• Home
  • About Us
  • ಕರ್ನಾಟಕ
Wednesday, January 14, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಖಾಸಗಿ ಹಾಗೂ ಸರ್ಕಾರಿ ವಲಯದ ಹೆಣ್ಣುಮಕ್ಕಳಿಗೆ ಸಿಗಲಿದೆ ತಿಂಗಳಿಗೊಂದು ವೇತನ ಸಹಿತ ರಜೆ..!!

ಕಾರ್ಮಿಕ ಇಲಾಖೆಯಿಂದ ರಾಜ್ಯದ ಉದ್ಯೋಗಸ್ಥ ಮಹಿಳೆಯರಿಗೆ ಬಂಪರ್ ಕೊಡುಗೆ, ಫಲನೀಡಿದ ಕಾರ್ಮಿಕ ಸಚಿವ ಸಂತೋಷ್ ಎಸ್‌ ಲಾಡ್ ಪ್ರಯತ್ನ. ಋತುಚಕ್ರ ರಜೆ ಸರ್ಕಾರದಿಂದ ಅಧಿಕೃತ ಆದೇಶ ಪ್ರಕಟ

ಪ್ರತಿಧ್ವನಿ by ಪ್ರತಿಧ್ವನಿ
November 14, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ADVERTISEMENT

ರಾಜ್ಯದ ವಿವಿಧ ಕಾರ್ಮಿಕ ಕಾಯ್ದೆಗಳ ಅಡಿ ನೋಂದಾಯಿತ ಉದ್ದಿಮೆಗಳಲ್ಲಿ ಕೆಲಸ ಮಾಡುವ ಮಹಿಳಾ ಕಾರ್ಮಿಕರಿಗೆ ಋತುಚಕ್ರ ಸಮಯದಲ್ಲಿ ಮಾಸಿಕ ಒಂದು ದಿನ ವೇತನ ಸಹಿತ ರಜೆ ನೀಡುವ ಕಲ್ಪಿಸುವ ಸಂಬಂಧ ಸರ್ಕಾರ ಅಧಿಕೃತ ಆದೇಶ ಪ್ರಕಟಸಿದೆ. ಋತುಚಕ್ರ ರಜೆ ನೀತಿ – 2025ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದಿದ್ದ ಸಚಿವ ಸಂಪುಟ ಸಭೆಯಲ್ಲಿ ಅಂಕಿತ ದೊರೆತಿತ್ತು. ಮಹಿಳೆಯೆರಿಗೆ ಅನುಕೂಲವಾಗುವ ಹಾಗೂ ಅವರ ಸಬಲೀಕರಣಕ್ಕೆ ಬೆಂಬಲ ನೀಡುವ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಜಾರಿ ಮಾಡಿದೆ. ಇದೀಗ ಇವುಗಳ ಜೊತೆ ಋತುಚಕ್ರ ರಜೆ ಮತ್ತೊಂದು ಸೇರ್ಪಡೆಯಾಗಲಿದೆ.

ಈ ಹಿಂದೆ ಕಾರ್ಮಿಕ ಇಲಾಖೆಯು ಮಾಸಿಕ ಋತುಸ್ರಾವದ ರಜೆ ನೀತಿಗಾಗಿ ಆಡಳಿತಾತ್ಮಕ ಅನುಮೋದನೆ ಕೋರಿತ್ತು. ಆದರೆ ಈ ನೀತಿಯನ್ನು ಸಮಗ್ರವಾಗಿ ಜಾರಿಗೆ ತರಬೇಕು ಎಂದು ಬಯಸಿದ್ದ ಸಚಿವರು, ನಿರಂತರ ಸಭೆ, ಚರ್ಚೆ ಮತ್ತು ಸಂವಾದಗಳಿಗೆ ವೇದಿಕೆ ಒದಗಿಸಿದ್ದರು. ಉದ್ಯೋಗಸ್ಥ ಮಹಿಳೆಯರಿಗೆ ಋತುಚಕ್ರದ ರಜೆ ಸಂಬಂಧ. ಸರ್ಕಾರ ಕ್ರೈಸ್ಟ್ ವಿಶ್ವವಿದ್ಯಾಲಯದ ಕಾನೂನು ವಿಭಾಗದ ಮುಖ್ಯಸ್ಥೆ ಸಪ್ನಾ ಎಸ್ ಅವರ ಅಧ್ಯಕ್ಷತೆಯ 18 ಸದಸ್ಯರ ಸಮಿತಿ ನೇಮಿಸಿತ್ತು. ಈ ಸಮಿತಿ ಕೂಡ ವರದಿ ಸಲ್ಲಿಸಿತ್ತು. ಋತುಚಕ್ರದ ಆರೋಗ್ಯವನ್ನು ಮಹಿಳೆಯರ ಹಕ್ಕುಗಳು ಮತ್ತು ಕೆಲಸದ ಸ್ಥಳದ ಕಲ್ಯಾಣದ ಅಂಶವೆಂದು ಪರಿಗಣಿಸಿ, ಅಂತಿಮವಾಗಿ ಸಚಿವ ಸಂಪುಟದ ಅನುಮೋದನೆ ನೀಡಿತ್ತು.

ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಪರಿಶ್ರಮ ಋತುಚಕ್ರದ ರಜೆ ಸೌಲಭ್ಯ ಜಾರಿಯಾಗುವುದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರ ಪರಿಶ್ರಮ ಸಾಕಷ್ಟು ಇದೆ‌. ಮಹಿಳಾ ಕಾರ್ಮಿಕರಿಗೆ ಅನುಕೂಲವಾಗುವ ಹಲವು ಯೋಜನೆಗಳನ್ನು ಕಾರ್ಮಿಕ ಇಲಾಖೆಯ ಮೂಲಕ ಸಚಿವ ಸಂತೋಷ್ ಲಾಡ್ ಅವರು ರೂಪಿಸುತ್ತಾ ಬಂದಿದ್ದಾರೆ. ಇದರ ಜೊತೆಗೆ ದೇಶದ ಬೇರೆ ಬೇರೆ ರಾಜ್ಯ ಮತ್ತು ದೇಶಗಳಲ್ಲಿ ಋತುಚಕ್ರ ರಜೆ ನೀತಿಗಳನ್ನೆಲ್ಲ ಕೂಲಂಕಷವಾಗಿ ಅಧ್ಯಯನದ ನಂತರ ರಾಜ್ಯದಲ್ಲೂ ಈ ನೀತಿ ಸಮರ್ಪಕವಾಗಿ ಜಾರಿಗೆ ಬರುವಂತೆ ನೋಡಿಕೊಂಡಿದ್ದರು. ಲಾಡ್‌ ಅವರಿಗೆ ಮಹಿಳಾ ಉದ್ಯೋಗಿಗಳ ಧನ್ಯವಾದ
ಋತುಸ್ರಾವದ ರಜೆಗೆ ಸಚಿವ ಸಂಪುಟ ಅನುಮೋದನೆ ನೀಡಿದಾಗಲೇ ಸಚಿವ ಸಂತೋಷ್ ಲಾಡ್‌ ಅವರಿಗೆ ಮಹಿಳಾ ಉದ್ಯೋಗಿಗಳು ಧನ್ಯವಾದಗಳನ್ನು ತಿಳಿಸಿದ್ದರು. ಕಾರ್ಮಿಕ ಇಲಾಖೆಯ ಈ ವಿಶಿಷ್ಟ ಕೊಡುಗೆ ಬಗ್ಗೆ ರಾಜ್ಯದ ಎಲ್ಲ ಮಹಿಳಾ ವರ್ಗವು ಪ್ರಶಂಸೆ ವ್ಯಕ್ತಪಡಿಸಿತ್ತು. ಮಹಿಳಾ ಉದ್ಯೋಗಿಗಳ ಪಾಲಿನ ಬಹುದಿನದ ಅತ್ಯಗತ್ಯ ಬೇಡಿಕೆಗೆ ಸರ್ಕಾರ, ಮಹಿಳೆಯರ ಆರೋಗ್ಯ ಕುರಿತ ಕಾಳಜಿ ಹಾಗೂ ಸಬಲೀಕರಣದ ನಿಟ್ಟಿನಲ್ಲಿ ಇನ್ನೊಂದು ಮಹತ್ವದ ಮತ್ತು ಕ್ರಾಂತಿಕಾರಿ ಹೆಜ್ಜೆ ಇಟ್ಟಿರುವುದು ಕೇವಲ ಮಹಿಳಾ ಉದ್ಯೋಗಿಗಳಿಗೆ ಅಲ್ಲದೆ ಅವರ ಕುಟುಂಬದ ಸದಸ್ಯರಲ್ಲೂ ಸಂತೋಷ ಮೂಡಿಸಿದೆ.

ರಾಜ್ಯದ ಮಹಿಳಾ ಉದ್ಯೋಗಿಗಳ ಆರೋಗ್ಯ ರಕ್ಷಣೆಯ ಜೊತೆಗೆ ಅವರ ಮನೋಸ್ಥೈರ್ಯವನ್ನು ಬಲಗೊಳಿಸುವ ಉದ್ದೇಶದಿಂದ ಋತುಚಕ್ರ ರಜೆ ನೀತಿಯನ್ನು ಜಾರಿಗೊಳಿಸಿ, ಆದೇಶ ಹೊರಡಿಸಲಾಗಿದೆ. ಈ‌ ಮೂಲಕ ಮಹಿಳಾ ಸಬಲೀಕರಣದ ಹಾದಿಯಲ್ಲಿ ನಮ್ಮ ಸರ್ಕಾರ ಇಡೀ ದೇಶಕ್ಕೇ ಮಾದರಿಯಾದ ಹೆಜ್ಜೆ ಇರಿಸಿದಂತಾಗಿದೆ. ಈ ಮಹತ್ವದ ಕ್ರಮ ಜಾರಿಯಾಗುವಲ್ಲಿ ಬೆಂಬಲ ನೀಡಿದ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಶ್ರಿ ಡಿ ಕೆ ಶಿವಕುಮಾರ್‌ ಹಾಗೂ ಸಚಿವ ಸಚಿವ ಸಂಪುಟದ ಎಲ್ಲ ಸಹೋದ್ಯೋಗಿಗಳಿಗೆ ಧನ್ಯವಾದಗಳು.

Tags: congress mla santhosh ladlabor minister santhosh ladMinister Santhosh Ladsanthosh ladsanthosh lad about modisanthosh lad about pm modisanthosh lad angry onsanthosh lad lashes out at r ashoksanthosh lad latest newssanthosh lad latest statementsanthosh lad newssanthosh lad news todaysanthosh lad on bjpsanthosh lad questioned modisanthosh lad speechsanthosh lad statementsanthosh lad today newssanthosh lad vs narendra modiSantosh Ladsantosh lad gstsantosh lad mlasantosh lad news
Previous Post

ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಇನ್ನಿಲ್ಲ

Next Post

ಹೊಸಬರ ಚಿತ್ರಕ್ಕೆ ಶ್ರೀಮುರಳಿ ಸಾಥ್: ದಿ ಟಾಸ್ಕ್ ಸಿನಿಮಾದ ಟ್ರೇಲರ್ ರಿಲೀಸ್

Related Posts

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
0

ಬೆಂಗಳೂರು: ನಾನು ಎಂಎಲ್ಎ ಆದ ಮೇಲೆ ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ಯಾವ ಜಾತಿ ಗಲಭೆ, ಜಾತಿ ರಾಜಕಾರಣ, ಪೊಲೀಸರ ಮೇಲೆ ಒತ್ತಡ, ಒತ್ತಾಯ ಮಾಡಿಲ್ಲ.ಕುವೆಂಪುರವರು ಹೇಳಿದಂತೆ ನಮ್ಮ...

Read moreDetails

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

January 13, 2026
ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

January 13, 2026
Next Post
ಹೊಸಬರ ಚಿತ್ರಕ್ಕೆ ಶ್ರೀಮುರಳಿ ಸಾಥ್: ದಿ ಟಾಸ್ಕ್ ಸಿನಿಮಾದ ಟ್ರೇಲರ್ ರಿಲೀಸ್

ಹೊಸಬರ ಚಿತ್ರಕ್ಕೆ ಶ್ರೀಮುರಳಿ ಸಾಥ್: ದಿ ಟಾಸ್ಕ್ ಸಿನಿಮಾದ ಟ್ರೇಲರ್ ರಿಲೀಸ್

Recent News

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ
Top Story

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Top Story

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada