ್ರತಿಧ್ವನಿ
October 24, 2025
ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ
Top Story

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

by ಪ್ರತಿಧ್ವನಿ
October 24, 2025
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ
Top Story

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

by ಪ್ರತಿಧ್ವನಿ
October 24, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

October 24, 2025
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!