• Home
  • About Us
  • ಕರ್ನಾಟಕ
Tuesday, November 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ನಾಳೆಯಿಂದ ಪಿಸಿಬಿ ಬೃಹತ್ ಸುವರ್ಣ ಮಹೋತ್ಸವ

ಪ್ರತಿಧ್ವನಿ by ಪ್ರತಿಧ್ವನಿ
November 16, 2025
in Top Story, ಕರ್ನಾಟಕ, ರಾಜಕೀಯ
0
ನಾಳೆಯಿಂದ ಪಿಸಿಬಿ ಬೃಹತ್ ಸುವರ್ಣ ಮಹೋತ್ಸವ
Share on WhatsAppShare on FacebookShare on Telegram

 

ADVERTISEMENT

ಬೆಂಗಳೂರು, ನ. 16: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ 50 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸುವರ್ಣ ಮಹೋತ್ಸವ ಆಚರಿಸಿಕೊಂಡಿದ್ದು ಇದೇ ನವೆಂಬರ್ 18 ಮತ್ತು 19ರಂದು ಬೆಂಗಳೂರಿನಲ್ಲಿ ಬೃಹತ್ ಸಮಾರೋಪ ಸಮಾರಂಭ ನಡೆಯಲಿದೆ. ಇದೇ ವೇಳೆ ಪರಿಸರ ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣಕ್ಕೆ ಕೆಲಸ ಮಾಡಿದ ಸಾಧಕರಿಗೆ ರಾಜ್ಯ ಮಟ್ಟದ ಇಂದಿರಾ ಪ್ರಿಯದರ್ಶಿನಿ ಪ್ರಶಸ್ತಿಯನ್ನು ಐವರಿಗೆ ನೀಡಲಾಗುತ್ತದೆ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾದ ಪಿಎಂ ನರೇಂದ್ರಸ್ವಾಮಿ ಅವರು ತಿಳಿಸಿದರು.

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ. ಶಾಂತ್ ತಿಮ್ಮಯ್ಯ ವಜಾ!

ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಪಿಎಂ ನರೇಂದ್ರಸ್ವಾಮಿ ಅವರು, ಮೊದಲ ದಿನವಾದ ನವೆಂಬರ್ 18ರಂದು ‘ಸರ್ಕ್ಯುಲರ್ ಎಕಾನಮಿ ಅಂಡ್ ಸಸ್ಟೈನಬಿಲಿಟಿ’ ಎಂಬ ವಿಷಯವನ್ನು ಆಧರಿಸಿದ ವಿಚಾರಸಂಕಿರಣವನ್ನು ಆಯೋಜಿಸಲಾಗಿದೆ. ವಿಚಾರ ಸಂಕಿರಣದಲ್ಲಿ ತ್ಯಾಜ್ಯ ನೀರು ಸಂಸ್ಕರಣೆ ಮತ್ತು ಮರುಬಳಕೆ, ಘನತ್ಯಾಜ್ಯ ನಿರ್ವಹಣೆ, ನಿರ್ಮಾಣ ತ್ಯಾಜ್ಯ ನಿರ್ವಹಣೆ, ಪ್ಲಾಸ್ಟಿಕ್ ಮತ್ತು ಇ-ತ್ಯಾಜ್ಯ ನಿರ್ವಹಣೆ, ತ್ಯಾಜ್ಯ ನಿರ್ವಹಣೆಯಲ್ಲಿ ವಿತರಣಾ ಆರ್ಥಿಕತೆ, ವ್ಯವಹಾರಿಕ ಹೊಣೆಗಾರಿಕೆ ಮತ್ತು ಸ್ಥಿರತೆಯ ಸೂಚ್ಯಂಕ ನಿರ್ಮಾಣದ ಮಹತ್ವ, ವಿಸ್ತೃತ ಉತ್ಪಾದಕ ಹೊಣೆಗಾರಿಕೆ ವ್ಯವಸ್ಥೆ – ಸವಾಲುಗಳು ಮತ್ತು ಅವಕಾಶಗಳು, ಇ ತ್ಯಾಜ್ಯ, ಪ್ಲಾಸ್ಟಿಕ್ ತ್ಯಾಜ್ಯ ಮತ್ತು ಬ್ಯಾಟರಿ ತ್ಯಾಜ್ಯ ನಿರ್ವಹಣೆ ಹಾಗು ಬ್ಯಾಟರಿ ತ್ಯಾಜ್ಯ ನಿರ್ವಹಣೆಯಲ್ಲಿ ವಿತರಣಾ ಆರ್ಥಿಕತೆ ಎಂಬ ವಿಷಯಗಳ ಬಗ್ಗೆ ಚರ್ಚೆ ಮಾಡಲಾಗುತ್ತದೆ ಎಂದು ಹೇಳಿದರು.

ನ. ೧೮-೧೯ಕ್ಕೆ ಪಿಸಿಬಿ ಸುವರ್ಣ ಮಹೋತ್ಸವ - Sanjevani

ಉಪಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಮೊದಲ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷನಾದ ನಾನು ಪ್ರಾಸ್ತಾವಿಕ ಭಾಷಣ ಮಾಡುವೆ. ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖೆ ಸಚಿವರಾದ ಶ್ರೀ ಈಶ್ವರ್ ಖಂಡ್ರೆ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಉಪಸ್ಥಿತರಿರುವರು ಎಂದು ತಿಳಿಸಿದರು.

 

ಎರಡನೇ ದಿನವಾದ ನವೆಂಬರ್ 19ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ಬೃಹತ್ ಸಮಾರೋಪ ಸಮಾರಂಭವನ್ನು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಉಪಸ್ಥಿತರಿರಲಿದ್ದಾರೆ. ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖೆ ಸಚಿವರಾದ ಶ್ರೀ ಈಶ್ವರ್ ಖಂಡ್ರೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ನಾನು ಮೊದಲ ದಿನದ ವಿಚಾರ ಸಂಕಿರಣದಲ್ಲಿ ವಿಷಯ ತಜ್ಞರು ನೀಡಿದ ಸಲಹೆಗಳನ್ನು ಆಧರಿಸಿ ಸರ್ಕಾರ ಕೈಗೊಳ್ಳಬೇಕಾಗಿರುವ ಕ್ರಮಗಳ ಬಗ್ಗೆ ಸರ್ಕಾರಕ್ಕೆ ಮನವಿ ಸಲ್ಲಿಸುವೆ. ಹಾಗೆಯೇ ರಾಜ್ಯಾದ್ಯಂತ ನಡೆದ ಸುವರ್ಣ ಮಹೋತ್ಸವ ಕಾರ್ಯಕ್ರಮಗಳ ವರದಿ ನೀಡಲಿದ್ದಾರೆ.

Satish Jarkiholi: ರಾಜು ಕಾಗೆ ಅಭಿಪ್ರಾಯಕ್ಕೆ ಮನ್ನಣೆ ನೀಡದ ಬೆಳಗಾವಿ ಉಸ್ತುವಾರಿ ಸಚಿವ..! #rajukage

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಸಂಯುಕ್ತಾಶ್ರಯದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಈ ಎಲ್ಲಾ ಜಿಲ್ಲೆಗಳಲ್ಲಿ ಪರಿಸರ ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣ ಕ್ಷೇತ್ರದಲ್ಲಿ ಎಲೆಮರೆಯ ಕಾಯಿಯಂತೆ ಕೆಲಸ ಮಾಡುತ್ತಿರುವ ಸಾಧಕರನ್ನು ಹುಡುಕಿ ಅವರಿಗೆ ಜಿಲ್ಲಾ ಮಟ್ಟದ ‘ಇಂದಿರಾ ಪ್ರಿಯದರ್ಶಿನಿ ಪ್ರಶಸ್ತಿ’ಯನ್ನೂ ನೀಡಲಾಗುವುದು. ಇದೇ ರೀತಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಪ್ರಶಸ್ತಿ ನೀಡಲಾಗಿದೆ ಎಂದು ಹೇಳಿದರು.

ಸುವರ್ಣ ಮಹೋತ್ಸವ ಬೆಂಗಳೂರಿಗೆ ಸೀಮಿತವಾಗಬಾರದು, ಹಳ್ಳಿಹಳ್ಳಿ ತಲುಪಬೇಕು ಎನ್ನುವ ಕಾರಣಕ್ಕೆ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆಗೆ ಸಂಬಂಧಿಸಿದಂತೆ ವಿವಿಧ ರೀತಿಯ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ವಿಜೇತರಾದವರಿಗೆ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಗೌರವಿಸಿ ಪ್ರಶಸ್ತಿ ಪತ್ರ ನೀಡಲಾಗಿದೆ. ಜೊತೆಗೆ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡು ಪರಿಸರದ ಕೆಲಸ ಮಾಡುತ್ತಿರುವ ಪೌರಕಾರ್ಮಿಕರನ್ನು ಗೌರವಿಸಲಾಗಿದೆ ಎಂದು ಮಾಹಿತಿ ನೀಡಿದರು.

ಪರಿಸರ ಸಂರಕ್ಷಣೆ ನಮ್ಮ ಆದ್ಯ ಹೊಣೆ - www.buntsnow.com | web-based media For Bunts Community

ಪರಿಸರ ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಪಟ್ಟಂತೆ ಇರುವ ಕಾಯಿದೆಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವುದು, 1974ರಲ್ಲಿ ಕೇಂದ್ರ ಹಾಗು ರಾಜ್ಯ ಸರ್ಕಾರಗಳ ಅಡಿ ಮಾಲಿನ್ಯ ನಿಯಂತ್ರಣ ಮಂಡಳಿಗಳನ್ನು ಸ್ಥಾಪಿಸಿದ ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿ ಅವರನ್ನು ಸ್ಮರಿಸುವುದು ಮತ್ತು ಪರಿಸರ ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣದ ಕೆಲಸಗಳಲ್ಲಿ ಯುವಕರು ಹಾಗು ವಿದ್ಯಾರ್ಥಿಗಳನ್ನು ತೊಡಗಿಸಿಕೊಳ್ಳುವಂತೆ ಮಾಡುವುದು ಸುವರ್ಣ ಮಹೋತ್ಸವದ ಧ್ಯೇಯೋದ್ದೇಶವಾಗಿದೆ ಎಂದು ಪಿಎಂ ನರೇಂದ್ರಸ್ವಾಮಿ ಅವರು ತಿಳಿಸಿದರು.

ಯುವಕರನ್ನು ಒಳಗೊಳ್ಳದೆ ಮಾಲಿನ್ಯ ನಿಯಂತ್ರಣ ಮಾಡುವುದು ಸಾಧ್ಯವೇ ಇಲ್ಲ ಎನ್ನುವುದನ್ನು ಮನಗೊಂಡು ಯುವಕರಿಗೆ ಪರಿಸರ ಜಾಗೃತಿ ಮೂಡಿಸುವ ಕುರಿತು ರಿಲ್ಸ್ ಮಾಡುವ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ಪರಿಸರ ಸಂರಕ್ಷಣೆಗೆ ಸಂಬಂಧಿಸಿದ ಅತ್ಯುತ್ತಮ ರಿಲ್ಸ್ ಗೆ 50 ಸಾವಿರ ರೂಪಾಯಿ ಬಹುಮಾನ ಎಂದು ಘೋಷಿಸಲಾಗಿದೆ. ದ್ವಿತೀಯ ಬಹುಮಾನಕ್ಕೆ 25 ಸಾವಿರ ರೂಪಾಯಿ ಮತ್ತು ತೃತೀಯ ಬಹುಮಾನಕ್ಕೆ 10 ಸಾವಿರ ರೂಪಾಯಿ ಎಂದು ಘೋಷಣೆ ಮಾಡಲಾಗಿದೆ ಎಂದು ತಿಳಿಸಿದರು.

ಕಾರ್ಖಾನೆಗಳಿಂದ ಪರಿಸರ ಮಾಲಿನ್ಯ ನಿಯಂತ್ರಣ ನಿಯಮ ಉಲ್ಲಂಘನೆ: ಆರ್‌ಟಿಐ ಅಧ್ಯಯನ

 

Previous Post

ಸಂಪುಟ ಪುನಾರಚನೆ, ಪವರ್ ಶೇರಿಂಗ್ ಎಲ್ಲವನ್ನು ಹೈಕಮಾಂಡ್ ತೀರ್ಮಾನ ಕಾದು ನೋಡೋಣ

Next Post

ರಾಜಮೌಳಿ – ಮಹೇಶ್‍ ಬಾಬು ಹೊಸ ಚಿತ್ರ ‘ವಾರಣಾಸಿ : ರಾಮೋಜಿ ಫಿಲಂ ಸಿಟಿಯಲ್ಲಿ ಅದ್ದೂರಿ ಟೀಸರ್ ಅನಾವರಣ..

Related Posts

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು
Top Story

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

by ಪ್ರತಿಧ್ವನಿ
November 18, 2025
0

ಬೆಂಗಳೂರು: ಬೆಂಗಳೂರು-ತುಮಕೂರು ಮೆಟ್ರೋ ಯೋಜನೆಗೆ ಸಂಸದ ತೇಜಸ್ವಿ ಸೂರ್ಯ ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ಗೃಹ ಸಚಿವ ಪರಮೇಶ್ವರ್ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಪರಮೇಶ್ವರ್, ಅನೇಕ ವಿಚಾರಗಳು ಸಂಸದ...

Read moreDetails
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

November 18, 2025
ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

November 18, 2025
ಶ್ವಾಸಕೋಶದಲ್ಲಿ ಸೋಂಕು: ಸಿಎಂ ಪತ್ನಿ ಆಸ್ಪತ್ರೆಗೆ ದಾಖಲು

ಶ್ವಾಸಕೋಶದಲ್ಲಿ ಸೋಂಕು: ಸಿಎಂ ಪತ್ನಿ ಆಸ್ಪತ್ರೆಗೆ ದಾಖಲು

November 18, 2025
Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!

Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!

November 18, 2025
Next Post
ರಾಜಮೌಳಿ – ಮಹೇಶ್‍ ಬಾಬು ಹೊಸ ಚಿತ್ರ ‘ವಾರಣಾಸಿ : ರಾಮೋಜಿ ಫಿಲಂ ಸಿಟಿಯಲ್ಲಿ ಅದ್ದೂರಿ ಟೀಸರ್ ಅನಾವರಣ..

ರಾಜಮೌಳಿ – ಮಹೇಶ್‍ ಬಾಬು ಹೊಸ ಚಿತ್ರ ‘ವಾರಣಾಸಿ : ರಾಮೋಜಿ ಫಿಲಂ ಸಿಟಿಯಲ್ಲಿ ಅದ್ದೂರಿ ಟೀಸರ್ ಅನಾವರಣ..

Recent News

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು
Top Story

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

by ಪ್ರತಿಧ್ವನಿ
November 18, 2025
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ
Top Story

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

by ಪ್ರತಿಧ್ವನಿ
November 18, 2025
ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ
Top Story

ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

by ಪ್ರತಿಧ್ವನಿ
November 18, 2025
Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!
Top Story

Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!

by ಪ್ರತಿಧ್ವನಿ
November 18, 2025
ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?
Top Story

ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?

by ಪ್ರತಿಧ್ವನಿ
November 17, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

November 18, 2025
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada