ಬೆಂಗಳೂರು: ನಗರದಲ್ಲಿ ಹಾಡಹಗಲೇ ನಡೆದ 7 ಕೋಟಿ ರೂ. ದರೋಡೆ ಹಿಂದೆ ಪೊಲೀಸ್ ಕಾನ್ಸ್ ಟೇಬಲ್ ಕೈವಾಡ ಇರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆ ಆರೋಪಿತ ಕಾನ್ಸ್ ಟೇಬಲ್ ನನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಬುಧವಾರ ಮಧ್ಯಾಹ್ನ ಡೈರಿ ಸರ್ಕಲ್ ಬಳಿ ನಡೆದಿದ್ದ ಎಟಿಎಂ ವಾಹನದ ದರೋಡೆ ಸಂಬಂಧ ದಕ್ಷಿಣ ವಿಭಾಗ ಪೊಲೀಸರು ಒಟ್ಟು ಮೂವರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಅದರಲ್ಲಿ ಗೋವಿಂದಪುರ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್ ಅಣ್ಣಪ್ಪ ನಾಯ್ಕ್ ಎಂಬಾತನನ್ನ ವಶಕ್ಕೆ ಪಡೆದಿದ್ದಾರೆ. ಸದ್ಯ ದರೋಡೆಗೆ ಈತನ ಮಾಸ್ಟರ್ ಮೈಂಡ್, ಈತನೇ ಹುಡುಗರನ್ನ ದರೋಡೆಗೆ ಸಿದ್ಧಪಡಿಸಿದ್ದ ಎನ್ನಲಾಗ್ತಿದೆ.

ಇನ್ನು ಕಮ್ಮನಹಳ್ಳಿ, ಕಲ್ಯಾಣನಗರ ಹುಡುಗರ ಗ್ಯಾಂಗ್ ರೆಡಿ ಮಾಡಿದ್ದ ಕಾನ್ಸ್‌ಟೇಬಲ್ ಅಣ್ಣಪ್ಪ ನಾಯ್ಕ್, ದರೋಡೆ ಕುರಿತು ಪಕ್ಕಾ ತರಬೇತಿ ನೀಡಿದ್ದ. ಹೇಗೆ ರಾಬರಿ ಮಾಡಬೇಕು, ಹೇಗೆ ತಪ್ಪಿಸಿಕೊಳ್ಳಬೇಕೆಂದು ಟ್ರೈನಿಂಗ್ ಕೂಡ ಕೊಟ್ಟಿದ್ದನಂತೆ. ಪೊಲೀಸರು ಹೇಗೆ ಕೆಲಸ ಮಾಡುತ್ತಾರೆಂದು ಸಹ ತಿಳಿಸಿದ್ದರ ಎನ್ನಲಾಗಿದೆ. ಅದರಂತೆ ಕಮ್ಮನಹಳ್ಳಿ, ಕಲ್ಯಾಣನಗರ ಹುಡುಗರ ತಂಡವೇ ದರೋಡೆ ಮಾಡಿದೆ. ಅಲ್ಲದೆ ಸಿಎಂಎಸ್ ಸೆಕ್ಯೂರಿಟಿ ಎಜೆನ್ಸಿಯ ಮಾಜಿ ಉದ್ಯೋಗಿಗಳು ದರೋಡೆಗೆ ಸಾಥ್ ಕೊಟ್ಟಿದ್ದು, ಕದ್ದ ಹಣವನ್ನು ಬೆಂಗಳೂರಲ್ಲಿಯೇ ಬಚ್ಚಿಟ್ಟು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಹೀಗಾಗಿ ಈತನನ್ನ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಅತ್ತ ರಾಬರಿಗೆ ಬಳಸಿದ್ದ ಕಾರು ಆಂದ್ರದ ಚಿತ್ತೂರಿನಲ್ಲಿ ಪತ್ತೆಯಾಗಿದೆ. ಉ.ಪ್ರದೇಶ ನಂಬರ್ ಪ್ಲೇಟ್ ಬಳಸಿ ದರೋಡೆಕೋರರು ಇದೇ ಕಾರಿನಲ್ಲಿ ಎಸ್ಕೇಪ್ ಆಗಿದ್ದರು ಅನ್ನೋದು ಗೊತ್ತಾಗಿದೆ. ಆದರೆ ಚಿತ್ತೂರು ಮಾರ್ಗವಾಗಿ ತೆರಳುತ್ತಿದ್ದಾಗ ಪೊಲೀಸರ ವಶಕ್ಕೆ ಪಡೆದಿದ್ದು, ಹಣ ಮಾತ್ರ ಈ ಕಾರಿನಲ್ಲಿ ಪತ್ತೆಯಾಗಿಲ್ಲ.














