ಬೆಂಗಳೂರು: ಧರ್ಮಸ್ಥಳದ ಸೌಜನ್ಯ ಹೋರಾಟದಲ್ಲಿ ಗುರುತಿಸಿಕೊಂಡಿರುವ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧದ ಗಡಿಪಾರು ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿಗೆ ಗಡಿಪಾರು ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ಇಂದು ಆದೇಶ ನೀಡಿದೆ.
ಮಹೇಶ್ ಶೆಟ್ಟಿ ತಿಮರೋಡಿಯನ್ನ ಒಂದು ವರ್ಷಗಳ ಕಾಲ ರಾಯಚೂರಿನ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿತ್ತು. ಆದರೆ ಈ ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಹೈಕೋರ್ಟ್ ಮೊರೆ ಹೋಗಿದ್ದರು.
ಅರ್ಜಿ ಸಂಬಂಧ ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್ ಗಡಿಪಾರು ಆದೇಶ ರದ್ದು ಮಾಡಿ ಆದೇಶ ಹೊರಡಿಸಿದೆ. ಜೊತೆಗೆ ಸೂಕ್ತ ಕಾರಣ, ಸೆಕ್ಷನ್ಗಳೊಂದಿಗೆ ಹೊಸದಾಗಿ ವಿಚಾರಣೆ ನಡೆಸಿ 15 ದಿನಗಳಲ್ಲಿ ಆದೇಶ ನೀಡಲು ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಉಪ ವಿಭಾಗಾಧಿಕಾರಿಗೆ ಸೂಚನೆ ನೀಡಿದೆ.











