• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಿರೋಧ ಪಕ್ಷಗಳ ರಾಜಕಾರಣಕ್ಕೆ ರೈತರು ಬಲಿಯಾಗಬಾರದು- ಸಿಎಂ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
November 6, 2025
in Top Story, ಕರ್ನಾಟಕ, ರಾಜಕೀಯ
0
ವಿರೋಧ ಪಕ್ಷಗಳ ರಾಜಕಾರಣಕ್ಕೆ ರೈತರು ಬಲಿಯಾಗಬಾರದು- ಸಿಎಂ ಸಿದ್ದರಾಮಯ್ಯ
Share on WhatsAppShare on FacebookShare on Telegram

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಬೆಳಗಾವಿ, ಬಾಗಲಕೋಟೆ ಮುಂತಾದ ಜಿಲ್ಲೆಗಳಲ್ಲಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ನನಗೆ ಸ್ಪಷ್ಟ ಮಾಹಿತಿ ಇದೆ. ಹಾಗಾಗಿ ನಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಮತ್ತು ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಇಲಾಖೆಯ ಆಯುಕ್ತರಿಗೆ ಸೂಚನೆಗಳನ್ನು ನೀಡಿ ರೈತರು ಹಾಗೂ ಕಾರ್ಖಾನೆಗಳ ಮಾಲೀಕರ ಜೊತೆ ಚರ್ಚೆ ನಡೆಸುವಂತೆ ಸೂಚಿಸಲಾಗಿತ್ತು. ಅದರಂತೆ ಸಂಬಂಧಪಟ್ಟ ಸಚಿವರು, ಅಧಿಕಾರಿಗಳು ಚರ್ಚೆ ನಡೆಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ADVERTISEMENT

ಬೆಳಗಾವಿ ಕಬ್ಬು ಬೆಳೆಗಾರರ ಪ್ರತಿಭಟನೆಯ ಕುರಿತು ಸಚಿವ ಸಂಪುಟ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಜಿಲ್ಲಾಧಿಕಾರಿಗಳು ಚರ್ಚೆ ನಡೆಸಿ ಶೇ. 11.25 ರಿಕವರಿ ಬಂದರೆ 3,200 ರೂ. ಹಾಗೂ ಶೇ.10.25 ರಿಕವರಿ ಬಂದರೆ 3100 ರೂ. ಗಳನ್ನು (ಕಟಾವು ಮತ್ತು ಸಾಗಣೆ ವೆಚ್ಚ ಹೊರತುಪಡಿಸಿ) ಪಾವತಿಸುವಂತೆ ಕಾರ್ಖಾನೆಗಳ ಮಾಲೀಕರಿಗೆ ಮನವೊಲಿಸಿದ್ದಾರೆ. ಹಾಗೆಯೇ, ರೈತರಿಗೂ ಮನವೊಲಿಸುವ ಕೆಲಸ ಮಾಡಿದ್ದಾರೆ. ಆದರೆ, ವಿರೋಧ ಪಕ್ಷಗಳವರು ಈ ವಿಚಾರವನ್ನು ರಾಜಕಾರಣಕ್ಕೆ ಬಳಸುತ್ತಿರುವುದರಿಂದ ವಿಷಯ ತುಸು ಗೊಂದಲಕರವಾಗಿದೆ ಎಂದರು.

ವಾಸ್ತವವಾಗಿ ನೋಡಿದರೆ, ಕಬ್ಬು ಮತ್ತು ಸಕ್ಕರೆ ವಿಚಾರದಲ್ಲಿ ರಾಜ್ಯ ಸರ್ಕಾರದ ಪಾತ್ರ ಅತ್ಯಂತ ನಗಣ್ಯವಾಗಿದೆ. ಕೇಂದ್ರ ಸರ್ಕಾರವು ಪ್ರತಿ ವರ್ಷ ‍FRP (Fair and Remunerative Price) ಯನ್ನು ನಿಗದಿಪಡಿಸುತ್ತದೆ. ಈ ದರವನ್ನು ಕೇಂದ್ರ ಸರ್ಕಾರವೆ ನಿಗದಿ ಮಾಡಿದೆ. ಕೇಂದ್ರ ಸರ್ಕಾರವು ನಿಗದಿ ಮಾಡಿರುವ ದರ ರೈತರಿಗೆ ಲಭಿಸುತ್ತಿದೆಯೇ ಎಂದು ನೋಡಿಕೊಳ್ಳುವುದು ಹಾಗೂ ರೈತರಿಗೆ ತೂಕ, ಬೆಲೆ, ಹಾಗೂ ನಿಗದಿತ ಅವಧಿಯಲ್ಲಿ ಪಾವತಿ ಇತ್ಯಾದಿಗಳನ್ನು ನೋಡಿಕೊಳ್ಳುವುದು ರಾಜ್ಯ ಸರ್ಕಾರದ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

ಇನ್ನು FRP (ನ್ಯಾಯಯುತ ಮತ್ತು ಲಾಭದಾಯಕ ಬೆಲೆ) ಯನ್ನು ನಿಗದಿಪಡಿಸುವುದಷ್ಟೆ ಕೇಂದ್ರ ಸರ್ಕಾರದ ಜವಾಬ್ದಾರಿಯಲ್ಲ. ಸಕ್ಕರೆ ಮೇಲಿನ ನಿಯಂತ್ರಣವನ್ನು ಅಗತ್ಯ ವಸ್ತುಗಳ ಕಾಯ್ದೆ ಪ್ರಕಾರ ಕೇಂದ್ರ ಸರ್ಕಾರ ಹೊಂದಿರುತ್ತದೆ. ಹಿಂದೆ ಯುಪಿಎ ಸರ್ಕಾರದ ಅವಧಿಯಿಂದಲೂ 2017-18 ರವರೆಗೆ ರಿಕವರಿ ಪ್ರತಿ ಕ್ವಿಂಟಾಲಿಗೆ ಶೇ. 9.5 ರಷ್ಟನ್ನು ನಿಗದಿಪಡಿಸಲಾಗುತ್ತಿತ್ತು. 2018-19 ನಿಂದ 2021-22 ರವರೆಗೆ ಅದನ್ನು ಶೇ.10 ಕ್ಕೆ ಹೆಚ್ಚಿಸಲಾಯಿತು. 2022-23 ರಿಂದ ಈಚೆಗೆ ಎಫ್.ಆರ್.ಪಿ. ಯನ್ನು ಶೇ. 10.25 ಕ್ಕೆ ಏರಿಕೆ ಮಾಡಲಾಗಿದೆ. ಈ ವಿಚಾರದಲ್ಲೂ ನಮ್ಮ ರೈತರಿಗೆ ಅನ್ಯಾಯ ಮಾಡಲಾಗಿದೆ.

ಸಕ್ಕರೆಗೆ 2019 ರಲ್ಲಿ ಎಂ.ಎಸ್.ಪಿ ಯನ್ನು ಕಡೆಯದಾಗಿ ನಿಗದಿಪಡಿಸಲಾಯಿತು. ಆಗ, ಪ್ರತಿ ಕೆ.ಜಿ. ಗೆ 31 ರೂ. ನಿಗದಿ ಮಾಡಲಾಗಿತ್ತು. ಆನಂತರ ಎಂ.ಎಸ್.ಪಿ ಯನ್ನು ಪರಿಷ್ಕರಿಸಲಿಲ್ಲ. ಜೊತೆಗೆ, ಕಳೆದ ಕೆಲವು ವರ್ಷಗಳಿಂದಲೂ ಕೇಂದ್ರ ಸರ್ಕಾರವು ಸಕ್ಕರೆ ರಫ್ತನ್ನು ನಿಲ್ಲಿಸಿದೆ. ಕಳೆದ ವರ್ಷ ಇಡೀ ದೇಶಕ್ಕೆ ಕೇವಲ 10 ಲಕ್ಷ ಮೆಟ್ರಿಕ್ ಟನ್ ರಫ್ತು ಮಾಡಲು ಮಾತ್ರ ಅವಕಾಶ ನೀಡಲಾಗಿತ್ತು. ಕರ್ನಾಟಕವೊಂದರಲ್ಲೆ 41 ಲಕ್ಷ ಮೆಟ್ರಿಕ್ ಟನ್ ಉತ್ಪಾದನೆಯಾಗಿತ್ತು. ಈ ಕಾರಣದಿಂದಲೂ ರೈತರಿಗೆ ಸಮಸ್ಯೆಯಾಗುತ್ತಿದೆ ಎಂದರು.

Congress High Command : ದಿಲ್ಲಿಗೆ ಬರುವ ಅವಶ್ಯಕತೆ ಇಲ್ಲ | ರಾಜ್ಯ ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಶಾಕ್ ..!

ಇದಷ್ಟೆ ಅಲ್ಲದೇ ಎಥನಾಲ್ ವಿಚಾರದಲ್ಲೂ ಸಹ ಕೇಂದ್ರ ಸರ್ಕಾರವು ತಾರತಮ್ಯ ಧೋರಣೆಯನ್ನು ಅನುಸರಿಸುತ್ತಿದೆ. ಕರ್ನಾಟಕದಲ್ಲಿ 270 ಕೋಟಿ ಲೀಟರ್‌ ಉತ್ಪಾದನಾ ಸಾಮರ್ಥ್ಯ ಇದ್ದರೂ ಸಹ 2024-25 ರಲ್ಲಿ 47 ಕೋಟಿ ಲೀಟರ್‌ಗಳನ್ನು ತೈಲ ಕಂಪನಿಗಳಿಗೆ ಖರೀದಿ ಮಾಡಲು ಹಂಚಿಕೆ ಮಾಡಲಾಗಿದೆ. ಇದು ಕೇಂದ್ರ ಸರ್ಕಾರವು ರಾಜ್ಯದ ರೈತರ ಬದುಕಿನೊಂದಿಗೆ ಆಡುತ್ತಿರುವ ಚೆಲ್ಲಾಟಕ್ಕೆ ಸ್ಪಷ್ಟ ನಿದರ್ಶನವಾಗಿದೆ. ನಮ್ಮ ಸರ್ಕಾರವು ಅಧಿಕಾರಕ್ಕೆ ಬಂದ ಮೇಲೆ ತೂಕದಲ್ಲಿ ನಡೆಯುತ್ತಿದ್ದ ಮೋಸವನ್ನು ತಡೆಗಟ್ಟಲು ಎಲ್ಲಾ ಸಕ್ಕರೆ ಕಾರ್ಖಾನೆಗಳಲ್ಲೂ ಡಿಜಿಟಲ್ ತೂಕ ಯಂತ್ರವನ್ನು ಅಳವಡಿಸಲಾಗಿದೆ. ಸರ್ಕಾರದ ವತಿಯಿಂದಲೇ 11 ಜಾಗಗಳಲ್ಲಿ ಡಿಜಿಟಲ್ ತೂಕ ಯಂತ್ರಗಳನ್ನು ಅಳವಡಿಸಲು ಪ್ರಕ್ರಿಯೆಗಳನ್ನು ಪ್ರಾರಂಭಿಸಿದ್ದೇವೆ.


ಇದರ ಜೊತೆಗೆ ತೂಕ, ಇಳುವರಿ, ಕಟಾವು ಮತ್ತು ಬಿಲ್ ಪಾವತಿಗಳಿಗೆ ಸಂಬಂಧಪಟ್ಟಂತೆ ಪರಿಶೀಲನೆಗೆ ಸಮಿತಿಗಳನ್ನು ರಚಿಸಲಾಗಿದೆ. ಸರ್ಕಾರವು ಉಚಿತವಾಗಿ ಎಪಿಎಂಸಿ ಗಳಲ್ಲಿ ಸ್ಥಾಪಿಸಿರುವ ತೂಕದ ಯಂತ್ರಗಳಲ್ಲಿ ಉಚಿತವಾಗಿ ತೂಕ ಮಾಡಿಕೊಡುವ ವ್ಯವಸ್ಥೆ ಕಲ್ಪಿಸಿದ್ದೇವೆ. 2024-25 ನೇ ಸಾಲಿನಲ್ಲಿ ರಾಜ್ಯದ ಸಕ್ಕರೆ ಕಾರ್ಖಾನೆಗಳು 522 ಲಕ್ಷ ಮೆಟ್ರಿಕ್ ಟನ್ ಕಬ್ಬು ಅರೆದಿವೆ. ರೈತರಿಗೆ ಈ ಅವಧಿಯಲ್ಲಿ 18,221.88 ಕೋಟಿ ರೂ. ಗಳನ್ನು ಎಫ್.ಆರ್. ಪಿ. ದರದಂತೆ ಪಾವತಿಸಬೇಕಾಗಿತ್ತು. ಆದರೂ ಸಹ ಕೆಲವು ಕಡೆ ರಿಕವರಿ (ಸಕ್ಕರೆ ಇಳುವರಿ) ಹೆಚ್ಚು ಬಂದ ಕಾರಣ 19,569.15 ಕೊಟಿ ರೂ. ಗಳನ್ನು ರೈತರಿಗೆ ಪಾವತಿಸುವಂತೆ ನೋಡಿಕೊಳ್ಳುವಲ್ಲಿ ರಾಜ್ಯ ಸರ್ಕಾರವು ಕ್ರಮ ಕೈಗೊಂಡಿದೆ. ಇಷ್ಟೆಲ್ಲಾ ಮಾಡಿದ್ದರೂ ಸಹ, ರೈತರ ಮುಗ್ಧತೆಯನ್ನು ವಿರೋಧ ಪಕ್ಷದವರು ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದ್ದಾರೆ. ರೈತರು ಯಾವುದೇ ಕಾರಣಕ್ಕೂ ರೈತ ದ್ರೋಹಿಯಾದ ಬಿ.ಜೆ.ಪಿ. ಯವರ ಮರಳು ಮಾತುಗಳಿಗೆ ಬಲಿಯಾಗಬಾರದು ಎಂದು ಹೇಳಿದರು.

Farmers Protest  :  ರಸ್ತೆ ಗೆ ಇಳಿದ ರೈತರು #pratidhvani #farmersmarket #sugarminister

ಇನ್ನು ನಮ್ಮ ಸರ್ಕಾರವು ಸಂವಾದದಲ್ಲಿ ಮತ್ತು ಪ್ರಜಾಪ್ರಭುತ್ವದ ಪ್ರಕ್ರಿಯೆಗಳಲ್ಲಿ ನಂಬಿಕೆ ಇಟ್ಟುಕೊಂಡಿದೆ ಮತ್ತು ನಿರಂತರವಾಗಿ ರೈತ ಪರವಾದ ತೀರ್ಮಾನಗಳನ್ನು ಕೈಗೊಳ್ಳುತ್ತಾ ಬಂದಿದೆ. ಆದ್ದರಿಂದ, ನಾಳೆ ಬೆಳಿಗ್ಗೆ 11.00 ಗಂಟೆಗೆ ರಾಜ್ಯದ ಎಲ್ಲಾ ಸಕ್ಕರೆ ಕಾರ್ಖಾನೆಗಳ ಮಾಲೀಕರುಗಳ ಜೊತೆ ಹಾಗೂ ಮಧ್ಯಾಹ್ನ 1.00 ಗಂಟೆಗೆ ರೈತ ಮುಖಂಡರುಗಳ ಜೊತೆ ಚರ್ಚಿಸಲು ಸಭೆ ಕರೆದಿದ್ದೇವೆ. ಸದರಿ ಸಭೆಯಲ್ಲಿ ಎರಡೂ ಕಡೆಯ ಅಹವಾಲುಗಳನ್ನು ಆಲಿಸಿ ಸೂಕ್ತ ತೀರ್ಮಾನವನ್ನು ರಾಜ್ಯ ಸರ್ಕಾರವು ತನ್ನ ಮಿತಿಯಲ್ಲಿ ತೀರ್ಮಾನವನ್ನು ಕೈಗೊಳ್ಳಲಿದೆ. ಹೀಗಾಗಿ ರಾಜ್ಯದ ಕಬ್ಬು ಬೆಳೆಯುವ ರೈತರು ಸರ್ಕಾರದ ಮೇಲೆ ವಿಶ್ವಾಸವಿಡಬೇಕೆಂದು ಹಾಗೂ ವಿರೋಧ ಪಕ್ಷಗಳ ರಾಜಕಾರಣಕ್ಕೆ ಬಲಿಯಾಗಬಾರದೆಂದು ನಾನು ಮನವಿ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Tags: Belagvi ProtestBJPCMSiddaramaiahcongressFarmers protestkaranataka politicsPoliticsprotest
Previous Post

ರೈತರ ಹೋರಾಟಕ್ಕೆ ಥಂಡಾ ಹೊಡೆದ ಸರ್ಕಾರ: ನಾಳೆ ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಸಿಎಂ ಮಹತ್ವದ ಸಭೆ

Next Post

ಕಬ್ಬಿನ FRP ನಿಗದಿ ಮಾಡುವುದು ಕೇಂದ್ರ ಸರ್ಕಾರ- ಸಿಎಂ ಸಿದ್ದರಾಮಯ್ಯ

Related Posts

ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ
Top Story

ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ

by ಪ್ರತಿಧ್ವನಿ
May 2, 2026
0

ಅಮೆರಿಕದ ನ್ಯೂಯಾರ್ಕ್ ನಗರ ಮೇಯರ್ ಆಗಿರುವ ಭಾರತೀಯ ಮೂಲದ ಜೋಹ್ರಾನ್ ಮಮ್ದಾನಿ ಮತ್ತೊಮ್ಮೆ ವಿವಾದಕ್ಕೆ ಗುರಿಯಾಗಿದ್ದಾರೆ. ಅವರ ಹೇಳಿಕೆ ಇದೀಗ ರಾಜಕೀಯ ಮತ್ತು ಮಾಧ್ಯಮ ವಲಯದಲ್ಲಿ ಚರ್ಚೆಗೆ...

Read moreDetails
ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

May 2, 2026
ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

May 2, 2026
ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

May 2, 2026
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

May 1, 2026
Next Post
ಕಬ್ಬಿನ FRP ನಿಗದಿ ಮಾಡುವುದು ಕೇಂದ್ರ ಸರ್ಕಾರ- ಸಿಎಂ ಸಿದ್ದರಾಮಯ್ಯ

ಕಬ್ಬಿನ FRP ನಿಗದಿ ಮಾಡುವುದು ಕೇಂದ್ರ ಸರ್ಕಾರ- ಸಿಎಂ ಸಿದ್ದರಾಮಯ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada