• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

CM Siddaramaiah: ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು: ಅದಕ್ಕೇ ಅನ್ನಭಾಗ್ಯ ಜಾರಿಗೆ ತಂದೆ..!!

ಪ್ರತಿಧ್ವನಿ by ಪ್ರತಿಧ್ವನಿ
October 16, 2025
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಬೆಂಗಳೂರು ಒಂದರಲ್ಲೇ ವರ್ಷಕ್ಕೆ 943 ಟನ್ ಅನ್ನ ವೇಸ್ಟ್ ಮಾಡುತ್ತಿದ್ದೇವೆ: ಸಿಎಂ.ಸಿದ್ದರಾಮಯ್ಯ(CM Siddaramaiah) ಕಳವಳ. ಐದು ಕೆಜಿ ಅಕ್ಕಿ ಜೊತೆಗೆ ಉಳಿದ ಐದು ಕೆಜಿ ಬೇಳೆ ಕಾಳು ಕೊಡಲು ತೀರ್ಮಾನ: ಅನ್ನ ವೇಸ್ಟ್ ಮಾಡುವುದು ಅನ್ನಬ್ರಹ್ಮನಿಗೆ ಮಾಡುವ ಅವಮಾನ: ಸಿಎಂ.

ADVERTISEMENT

ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು: ಅದಕ್ಕೇ ಅನ್ನಭಾಗ್ಯ ಜಾರಿಗೆ ತಂದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ಅವರು ನುಡಿದರು. ಆಹಾರ ಮತ್ತು ನಾಗರಿಕ‌ ಸರಬರಾಜು ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ವಿಶ್ವ ಆಹಾರ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕವಿ ಬೇಂದ್ರೆಯವರು ರೈತರನ್ನು ಅನ್ನಬ್ರಹ್ಮ ಎಂದು ಕರೆದಿದ್ದಾರೆ. ಆದ್ದರಿಂದ ಅನ್ನ ವ್ಯರ್ಥ ಮಾಡುವುದು, ಬಿಸಾಡುವುದು ಅನ್ನಬ್ರಹ್ಮನಿಗೆ ಮಾಡುವ ಅವಮಾನ ಎಂದರು. ನಾವು ಒಂದು ಕಾಲದಲ್ಲಿ ಅನ್ನಕ್ಕಾಗಿ ಅಮೆರಿಕದ ಮೇಲೆ ಅವಲಂಭಿತರಾಗಿದ್ದೆವು. ಈಗ ವಿದೇಶಗಳಿಗೆ ರಫ್ತು ಮಾಡುವ ಮಟ್ಟಕ್ಕೆ ಪ್ರಗತಿ ಸಾಧಿಸಿದ್ದೇವೆ. ಇದರ ಜೊತೆಗೆ ಊಟ ವ್ಯರ್ಥ ಮಾಡುವ ಪ್ರಮಾಣವೂ ಹೆಚ್ಚಾಗುತ್ತಿರುವುದು ಬೇಸರದ ಸಂಗತಿ ಎಂದರು.

ಬೆಂಗಳೂರು ಒಂದರಲ್ಲೇ ಪ್ರತೀ ವರ್ಷ 943 ಟನ್ ಆಹಾರ ವೇಸ್ಟ್ ಆಗುತ್ತಿದೆ. ಹೆಚ್ಚೂಕಡಿಮೆ 360 ಕೋಟಿ ಮೌಲ್ಯದ ಆಹಾರ ವೇಸ್ಟ್ ಮಾಡುತ್ತಿದ್ದೇವೆ ಎಂದು ಜಿಕೆವಿಕೆ ಅಧ್ಯಯನವನ್ನು ಉಲ್ಲೇಖಿಸಿದರು. ಗೊತ್ತಿದ್ದೂ ಗೊತ್ತಿದ್ದೂ ಆಹಾರ ವೇಸ್ಟ್ ಮಾಡುವುದು ಅನ್ನಕ್ಕೆ ತೋರಿಸುವ ಅಹಂಕಾರ ಎಂದರು. ಅನ್ನ ವೇಸ್ಟ್ ಮಾಡುವುದು ಪಾಪದ ಕೆಲಸ ಎಂದು ಮಹಾತ್ಮ ಗಾಂಧಿ (Mahathma Gandhiji) ಹೇಳಿದ್ದಾರೆ‌ ಎಂದರು.

ಯಾರೂ ಹಸಿವಿನಿಂದ ಮಲಗಬಾರದು ಎನ್ನುವುದು ಕಾಂಗ್ರೆಸ್ ಬದ್ದತೆ: ಸಿಎಂ
ಯಾರೂ ಹಸಿವಿನಿಂದ ಮಲಗಬಾರದು ಎನ್ನುವುದು ಕಾಂಗ್ರೆಸ್ ಬದ್ದತೆ. ಹೀಗಾಗಿ ಬಡವರ ಪರವಾದ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು ಕಾಂಗ್ರೆಸ್. ಆಹಾರ ಭದ್ರತಾ ಕಾಯ್ದೆಯನ್ನು ಜಾರಿಗೆ ತಂದಿದ್ದು ಕಾಂಗ್ರೆಸ್ ಪ್ರಧಾನಿ ಮನ ಮೋಹನ್ ಸಿಂಗ್(Manmohan Singh). ಆಹಾರ ಭದ್ರತೆ ಕಾಯ್ದೆಯನ್ನು ಬಿಜೆಪಿ ತೀವ್ರವಾಗಿ ವಿರೋಧಿಸಿತ್ತು. ಬಡವರ ವಿರೋಧಿ ನೀತಿ ಬಿಜೆಪಿಯ ಸಿದ್ಧಾಂತ. ಇದನ್ನು ಅರ್ಥ ಮಾಡಿಕೊಳ್ಳಬೇಕು. ಆ ಕಡೆ ಬಿಜೆಪಿಗೂ ಚಪ್ಪಾಳೆ ತಟ್ಟೋದು, ಈ ಕಡೆ ಬಡವರ ಪರ ಕಾರ್ಯಕ್ರಮ ಕೊಟ್ಟ ಕಾಂಗ್ರೆಸ್ಸಿಗೂ ಚಪ್ಪಾಳೆ ತಟ್ಟೋದು ಮಾಡಬೇಡಿ. ಅನ್ನದ ಪರವಾಗಿ ಇರುವ ಕಾಂಗ್ರೆಸ್ ಬದ್ಧತೆ ಅರ್ಥ ಮಾಡಿಕೊಳ್ಳಿ ಎಂದು ಕರೆ ನೀಡಿದರು.

ಕಾಳ ಸಂತೆ ಮಾರಾಟ: ಕಠಿಣ ಕ್ರಮ
ಅನ್ನಭಾಗ್ಯದ ಅಕ್ಕಿಯನ್ನು ಸಂಗ್ರಹಿಸಿ ಕಾಳ ಸಂತೆಯಲ್ಲಿ ಮಾರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಕಾಳ ಸಂತೆ ಮಾರಾಟ ತಪ್ಪಿಸಲು 5 ಕೆಜಿ ಅಕ್ಕಿ ಕೊಟ್ಟು ಉಳಿದ ಐದು ಕೆಜಿ ಕಾಳು, ಬೇಳೆ ವಿತರಿಸಲು ತೀರ್ಮಾನಿಸಿದ್ದೇವೆ ಎಂದರು.

ಆಹಾರದ ಬಗ್ಗೆ ಜಾಗ್ರತೆ, ಸಣ್ಣ ರೈತರ ರಕ್ಷಣೆ ಮಾಡುವುದು ನಮ್ಮ , ನಿಮ್ಮ ಮತ್ತು ನಾಗರಿಕ ಸಮಾಜದ ಜವಾಬ್ದಾರಿ ಎಂದರು.

Tags: | siddaramaiahc m siddaramaiah danceCM Siddaramaiahcm siddaramaiah dancecm siddaramaiah latestcm siddaramaiah newscm siddaramaiah speechsiddaramaiahsiddaramaiah angersiddaramaiah angrysiddaramaiah bdaysiddaramaiah comedysiddaramaiah dancesiddaramaiah dancingsiddaramaiah grandsonsiddaramaiah jdssiddaramaiah newssiddaramaiah on bjpsiddaramaiah panchesiddaramaiah pcsiddaramaiah slip downsiddaramaiah speechsiddaramaiah stylesiddaramaiah visit
Previous Post

ಪಕ್ಷ ನಿಷ್ಠನಾಗಿ ಜೈಲುವಾಸ ಆಯ್ಕೆ ಮಾಡಿಕೊಂಡೆ: ಡಿಸಿಎಂ‌‌ ಡಿ.ಕೆ. ಶಿವಕುಮಾರ್

Next Post

DK Shivakumar: ಅನ್ನಭಾಗ್ಯ ಯೋಜನೆ; ಹೆಚ್ಚುವರಿ ಐದು ಕೆ.ಜಿ ಅಕ್ಕಿ ಬದಲು ದಿನಸಿ ಕಿಟ್ ನೀಡಲು ಚಿಂತನೆ..!!

Related Posts

ನಾಯಿಯ ಮುಖವಾಡ ಧರಿಸಿ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ: ಕಾರಣವೇನು
Top Story

ನಾಯಿಯ ಮುಖವಾಡ ಧರಿಸಿ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ: ಕಾರಣವೇನು

by ಪ್ರತಿಧ್ವನಿ
August 19, 2026
0

ವಿರುದ್ಧ ಸಾಮಾನ್ಯವಾಗಿ ಪ್ರತಿಭಟನೆ, ಧರಣಿ, ರಸ್ತೆ ತಡೆ ಸೇರಿದಂತೆ ವಿವಿಧ ರೀತಿಯಲ್ಲಿ ಹೋರಾಟ ನಡೆಸುವುದನ್ನು ನೋಡಿದ್ದೇವೆ. ಆದರೆ ಮಧ್ಯಪ್ರದೇಶದ ಖಂಡ್ವಾ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿಶಿಷ್ಟ ಪ್ರತಿಭಟನೆಯೊಂದು...

Read moreDetails
ರೇಣುಕಾಸ್ವಾಮಿ ಪ್ರಕರಣದ ಆರೋಪಿ ಪವಿತ್ರಾ ಗೌಡ ಮೊದಲ ಪತಿ ಸಂಜಯ್ ಸಿಂಗ್ ನಿಧನ

ರೇಣುಕಾಸ್ವಾಮಿ ಪ್ರಕರಣದ ಆರೋಪಿ ಪವಿತ್ರಾ ಗೌಡ ಮೊದಲ ಪತಿ ಸಂಜಯ್ ಸಿಂಗ್ ನಿಧನ

August 19, 2026
ಮಕ್ಕಳು, ಪ್ರವಾಸಿಗರಿಗೆ ಗುಡ್‌ನ್ಯೂಸ್‌ ಕೊಟ್ಟ ಕೆ.ಜೆ.ಜಾರ್ಜ್; ಹೇಳಿದ್ದೇನು?

ಮಕ್ಕಳು, ಪ್ರವಾಸಿಗರಿಗೆ ಗುಡ್‌ನ್ಯೂಸ್‌ ಕೊಟ್ಟ ಕೆ.ಜೆ.ಜಾರ್ಜ್; ಹೇಳಿದ್ದೇನು?

August 19, 2026
ಕೃಷಿ ಸಚಿವ ನರೇಂದ್ರಸ್ವಾಮಿ ಮನವಿಗೆ ಕೇಂದ್ರ ಸ್ಪಂದನೆ ಏನು?

ಕೃಷಿ ಸಚಿವ ನರೇಂದ್ರಸ್ವಾಮಿ ಮನವಿಗೆ ಕೇಂದ್ರ ಸ್ಪಂದನೆ ಏನು?

August 19, 2026
ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ

ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ

August 19, 2026
Next Post

DK Shivakumar: ಅನ್ನಭಾಗ್ಯ ಯೋಜನೆ; ಹೆಚ್ಚುವರಿ ಐದು ಕೆ.ಜಿ ಅಕ್ಕಿ ಬದಲು ದಿನಸಿ ಕಿಟ್ ನೀಡಲು ಚಿಂತನೆ..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada