• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್..!!

ಪ್ರಧಾನಿ ಭೇಟಿಗೆ ವಿಚಾರವಾಗಿ ಕುಮಾರಸ್ವಾಮಿ ಅವರು ಸಮಯ ನಿಗದಿ ಮಾಡಲಿ, ನಾನು ಸಿದ್ಧನಿದ್ದೇನೆ. ಕಸ ಗುಡಿಸುವ ಯಂತ್ರ ಬಾಡಿಗೆ ವಿಚಾರ; ಭ್ರಷ್ಟಾಚಾರ ನಡೆದಿದ್ದರೆ ಲೋಕಾಯುಕ್ತ ಸೇರಿದಂತೆ ತನಿಖಾ ಸಂಸ್ಥೆಗಳಿಗೆ ದೂರು ನೀಡಲಿ

ಪ್ರತಿಧ್ವನಿ by ಪ್ರತಿಧ್ವನಿ
November 19, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ADVERTISEMENT

“ಜೆಡಿಎಸ್ ಅವರ ಯೋಗ್ಯತೆಗೆ ಒಂದು ಕೆಲಸ ಮಾಡಿಲ್ಲ. ತುಂಗಭದ್ರಾ ಅಣೆಕಟ್ಟಿನ ಗೇಟ್ ಕಿತ್ತು ಹೋದಾಗ ಒಂದೇ ವಾರದಲ್ಲಿ ಗೇಟ್ ದುರಸ್ತಿ ಮಾಡಲಾಗಿದೆ. ಜೆಡಿಎಸ್ ಅವರಿಗೆ ಏನೂ ಮಾಡಲು ಆಗಿಲ್ಲ. ಈಗ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹರಿಹಾಯ್ದರು.

‘ನೀಲಿ ದಳ’ (ಬ್ಲೂ ಪೋರ್ಸ್) ಹಾಗೂ ರೋಬೋಟಿಕ್ ತಂತ್ರಜ್ಞಾನ ಬಳಕೆಗೆ ಚಾಲನೆ ನೀಡಿದ ನಂತರ ಮಾಧ್ಯಮಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು.

ಎರಡನೇ ಬೆಳೆಗೆ ತುಂಗಭದ್ರಾ ನೀರು ಹರಿಸುವ ವಿಚಾರವಾಗಿ ರೈತರ ಜೊತೆ ಸೇರಿ ಜೆಡಿಎಸ್ ಹೋರಾಟದ ಬಗ್ಗೆ ಕೇಳಿದಾಗ, “ಅವರು ಪ್ರತಿಭಟನೆ ಮಾಡಿದಾಗಲೇ ನಾವು ಏನು ಕೆಲಸ ಮಾಡಿದ್ದೇವೆ ಎಂಬುದು ಜನರಿಗೆ ತಿಳಿಯಲಿದೆ. ಈಗ ಏಕೆ ಪ್ರತಿಭಟನೆ ಮಾಡುತ್ತಿದ್ದಾರೆ. ಮೊದಲು ಕೇಂದ್ರ ಸರ್ಕಾರದ ಬಳಿ ತೆರಳಿ ನಾನು ಒಂದಷ್ಟು ಯೋಜನೆಗಳ ಬಗ್ಗೆ ಅರ್ಜಿ ಹಾಕಿದ್ದು ಅವುಗಳ ಅನುಷ್ಠಾನಕ್ಕೆ ಒಪ್ಪಿಗೆ ಪಡೆಯಲಿ. ಬಿಜೆಪಿ ಸಂಸದರನ್ನು ಕರೆದುಕೊಂಡು ಹೋಗಿ ಪ್ರತಿಭಟನೆ ನಡೆಸಿ, ಅಗತ್ಯ ಅನುದಾನ ತೆಗೆದುಕೊಂಡು ಬರಲಿ. ನಮ್ಮ ಪಾಲಿನ 28-30 ಟಿಎಂಸಿ ತುಂಗಭದ್ರಾ ನೀರು ಆಂದ್ರಕ್ಕೆ ಸೇರುತ್ತಿದೆ. ಚಂದ್ರಬಾಬು ನಾಯ್ಡು ಅವರು ಇದರ ಸಭೆಗೆ ಬರುತ್ತಿಲ್ಲ. ಮೊದಲು ಅವರಿಂದ ಒಪ್ಪಿಗೆ ಕೊಡಿಸಲಿ” ಎಂದು ತಿವಿದರು.

ಕುಮಾರಸ್ವಾಮಿ ಅವರನ್ನು ಜೊತೆಯಲ್ಲಿ ಕರೆದುಕೊಂಡು ಹೋದರೆ ಭೇಟಿಯಾಗಬಹುದು ಎನ್ನುವ ಬಗ್ಗೆ ಕೇಳಿದಾಗ, “ನಾನು ಇದಕ್ಕೆ ತಯಾರಿದ್ದೇನೆ‌. ಅವರೇ ಸಮಯ ನಿಗದಿ ಮಾಡಲಿ ನಾನು ಹೋಗಲು ತಯಾರಿದ್ದೇನೆ” ಎಂದರು.

ಅಕ್ರಮ ನಡೆದಿದ್ದರೆ ಲೋಕಾಯುಕ್ತಕ್ಕೆ ದೂರು ನೀಡಲಿ

ಕಸ ಗುಡಿಸುವ ಯಂತ್ರ ಬಾಡಿಗೆ ವಿಚಾರದಲ್ಲಿ ಭ್ರಷ್ಟಾಚಾರ ನಡೆದಿದೆ ಎನ್ನುವ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, “ಈ ವಿಚಾರದಲ್ಲಿ ಭ್ರಷ್ಟಾಚಾರ ನಡೆದಿದ್ದರೆ ಶೋಭಾ ಕರಂದ್ಲಾಜೆ ಹಾಗೂ ನಿಖಿಲ್ ಕುಮಾರಸ್ವಾಮಿ ಅವರು ಲೋಕಾಯುಕ್ತ ಅಥವಾ ಸೂಕ್ತ ತನಿಖಾ ಸಂಸ್ಥೆಗೆ ದೂರು ನೀಡಲಿ. ನಾನು ಕೇಂದ್ರ ಶೋಭಾ ಕರಂದ್ಲಾಜೆ ಅವರಿಗೆ ಉತ್ತರಿಸುತ್ತೇನೆಯೇ ಹೊರತು ಆತನಿಗಲ್ಲ. ಕಸ ಗುಡಿಸುವ ಯಂತ್ರಗಳ ಬಗ್ಗೆ ಅಧ್ಯಯನ ನಡೆಸಿಯೇ ಮುಂದುವರೆದಿರುವುದು. ಇದು ಕೇವಲ ಒಂದು ವರ್ಷದ‌ ಯೋಜನೆಯಲ್ಲ. ಏಳು ವರ್ಷಗಳ ಯೋಜನೆ. ಇದರಲ್ಲಿ ಯಾವುದೇ ಅಕ್ರಮ ನಡೆದಿಲ್ಲ. ನಾವು ತನಿಖೆ ನಡೆಸಲು ಸಿದ್ಧರಿದ್ದೇವೆ. ಶೋಭಾ ಕರಂದ್ಲಾಜೆ ಅವರ ಟೀಕೆಗಳನ್ನು ನಾನು ಸ್ವಾಗತ ಮಾಡುತ್ತೇನೆ. ಅವರ ಪ್ರಶ್ನೆಗಳಿಗೆ ಉತ್ತರಿಸುವಂತೆ ಅಧಿಕಾರಿಗಳಿಗೆ ಸೂಚಿಸುತ್ತೇನೆ. ಈ ವಿಚಾರದಲ್ಲಿ ನಾವು ಪಾರದರ್ಶಕವಾಗಿದ್ದೇವೆ. ಈ ಮೊತ್ತ ದೊಡ್ಡದಾಗಿ ಕಾಣುತ್ತಿರಬಹುದು. ಇದು ಕೇವಲ ವಾಹನದ ವಿಚಾರವೊಂದೇ ಇಲ್ಲ. ಚಾಲಕ, ಸಹಾಯಕ, ಸ್ವಚ್ಛ ಮಾಡುವವರು ಸೇರಿದಂತೆ ಅನೇಕ ವಿಚಾರಗಳಿವೆ. ಎಲ್ಲಾ ಆಯಾಮಗಳಿಂದ ಆಲೋಚಿಸಿ ಸರ್ಕಾರ ಈ ತೀರ್ಮಾನ ಕೈಗೊಂಡಿದೆ” ಎಂದು ತಿಳಿಸಿದರು.

Tags: cm siddaramaiah dk shivakumarcongressDCM DK ShivakumarDK Shivakumardk shivakumar cm buzzdk shivakumar delhidk shivakumar interviewdk shivakumar latest newsdk shivakumar meetingdk shivakumar newsdk shivakumar next cm karnatakadk shivakumar on rahul gandhidk shivakumar pm modidk shivakumar press updatedk shivakumar speechdk shivakumar today newsdk shivakumar updatesJDSJDS Karnatakakarnataka cm dk shivakumarkarnataka dk shivakumarNikhil Kumarswamyrahul gandhi dk shivakumarsiddaramaiah vs dk shivakumar
Previous Post

ಆರೋಗ್ಯ ಕ್ಷೇತ್ರಕ್ಕೆ ತಂತ್ರಜ್ಞಾನದ ಅಗತ್ಯ ಕುರಿತು ಟೆಕ್ ಸಮಿಟ್-2025ನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..!!

Next Post

ಮರೆವುದೆಂತು ಆ ಗಟ್ಟಿ ಜನಪರ ದನಿಯನು

Related Posts

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ
Top Story

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

by ಪ್ರತಿಧ್ವನಿ
April 24, 2026
0

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದ ವೇಳೆ ದಾರುಣ ಘಟನೆ ಸಂಭವಿಸಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಶಾಸಕ ಲಕ್ಷ್ಮಣ...

Read moreDetails
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಸಂವಿಧಾನ ಸಮಾನತೆ ಮತ್ತು ಮಹಿಳಾ ಮೀಸಲಾತಿ

ಸಂವಿಧಾನ ಸಮಾನತೆ ಮತ್ತು ಮಹಿಳಾ ಮೀಸಲಾತಿ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
Next Post
ಮರೆವುದೆಂತು ಆ ಗಟ್ಟಿ ಜನಪರ ದನಿಯನು

ಮರೆವುದೆಂತು ಆ ಗಟ್ಟಿ ಜನಪರ ದನಿಯನು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada