- ಪ್ರಥಮ ಬಾರಿಗೆ ತಾಯಿ ದರ್ಶನ ಪಡೆದಿರುವೆ, ನಾಡಿನ ಒಳಿತಿಗಾಗಿ ವಿಶೇಷ ಪೂಜೆ ಸಲ್ಲಿಸಲಾಯಿತು. ಉತ್ತಮ ಮಳೆ, ಬೆಳೆಯಾಗಿ ರೈತರ ಬದುಕು ಹಸನಾಗಲಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಹಾಸನಾಂಬೆ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ದೇವರು ಎಲ್ಲರಿಗೂ ಸೌಭಾಗ್ಯವನ್ನು ಕೊಡಲಿ, ತಾಯಿಯ ದರ್ಶನಕ್ಕಾಗಿ ಜಿಲ್ಲಾಡಳಿತ ಉತ್ತಮ ವ್ಯವಸ್ಥೆ ಮಾಡಿದೆ. ಹಾಸನಾಂಬೆ ಮಹತ್ವದ ಬಗ್ಗೆ ಕೇಳಿದ್ದೆ. ದೇವರ ದರ್ಶನ ಪಡೆದಿದ್ದು, ಖುಷಿ ಆಯಿತು ಎಂದು ಸಚಿವರು ಹೇಳಿದರು.


- ಗ್ಯಾರಂಟಿ ಯೋಜನೆಗಳಿಂದ ಜನರ ಬದುಕು ಹಸನ
ಶಕ್ತಿ ಯೋಜನೆ ಹಾಗೂ ಗೃಹಲಕ್ಷ್ಮಿ ಯೋಜನೆಗಳಿಂದ ಮಹಿಳೆಯರಿಗೆ ಸ್ವಾವಲಂಬನೆ, ಶಕ್ತಿ ಕೊಟ್ಟಿದೆ. ನಮ್ಮ ಸರ್ಕಾರಕ್ಕೆ ಈ ಯೋಜನೆಗಳಿಂದ ಸಾರ್ಥಕತೆ ಭಾವನೆ ಮೂಡಿದೆ ಎಂದರು.

ಈಗಾಗಲೇ ಜುಲೈ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದು, ಆಗಸ್ಟ್ ತಿಂಗಳ ಹಣ ದೀಪಾವಳಿಗೂ ಮುನ್ನ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾಹಿತಿ ನೀಡಿದರು.

ಹಾಸನಾಂಬೆ ದರ್ಶನದ ಬಳಿಕ ಸಚಿವರು ಸಿದ್ಧೇಶ್ವರ ಸ್ವಾಮಿಯ ದರ್ಶನ ಪಡೆದರು.

ಈ ವೇಳೆ ಹಾಸನ ಜಿಲ್ಲಾಧಿಕಾರಿ ಲತಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜಿತಾ, ಹಾಸನ ತಹಸೀಲ್ದಾರ್ ಗೀತಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಧರಣಿ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.










