ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್‌ಗೆ ಇಂದು ಮಹತ್ವದ ದಿನವಾಗಿದ್ದು, ಇಂದು ಎಲ್ಲಾ ಆರೋಪಿಗಳ ಮೇಲೆ ದೋಷಾರೋಪ ನಿಗದಿಯಾಗಲಿದೆ. ಈ ಹಿನ್ನಲೆಯಲ್ಲಿ ನಟ ದರ್ಶನ್ ಹಾಗೂ ಪ್ರಕರಣದ ಎ-೧ ಆರೋಪಿ ಪವಿತ್ರ ಗೌಡ ಸೇರಿದಂತೆ ಎಲ್ಲಾ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗುವ ಸಾಧ್ಯತೆ ಇದೆ.

ತನಿಖಾ ತಂಡ ಸಲ್ಲಿಸಿರುವ ದೋಷಾರೋಪ ಪಟ್ಟಿಯನ್ನು ಪರಿಶೀಲನೆ ಬಳಿಕ ನ್ಯಾಯಾಲಯದಲ್ಲಿ ಆರೋಪಿಗಳ ವಿರುದ್ಧ ಸಲ್ಲಿಕೆಯಾಗಲಿರುವ ದೋಷಾರೋಪಗಳನ್ನು ವಿವರಿಸಲಾಗುತ್ತದೆ. ಬಳಿಕ ಆರೋಪಗಳ ಬಗ್ಗೆ ಪ್ರತಿಕ್ರಿಯಿಸಲು ಆರೋಪಿಗಳಿಗೆ ಸಮಯ ನೀಡಲಾಗುತ್ತದೆ.


ಒಂದು ವೇಳೆ ಆರೋಪಿಗಳು ಆರೋಪಗಳನ್ನು ನಿರಾಕರಿಸಿದರೆ ಮತ್ತೆ ವಿಚಾರಣೆ ಮುಂದುವರಿಯಲಿದೆ. ಆದರೆ ಪೊಲೀಸರ ಆರೋಪಗಳನ್ನು ನಟ ದರ್ಶನ್ ಹಾಗೂ ಇತರ ಆರೋಪಿಗಳು ಒಪ್ಪಿಕೊಂಡರೇ ಇಂದೇ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಪ್ರಕಟವಾಗುವ ಸಾಧ್ಯತೆ ಇದೆ.



