ದುಬೈ ಏರ್ ಶೋ ಕಾರ್ಯಕ್ರಮದಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಅಪಘಾತಕ್ಕೀಡಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ತೇಜಸ್ ಯುದ್ಧ ವಿಮಾನ ಏರೋಬ್ಯಾಟಿಕ್ಸ್ ಪ್ರದರ್ಶಿಸಿ ನಂತರ ಇದ್ದಕ್ಕಿದ್ದಂತೆ ಪೈಲಟ್ ನಿಯಂತ್ರಣ ಕಳೆದುಕೊಂಡು ನೆಲಕ್ಕೆ ಅಪ್ಪಳಿಸಿದೆ ಎನ್ನಲಾಗಿದೆ. ಯುದ್ಧ ವಿಮಾನ ಪತನ ಆಗುತ್ತಿದ್ದಂತೆ ಬೆಂಕಿ ಹೊತ್ತಿಕೊಂಡಿದ್ದು, ನೋಡನೋಡುತ್ತಿದ್ದಂತೆ ಬೆಂಕಿಯ ಜ್ವಾಲೆ ಸುತ್ತಲೂ ಆವರಿಸಿದೆ. ಸದ್ಯ ಪೈಲಟ್ ಸಾವಿನ ಶಂಕೆ ವ್ಯಕ್ತವಾಗಿದೆ.

ಯುದ್ಧ ವಿಮಾನ ನೆಲಕ್ಕಪ್ಪಳಿಸುತ್ತಿದ್ದಂತೆ ಭಾರೀ ಪ್ರಮಾಣದ ಸದ್ದಾಗಿದ್ದು, ಕೂಡಲೇ ರಕ್ಷಣಾ ತಂಡಗಳು ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ಆಂಭಿಸಿದೆ. ಇನ್ನು ದುಬೈ ಏರ್ಶೋವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವರದಿಯಾಗಿದೆ.











