ಬೆಂಗಳೂರು: ವುಮೆನ್ಸ್ ಪ್ರೀಮಿಯರ್ ಲೀಗ್(WPL) 4ನೇ ಸೀಸನ್‌ನ ಮೆಗಾ ಹರಾಜಿಗೆ ದಿನಗಣನೆ ಆರಂಭವಾಗಿದ್ದು, ಕ್ರಿಕೆಟ್ ಪ್ರೇಮಿಗಳು ಕಾತುರರಾಗಿದ್ದಾರೆ. ಈ ನಡುವೆಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡದ ಮುಖ್ಯ ಕೋಚ್ ಬದಲಾವಣೆ ಮಾಡಲಾಗಿದೆ. ಮಲೋಲನ್ ರಂಗರಾಜನ್ ಆರ್‌ಸಿಬಿ ತಂಡದ ಹೊಸ ಕೋಚ್ ಆಗಿ ನೇಮಕಗೊಂಡಿದ್ದಾರೆ.

ಈ ಹಿಂದೆ ಲ್ಯೂಕ್ ವಿಲಿಯಮ್ಸ್ ಆರ್‌ಸಿಬಿ ತಂಡದ ಕೋಚ್ ಆಗಿ ಕಾರ್ಯ ನಿರ್ವಹಿಸಿದ್ದರು. ಆದರೆ ಕಳೆದ ಬಾರಿ ಸೋಲಿನ ಬಳಿಕ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಆರ್‌ಸಿಬಿ ಮಹಿಳಾ ತಂಡಕ್ಕೆ ಮಲೋಲನ್ ರಂಗರಾಜನ್ ಅವರನ್ನು ಹೊಸ ಕೋಚ್ ಆಗಿ ನೇಮಕ ಮಾಡಲಾಗಿದೆ . ಮಲೋಲನ್ ರಂಗರಾಜನ್ ಅವರೊಂದಿಗೆ ಇಂಗ್ಲೆಂಡ್‌ನ ಮಾಜಿ ವೇಗಿ ಅನ್ಯಾ ಶ್ರಬ್ಸೋಲ್ ಅವರು ಕೂಡ ಆರ್‌ಸಿಬಿ ತಂಡದ ಬೌಲಿಂಗ್ ಕೋಚ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ.

ಇನ್ನು ನವೆಂಬರ್ 26 ರಿಂದ 29 ರೊಳಗೆ ವುಮೆನ್ಸ್ ಪ್ರೀಮಿಯರ್ ಲೀಗ್(WPL) 4ನೇ ಸೀಸನ್‌ನ ಮೆಗಾ ಹರಾಜು ನಡೆಯಲಿದ್ದು, ಈ ಬಾರಿ ಕಪ್ ಗೆಲ್ಲಲೇ ಬೇಕು ಎನ್ನುವ ಉತ್ಸಾಹದಲ್ಲಿರುವ ಆರ್‌ಸಿಬಿ ಫ್ರಾಂಚೈಸಿ ಒಟ್ಟು ಐವರು ಆಟಗಾರ್ತಿಯರನ್ನು ರಿಟೈನ್ ಮಾಡಿಕೊಳ್ಳುವುದರ ಜೊತೆಗೆ ಬಲಿಷ್ಠ ತಂಡವನ್ನು ರಚಿಸಬೇಕಿದೆ.













