ಬೆಂಗಳೂರು: ಬೆಂಗಳೂರು ನಗರದಲ್ಲಿ ಬೀದಿ ನಾಯಿ ದಾಳಿಯಿಂದ ಅಥವಾ ನಾಯಿ ಕಚ್ಚಿ ಬಂದ ರೇಬೀಸ್ ರೋಗದಿಂದ ಸಾವನ್ನಪ್ಪಿದವರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ರಾಜ್ಯ ಸರ್ಕಾರ ಘೋಷಿಸಿದೆ.

ಈ ಹಿಂದಿನ ಆದೇಶವನ್ನು ಪರಿಷ್ಕರಿಸಿರುವ ಕರ್ನಾಟಕ ಸರ್ಕಾರ ಬೀದಿ ನಾಯಿ ದಾಳಿಯಿಂದ ಗಾಯಗೊಂಡವರಿಗೆ ಹಾಗೂ ಸಾವನ್ನಪ್ಪಿದವರ ಕುಟುಂಬಕ್ಕೆ ನೀಡುವ ಪರಿಹಾರವನ್ನು ಹೆಚ್ಚಿಸಿದೆ.

ಬೀದಿ ನಾಯಿ ದಾಳಿಯಿಂದ ಗಂಭೀರವಾಗಿ ಗಾಯಗೊಂಡವರ ಚಿಕಿತ್ಸೆಗೆ ರಾಜ್ಯ ಸರ್ಕಾರ 5 ಸಾವಿರ ರೂಪಾಯಿವರೆಗೆ ಪರಿಹಾರ ನೀಡುವ ಬಗ್ಗೆ ಆದೇಶ ಹೊರಡಿಸಿದೆ. ಜೊತೆಗೆ ಖಾಸಗಿ ಆಸ್ಪತ್ರೆಗಳಲ್ಲಿಯೂ ನಾಯಿ ಕಚ್ಚಿದ ವ್ಯಕ್ತಿಗೆ ತಕ್ಷಣದ ವೈದ್ಯಕೀಯ ಆರೈಕೆ ಸಿಗುವಂತೆ ನೋಡಿಕೊಳ್ಳಲು ಕೆಲ ಕ್ರಮಗಳನ್ನು ತೆಗೆದುಕೊಂಡಿದೆ. ಈ ಮೂಲಕ ಬೀದಿ ನಾಯಿ ದಾಳಿಗೊಳಗಾಗುವವ ವ್ಯಕ್ತಿ ಹಾಗೂ ಬೀದಿ ನಾಯಿ ದಾಳಿಯಿಂದ ಸಾವನ್ನಪ್ಪಿದವರ ಕುಟುಂಬಕ್ಕೆ ಆರ್ಥಿಕವಾಗಿ ನೆರವಾಗಲು ಸರ್ಕಾರ ಮುಂದಾಗಿದೆ.











